Breaking News

ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/072016 ರಂದು ಹೊರಡಿಸಿದೆ.   ಬೇರೆ ರಾಜ್ಯದಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್‍ಪೋಸ್ಟ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ …

Read More »

ಡೂಪ್ಲಿಕೇಟ್‌ ಮತದಾರರ ಪತ್ತೆಗೆ ತಂತ್ರಜ್ಞಾನ; 4 ಲಕ್ಷ ಡೂಪ್ಲಿಕೇಟ್‌’ ಮತದಾರರ ಹೆಸರು ಡಿಲೀಟ್‌

ಬೆಂಗಳೂರು: ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡೆರಡು ಕಡೆ ವಿಳಾಸ ನೀಡಿ ಗುರುತಿನ ಚೀಟಿ ಪಡೆದವರ ಪತ್ತೆಗೆ ರಾಜ್ಯ ಚುನಾವಣಾ ಆಯೋಗ ಹೊಸ ತಂತ್ರಜ್ಞಾನಕ್ಕೆ ಮೊರೆ ಹೋಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂ ಥ 4 ಲಕ್ಷ ಮತದಾರರನ್ನು ಪಟ್ಟಿಯಿಂದ ತೆಗೆದಿದೆ. ಶೀಘ್ರವೇ ಇತರೆಡೆಯಲ್ಲೂ ಪರಿಶೀಲಿಸಲಿದೆ. ಎರಡೆರಡು ವಾರ್ಡ್‌ಗಳಲ್ಲಿ ಮತದಾರರ ಪಟ್ಟಿಗೆ ನೋಂದಾಯಿಸಿದ ವ್ಯಕ್ತಿಗಳನ್ನು ಫೋಟೋ ಸಿಮಿಲರ್‌ ಎಂಟ್ರೀಸ್‌ ಮತ್ತು ಡೆಮೋಗ್ರಾಫಿಕ್‌ ಸಿಮಿಲರ್‌ ಎಂಟ್ರೀಸ್‌ ಎಂಬ …

Read More »

ಬಸ್​, ಕ್ರೂಜರ್​​ ನಡುವೆ ಮುಖಾಮುಖಿ ಡಿಕ್ಕಿ: ಹುಬ್ಬಳ್ಳಿಗೆ ಮೃತದೇಹ ತರಲು ಹೋದ ಮೂವರ ದಾರುಣ ಸಾವು

ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಕ್ರೂಜರ್​ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಮೃತರೆಲ್ಲರೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದರು. ಆಸ್ಪತ್ರೆಯಲ್ಲಿ ಕ್ರೂಜರ್ ಚಾಲಕ ಮಾರುತಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿಯೇ ಮೃತಪಟ್ಟವರನ್ನು ಶಿವನಗೌಡ ಮತ್ತು ಅಮೃತ …

Read More »

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಸಂಪತ್‌ಗೆ ಅಭಿನಂದನೆ ಸಲ್ಲಿಸುತ್ತೇನೆ: ಯತ್ನಾಳ್

ವಿಜಯಪುರ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೂ ಧರ್ಮದ ಅಪಮಾನ ಮಾಡಿರುವುದಕ್ಕೆ ಆತನಿಗೆ ನೋವಾಗಿದೆ’ ಎಂದು ವಿಜಯಪುರ ನಗರ ಮತ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( Basangouda Patil Yatnal) ಹೇಳಿದ್ದಾರೆ.   ನಗರದಲ್ಲಿ ಬಿಡಿಎ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ (Siddaramaiah) ಅವರ ಕಾರಿಗೆ ಮೊಟ್ಟೆ ಎಸೆದ …

Read More »

ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ.? ಕೆಲವರಿಗೆ ಕೊಕ್, ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಕಂತಿನ ಸಂಪುಟ ಸರ್ಜರಿ ಶೀಘ್ರದಲ್ಲೇ ನಡೆಯಲಿದೆ. ಖಾಲಿ ಇರುವ 5 ಸ್ಥಾನಗಳನ್ನು ಭರ್ತಿ ಮಾಡಲಿದ್ದು, ಇದೇ ವೇಳೆ ಕೆಲವರಿಗೆ ಕೊಕ್ ನೀಡಿ ಮತ್ತೆ ಕೆಲವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಚಿಂತನೆ ನಡೆದಿದೆ. ಪ್ರಮುಖವಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೂ ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜನಪ್ರಿಯ ಮಂತ್ರಿ ಮಂಡಲ ರಚಿಸಲು ಪಕ್ಷದ …

Read More »

KPSC ಯಿಂದ 1323 SDA ಹುದ್ದೆಗಳ ನೇಮಕಾತಿ ಅರ್ಹತಾ ಪಟ್ಟಿ ಆಗಸ್ಟ್ 25 ರಂದು ಪ್ರಕಟ

ಬೆಂಗಳೂರು: ವಿವಿಧ ಇಲಾಖೆಗಳ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ ಆಗಸ್ಟ್ 25 ರಂದು ಪ್ರಕಟಿಸಲಿದೆ. 1,323 ಹುದ್ದೆಗಳ ನೇಮಕಾತಿಗೆ ನಡೆದಿದ್ದ ಕಿರಿಯ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. 2019-20 ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿ 2021ರ ಸೆಪ್ಟೆಂಬರ್ 18, 19 ರಂದು ಪರೀಕ್ಷೆ ನಡೆಸಲಾಗಿತ್ತು. ಆಗಸ್ಟ್ 25 ರಂದು ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು. ಗ್ರೂಪ್ ಎ ಹುದ್ದೆ …

Read More »

ವೋಟರ್ ಐಡಿಗೆ ಆಧಾರ್ ನಂಬರ್​​ ಲಿಂಕ್ ಕಡ್ಡಾಯವಲ್ಲ: ಚುನಾವಣಾ ಆಯೋಗ

ಮತದಾರರು ವೋಟರ್ ಐಡಿಗೆ ಆಧಾರ್ ನಂಬರ್​​ ಲಿಂಕ್ ಮಾಡಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಚುನಾವಣೆ ಆಯೋಗವುಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂ ಪ್ರೇರಿತರಾಗಿ ಆಧಾರ್ ಅಥವಾ ಇತರೆ ನಿಗದಿತ ದಾಖಲೆಗಳ ಮೂಲಕವೂ ದೃಢೀಕರಿಸಿ ಜೋಡಣೆ ಮಾಡಬಹುದಾಗಿದೆ ಎಂದು ತಿಳಿಸಿದೆ. ಮಾಧ್ಯಮಗಳಲ್ಲಿ ವರದಿಯಾದ ವರದಿಗಳನ್ನು ಉಲ್ಲೇಖಿಸಿ, ಫಾರ್ಮ್ -6 ಬಿ ಯಲ್ಲಿ ಆಧಾರ್ ಸಲ್ಲಿಸುವುದು …

Read More »

ದೇವರುಗಳು ಮೇಲ್ಜಾತಿಯವರಲ್ಲ, ಶಿವನೂ ಪರಿಶಿಷ್ಟನೇ: ಜೆಎನ್‌ಯು ಕುಲಪತಿ ಶಾಂತಿಶ್ರೀ

ನವದೆಹಲಿ: ಮಾನವಶಾಸ್ತ್ರದ ಪ್ರಕಾರ ದೇವರುಗಳು ಮೇಲ್ಜಾತಿಗೆ ಸೇರಿದವರಲ್ಲ. ಶಿವನೂ ಕೂಡ ಪರಿಶಿಷ್ಟ ಜಾತಿ ಅಥವಾ ಬುಡಕಟ್ಟಿನವನಾಗಿರಬಹುದು ಎಂದು ದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು)ನ ಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್‌ ಅವರು ಸೋಮವಾರ ಅಭಿಪ್ರಾಯಪಟ್ಟಿದ್ದಾರೆ.   ಡಾ. ಬಿ ಆರ್ ಅಂಬೇಡ್ಕರ್ ಉಪನ್ಯಾಸ ಸರಣಿಯ ಅಂಗವಾಗಿ ಆಯೋಜಿಸಿದ್ದ ‘ಲಿಂಗ ನ್ಯಾಯದ ಕುರಿತು ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆಗಳು: ಏಕರೂಪ ನಾಗರಿಕ ಸಂಹಿತೆಯ ವಿಶ್ಲೇಷಣೆ’ ಎಂಬ ವಿಷಯದ ಕುರಿತು ಅವರು …

