ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಬುಧವಾರ ಹಾಗೂ ಗುರುವಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗ ಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಎರಡು ದಿನಗಳು ಭಾರಿ ಮಳೆಯಾ ಗಲಿದೆ. ಕರಾವಳಿ ತೀರದಲ್ಲಿ ಬಿರು ಗಾಳಿಯ …
Read More »10 ರೂಪಾಯಿ ನಾಣ್ಯ ಚಾಲ್ತಿಯಲ್ಲಿದೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ಹತ್ತು ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿವೆ ಎಂದು ಭಾರತೀಯ ರಿಜರ್ವ್ ಬ್ಯಾಂಕು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮುಕ್ತವಾಗಿ ಇವುಗಳನ್ನು ಚಲಾವಣೆ ಮಾಡಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕೆಲವೆಡೆ ಹತ್ತು ರೂಪಾಯಿ ನಾಣ್ಯವನ್ನು ಸ್ವೀಕರಿಸಲು ಕೆಲವು ವರ್ತಕರು-ವ್ಯಾಪಾರಸ್ಥರು ನಿರಾಕರಿಸುತ್ತಿದ್ದಾರೆ ಎಂಬ ದೂರುಗಳಿವೆ. ಆದರೆ ಈ ನಾಣ್ಯಗಳು ಚಲಾವಣೆಯಲ್ಲಿರುತ್ತವೆ ಎಂದು ನವೆಂಬರ್ 20, 2016 ರಂದು ಭಾರತೀಯ ರಿಜರ್ವ್ ಬ್ಯಾಂಕು ಸ್ಪಷ್ಟಪಡಿಸಿದ್ದು, ಈ ಕುರಿತು …
Read More »ರಾತ್ರಿ ಇದ್ದಕ್ಕಿದ್ದಂತೆ ಬೆಚ್ಚಿ ಬಿದ್ದಅನಾಮದೇಯ ಪತ್ರ; FIR ದಾಖಲಿಸಿದ ಪೊಲೀಸರು
ಶಿವಮೊಗ್ಗ – ಈಚೆಗಷ್ಟೆ ಕೋಮುಗಲಭೆಯಿಂದ ತತ್ತರಿಸಿರುವ ಶಿವಮೊಗ್ಗ ನಗರ ಮಂಗಳವಾರ ರಾತ್ರಿ ಇದ್ದಕ್ಕಿದ್ದಂತೆ ಬೆಚ್ಚಿ ಬಿದ್ದಿದೆ. ದೇವಸ್ಥಾನವೊಂದರ ಕಟ್ಟೆಯ ಮೇಲೆ ಸಿಕ್ಕಿರುವ ಅನಾಮದೇಯ ಪತ್ರವೊಂದು ಜನರನ್ನು ಮಲಗದಂತೆ ಮಾಡಿದೆ. ಗಣೇಶ ಹಬ್ಬದ ಸಂದರ್ಭದಲ್ಲಿ ಮುವರನ್ನು ಕೊಲೆಗೈಯಲು ಸಂಚು ರೂಪಿಸಲಾಗಿದೆ ಎನ್ನುವ ಆಘಾತಕಾರಿ ಅಂಶವನ್ನು ಹೊತ್ತ ಪತ್ರವೊದು ಪೊಲೀಸರ ಕೈ ಸೇರಿದ್ದು, ಎಫ್ಐಆರ್ ದಾಖಲಾಗಿದೆ. ಗಾಂಧಿ ಬಜಾರದ ಗಂಗಾ ಪರಮೇಶ್ವರಿ ದೇವಸ್ಥಾನದ ಪಕ್ಕದಲ್ಲಿದ್ದ ಅಂಗಡಿ ಮಾಲೀಕರೊಬ್ಬರು ಅಂಗಡಿ ಬಂದ್ ಮಾಡುವ ವೇಳೆ …
Read More »ಬೆಳಗಾವಿ: ಜಿಲ್ಲಾ ವಿಭಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಸರಿಸುಮಾರು 30 ವರ್ಷ.
ಬೆಳಗಾವಿ: ಜಿಲ್ಲಾ ವಿಭಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಸರಿಸುಮಾರು 30 ವರ್ಷ. ಇನ್ನೊಂದೆಡೆ ಈ ವಿಭಜನೆ ವಿರೋಧಿಸಿ ನಡೆದ ಪ್ರತಿಭಟನೆಗೆ ಆ.22ಕ್ಕೆ ಬರೋಬ್ಬರಿ 25 ವರ್ಷ. ಇದು ಗಡಿ ಜಿಲ್ಲೆ ಬೆಳಗಾವಿ ವಿಭಜನೆ ಹಾಗೂ ಅದಕ್ಕಾಗಿ ನಡೆದಿರುವ ಪರ ಮತ್ತು ವಿರೋಧದ ಹೋರಾಟಗಳ ಕಥೆ. ಎರಡೂವರೆ ದಶಕಗಳ ಈ ಅವಧಿಯಲ್ಲಿ ಸಾಕಷ್ಟು ಬೆಳವಣಿಗೆಗಳಾಗಿವೆ. ಸರ್ಕಾರಗಳು ಬದಲಾಗಿವೆ. ಹೋರಾಟಗಾರರು ಬದಲಾಗಿದ್ದಾರೆ. ಇದಕ್ಕಾಗಿ ಹತ್ತಾರು ಸಂಘಟನೆಗಳು ಹುಟ್ಟಿಕೊಂಡಿವೆ. ಹಲವಾರು ಸಚಿವರು ಮತ್ತು ಶಾಸಕರು ಬಂದು …
Read More »24 ಗಂಟೆಯಲ್ಲಿಯೇ ಅನುಕಂಪ ಆಧಾರದ ನೌಕರಿ; ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕರೊಬ್ಬರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ್ದರಿಂದ ಅವರ ಅವಲಂಬಿತ ಕಿರಿಯ ಸಹೋದರನಿಗೆ ಕೇವಲ 24 ಗಂಟೆಯಲ್ಲಿ ಅನುಕಂಪ ಆಧಾರಿತ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಳಕಳಿಯನ್ನು ಮೆರೆದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ ಮಹಾದೇವ ಬಾದುಲೆ ಅವರು ದಿನಾಂಕ ಆಗಸ್ಟ್ 22 ರಂದು ಅನಾರೋಗ್ಯದಿಂದ ನಿಧನ ಹೊಂದಿದ್ದರು. …
