ಬಳ್ಳಾರಿ: ಇನ್ನು ಒಂದೂವರೆ ವರ್ಷದಲ್ಲಿ ಮಹಾಮಾರಿ ಕೋವಿಡ್-19 ಸಂಪೂರ್ಣವಾಗಿ ಮರೆಯಾಗುತ್ತದೆ. ಆದರೆ, ಹೋಗುವಾಗ ವಿಶೇಷವಾದ ಕಷ್ಟ ಒಂದನ್ನು ಕೊಟ್ಟು ಹೋಗುತ್ತದೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದರು. ಬಳ್ಳಾರಿಯಲ್ಲಿ ಇಂದು ಮಾತನಾಡಿದ ಕೋಡಿಮಠದ ಶ್ರೀಗಳು, ಕೋವಿಡ್ ಮತ್ತೆ ಬರುತ್ತದೆ ಎಂದು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಅದರಂತೆ ಕರೊನಾ ಪ್ರಕರಣಗಳು ನಿತ್ಯವು ಏರಿಕೆಯಾಗುತ್ತಿದೆ. ಆದರೆ, ಕೊವಿಡ್ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ. ಒಂದೂವರೆ ವರ್ಷದಲ್ಲಿ …
Read More »ಫಡ್ನವಿಸ್ ಅವರು ಪಕ್ಷೇತರ ಶಾಸಕರನ್ನು ನಮ್ಮ ಪಾಳೆಯದಿಂದ ದೂರವಿಡುವ ಮೂಲಕ “ಪವಾಡ” ಮಾಡುವಲ್ಲಿ ಯಶಸ್ವಿ: ಶರದ್ ಪವಾರ್
ಪುಣೆ/ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಆರು ಸ್ಥಾನಗಳ ಪೈಕಿ ಪ್ರತಿಪಕ್ಷ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕೇಸರಿ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಪಕ್ಷೇತರ ಶಾಸಕರನ್ನು ನಮ್ಮ ಪಾಳೆಯದಿಂದ ದೂರವಿಡುವ ಮೂಲಕ “ಪವಾಡ” ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶನಿವಾರ ಹೇಳಿದ್ದಾರೆ. ಚುನಾವಣಾಯಲ್ಲಿ ಮಿತ್ರ ಪಕ್ಷ ಶಿವಸೇನೆಯ ಅಭ್ಯರ್ಥಿಯೊಬ್ಬರು ಸೋತಿರುವುದರಿಂದ ನಾನು ಆಘಾತಕ್ಕೆ ಒಳಗಾಗಿಲ್ಲ ಎಂದು …
Read More »ಅಕ್ಕಿ ಸಾಗಾಟ ಕೇಸ್: ಮುಖ್ಯ ಶಿಕ್ಷಕ ಶರಣಪ್ಪ ಅಮಾನತು
ಅಕ್ಕಿ ಸಾಗಾಟ ಕೇಸ್ ಅಕ್ಷರ ದಾಸೋಹ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನಲೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನ್ನು ಅಮಾನತ್ತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಹರನಾಳ ಆದೇಶಿಸಿದ್ದಾರೆ. ಇನ್ನು ಅಂದಾಜು 44,900 ರೂ.ಮೌಲ್ಯದ ಆಹಾರ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುತ್ತಿರುವುದು ಸಾಬೀತಾಗಿದೆ. ಅದಕ್ಕಾಗಿ ಮುಖ್ಯಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. …
Read More »ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ನಾಲ್ಕಕ್ಕೆ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ
ನಿನ್ನೆ ಮೂರು ರಾಜ್ಯಸಭೆ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪ್ರಚಂಡ ವಿಜಯ ಸಾಧಿಸಿದೆ. ಜೂನ್ 13ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ನಾಲ್ಕಕ್ಕೆ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅತ್ಯಂತ ಉತ್ಸಾಹದಿಂದ ಪದವೀಧರರು, ಶಿಕ್ಷಕರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಇಡೀ ದೇಶದ ಉದ್ದಗಲಕ್ಕೂ ಬಿಜೆಪಿಯೇ ಅಧಿಕಾರದಲ್ಲಿ ಇರಬೇಕು ಎಂಬ ಆಶಯ ದೇಶದ ವಿದ್ಯಾವಂತರಲ್ಲಿದೆ. ದೇಶದಲ್ಲಿ …
