ಬೆಂಗಳೂರು: ಜೈಲಿನಲ್ಲಿರುವ ಕೈದಿಗಳಿಗೆ ದಿನಗೂಲಿ ಏರಿಕೆ ಮಾಡಿದ್ದಾರೆ ಎಂಬ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ, ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ. ಕೈದಿಗಳ ದಿನಗೂಲಿಯನ್ನ 525 ರೂ.ಗಳಿಗೆ ಏರಿಸಿದ್ದು ಬೇರೆ ಉದ್ಯೋಗಗಳಿಗಿಂತ ಜೈಲುವಾಸವೇ ಲಾಭದಾಯಕ ಎಂಬಂತೆ ಹಲವರು ಗೇಲಿ ಮಾಡಿ ಹರಿಬಿಟ್ಟಿರುವುದು ಕಂಡುಬಂದಿದೆ. ಈ ವಿಷಯದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಪಷ್ಟೀಕರಣ ನೀಡಿದ್ದು, ರಾಜ್ಯದಲ್ಲಿ ಸುಮಾರು ಹದಿನೈದು ಸಾವಿರ ಕೈದಿಗಳು ಜೈಲುವಾಸ ಅನುಭವಿಸುತ್ತಿದ್ದಾರೆ. …
Read More »ಜನರು ತುಂಬಿದ್ದ ನೀರಿನ ಬಿಲ್ ಗುಳುಂ ಮಾಡಿತಾ ದಂಡು ಮಂಡಳಿ..?
ನೀರಿನ ಬಿಲ್‍ನ್ನು ಇಲ್ಲಿನ ಜನರು ತುಂಬಿದರೂ ಕೂಡ ಅಧಿಕಾರಿಗಳು ಮಾಡಿದ ಯಡವಟ್ಟಿನಿಂದಾಗಿ ಇಲ್ಲಿನ ಮನೆಗಳಿಗೆ ಕಳೆದ 20 ದಿನಗಳಿಂದ ನೀರನ್ನು ಬಿಟ್ಟಿಲ್ಲ. ಇದರಿಂದ ರೋಸಿ ಹೋದ ಇಲ್ಲಿನ ಮಹಿಳೆಯರು ಸಂಬಂಧಿಸಿದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು ಹೀಗೆ ಚಿಕ್ಕ ಮಕ್ಕಳನ್ನು ಹಿಡಿದುಕೊಂಡು ನಿಂತಿರುವ ಈ ನೂರಾರು ಮಹಿಳೆಯರು ಬೆಳಗಾವಿಯ ಕ್ಯಾಂಪ್ ಪ್ರದೇಶದವರು. ಕಳೆದ 20 ದಿನಗಳಿಂದ ಇವರ ಮನೆಗಳಿಗೆ ನೀರನ್ನು ಬಿಟ್ಟಿಲ್ಲ. ಇದರಿಂದ ಆಕ್ರೋಶಗೊಂಡಿರುವ …
Read More »ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಿಸುತ್ತಿದ್ದ ಗಾಡಿ ಸೀಜ್
ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾಗಿಸುತ್ತಿದ್ದ ಗಾಡಿಯನ್ನು ಸೀಜ್ ಮಾಡಿ ಅಪಾರ ಪ್ರಮಾಣದ ಅಕ್ಕಿಯನ್ನು ನೇಸರಗಿ ಪೊಲೀಸರು ಜಪ್ತಿ ಮಾಡಿದ್ದಾರೆ. ಹೌದು ಬೊಲೆರೋ ಪಿಕ್‍ಅಪ್ ವಾಹನದಲ್ಲಿ ಅಕ್ರಮವಾಗಿ ರೇಶನ್ ಅಕ್ಕಿಯನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ನೇಸರಗಿ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ವಾಹನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 76,076 ರೂಪಾಯಿ ಮೌಲ್ಯದ 71 ಚೀಲ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಚಾಲಕನನ್ನು ವಶಕ್ಕೆ …
Read More »ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ
ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ. “ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು …
Read More »ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ
ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ. ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ
Read More »ಮರಾಠ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ಅನುದಾನ ಏನೆಲ್ಲಾ ಯೋಜನೆಗಳು ಸಿಗಲಿದೆ?
