ನವದೆಹಲಿ: ಡಾಲರ್ ಎದುರು ದುರ್ಬಲಗೊಳ್ಳುತ್ತಿರುವ ರೂಪಾಯಿ ಮೌಲ್ಯ ಇದೇ ಮೊದಲ ಬಾರಿಗೆ 80 ರೂ. ಮುಟ್ಟಿದೆ. ಸೋಮವಾರ ವಿದೇಶಿ ವಿನಿಮಯ ಮಾರುಕಟ್ಟೆಯು 79.76 ರೂಪಾಯಿ ಮೂಲಕ ವಹಿವಾಟು ಆರಂಭಿಸಿ, ಮಧ್ಯಂತರದಲ್ಲಿ 80 ರೂ. ಗಡಿ ದಾಟಿತು. ಕಡೆಗೆ ಕೊಂಚ ಚೇತರಿಸಿಕೊಂಡು 16 ಪೈಸೆ ಇಳಿಕೆ ಆಗಿ ದಿನ ಅಂತ್ಯಕ್ಕೆ 79.98 ರೂ.ಗೆ ವಿನಿಮಯ ದರ ಸ್ಥಿರಗೊಂಡಿತು. ಇದೀಗ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಶೇ.0.03 ಕುಸಿತದೊಂದಿಗೆ ಮತ್ತೆ 80.02 ರೂ. ಗಡಿ ದಾಟಿದೆ. …
Read More »ಆಗಸ್ಟ್ 3 ರಂದು ‘ಸಿದ್ದರಾಮೋತ್ಸವ’: ಕಾರ್ಯಕ್ರಮ ಆಯೋಜನೆ ಖರ್ಚು-ವೆಚ್ಚಕ್ಕೆ ಸಿದ್ದರಾಮಯ್ಯ ಟಿಪ್ಸ್!
ಬೆಂಗಳೂರು: ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬ ಆಯೋಜಿಸಲಾಗಿದೆ. ಸೋಮವಾರ ವಿಧಾನಸೌಧದಲ್ಲಿ ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಆಚರಣೆಗೆ ಉಂಟಾಗುವ ಖರ್ಚು -ವೆಚ್ಚಗಳ ಬಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಅನೌಪಚಾರಿಕವಾಗಿ ಚರ್ಚಿಸಲಾಯಿತು. ರಾಜ್ಯದ 13 ಬಜೆಟ್ ಮಂಡಿಸಿದ ಅನುಭವ ಹೊಂದಿರುವ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವ ಮೆಗಾ ರ್ಯಾಲಿಗೆ ಹಣವನ್ನು ಖರ್ಚು ಮಾಡಬೇಕು ಹಾಗೂ ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ …
Read More »3 ವರ್ಷ ಮೀರಿದವರ ವರ್ಗಾವಣೆ ಮಾಡಿ’
ಕಲಬುರಗಿ: ಪ್ರತಿ ಪೊಲೀಸ್ ಠಾಣೆಯಲ್ಲಿ ಮೂರು ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಎಸ್ಬಿ ಡ್ಯೂಟಿ ಮಾಡಿದ ಕಾನ್‌ಸ್ಟೆಬಲ್‌ಗಳನ್ನು ಒಂದು ವಾರದೊಳಗೆ ಬೇರೆ ವಿಭಾಗಕ್ಕೆ ವರ್ಗಾವಣೆ ಮಾಡಬೇಕು ಎಂದು ಕಾನೂನು, ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ನಗರ ಪೊಲೀಸ್ ಕಮಿಷನರ್ ಅವರಿಗೆ ಸೂಚಿಸಿದರು. ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆದ ಬಳಿಕ ಮೊದಲ ಬಾರಿಗೆ ಸೋಮವಾರ ನಗರಕ್ಕೆ ಭೇಟಿ ನೀಡಿದ ಅವರು ಸಾರ್ವಜನಿಕರ ಅಹವಾಲು ಸ್ವೀಕಾರದ …
Read More »ಜೋಗದಲ್ಲಿ ಮತ್ತದೇ ಜನ ಸಾಗರ; ಕೈ ಚೆಲ್ಲಿದ ಪೊಲೀಸರು!
