ಬೆಳಗಾವಿ: ವಾಯುವ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನೀಲ್ ಸಂಕ್ ಮತ್ತು ಶಿಕ್ಷಕರು ಪ್ರತಿನಿಧಿಯಾಗಿರುವ ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ವ್ಯಕ್ತಪಡಿಸಿದರು. ಬೆಳಗಾವಿ ನಗರದ ಮರಾಠಾ ಸಭಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇದೊಂದು ಅತ್ಯಂತ ಸೂಕ್ಷ್ಮ, ಬುದ್ಧಿವಂತರ ಚುನಾವಣೆಯಾಗಿದೆ. ಸ್ವತಂತ್ರ ಸಿಕ್ಕ ನಂತರ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆಯಲು, ಅಭಿವೃದ್ಧಿ ಕಾಣಲು ಕಾಂಗ್ರೆಸ್ ಸರ್ಕಾರ ರೂಪಿಸಿದ ಶಿಕ್ಷಣ ನೀತಿಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು …
Read More »ಬೆಳಗಾವಿಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆ ವಶಕ್ಕೆ
ಬೆಳಗಾವಿ: ಜಿಲ್ಲೆಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮಿಡಕನಟ್ಟಿ ಗ್ರಾಮದ ಗದ್ದೆಯಲ್ಲಿ ಗಾಂಜಾ ಬೆಳೆಯಲಾಗಿತ್ತು. ಈ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಬೆಳೆಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಗಾಂಜಾ ಬೆಳೆದಿದ್ದ ಪರಪ್ಪ ಸವಸುದ್ದಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಡಿಸಿಆರ್ಬಿ, ಸಿಇಎನ್ ಹಾಗೂ ಗೋಕಾಕ್ ಗ್ರಾಮೀಣ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಇದೇ ವೇಳೆ 2 ಲಕ್ಷ 58 ಸಾವಿರ …
Read More »ಡಜನ್ ಆಕಾಂಕ್ಷಿಗಳಲ್ಲಿ ಟಿಕೆಟ್ ಯಾರಿಗೆ – ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್
ಬೆಂಗಳೂರು: ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಬಹುತೇಕ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಈ ಸಂಬಂಧ ನವದೆಹಲಿಯಲ್ಲಿ ಗುರವಾರ ಬಿಜೆಪಿ ವರಿಷ್ಠರ ಮಹತ್ವದ ಸಮಾಲೋಚನಾ ಸಭೆ ನಡೆಯಲಿದೆ. ಕರ್ನಾಟಕದ 4 ಸ್ಥಾನಗಳ ಪೈಕಿ 2 ಸ್ಥಾನಗಳನ್ನು ಬಿಜೆಪಿ ಸುಲಭವಾಗಿ ಗೆಲ್ಲಬಹುದಾಗಿದ್ದು, ಕಣಕ್ಕಿಳಿಯುವ ಇಬ್ಬರು ಅಭ್ಯರ್ಥಿಗಳ ಆಯ್ಕೆ ನಡೆಯಬೇಕಿದೆ. ಹಾಲಿ ಸದಸ್ಯೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಡಜನ್ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ವರಿಷ್ಠರಿಗೆ ರವಾನಿಸಿದೆ. …
Read More »ಜಿ.ಪಂ., ತಾ.ಪಂ. ಕ್ಷೇತ್ರ ಪುನರ್ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್ನಿಂದ 12 ವಾರಗಳ ಗಡು
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಆರಂಭಿಸಲು ಸುಪ್ರೀಂ ಕೋರ್ಟ್ ಎಂಟು ವಾರಗಳ ಗಡುವು ನೀಡಿದ ಬೆನ್ನಲ್ಲೇ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಹೈಕೋರ್ಟ್ 12 ವಾರಗಳ ಗಡುವು ವಿಧಿಸಿದೆ. ಈ ಗಡುವು ಮೀರಿ ಹೆಚ್ಚಿನ ಕಾಲಾವಕಾಶ ಕೇಳದಂತೆಯೂ ರಾಜ್ಯ ಸರಕಾರಕ್ಕೆ ತಾಕೀತು ಮಾಡಿದೆ. ಮಂಗಳವಾರ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ …
Read More »ವಿಜಯೇಂದ್ರಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ: ಬಿಎಸ್ ವೈ ವಿಶ್ವಾಸ
ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ತಪ್ಪಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ವಿಲ್ಲ, ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್ .ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ವಿಜಯೇಂದ್ರಗೆ ಮುಂದೆ ಬೇರೆ ಬೇರೆ ಅವಕಾಶ ಗಳು ಇದ್ದಾವೆ ಇವಾಗ ಬಿಜೆಪಿ ಉಪಾಧ್ಯಕ್ಷ ರಾಗಿದ್ದಾರೆ. ಮುಂದೆ ಅವಕಾಶ ಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ ಎಂದರು. ಮುಂದಿನ ಚುನಾವಣೆ ವಿಜಯೇಂದ್ರ ಸ್ಪರ್ಧೆ …