ಬೆಂಗಳೂರು: ರಾಜ್ಯ ಸರ್ಕಾರದ ಎದುರು ಕರ್ನಾಟಕದ ಮರಾಠ ಸಮುದಾಯ (Maratha community) ಹಲವು ಬೇಡಿಕೆಗಳನ್ನು ಇಟ್ಟಿದೆ. ಮರಾಠ ಸಮುದಾಯದವರ ಮೀಸಲಾತಿ ಬೇಡಿಕೆಗೆ ರಾಜ್ಯ ಹಿಂದುಳಿದ ವರ್ಗದ ವರದಿ ಬಂದ ನಂತರ ಸಂವಿಧಾನದ ಚೌಕಟ್ಟಿನೊಳಗೆ ನ್ಯಾಯ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು. ಅವರು ಇಂದು ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ ಹಾಗೂ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರ ಮವನ್ನು ಉದ್ಘಾಟಿಸಿ ಮಾತನಾಡಿದದ್ದರು. ಮರಾಠ …
Read More »ಅಂಗನವಾಡಿ ಕಾರ್ಯಕರ್ತೆಯರ ಬಹುದಿನದ ಬೇಡಿಕೆಗೆ ಸಿಗಲಿದೆ ಗ್ರೀನ್ ಸಿಗ್ನಲ್!?
ಬೆಂಗಳೂರು (ಜು.19): ಅಂಗನವಾಡಿ ಕಾರ್ಯಕರ್ತೆಯರ (Anganwadi Workers) ಬಹುದಿನದ ಕನಸು ನನಸಾಗುವ ಸಾಧ್ಯತೆ ಇದೆ. ಅಂಗನವಾಡಿ ಕಾರ್ಯಕರ್ತರನ್ನು ಶಿಕ್ಷಕಿಯರೆಂದು (Teacher) ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸು ಮಾಡಿದೆ. ಒಂದು ವೇಳೆ ಈ ಶಿಫಾರಸ್ಸಿಗೆ ಅನುಮೋದನೆ ಸಿಕ್ಕಿದ್ದೇ ಆದಲ್ಲಿ ಗೌರವ ಧನ, ವೇತನವಾಗಿ (Salary) ಪರಿವರ್ತನೆಯಾಗಲಿದ್ದು ಅದರ ಜೊತೆಗೆ ಸೇವಾ ಭದ್ರತೆ ಕೂಡ ದೊರೆಯಲಿದೆ. ಅಂಗನವಾಡಿಗಳ ಜೊತೆಗೆ ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲೆಗಳ (Combined Schools) ಸ್ವರೂಪವನ್ನು ಬದಲಾವಣೆ …
Read More »ಕಿತ್ತೋದ ಬಸ್ ನಿಲ್ದಾಣದ ಅದ್ಧೂರಿ ಉದ್ಘಾಟನೆ; ಚೀಫ್ ಗೆಸ್ಟ್ ಆಗಿ ಬಂದಿದ್ದು ಎಂಎಲ್ಎ ಅಲ್ಲ, ಎಮ್ಮೆ!
