ಮಹಾನಿಂಗ ನಂದಗಾವಿ ಅವರನ್ನೇ ಬೆಳಗಾವಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಮುಂದುವರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇತ್ತಿಚಿಗೆ ಐಪಿಎಸ್‍ಗೆ ಬಡ್ತಿ ಹೊಂದಿದ್ದ ಮಹಾನಿಂಗ ನಂದಗಾವಿ ಅವರನ್ನು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಸರ್ಕಾರ ಮುಂದುವರಿಸಿದೆ. ಅದೇ ರೀತಿ ವಿವಿಧ ಪೊಲೀಸ್ ಅಧಿಕಾರಿಗಳನ್ನು ಅದೇ ಸ್ಥಾನದಲ್ಲಿ ಮುಂದುವರಿಸಿ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ.
Read More »ಬೆಳಗಾವಿಯ 12 ಪೌರಕಾರ್ಮಿಕರಿಗೆ ಮನೆ ವಿತರಿಸಿದ್ದೇವೆ: ಎಂ.ಶಿವಣ್ಣ ಕೋಟೆ
ಖಾಯಂ ಪೌರಕಾರ್ಮಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ಸಿಗುತ್ತಿವೆ. ಆದರೆ ನೇರಪಾವತಿ ಅವರಿಗೆ ಜಾಗ, ಮನೆಗಳು ಸಿಗುತ್ತಿಲ್ಲ. ಹೀಗಾಗಿ ಅವರಿಗೂ ಎಲ್ಲೆಲ್ಲಿ ಅವಕಾಶ ಇದೆ, ಅಲ್ಲಿ ಸೌಲಭ್ಯಗಳನ್ನು ನೀಡುವ ಕೆಲಸ ಮಾಡಲಾಗುವುದು ಎಂದು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ನಿನ್ನೆ ಮಧ್ಯಾಹ್ನ 4 ಗಂಟೆ ಸುಮಾರಿಗೆ ಸುವರ್ಣವಿಧಾನಸೌಧಲ್ಲಿ ಬೆಳಗಾವಿ ಜಿಲ್ಲೆಯಲ್ಲಿ …
Read More »ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಬೆಳಗಾವಿ ಬಾರ್ ಆಸೋಸಿಯೇಷನ್ ಒತ್ತಾಯ
ರಾಜ್ಯದ ಎರಡನೇ ರಾಜಧಾನಿ ಎಂದು ಕರೆಯಿಸಿಕೊಳ್ಳುವ ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಬೆಳಗಾವಿ ಬಾರ್ ಆಸೋಸಿಯೇಷನ್ ಒತ್ತಾಯಿಸಿದೆ. ಗುರುವಾರದಂದು ಬೆಳಗಾವಿ ಬಾರ್ ಆಸೋಸಿಯೇಷನ್‍ನ ಅಧ್ಯಕ್ಷ ಪ್ರಭು ಯತ್ನಟ್ಟಿ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಬಾರ್ ಅಸೋಸಿಯೇಷನ್‍ನ ಸದಸ್ಯರು ಪ್ರತಿಭಟನೆಯನ್ನು ನಡೆಸಿದರು. ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮನವಿವನ್ನು ಸಲ್ಲಿಸಿದರು.ಬೆಳಗಾವಿ ಬಾರ್ ಆಸೋಸಿಯೇಷನ್‍ನ ಅಧ್ಯಕ್ಷ ಪ್ರಭು …
Read More »ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!
ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …
Read More »ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4 . 30ಕ್ಕೆ ಈ ದುರಂತ ಸಂಭವಿಸಿದೆ. ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ …
Read More »ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿತ
ಬೆಳಗಾವಿ (ಆ.25): ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿಸಿ, ಮೆರವಣಿಗೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ಬಸವನಕುಡಚಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ವಿಶಾಲ್ ಕಲ್ಲಪ್ಪ ಪಟಾಯಿ (28) ಮೃತ ವ್ಯಕ್ತಿ. ವಿಶಾಲ ಪಟಾಯಿ ಮಾನಸಿಕ ಅಸ್ವಸ್ಥನಾಗಿದ್ದ. ಈ ವಿಚಾರ ಗ್ರಾಮಸ್ಥರಿಗೂ ಗೊತ್ತಿತ್ತು. ಈತ ಆಗಾಗ ಗ್ರಾಮದವರ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. …
Read More »ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದೆ
ಬೆಳಗಾವಿ : ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಬೆಳಗಾವಿಯಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪಟ್ಟಣದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್ವಾಚ್ ಬಳಸಿ ಪರೀಕ್ಷೆ ಬರೆದು ಸಿಕ್ಕಿಹಾಕಿಕೊಂಡಿದ್ದರು. ಪ್ರಕರಣ ಸಂಬಂಧ ಈಗಾಗಲೇ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಎಸ್ಪಿ ಡಾ ಸಂಜೀವ್ ಪಾಟೀಲ್ ನೇತೃತ್ವದ ತಂಡದಿಂದ ಮತ್ತೆ …
Read More »ಪ್ಲಾಸ್ಟಿಕ್ ಕವರ್ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ತಾಯಿ
ಬೆಳಗಾವಿ: ಪ್ಲಾಸ್ಟಿಕ್ ಕವರ್ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ …
Read More »ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ.
ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಪರಿಣಾಮದಿಂದಾಗಿ ಕುಸಿತಗೊಂಡಿದ್ದ ಗಣೇಶ ಮೂರ್ತಿಗಳ ಮಾರಾಟ ಈ ವರ್ಷ ಚೇತರಿಸಿಕೊಂಡಿದೆ. ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ಸಲ ವಹಿವಾಟು ದುಪ್ಪಟ್ಟುಗೊಂಡಿದೆ. ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದವರ ಕುಟುಂಬಗಳಲ್ಲೂ ಸಂತಸ ಮನೆ ಮಾಡಿದೆ. ಕಳೆದ 2 ವರ್ಷಗಳಲ್ಲಿ ಕೇವಲ 15ರಿಂದ 20 ಲಕ್ಷ ರೂ. ಆದಾಯ ಬರುತ್ತಿತ್ತು. ಆದರೆ, ಈ …
Read More »ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್
ಬೆಂಗಳೂರು : ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಉಮೇಶ್ ಕತ್ತಿ ಸಿಹಿಸುದ್ದಿ ನೀಡಿದದು, ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಚಿವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ಗೆ 1.5 ಲಕ್ಷ ಹೊಸ ಅರ್ಜಿ ಸ್ವೀಕರಿಸಲಾಗಿದೆ. ಹೊಸ ಕಾರ್ಡುದಾರರಿಗೆ ಪಡಿತರ ವಿತರಿಸಿದಲ್ಲಿ ಸರ್ಕಾರಕ್ಕೆ ಆಗುವ ಹೆಚ್ಚುವರಿ ಹೊರೆ ಬಗ್ಗೆ ಚರ್ಚೆಯಾಗಿದೆ. ಹೊಸ …
Read More »
Laxmi News 24×7