Read More »

22 ಶಾಲೆಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ

ಬೆಳಗಾವಿ – ಚಿರತೆ ಆತಂಕದ ಹಿನ್ನೆಲೆಯಲ್ಲಿ ಬೆಳಗಾವಿಯ 22 ಶಾಲೆಗಳು ಕಳೆದ ಹಲವು ದಿನಗಳಿಂದ ಶೈಕ್ಷಿಣಿಕವಾಗಿ ತೀವ್ರ ಗೊಂದಲದಲ್ಲಿವೆ. ರಜೆ ಕೊಡದಿದ್ದರೆ ಚಿರತೆ ದಾಳಿಯಿಂದ ಮಕ್ಕಳಿಗೆ ತೊಂದರೆಯಾದರೆ ಎನ್ನುವ ಆತಂಕ, ರಜೆ ಕೊಟ್ಟರೆ ಪಾಠವಿಲ್ಲದೆ ಮಕ್ಕಳ ಭವಿಷ್ಯದ ಚಿಂತೆ. ಆರಂಭದಲ್ಲಿ ಒಂದು ವಾರ ರಜೆ ನೀಡಿದ್ದ ಶಿಕ್ಷಣ ಇಲಾಖೆ ನಂತರ ಎಲ್ಲ ಮುನ್ನೆಚ್ಚರಿಕೆ ವಹಿಸಿಕೊಂಡು ಶಾಲೆಗಳನ್ನು ನಡೆಸುವಂತೆ ಸೂಚನೆ ನೀಡಿತ್ತು. ಆದರೆ ಸೋಮವಾರ ಮತ್ತೆ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಹಾಗಾಗಿ …

Read More »

ಕಾಂಗ್ರೆಸ್ ಕಛೇರಿಗೆ ಸಾವರ್ಕರ್ ಫೋಟೋ : ಬಸವನಾಡಲ್ಲೂ ಹಬ್ಬಿದ ಸಾವರ್ಕರ್ ಕಿಡಿ

ವಿಜಯಪುರ: ಜಿಲ್ಲೆಗೂ ಸಾವರ್ಕರ್ ವಿವಾದದ ಕಿಡಿ ಹರಡಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಡೆದ ನಗರದ ಗಜಾನನ ಮಹಾಮಂಡಳದ ಸಭೆಯ ವೇದಿಕೆಗೆ ಸಾವರ್ಕರ್ ಎಂದು ಹೆಸರು ಇರಿಸಿದ್ದರೆ, ಇದರ ಬೆನ್ನಲ್ಲೇ ಕಾಂಗ್ರೆಸ್ ಕಛೇರಿಗೆ ಅಪರಿಚಿತ ವ್ಯಕ್ತಿ ಸಾವರ್ಕರ್ ಫೋಟೋ ಅಂಟಿಸುವ ಮೂಲಕ ಜಿಲ್ಲೆಯಲ್ಲೂ ವಿವಾದ ತಾರಕಕ್ಕೆ ಏರುವಂತೆ ಮಾಡಿದ್ದಾರೆ.   ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿನ ಡಾ.ಫ.ಗು. ಹಳಕಟ್ಟಿ ಭವನದಲ್ಲಿ ನಗರ ಶಾಸಕ ಯತ್ನಾಳ ನೇತೃತ್ವದಲ್ಲಿ ನಡೆದ ಶ್ರೀ ಗಜಾನನ …

Read More »