Read More »ಚಿರತೆ ಸೆರೆಗೆ ಬೆಳಗಾವಿಯತ್ತ ಜೋಡಿ ಆನೆ
ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಅವಿತುಕೊಂಡ ಚಿರತೆ ಸೆರೆಗೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಶಿಬಿರದಿಂದ ಎರಡು ಆನೆಗಳನ್ನು ಕರೆಸಲಾಗುತ್ತಿದೆ. ಮಂಗಳವಾರ ಬೆಳಿಗ್ಗೆಯೇ ಎರಡು ಆನೆ ಹಾಗೂ ಎಂಟು ಪರಿಣತ ಸಿಬ್ಬಂದಿಯ ತಂಡ ಬೆಳಗಾವಿಯತ್ತ ಹೊರಟಿದೆ. ಸಕ್ರೆಬೈಲ್ ಆನೆ ತರಬೇತಿ ಕ್ಯಾಂಪಿನಲ್ಲಿದ್ದ 20 ವರ್ಷ ವಯಸ್ಸಿನ ಅರ್ಜುನ ಹಾಗೂ 14 ವರ್ಷ ಪ್ರಾಯದ ಆಲೆ ಎಂಬ ಆನೆಗಳನ್ನು ಕರೆಸಲಾಗುತ್ತಿದೆ. ಈ ಎರಡೂ ಆನೆಗಳು ಪುಂಡಾನೆಗಳ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಪಳಗಿವೆ. …
Read More »ಗಣೇಶ ಮಂಟಪದಲ್ಲಿಬಿಜೆಪಿಯವರು ಸಾವರ್ಕರ್ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’
ಬೆಳಗಾವಿ: ‘ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮಂಟಪದಲ್ಲಿ ಬಿಜೆಪಿಯವರು ಸಾವರ್ಕರ್ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಜಾತಿಯವರೂ ಗಣೇಶನ ವಿಗ್ರಹ ಪ್ರತಿಷ್ಠಾಪಿಸುತ್ತಾರೆ. ಆದರೆ, ಧಾರ್ಮಿಕ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಬಿಜೆಪಿಯವರು ರಾಜಕಾರಣ ಮಾಡಲು ಮುಂದಾದರೆ, ನಾವೂ ಮಾಡಬೇಕಿರುವುದು ಅನಿವಾರ್ಯ. ಹಾಗಾಗಿ ಅಂಬೇಡ್ಕರ್, ಬಸವಣ್ಣನವರ ಭಾವಚಿತ್ರ …
Read More »ಸಂತೋಷ್ ಸಾವಿನ ಪ್ರಕರಣ: ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಗೆ ತಕರಾರು ಅರ್ಜಿ
ಬೆಂಗಳೂರು, ಆ.23: ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ (K. S. Eshwarappa) ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ …
Read More »ರಾಜೀನಾಮೆ ಸ್ವೀಕಾರ ಮಾಡಿಲ್ಲ, ನನ್ನನ್ನು ಸಿಲುಕಿಸುವ ಸಂಚು ಇರಬಹುದು: ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್
ಬಾಗಲಕೋಟೆ, ಆ. 23: ‘ಒಂದು ವರ್ಷವಾದರೂ ನನ್ನ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಹೀಗಾಗಿ, ನನ್ನನ್ನು ಸಿಲುಕಿಸುವ ಸಂಚು ಇರಬಹುದು’ ಎಂದು ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸೇರಿದರೆ ನಿಮಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು. ಹೀಗಾಗಿ, ಇನ್ನೂ ರಾಜೀನಾಮೆ ಸ್ವೀಕಾರ ಮಾಡಿಲ್ಲ. ಅಲ್ಲದೆ, ನನ್ನನ್ನು ಯಾವುದರಲ್ಲಾದರೂ ಸಿಕ್ಕಿಸಬಹುದು’ ಎಂದು ಅವರು …
Read More »35 ಸಾವಿರಕ್ಕೂ ಅಧಿಕ ಉರಗಗಳ ರಕ್ಷಣೆ ಮಾಡಿದ್ದ ‘ಸ್ನೇಕ್ ಲೋಕೇಶ್’ ಇನ್ನಿಲ್ಲ: ಹಾವಿನಿಂದಲೇ ದಾರುಣ ಅಂತ್ಯ
ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ 35 ಸಾವಿರಕ್ಕೂ ಅಧಿಕ ಹಾವುಗಳನ್ನು ರಕ್ಷಣೆ ಮಾಡಿ, ಸ್ನೇಕ್ ಲೋಕೇಶ್ ಎಂದೇ ಪ್ರಸಿದ್ಧಿ ಪಡೆದಿದ್ದ ನೆಲಮಂಗಲದ ಸ್ನೇಕ್ ಲೋಕೇಶ್ ಮೃತಪಟ್ಟಿದ್ದಾರೆ. ಹಾವು ಕಡಿತದಿಂದಲೇ ಅವರು ದಾರುಣ ಅಂತ್ಯ ಕಂಡಿದ್ದಾರೆ! ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ಕೊಡಿಸಿ …
Read More »
Laxmi News 24×7