ಎಂ.ಕೆ.ಹುಬ್ಬಳ್ಳಿ: ಬೆಳೆದ ಗಿಡಕಂಟಿಗಳು, ತಿಪ್ಪೆ ಗುಂಡಿಗಳು, ಬೀಳುತ್ತಿರುವ ತಡೆಗೋಡೆಗಳು, ತ್ಯಾಜ್ಯಗಳನ್ನು ಎಸೆಯುವ ಜಾಗೆಯಾಗಿದೆ ಇಟಗಿ ಗ್ರಾಮದ ದೊಡ್ಡ ಕೆರೆ. ಒಂದು ಕಾಲಕ್ಕೆ ಈ ಕೆರೆ ನೀರನ್ನು ದೇವರ ಪೂಜೆಗೂ, ದಿನಬಳಕೆಗೂ ಉಪಯೋಗಿಸುತ್ತಿದ್ದರು ಎಂದರೆ ಈಗ ಯಾರೂ ನಂಬಲು ಸಾಧ್ಯವಿಲ್ಲ. ಸಣ್ಣ ನೀರಾವರಿ ಇಲಾಖೆ ಉಸ್ತುವಾರಿಯಲ್ಲಿರುವ ಸುಮಾರು 53 ಎಕರೆ 15 ಗುಂಟೆ ಈ ಕೆರೆಯತ್ತ ಯಾವೋಬ್ಬ ಅಧಿ ಕಾರಿಗಳು ಗಮನ ಹರಿಸುತ್ತಿಲ್ಲ. ಮಳೆಗಾಲ ಮುಗಿದು ಮತ್ತೆ ಮತ್ತೆ ಬಂದರೂ, ಕೆರೆ …
Read More »ಅಮರನಾಥದಲ್ಲಿ ಹವಾಮಾನ ವೈಪರೀತ್ಯಕ್ಕೆ ಹೈರಾಣಾದ ಬೆಳಗಾವಿಯ ಪ್ರವಾಸಿಗರು
ಬೆಳಗಾವಿ: ಪ್ರಸಿದ್ಧ ಯಾತ್ರಾ ಸ್ಥಳ ಅಮರನಾಥ ದರ್ಶನಕ್ಕೆ ತೆರಳಿರುವ ಬೆಳಗಾವಿಯ 32 ಜನರ ತಂಡ ಹವಾಮಾನ ವೈಪರೀತ್ಯದಿಂದಾಗಿ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಶೇಷನಾಗದಿಂದ ಮರಳಿ ಪೆಹಲಗಾಮ್ ಎಂಬ ಪ್ರದೇಶಕ್ಕೆ ವಾಪಸ್ಸಾಗಿದ್ದು, ಮೇಘ ಸ್ಪೋಟ ಆಗಿ ಗುಡ್ಡ ಕುಸಿತಗೊಂಡಿರುವ ಮಾರ್ಗ ಬಂದ್ ಮಾಡಿದ್ದರಿಂದ ದರ್ಶನಕ್ಕಾಗಿ ಇನ್ನೂ 2-3 ದಿನ ಕಾಯಬೇಕಾಗಿದೆ. ಶೇಷನಾಗ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಈ ಪ್ರದೇಶದಲ್ಲಿ ಆಮ್ಲಜನಕ ಕೊರತೆ ಉಂಟಾಗುತ್ತಿದ್ದು, ಹೀಗಾಗಿ ಆರೋಗ್ಯದಲ್ಲಿ ಏರುಪೇರು …
Read More »ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳಿಗೆ ಉಂಟಾದ ಭೀಕರ ಪ್ರವಾಹದ ಸಂತ್ರಸ್ತರ ಕಣ್ಣಿರೂ ಮಾತ್ರ ಇನ್ನೂ ನಿಂತಿಲ್ಲ
ಚಿಕ್ಕೋಡಿ: ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳಿಗೆ ಉಂಟಾದ ಭೀಕರ ಪ್ರವಾಹದ ಸಂತ್ರಸ್ತರ ಕಣ್ಣಿರೂ ಮಾತ್ರ ಇನ್ನೂ ನಿಂತಿಲ್ಲ. ಪ್ರವಾಹದಲ್ಲಿ ಕೊಚ್ಚಿ ಹೋದ ರಸ್ತೆ, ಬ್ರಿಡ್ಜ್ಗಳ ಕಾಮಗಾರಿ ಮುಕ್ತಾಯಗೊಂಡಿವೆ. ಆದರೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪೂರ್ಣ ಪ್ರಮಾಣದ ಪರಿಹಾರ ಸಿಕ್ಕಿಲ್ಲ. ಇದರಿಂದ ನದಿ ತೀರದ ಜನ ಸಂಕಷ್ಟ ಪಡುವಂತಾಗಿದೆ. ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ ಅಪಾರ …
Read More »ವರುಣನ ಆರ್ಭಟ: ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಮುಂದುವರೆದಿದ್ದು. ಕ್ಷಣಕ್ಷಣಕ್ಕೂ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಹೀಗಾಗಿ ಮತ್ತೊಮ್ಮೆ ಪ್ರವಾಹ ಎದುರಾಗುತ್ತದೆ ಎನ್ನುವ ಭೀತಿ ನದಿ ತೀರದ ಜನರಲ್ಲಿ ಆವರಿಸಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದ ಹೆಚ್ಚು ಮಳೆ ಬಿಳುವ ಕೋಯ್ನಾ, ಮಹಾಬಲೇಶ್ವರ, ನವಜಾ. ಪಾಟಗಾಂವ,ಕಾಳಮ್ಮವಾಡಿ ಮತ್ತು ಕೊಲ್ಲಾಪೂರ ಸೇರಿದಂತೆ ಚಿಕ್ಕೋಡಿ ಸುತ್ತಮುತ್ತ ಪ್ರದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು. ಕೃಷ್ಣಾ ನದಿಗೆ …
