Breaking News

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ

ಸಂಕೇಶ್ವರ : ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ, ವ್ಯಕ್ತಿಯೊಬ್ಬ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.   ಇಲ್ಲಿನ ವಡ್ಡರ ಓಣಿಯ ನಿವಾಸಿಗಳಾದ ಸಂತೋಷ ವಡ್ಡರ ಹಾಗೂ ಇವರ ಸಹೋದರ ಲಕ್ಷ್ಮಣ ವಡ್ಡರ ಗಾಯಗೊಂಡವರು. ಆರೋಪಿ ದಿಲೀಪ್‌ ಎಂಬಾತ ಚಪ್ಪಲಿಯ ಚರ್ಮ ಕತ್ತರಿಸುವ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದಾನೆ. ಜೂಜಾಟವೇ ಗಲಾಟೆಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದಿಲೀಪ್‌ಗೆ …

Read More »

ದೇಶದಲ್ಲೇ ಬೆಳಗಾವಿ ಜಿಲ್ಲಾಸ್ಪತ್ರೆ ಎಲ್ಲರಿಗೂ ಮಾದರಿ ಆಗಲಿ: ಶಾಸಕ ಅನಿಲ ಬೆನಕೆ

ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ‌ ಶುಕ್ರವಾರ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಹಾಯ ವಾಣಿ, ಅನ್ ಲೈನ್ ಪಾವತಿ ಕೌಂಟರ್, ಹೆಲ್ತ ಡೆಸ್ಕ್, ಹಿರಿಯ …

Read More »

ದೇಶದಲ್ಲೇ ಬೆಳಗಾವಿ ಜಿಲ್ಲಾಸ್ಪತ್ರೆ ಎಲ್ಲರಿಗೂ ಮಾದರಿ ಆಗಲಿ: ಶಾಸಕ ಅನಿಲ ಬೆನಕೆ

ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ‌ ಶುಕ್ರವಾರ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಹಾಯ ವಾಣಿ, ಅನ್ ಲೈನ್ ಪಾವತಿ ಕೌಂಟರ್, ಹೆಲ್ತ ಡೆಸ್ಕ್, ಹಿರಿಯ …

Read More »

ತುಮಕೂರಿನ ರೌಡಿಶೀಟರ್‌ ಮನೆಗಳ ಮೇಲೆ ದಾಳಿ: ಮಾರಕಾಸ್ತ್ರ ವಶಕ್ಕೆ

ತುಮಕೂರು: ನಗರದಲ್ಲಿ ಅಕ್ರಮ ಚಟುವಟಿಕೆ ಹೆಚ್ಚಾಗದಂತೆ ತಡೆಗಟ್ಟಲು ಶುಕ್ರವಾರ ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಅಪಾರ ಮಾರಕಾಸ್ತ್ರ ವಶಪಡಿಸಿಕೊಂಡಿದ್ದಾರೆ. ತುಮಕೂರಿನಲ್ಲಿ ಬಕ್ರೀದ್ ಹಬ್ಬ ಹಾಗೂ ಅಕ್ರಮ ಚಟುವಟಿಕೆ ಹೆಚ್ಚಿದ್ದು, ಈ ಹಿನ್ನಲೆಯಲ್ಲಿ ನಗರದಲ್ಲಿ ಮುಂಜಾನೆ ರೌಡಿಶೀಟರ್‌ ಮನೆಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ನಂತರ ನಗರದ ಚಿಲುಮೆ ಸಮುದಾಯ ಭವನದಲ್ಲಿ ಪರೇಡ್ ಮಾಡಲಾಯಿತು. ನಗರ ವ್ಯಾಪ್ತಿಯಲ್ಲಿನ 84 ಜನ …

Read More »

ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದಿದ್ದ ತಂದೆ-ಮಗ ಅರೆಸ್ಟ್​

ಬೆಳಗಾವಿ: ಕಬ್ಬಿನ ಕದ್ದೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ತಂದೆ-ಮಗ ಇಬ್ಬರನ್ನೂ ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದು, 204 ಕೆಜಿ ತೂಕದ ಹಸಿ ಗಾಂಜಾ ಬೆಳೆ ಜಪ್ತಿ ಮಾಡಿದ್ದಾರೆ. ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಬಸಪ್ಪ ರಂಗಪ್ಪ ಲಗಳಿ(77) ಮತ್ತು ಇವರ ಪುತ್ರ ಸಿದ್ದಪ್ಪ ಬಸಪ್ಪ ಲಗಳಿ(40) ಬಂಧಿತರು. ಹೊನಕುಪ್ಪಿ ಗ್ರಾಮದ ಹದ್ದಿನಲ್ಲಿನ ಸರ್ವೇ ನ.316/4ರ ತಮ್ಮ ಜಮೀನಿನಲ್ಲಿ ಯಾರಿಗೂ ಅನುಮಾನ ಬಾರದಂತೆ ಕಬ್ಬಿನಗದ್ದೆಯಲ್ಲಿ ಗಾಂಜಾ ಬೆಳೆದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ …

Read More »