Read More »ಕ್ರಿಕೆಟ್ ಬೆಟ್ಟಿಂಗ್ಗಾಗಿ ದ್ವಿಚಕ್ರ ವಾಹನಗಳನ್ನುಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೋಜಿನ ಜೀವನ ಹಾಗೂ ಕ್ರಿಕೆಟ್ ಬೆಟ್ಟಿಂಗ್ಗಾಗಿ ದ್ವಿಚಕ್ರ ವಾಹನಗಳನ್ನುಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡು ಸಾಲ ತೀರಿಸಲು ಮನೆಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಯುವಕನೊಬ್ಬನನ್ನು ಭಾರತೀ ನಗರ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಕುಪ್ಪಂ ಜಿಲ್ಲೆಯ ಲಕ್ಷ್ಮೀಪತಿ (24) ಬಂಧಿತ. ಆರೋಪಿಯಿಂದ 4 ಲಕ್ಷ ರೂ.ಮೌಲ್ಯದ 10 ದ್ವಿಚಕ್ರ ವಾಹನಗಳನ್ನು …
Read More »ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿ
ಬೆಂಗಳೂರು: ಬಿಜೆಪಿ ಹಾಗೂ ಕೆಲವು ಸಂಘಟನೆಗಳ ವೈಯಕ್ತಿಕ ನಂಬಿಕೆಗಳನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಆದರೆ ಅವು ಅದನ್ನು ಬೇರೆಯವರ ಮೇಲೆ ಹೇರಬಾರದು. ಸಾರ್ವಜನಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡಬಾರದು. ಅದು ತಪ್ಪು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿ, ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ನಾಯಕರು ಹಾಗೂ ಬಿಜೆಪಿ ಶಾಸಕರು ತಾಂಬೂಲ …
Read More »ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ
ದಾವೋಸ್ : ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ (ಐಕಿಯ) ಸಿಇಓ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಜೂನ್ ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು …
Read More »ಮೇ ಅಂತ್ಯಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್?
ಬೆಂಗಳೂರು: ದಾವೋಸ್ನಿಂದ ನಾಳೆ ಬೆಳಗ್ಗೆ ಸಿಎಂ ರಾಜ್ಯಕ್ಕೆ ವಾಪಸ್ ಆಗಲಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸುವ ಸಾಧ್ಯತೆ ಇದೆ. ದಾವೋಸ್ನಿಂದ ಬಂದ ಬಳಿಕ ಆರ್ಥಿಕ ಇಲಾಖೆ, ವಾಣಿಜ್ಯ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸುವ ಸಾಧ್ಯತೆ ಇದ್ದು, ಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆಯ ಕುರಿತು ನಿರ್ಧಾರವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೇ ಅಂತ್ಯಕ್ಕೆ ರಾಜ್ಯದ …
Read More »ಆಂಬ್ಯುಲೆನ್ಸ್ನಲ್ಲೇ ಹೆರಿಗೆ ಮಾಡಿಸಿದ 108 ಸಿಬ್ಬಂದಿ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬೆಳಗುರ್ಕಿ ಗ್ರಾಮದ ಗರ್ಭಿಣಿಗೆ ಆಸ್ಪತ್ರೆ ಮಾರ್ಗ ಮಧ್ಯೆಯೇ ಆಂಬ್ಯುಲೆನ್ಸ್ನಲ್ಲಿ ಹೆರಿಗೆಯಾಗಿದೆ. ಹೆರಿಗೆ ನೋವು ತೀವ್ರವಾಗಿ ಕಾಣಿಸಿಕೊಂಡಿದ್ದರಿಂದ 108 ಸಿಬ್ಬಂದಿ ಹೆರಿಗೆ ಮಾಡಿಸಿದ್ದಾರೆ. ಪ್ರಸ್ತುತ ತಾಯಿ ಪಾರ್ವತಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ-ಮಗಳು ಆರೋಗ್ಯವಾಗಿ ಇದ್ದಾರೆ. ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಬಾದರ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಆಂಬ್ಯುಲೆನ್ಸ್ಗೆ ಕರೆ ಮಾಡಲಾಗಿತ್ತು. ಆದರೆ ಆಸ್ಪತ್ರೆ ಮಾರ್ಗ ಮಧ್ಯೆದಲ್ಲೇ ನೋವು ತೀವ್ರಗೊಂಡಿದ್ದರಿಂದ ಶುಶ್ರೂಷಕ ಬಸವರಾಜ್ …
Read More »