ಗದಗ: ಕಾಮಗಾರಿ (Work) ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿತ್ತು. ಈ ಬಸ್ ನಿಲ್ದಾಣ (Bus Stand) ಕಟ್ಟಡದ ಉದ್ಘಾಟನೆ (Inauguration) ಯಾವಾಗ ಎಂದು ಎದುರು ನೋಡುತ್ತಿದ್ದ ಜನ ಅದಕ್ಕೊಂದು ಶುಭ ಮುಹೂರ್ತವನ್ನು ನಿಗದಿ ಮಾಡಿಯೇಬಿಟ್ಟರು. ಅವರೆಲ್ಲ ಎದುರು ನೋಡುತ್ತಿದ್ದ ಶುಭ ಸಮಯ ಬಂದೇಬಿಟ್ಟಿತು. ಗ್ರಾಮಸ್ಥರೆಲ್ಲರೂ (Villagers) ಸೇರಿ ಉದ್ಘಾಟಕರನ್ನು ಬಿಗಿ ಭದ್ರತೆಯೊಂದಿಗೆ, ದೊಡ್ಡ ಸ್ವರದ ಮೈಕ್ ಸ್ವಾಗತದೊಂದಿಗೆ, ಹೂಮಾಲೆಗಳಿಂದ, ಬ್ಯಾನರ್ ಗಳಿಂದ ಸಿಂಗಾರಗೊಂಡಿದ್ದ ಬಸ್ ನಿಲ್ದಾಣದ ಬಳಿ ಕರೆತಂದು ರಿಬ್ಬನ್ (Ribbon) …
Read More »ಕ್ಯಾಮೆರಾಗಳ ಮುಂದೆ ಫೋಸ್ ಕೊಟ್ಟ ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸುತ್ತೆವೆಂದು ಗ್ರಾಮಸ್ಥರು ಅಕ್ರೋಶ
ಯಾದಗಿರಿ: ಮಹಾರಾಷ್ಟ್ರದಲ್ಲಿ ವರುಣ (Maharashtra Rains) ರೌದ್ರ ನರ್ತನವಾದ್ರೆ, ಕಲ್ಯಾಣ ಕರ್ನಾಟಕದ (Kalyana Karnataka) ಅದೆಷ್ಟೋ ಭಾಗದ ಗ್ರಾಮಗಳು ಮುಳುಗಡೆಯಾಗುತ್ತವೆ. ಕೃಷ್ಣೆಯ (Krishna River) ಆರ್ಭಟಕ್ಕೆ ನದಿ ಪಾತ್ರದ ಗ್ರಾಮಸ್ಥರ ಸಂಕಷ್ಟ ಮಾತ್ರ ಕೇಳ ತೀರದು. ಪ್ರವಾಹ (Flood) ಬಂದಾಗ ಮಾತ್ರ ನೆನಪಾಗೋ ಗ್ರಾಮ ಮತ್ತೆ ಅವರಿಗೆ ನೆನಪಾಗೋದು ಚುನಾವಣೆ (Election) ಬಂದಾಗ ಮಾತ್ರ. ಮಹಾರಷ್ಟ್ರ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಾದರೆ ಇತ್ತ ಕಲ್ಯಾಣ ಕರ್ನಾಟಕದ ಹಲವು ಭಾಗಗಳು ಜಲಾವೃತಗೊಳ್ಳುತ್ತವೆ. …
Read More »ಸಿದ್ದರಾಮೋತ್ಸವ ಕಾರ್ಯಕ್ರಮ: ಕೊಪ್ಪಳ ಜಿಲ್ಲಾಧ್ಯಕ್ಷರ ಫೋಟೊಗೆ ಕೊಕ್
ಕೊಪ್ಪಳ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮದ ಕುರಿತ ಪ್ರಚಾರದ ಪೋಸ್ಟರ್‌ನಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಅವರ ಫೋಟೊ ಕೈ ಬಿಡಲಾಗಿದೆ. ಇದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೂ ಕಾರಣವಾಗಿದೆ. ಪೋಸ್ಟರ್ ಅನ್ನು ನಗರದ ಕೆಲ ಬಡಾವಣೆಗಳ ಮನೆಮನೆಗೆ ಅಂಟಿಸಲಾಗಿದೆ. ಪೋಸ್ಟರ್‌ನಲ್ಲಿ ಸಿದ್ದರಾಮಯ್ಯ, ಶಾಸಕ ರಾಘವೇಂದ್ರ್ ಹಿಟ್ನಾಳ್, ಅವರ ಸಹೋದರ ರಾಜಶೇಖರ ಹಿಟ್ನಾಳ್, ಮಾಜಿ ಸಚಿವ …
Read More »
Laxmi News 24×7