ಖಾಸಗಿ ಬಸ್​ ಪಲ್ಟಿಯಾಗಿ ಹತ್ತು ಜನರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಘಟನೆಯಲ್ಲಿ 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಬ್ಯಾಡಗಿ ತಾಲೂಕು ಸರಕಾರಿ ಆಸ್ಪತ್ರೆ ಮತ್ತು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಬಸ್‌ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಬೆಂಗಳೂರಿನಿಂದ ಮುಂಬೈನತ್ತ ತೆರಳುತ್ತಿದ್ದಾಗ ಚಾಲಕನ‌ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ‌ ಪಲ್ಟಿಯಾಗಿದೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ …

Read More »

ಕೊಪ್ಪಳದಲ್ಲಿ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಚಾಲಕ ಸಾವು, ಮೂವರು ಪಾರು

ಕೊಪ್ಪಳ: ನಿಯಂತ್ರಣ ತಪ್ಪಿ ಕಾರೊಂದು ಬಾವಿಗೆ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ-ಅಳವಂಡಿ ರಸ್ತೆಯ ಮೈನಳ್ಳಿ ಬಳಿ ನಡೆದಿದೆ. ಸಂಗಮೇಶ ಹಿರೇಮಠ (26) ಮೃತ ವ್ಯಕ್ತಿ. ಕಾರಿನಲ್ಲಿದ್ದ ನಾಲ್ವರು ಹರಿಹರದಿಂದ ಕೊಪ್ಪಳಕ್ಕೆ ಮದುವೆಗೆ ಬರುತ್ತಿದ್ದಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗು ಅಳವಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾವಿಯಿಂದ ಶವ ಮತ್ತು ಕಾರನ್ನು ಮೇಲಕ್ಕೆತ್ತಿದ್ದಾರೆ.

Read More »

ಕಸ ಗುಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಸ್ಥಳದಲ್ಲೇ ಮೃತ

ಬೆಳಗಾವಿ: ನಗರದ ಬಸವೇಶ್ವರ ವೃತ್ತದ ಬಳಿಯ ಎಲ್ಐಸಿ ಕಚೇರಿಯ ಆವರಣದಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ, ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ ಟೀಳಕವಾಡಿಯ ಪಿಕೆ ಕ್ವಾರ್ಟಸ್​ನಲ್ಲಿರುವ ಅನಿತಾ ರಾಜೇಶ್ ಬನ್ಸ್ (52) ಮೃತಪಟ್ಟವರು. ಅನಿತಾ ಎಂದಿನಂತೆ ಎಲ್​ಐಸಿ ಕಚೇರಿಗೆ ಆಗಮಿಸಿ ಆವರಣ ಶುಚಿಗೊಳಿಸುತ್ತಿದ್ದರು‌‌. ಈ ಸಂದರ್ಭದಲ್ಲಿ ಎಲ್​ಐಸಿ ಆವರಣದಿಂದ ಕಾರು ಹೊರತೆಗೆಯುವ ಸಂದರ್ಭದಲ್ಲಿ ಚಾಲಕ ಗುರುರಾಜ ಕುಲಕರ್ಣಿ, ಮಹಿಳೆಗೆ …

Read More »

ಬಕ್ರೀದ್ ಹಬ್ಬ: ಕೋವಿಡ್ ಮಾರ್ಗಸೂಚಿ ಕಡ್ಡಾಯ

ಬೆಂಗಳೂರು: ಬಕ್ರೀದ್ ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು (ಪ್ರಾಣಿ ಬಲಿದಾನ) ನೆರವೇರಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಸ್ಲಿಮರು ಭಾನುವಾರ ಬಕ್ರೀದ್ ಹಬ್ಬವನ್ನು ರಾಜ್ಯಾದ್ಯಂತ ಆಚರಿಸಲಿದ್ದಾರೆ ಎಂದು ರಾಜ್ಯ ಚಂದ್ರದರ್ಶನ ಸಮಿತಿ ಘೋಷಿಸಿದೆ. ಹಬ್ಬದ ದಿನದಂದು ಮುಸ್ಲಿಮರು ಈದ್ಗಾ ಮೈದಾನ, ಮಸೀದಿಯಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಾರೆ. ಧಾರ್ಮಿಕ ಆಚರಣೆಯ ಪ್ರಯುಕ್ತ ಹಬ್ಬದ ದಿನ ಸೇರಿದಂತೆ …

Read More »

ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆ: ಚಿಕ್ಕೋಡಿಯ ನಾಲ್ಕು ಸೇತುವೆಗಳು ಮುಳುಗಡೆ

ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ‌ಮಳೆಯ ಆರ್ಭಟ ‌ಮುಂದುವರದಿದ್ದು ಇದರಿಂದ ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ‌ಮುಳುಗಡೆಯಾಗಿವೆ. ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳಲ್ಲಿ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದಾಗಿ ಚಿಕ್ಕೋಡಿ ತಾಲೂಕಿನ ಯಡೂರ-ಕಲ್ಲೋಳ, ಮಾಂಜರಿ-ಸೌಂದತ್ತಿ, ಮಲಿಕವಾಡ-ದತ್ತವಾಡ, ಯಕ್ಸಂಬಾ-ದಾನವಾಡದ ಕೆಳಮಟ್ಟದ ಸೇತುವೆಗಳು ಮುಳಗಡೆಯಾಗಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಒಂದೇ ದಿನದಲ್ಲಿ ಒಂದು ಅಡಿಯಷ್ಟು ನೀರು ಏರಿಕೆಯಾಗಿದ್ದು ನದಿತೀರದ ಜನರಿಗೆ ಮತ್ತೆ …

Read More »