Breaking News

ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ

ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …

Read More »

90ಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ 10 ಕಾರುಗಳು, 1 ಮೋಟಾರ್ ಸೈಕಲ್, 2 ಸ್ಕೂಟಿ, 30 ಹೊಸ ಇ-ರಿಕ್ಷಾ, 50 ಹಳೆಯ ಇ-ರಿಕ್ಷಾಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಜಾಮಿಯಾ ನಗರ ಮೆಟ್ರೋ ನಿಲ್ದಾಣ ಬಳಿ ಇರುವ ಎಲೆಕ್ಟ್ರಿಕ್ ಮೋಟಾರ್ ಪಾರ್ಕಿಂಗ್‌ನಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ 5 ಗಂಟೆಯ ಸುಮಾರು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, 11 …

Read More »

ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭ,ಹಿಜಬ್ ನಿಷೇಧ

ಬೆಂಗಳೂರು: 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ. ತರಗತಿಗಳ ಪ್ರಾರಂಭಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೊರೊನಾ 3 ಅಲೆಗಳ ಬಳಿಕ ಎರಡು ವರ್ಷಗಳ ಕೊರೊನಾ ಆತಂಕದ ನಡುವೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿವೆ. ಕೊರೊನಾ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಿ, ಆನ್‍ಲೈನ್ ತರಗತಿಗಳನ್ನು ನಡೆಸಲಾಗಿತ್ತು. ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ …

Read More »

ಹೈವೇಯಲ್ಲಿ ಹಾಕಿದ್ದ ಅಂಗಡಿ ತೆಗೆಯಿರಿ ಎಂದಿದ್ದಕ್ಕೆ ಕಾನ್‍ಸ್ಟೇಬಲ್‍ಗಳ ಮೇಲೆ ಹಲ್ಲೆ

ಹಾವೇರಿ: ಜನರ ಓಡಾಟಕ್ಕೆ ಅಡೆತಡೆ ಮಾಡದಂತೆ ಹೇಳಿದ್ದಕ್ಕೆ ಕರ್ತವ್ಯನಿರತ ಇಬ್ಬರು ಕಾನ್‍ಸ್ಟೇಬಲ್‍ಗಳ ಮೇಲೆ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಗೇಟ್ ಬಳಿ ನಡೆದಿದೆ. ಬಂಕಾಪುರ ಪೊಲೀಸ್ ಠಾಣೆಯ ಗಂಗಾಧರ್ ಹರಿಜನ ಮತ್ತು ದುಂಡಪ್ಪ ಸಿಬ್ಬಂದಿ ಹಲ್ಲೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಹಲ್ಲೆ ಮಾಡಿದ ಆರೋಪಿಗಳನ್ನು ಹಾನಗಲ್ ತಾಲೂಕಿನ ಹರವಿ ಗ್ರಾಮದ ಅರ್ಜುನ್ ಮತ್ತು ಶಿವಕುಮಾರ್ ಎಂದು …

Read More »

ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ

ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್‍ಗೆ ಡಿಕ್ಕಿ ಹೊಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ರಾಜ್‍ಭವನ ರಸ್ತೆಯಲ್ಲಿ ನಡೆದಿದೆ. ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ಕಾರೊಂದು ರಾಜ್‍ಭವನ ರಸ್ತೆಯಲ್ಲಿರುವ ಪ್ರಸಾರ ಭಾರತಿ ಗೋಡೆಗೆ ಡಿಕ್ಕಿ ಹೊಡೆದಿದೆ. ಚಾಲಕ ಕಾರನ್ನು ಅತಿ ವೇಗವಾಗಿ ಚಲಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ತಿರುವಿನಲ್ಲಿ ಕಾಂಪೌಂಡ್ ಒಳಗಡೆ ನುಗ್ಗಿಸಿದ್ದಾನೆ. ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಕಾಂಪೌಂಡ್ ಮೇಲಿಂದ ಕಾರನ್ನು ತೆರವುಗೊಳಿಸಲಾಗಿದೆ. ಘಟನೆ …

Read More »

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ವಿಜಯಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ ಸ್ಪರ್ಧಿಸುತ್ತಾರೆ. ಅವರು ಎಲ್ಲಿ ನಿಂತರೂ ಗೆದ್ದು ಬರ್ತಾರೆ. ಮುಂದಿನ ದಿನಗಳಲ್ಲಿ ಜನರ ಆಶೀರ್ವಾದದಿಂದ ಒಳ್ಳೆ ಅವಕಾಶ ಸಿಗುತ್ತದೆ. ಭವಿಷ್ಯದಲ್ಲಿ ಬೆಳೆಯುತ್ತಾನೆ ಎಂಬ ವಿಶ್ವಾಸವಿದೆ ಎಂದರು. ಯಡಿಯೂರಪ್ಪ ಮತ್ತು ಕುಟುಂಬವನ್ನು ಬಿಜೆಪಿ ಪಕ್ಕಕ್ಕೆ ಸರಿಸಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ …

Read More »

ಛಲವಾದಿ ನಾರಾಯಣಸ್ವಾಮಿಯವರೇ, ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌ ಮನಸ್ಸಿಗೆ ನೋವಾಯಿತು – ಸಿದ್ಧರಾಮಯ್ಯ