ಸಾಗರ: ಒಂದೆಡೆ ಜೋಗದ ಮೈಸೂರು ಬಂಗ್ಲೋ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಹಾಗೂ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ಪ್ರವಾಸಿಗರ ಕಾರಣ ತಾಲೂಕಿನ ಜಗತ್ಪ್ರಸಿದ್ಧ ಜೋಗದಲ್ಲಿ ನಿಯಂತ್ರಣ ವ್ಯವಸ್ಥೆ ಸಂಪೂರ್ಣವಾಗಿ ಪೊಲೀಸರ ಕೈಯಿಂದ ಜಾರಿದ ಘಟನೆಗೆ ಭಾನುವಾರ ಸಾಕ್ಷಿಯಾಯಿತು. 10 ಸಾವಿರಕ್ಕೂ ಹೆಚ್ಚು ಜನ ಭೇಟಿ ಇತ್ತ ಹಿನ್ನೆಲೆಯಲ್ಲಿ ಕಾಮಗಾರಿ ನಡೆದಿರುವ ಗೇಟ್ ಒಳಗಿನ ಪ್ರದೇಶದಲ್ಲಿ ಪಾರ್ಕಿಂಗ್ ರದ್ದುಗೊಳಿಸಲಾಗಿತ್ತು. ಹಾಗಾಗಿ ಜನ ರಸ್ತೆಯ ಪಕ್ಕದಲ್ಲಿಯೇ ವಾಹನಗಳನ್ನು ನಿಲ್ಲಿಸಿದ್ದರಿಂದ ಟ್ರಾಫಿಕ್ ಜ್ಯಾಮ್ ಸಾಮಾನ್ಯವಾಗಿತ್ತು. …
Read More »56 ಎದೆಯಳತೆಯ ಪ್ರಧಾನಿ ಬಡವರ ಹೊಟ್ಟೆ ಬಗೆಯುತ್ತಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾವು-ಬದುಕಿನ ಪ್ರಶ್ನೆಯನ್ನು ದೇಶದ ಜನರ ಮುಂದಿಟ್ಟಿದೆ, ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಅನಾಚಾರಗಳನ್ನೆಲ್ಲ ಸಹಿಸಿಕೊಂಡು ಇನ್ನೂ ಅಚ್ಚೇ ದಿನಗಳ ಕನಸು ಕಂಡರೆ ಬದುಕಿನ ನಾಶ ಖಂಡಿತ.ಕಾಲ ಮಿರಿಹೋಗುತ್ತಿದೆ, ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರಕಾರದ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಬ್ರ್ಯಾಂಡ್ ಗಳ ಬೆನ್ನತ್ತಿ ಹೋಗುತ್ತಿರುವ ಉಳ್ಳವರು, …
Read More »ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿ: ಕೋಟ ಶ್ರೀನಿವಾಸ ಪೂಜಾರಿ
ಬೆಂಗಳೂರು: ಭಿಕ್ಷಾಟನೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಭಿಕ್ಷಾಟನೆ ನಿರ್ಮೂಲನೆ ಸಂಬಂಧ ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ಕಾರ್ಮಿಕ ಇಲಾಖೆ ಸಚಿವರು, ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …
Read More »ಅವೈಜ್ಞಾನಿಕ ಕಾಮಗಾರಿ : ರಸ್ತೆ ಮೇಲೆ ನಿಲ್ಲುತ್ತಿದೆ ಕೊಳಚೆ ನೀರು,
ಕುಷ್ಟಗಿ : ಅವೈಜ್ಞಾನಿಕ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ ಸಿಸಿ ರಸ್ತೆಯ ಮೇಲೆ ನೀರು ನಿಲ್ಲುತ್ತಿರುವುದು ನಿತ್ಯ ತೊಂದರೆ ಅನುಭವಿಸುವಂತಾಗಿದೆ. ದಿನ ಬೆಳಗಾದರೆ ಈ ಗಲೀಜು ದಾಟಿಕೊಂಡು ಮನೆ ಸೇರಬೇಕಿದೆ. ಇದು ಕುಷ್ಟಗಿ ಪಟ್ಟಣದ 2ನೇ ವಾರ್ಡಿನ ಬುತ್ತಿಬಸವೇಶ್ವರ ನಗರದ ರಥ ಬೀದಿಗೆ ಹೊಂದಿಕೊಂಡಿರುವ ಎನ್.ಜೆ.ಕಿಡ್ಸ್ ಶಾಲೆಯ ದುಸ್ಥಿತಿ ಇದು. ಇದು ಕುಷ್ಟಗಿ ಪಟ್ಟಣದ 2ನೇ ವಾರ್ಡಿನ ಬುತ್ತಿಬಸವೇಶ್ವರ ನಗರದ ರಥ ಬೀದಿಗೆ ಹೊಂದಿಕೊಂಡಿರುವ ಎನ್.ಜೆ.ಕಿಡ್ಸ್ ಶಾಲೆಯ ದುಸ್ಥಿತಿ ಇದು. ಈ …