Read More »ಧಾರವಾಡ ಯುವತಿಯ ಹೃದಯ ಬೆಳಗಾವಿ ಯುವಕನಿಗೆ ಕಸಿ
ಬೆಳಗಾವಿ: ಮಿದುಳು ನಿಷ್ಕ್ರಿಯವಾದ ಯುವತಿಯೊಬ್ಬರ ಹೃದಯವನ್ನು ಧಾರವಾಡದಿಂದ ಬೆಳಗಾವಿಗೆ ಝೀರೊ ಟ್ರಾಫಿಕ್ ನಲ್ಲಿ ಸಾಗಿಸಲು ಕ್ಷಿಪ್ರ ಸಿದ್ಧತೆ ನಡೆಸಲಾಗಿದೆ. ಅಪಘಾತದಿಂದ ಗಾಯಗೊಂಡ ಯುವತಿಯೊಬ್ಬರು ಧಾರವಾಡ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರ ಮಿದುಳು ನಿಷ್ಕ್ರಿಯವಾಗಿದ್ದು, ಹೃದಯ ಬಡಿದುಕೊಳ್ಳುತ್ತಿದೆ. ಇದೇ ಕಾಲಕ್ಕೆ ಹೃದ್ರೋಗದಿಂದ ಬಳಲುತ್ತಿರುವ ಯುವಕ ಬೆಳಗಾವಿಯ ಕೆಎಲ್‌ಇಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಯುವಕನಿಗೆ ಹೃದಯ ಕಸಿ ಮಾಡಬೇಕಾಗಿದೆ. ಹೀಗಾಗಿ, ಧಾರವಾಡದ ಯುವತಿಯ ಹೃದಯವನ್ನೇ ಬೆಳಗಾವಿಯ ಯುವಕನಿಗೆ ಕಸಿ ಮಾಡಲು ಯುವತಿ ಪಾಲಕರು ಸಮ್ಮತಿಸಿದ್ದಾರೆ. …
Read More »ಬೆಳಗಾವಿ: ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ.: ಗೋವಿಂದ ಕಾರಜೋಳ
ಬೆಳಗಾವಿ: ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯಕ್ಕೆ ಒಳಹರಿವು ಪ್ರಮಾಣ ತುಂಬಾ ಕಡಿಮೆ ಇದೆ. ಎರಡು ದಿನಗಳ ಹಿಂದೆ 30 ಟಿಎಂಸಿ ಅಡಿಯಷ್ಟು ನೀರು ಅಲ್ಲಿ ಸಂಗ್ರಹವಾಗಿದೆ. ಅದರ ಸಂಗ್ರಹಣಾ ಸಾಮರ್ಥ್ಯ ಒಟ್ಟು 105 ಟಿಎಂಸಿ ಅಡಿ. ಅದು ಸಂಪೂರ್ಣ ತುಂಬುವವರೆಗೆ ನೀರನ್ನು ಹೊರ ಬಿಡುವುದಿಲ್ಲ. …
Read More »ದೂಧ್ ಸಾಗರ್ ಜಲಪಾತಕ್ಕೆ ಪ್ರವೇಶ ನಿರಾಕರಿಸಿದ ಆರ್ ಪಿಎಫ್, ಪ್ರವಾಸಿಗರಿಗೆ ನಿರಾಸೆ
ಹುಬ್ಬಳ್ಳಿ: ಕರ್ನಾಟಕ ಮತ್ತು ಗೋವಾ ಗಡಿಯಲ್ಲಿರುವ ಖ್ಯಾತ ಪ್ರವಾಸಿ ಆಕರ್ಷಣೀಯ ತಾಣ ದೂಧಸಾಗರ ಜಲಪಾತಗಳಿಗೆ ಪ್ರವಾಸಿಗರ ಪ್ರವೇಶವನ್ನು ರೈಲ್ವೇ ರಕ್ಷಣಾ ಪಡೆ ನಿಷೇಧಿಸಿದ್ದು, ಇದು ಪ್ರವಾಸಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ರೈಲು ನಿಲ್ದಾಣದಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ಜಲಪಾತವು ಮಳೆಗಾಲದ ಸಮಯದಲ್ಲಿ ದೇಶಾದ್ಯಂತ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತದೆ, ಆಗ ಜಲಪಾತಗಳು ತನ್ನ ಸಂಪೂರ್ಣ ವೈಭವಕ್ಕೆ ಮರಳುತ್ತವೆ. ಆದರೆ ರೈಲು ಮಾರ್ಗವನ್ನು ಹೊರತುಪಡಿಸಿ ಇತರರಿಗೆ …