ಬೆಂಗಳೂರು: ಛಲವಾದಿ ನಾರಾಯಣ ಸ್ವಾಮಿಯವರೇ ( Chalavadi Narayanaswamy ), ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆಯಂತಹ ಸ್ಥಾನದಲ್ಲಿ‌ ಕಾಣುವ ಆಸೆ ನನಗೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Ex CM Siddaramaiah ) ವ್ಯಂಗ್ಯವಾಡಿದ್ದಾರೆ.   ಈ ಕುರಿತು ಸರಣಿ ಟ್ವಿಟ್ ( Twitter ) ಮಾಡಿರುವ ಅವರು, ಛಲವಾದಿ ನಾರಾಯಣ ಸ್ವಾಮಿಯವರೇ, ನಿಮ್ಮ ಪ್ರತಿಭಟನೆಯ …

Read More »

ಕೈಮೇಲೆ ಆರೋಪಿ ಹೆಸರು ಬರೆದುಕೊಂಡು, ಆತ್ಮಹತ್ಯೆಗೆ ಶರಣಾದ ಅತ್ಯಾಚಾರ ಸಂತ್ರಸ್ತೆ

(ಉತ್ತರಪ್ರದೇಶ): ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೃತ್ಯದಿಂದ ಮನನೊಂದ ಅಪ್ರಾಪ್ತೆಯೊಬ್ಬರು ಕೈ ಮೇಲೆ ಆರೋಪಿಯ ಹೆಸರು ಬರೆದು, ತದನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಬ್ಲ್ಯಾಕ್​ ಮೇಲ್​​ನಿಂದ ಆತಂಕಕ್ಕೊಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಾಲಕಿ ಜೊತೆ ಪ್ರೀತಿಯ ನಾಟಕವಾಡಿರುವ ಯುವಕ, ತದನಂತರ ದೈಹಿಕ ಸಂಪರ್ಕ ಬೆಳೆಸಿ, ಅದರ ವಿಡಿಯೋ ಸೆರೆ ಹಿಡಿದಿದ್ದಾನೆ. ಇದಾದ ಬಳಿಕ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ …

Read More »

ಬಸ್ಸಿನಲ್ಲೇ ಬಾಲಕಿಗೆ ಸಾರಾಯಿ ಕುಡಿಸಿ ಸಾಮೂಹಿಕ ಅತ್ಯಾಚಾರ!

  ಬೇತಿಯಾ(ಬಿಹಾರ): ದೇಶದಲ್ಲಿ ನಿರ್ಭಯಾ ಘಟನೆಯಂತಹ ಅತ್ಯಾಚಾರಗಳು ಬೆಳಕಿಗೆ ಬರುತ್ತಲೇ ಇವೆ. ಇದರ ವಿರುದ್ಧ ಪೊಲೀಸ್​ ಇಲಾಖೆ ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಆರೋಪಿಗಳು ಮಾತ್ರ ತಮ್ಮ ದುರಾಭ್ಯಾಸ ಮುಂದುವರಿಸುತ್ತಲೇ ಇದ್ದಾರೆ. ನಿರ್ಭಯಾದಂತಹ ಅತ್ಯಾಚಾರವೊಂದು ಬಿಹಾರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಅಮಲು ಪದಾರ್ಥ ನೀಡಿ ಅತ್ಯಾಚಾರ: ಪಾಟ್ನಾಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಹೆಲ್ಪರ್​​ಬಸ್​​​​ನಲ್ಲಿ ಕೂರಿಸಿದ್ದಾನೆ. ನಂತರ ಬಸ್ ನಿಲ್ದಾಣದಿಂದ ಚಾಲಕ ಬಸ್ ಅನ್ನು ಬೈಪಾಸ್ ರಸ್ತೆಗೆ ತೆಗೆದುಕೊಂಡು ಹೋಗಿದ್ದಾನೆ. ಈ ಅನುಕ್ರಮದಲ್ಲಿ ಆರೋಪಿಗಳು …

Read More »

ಮೈಕ್‌ ದಂಗಲ್‌ – ಇಂದು ಬಿಜೆಪಿ ಮುಖಂಡರ ಮನೆ ಮುಂದೆ ಶ್ರೀರಾಮ ಸೇನೆಯಿಂದ ಪ್ರತಿಭಟನೆ

ಧಾರವಾಡ: ರಾಜ್ಯದಲ್ಲಿ ಮೈಕ್ ದಂಗಲ್‍ನ 2ನೇ ಚಾಪ್ಟರ್ ಶುರು ಮಾಡಲು ಶ್ರೀರಾಮಸೇನೆ ಸಜ್ಜಾಗಿದೆ. ಸುಪ್ರೀಂಕೋರ್ಟ್ ಆದೇಶದನ್ವಯ ಮೈಕ್ ತೆರವು ವಿಳಂಬವಾಗಿರೋದ್ರಿಂದ ಇವತ್ತು ಬಿಜೆಪಿ ಮುಖಂಡರ ಮನೆ ಮುಂದೆ ಪ್ರತಿಭಟನೆ ಆಯೋಜಿಸಲಾಗಿದೆ. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಮನೆ ಮುಂದೆ ಧರಣಿಗೆ ಶ್ರೀರಾಮಸೇನೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಪ್ರತಿಭಟನೆಗೆ ಹಲವು ಹಿಂದೂಪರ ಸಂಘಟನೆಗಳು ಬೆಂಬಲ ಕೊಟ್ಟಿವೆ. ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ ಧರಣಿಯಲ್ಲಿ ಭಾಗವಹಿಸುವಂತೆ ಶ್ರೀರಾಮಸೇನೆಯ ಸದಸ್ಯರಿಗೆ, ಪದಾಧಿಕಾರಿಗಳಿಗೆ, …

Read More »