Read More »ಮೊಸರು, ಮಜ್ಜಿಗೆ, ಲಸ್ಸಿಗಳ ದರ ಕಡಿತ ಮಾಡಿದ ಕೆಎಂಎಫ್
ಬೆಂಗಳೂರು: ಸೋಮವಾರವಷ್ಟೇ ಕೆಲವು ಉತ್ಪನ್ನಗಳ ದರ ಏರಿಕೆ ಮಾಡಿದ್ದ ಕೆಎಂಎಫ್ ಇದೀಗ ನಂದಿನಿ ಉತ್ಪನ್ನಗಳಾದ ಮೊಸರು, ಮಜ್ಜಿಗೆ ಮತ್ತು ಸಿಹಿ ಲಸ್ಸಿಗಳ ಬೆಲೆಗಳಲ್ಲಿ ಕಡಿತ ಮಾಡಿ ಹೊಸ ಆದೇಶ ಹೊರಡಿಸಿದೆ. 200 ಗ್ರಾಂ ಮೊಸರಿನ ಪ್ಯಾಕೆಟ್ 12 ರೂ., 500 ಗ್ರಾಂ ಮೊಸರು ಪ್ಯಾಕೇಟ್ 24 ರೂ., ಒಂದು ಲೀಟರ್ ಪ್ಯಾಕೆಟ್ 46 ರೂ. 200 ಗ್ರಾಂ ಮೊಸರಿನ ಪ್ಯಾಕೆಟ್ 12 ರೂ., 500 ಗ್ರಾಂ ಮೊಸರು ಪ್ಯಾಕೇಟ್ 24 …
Read More »ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಶಿರೋಳ ಗ್ರಾಮಕ್ಕೆ ಬಂತು ಸಾರಿಗೆ ಬಸ್ !
ಮುದ್ದೇಬಿಹಾಳ: ಕೊನೆಗೂ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಮೊದಲ ಬಾರಿಗೆ ಪಟ್ಟಣದಿಂದ 3-4 ಕಿಮಿ ಅಂತರದಲ್ಲಿರುವ ಶಿರೋಳ ಗ್ರಾಮಕ್ಕೆ ಸೋಮವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಬಂದಿದ್ದು ಗ್ರಾಮಸ್ಥರಲ್ಲಿ ಹರ್ಷದ ಹೊನಲು ಹರಿಯುವಂತೆ ಮಾಡಿದೆ. ಶನಿವಾರ ನಡೆದಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಬಸ್ ಸೌಲಭ್ಯ ಇಲ್ಲದಿರುವ ಕುರಿತು ತಾಲೂಕಾಡಳಿತದ ಮುಖ್ಯಸ್ಥರಾದ ತಹಶೀಲ್ದಾರ್ ಬಿ.ಎಸ್.ಕಡಕಭಾವಿ ಅವರ ಗಮನ ಸೆಳೆದಿದ್ದರು. ಸಭೆಯಲ್ಲಿ ಭರವಸೆ ನೀಡಿದಂತೆ ತಹಶೀಲ್ದಾರ್ …
Read More »7 I.A.S.ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ
ಬೆಂಗಳೂರು: ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮಹಾಂತೇಶ್ ಬೀಳಗಿ ಅವರನ್ನು ನೇಮಿಸಿದೆ. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪಿ.ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿ., ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಆಗಿದ್ದಾರೆ. ಕೆ. ಶ್ರೀನಿವಾಸ್ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತೆ (ಹಣಕಾಸು) ಆಗಿದ್ದ ತುಳಸಿ ಮದ್ದಿನೇನಿ …
Read More »
Laxmi News 24×7