Read More »ನ್ಯಾ.ಸಂದೇಶ್ ವಿರುದ್ಧ ಸುಪ್ರೀಂ ಮೊರೆ ಹೋದ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್
ಬೆಂಗಳೂರು,ಜು.11. ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಲಂಚ ಪ್ರಕರಣದಲ್ಲಿ ನ್ಯಾ.ಎಚ್.ಪಿ. ಸಂದೇಶ್ ಭ್ರಷ್ಟಾಚಾರ ನಿಗ್ರಹ ದಳದ ವಿರುದ್ಧ ಹಾಗೂ ತಮ್ಮ ವಿರುದ್ಧ ಭಾರಿ ಟೀಕೆ ಮಾಡಿರುವುದನ್ನು ಪ್ರಶ್ನಿಸಿ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಇದರೊಂದಿಗೆ ನ್ಯಾ.ಸಂದೇಶ್ ಮತ್ತು ಸೀಮಂತ್ ಕುಮಾರ್ ಸಿಂಗ್ ಅವರ ನಡುವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅವರು ನ್ಯಾ. ಸಂದೇಶ್ ವಿರುದ್ಧ ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಇನ್ನೂ …
Read More »ರಾಜ್ಯದಲ್ಲಿ ಅವಧಿಗೆ ಮುನ್ನವೇ ವಿಧಾನಸಭೆ ಚುನಾವಣೆ ಘೋಷಣೆ..?!
ಬೆಂಗಳೂರು,ಜು.11- ಕರ್ನಾಟಕದಲ್ಲಿ ಅವಧಿಗೂ ಮುನ್ನ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಬರಲಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. 2023ರ ಮೇ ತಿಂಗಳಲ್ಲಿ ನಡೆಯಬೇಕಿರುವ ರಾಜ್ಯ ವಿಧಾನಸಭೆ ಚುನಾವಣೆಯೂ ಈ ವರ್ಷದ ಡಿಸೆಂಬರ್‍ನಲ್ಲಿಯೇ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಗುಜರಾತ್ ಚುನಾವಣೆಯೂ ಡಿಸೆಂಬರ್‍ಲ್ಲೇ ನಡೆಯಲಿದ್ದು, ಅದರ ಜೊತೆಯಲ್ಲೇ ರಾಜ್ಯ ವಿಧಾನಸಭೆ ಚುನಾವಣೆಯನ್ನು ಮುಗಿಸುವ ತವಕದಲ್ಲಿ ಬಿಜೆಪಿ ಇದ್ದು, ಅದಕ್ಕೆ ಬೇಕಿರುವ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಬಿಜೆಪಿ ಇಡುತ್ತಿರುವ ಹೆಜ್ಜೆಗಳನ್ನು …
Read More »ಅಮೃತ್ ಪೌಲ್ ಬಂಧನ ಪ್ರಕರಣ: ಪ್ರಭಾವಿ ವ್ಯಕ್ತಿಗಳಿಗೆ ಶುರುವಾಯ್ತು ಸಂಕಷ್ಟ
ಬೆಂಗಳೂರು: ಪಿಎಸ್‌ಐ ಅಕ್ರಮ ಪ್ರಕರಣದಲ್ಲಿ ಅಮೃತ್ ಪೌಲ್ ಅವರ ಬಂಧನದ ಬೆನ್ನಲ್ಲೇ ಕೆಲ ಪ್ರಭಾವಿಗಳಿಗೆ ಸಂಕಷ್ಟ ಎದುರಾಗಿದೆ. ಪೌಲ್ ಅವರ ಬೆಂಗಳೂರಿನ ಸಹಕಾರ ನಗರದಲ್ಲಿರುವ ಮನೆ, ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ಹಾಗೂ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ ವೇಳೆ ಡೈರಿ ಹಾಗೂ ಇತರೆ ದಾಖಲೆಗಳು ಸಿಕ್ಕಿದ್ದು, ಇವುಗಳೇ ಪ್ರಭಾವಿ ವ್ಯಕ್ತಿಗಳಿಗೆ ಸಂಕಷ್ಟ ತಂದೊಡ್ಡಲಿವೆ ಎಂದು ಹೇಳಲಾಗಿದೆ. ಈ ಪ್ರಭಾವಿಗಳು ತಮಗೆ ಬೇಕಾದವರ ನೇಮಕಾತಿಗೆ ಎಡಿಜಿಪಿಯವರಿಗೆ …
Read More »
Laxmi News 24×7