Read More »ಅವನೇನ್ ಕತ್ತೆ ಕಾಯ್ತಾ ಇದ್ನಾ.? – HDK ವಿರುದ್ಧ ಗುಬ್ಬಿ ಶಾಸಕ ಶ್ರೀನಿವಾಸ್ ಏಕವಚನದಲ್ಲೇ ಕಿಡಿ
ತುಮಕೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( HD Kumaraswamy ) ವರ್ಸಸ್ ಗುಬ್ಬಿ ಶಾಸಕ ಶ್ರೀನಿವಾಸ್ ನಡುವೆ ವಾಕ್ ಸಮರ ತಾರಕಕ್ಕೇರಿದೆ. ರಾಜ್ಯಸಭೆ ಚುನಾವಣೆ ( Rajya Sabha Election ) ಸಂದರ್ಭದಲ್ಲಿ ಜೆಡಿಎಸ್ ಗೆ ಮತ ಹಾಕಿಲ್ಲ. ಪಕ್ಷದಿಂದ ಬಿಟ್ಟೋಗು ಎಂದ ಕುಮಾರಸ್ವಾಮಿ ವಿರುದ್ಧ, ನಾನು ತೋರಿಸಿಯೇ ಜೆಡಿಎಸ್ ಗೆ ಮತ ಹಾಕಿದ್ದೇನೆ. ಹೆಬ್ಬೆಟ್ಟು ಅಡ್ಡ ಹಿಡಿದಿದ್ದೆ ಅಂತ ಕುಮಾರಸ್ವಾಮಿ ಹೇಳ್ತಾ ಇದ್ದಾರೆ. ಅವನೇನ್ ಕತ್ತೆ …
Read More »ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಬಣನೂ ಇಲ್ಲ, ಬಾಣನೂ ಇಲ್ಲ: ಲಕ್ಷ್ಮಣ ಸವದಿ
ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಬಣನೂ ಇಲ್ಲ, ಬಾಣನೂ ಇಲ್ಲ ಎಂದು ಮಾಜಿ ಡಿಸಿಎಂ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ವಿರುದ್ಧ ಕಾರ್ಯಕರ್ತರ ಅಸಮಾಧಾನ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಲು ಲಕ್ಷ್ಮಣ ಸವದಿ ಪ್ರಯತ್ನಿಸಿದರು. ಅದು ಬಹುತೇಕ ನಿಮ್ಮಂತ ಸ್ನೇಹಿತರು ಹುಟ್ಟು ಹಾಕಿದ ಗುಟುಕು ಅಂತಾ ನಾ ತಿಳಿದುಕೊಂಡಿದ್ದೇನೆ ಎಂದರು. ಪ್ರಭಾಕರ್ ಕೋರೆ ಬಿಜೆಪಿ …
Read More »ಅರುಣ್ ಶಹಾಪುರ್, ಹನುಮಂತ ನಿರಾಣಿ ದೊಡ್ಡ ಲೀಡ್‍ನಲ್ಲಿ ಆಯ್ಕೆಯಾಗುವ ವಿಶ್ವಾಸವಿದೆ: ಬಸವರಾಜ್ ಬೊಮ್ಮಾಯಿ
ನಿನ್ನೆ ರಾಜ್ಯಸಭೆ ಚುನಾವಣೆಯಲ್ಲಿ ಮೂರು ಸ್ಥಾನ ಪಡೆದಿದ್ದೇವೆ. ಅದೇ ರೀತಿ ವಿಧಾನ ಪರಿಷತ್‍ನ ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರಥಮ ಬಾರಿ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನ ಪಡೆದಿದೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪ್ರತಿನಿಧಿತ್ವ ಹೆಚ್ಚಾಗಿದೆ. ಅದೇ ರೀತಿ ವಿಧಾನ ಪರಿಷತ್‍ನ ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸವಿದೆ. ವಾಯುವ್ಯ ಪದವೀಧರ ಶಿಕ್ಷಕರ …
Read More »ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್‍ಗಳು ಸೇರಿ ಕೆಲಸ ಮಾಡುತ್ತೇವೆ:ಬಾಲಚಂದ್ರ ಜಾರಕಿಹೊಳಿ
ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್‍ಗಳು ಸೇರಿ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಒಗ್ಗಟ್ಟಿನ ಮಂತ್ರವನ್ನು ಪಠಿಸಿದ್ದಾರೆ. ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬೆಳಗಾವಿ ನಗರದಲ್ಲಿ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಪ್ರಾಮಾಣಿಕವಾಗಿ …
Read More »ರಾಷ್ಟ್ರಪತಿ ಚುನಾವಣೆಗೆ ತಯಾರಿ ಜೋರು! ಮಲ್ಲಿಕಾರ್ಜುನ ಖರ್ಗೆ ಕಣಕ್ಕೆ?
ದೇಶದಲ್ಲಿ ರಾಷ್ಟ್ರಪತಿ ಚುನಾವಣೆ ಘೋಷಣೆ ಆಗ್ತಿದ್ದಂತೆ ಆಡಳಿತ ರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳು ಅಭ್ಯರ್ಥಿಯ ಹುಡುಕಾಟದಲ್ಲಿ ನಿರತವಾಗಿವೆ. ಅದರಲ್ಲೂ ಕಾಂಗ್ರೆಸ್ ಇನ್ನಿತರ ಪ್ರತಿಪಕ್ಷಗಳ ಜೊತೆಗೆ ಸೇರಿ ಬಿಜೆಪಿಗೆ ತಕ್ಕ ಪ್ರತಿಸ್ಪರ್ಧಿಯನ್ನ ಕಣಕ್ಕಿಳಿಸೋಕೆ ತಯಾರಿ ನಡೆಸ್ತಿದೆ. ಇನ್ನು ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯನ್ನ ಕಣಕ್ಕಿಳಿಸಬಹುದು ಅನ್ನೋ ವರದಿಗಳು ಬಲವಾಗಿ ಕೇಳಿ ಬರ್ತಿವೆ. ಮತ್ತೊಂದು ಕಡೆ ಕಾಂಗ್ರೇಸ್ಸೇತರರನ್ನ ರಾಷ್ಟ್ರಪತಿಯನ್ನಾಗಿಸೋಕೆ ಚಿಂತನೆ ನಡೆಸಲಾಗ್ತಿದೆ ಅಂತ ಕೂಡ ಹೇಳಲಾಗ್ತಿದೆ. ಆದ್ರೆ …
Read More »ಬಿಜೆಪಿಗೆ ವರವಾದ ಕಾಂಗ್ರೆಸ್-ಜೆಡಿಎಸ್ ಜಗಳ: ನಿರ್ಮಲಾ ಸೀತಾರಾಮನ್, ಜಗ್ಗೇಶ್, ಜಯರಾಮ್ ರಮೇಶ್, ಲೆಹರ್ ಸಿಂಗ್ ಜಯ
ಬೆಂಗಳೂರು, ಜೂ.10: ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ನಿರೀಕ್ಷೆಯಂತೆ ಬಿಜೆಪಿಯ ಇಬ್ಬರು ಅಭ್ಯರ್ಥಿಗಳಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಜಗ್ಗೇಶ್ ಹಾಗೂ ಕಾಂಗ್ರೆಸ್‌ನ ಜಯರಾಮ್ ರಮೇಶ್ ಕರ್ನಾಟಕದಿಂದ ರಾಜ್ಯಸಭೆ ಪ್ರವೇಶ ಮಾಡಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ನಾಲ್ಕನೇ ಅಭ್ಯರ್ಥಿ ಸಹ ಬಿಜೆಪಿ ಪಾಲಾಗಿದ್ದು, ಲೆಹರ್ ಸಿಂಗ್ ಸಿರೋಯಾ ಅದೃಷ್ಟ ಖುಲಾಯಿಸಿದೆ. ರಾಜ್ಯಸಭೆ ಕಣದಲ್ಲಿ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಜಯರಾಂ ರಮೇಶ್, ಲೆಹರ್ ಸಿಂಗ್ ಸಿರೋಯಾ, ಕುಪೇಂದ್ರ ರೆಡ್ಡಿ …
Read More »