ರಾಜ್ಯದಲ್ಲಿ ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಬೆಳಗಾವಿ ನಗರದ ಖಾಸಗಿ ಹೋಟಲ್‌ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಪರಿಷತ್ ಚುನಾವಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆಯಲ್ಲಿ, ಮಾಜಿ ಸಚಿವ ಎ ಬಿ ಪಾಟೀಲ್, ವೀರಕುಮಾರ್ ಪಾಟೀಲ್ ಭಾಗಿ ಮೊದಲಾದ ಕಾಂಗ್ರೆಸ್ ಹಿರಿಯ ನಾಯಕರು ಭಾಗಿಯಾಗಿದ್ದರು. ಈ …
Read More »ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ :
ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳಿಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ. ಅವರಿಂದ ನಾವು ಪಾಠ ಕಲಿಯಬೇಕೆ’ ಎಂದು ಪ್ರಶ್ನಿಸಿದರು. ‘ಅಲ್ಪ ಸಂಖ್ಯಾತರ ಹಕ್ಕುಗಳು, ಅವರ ಪರವಾಗಿ ಮಾತನಾಡಿದರೆ, ಸಂಘ ಪರಿವಾರದವರು ನೀನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ್ದಿಯಾ ಎಂದು ಕೇಳುತ್ತಾರೆ. ನಮ್ಮ ಧರ್ಮದಲ್ಲಿ ನಿಷ್ಠೆಯ …
Read More »ಯುವತಿಗೆ ರಿವಾಲ್ವಾರ್ ತೋರಿಸಿ ಪಿಜಿ ಮಾಲೀಕನಿಂದ ಅತ್ಯಾಚಾರ
ಬೆಂಗಳೂರು: ವಿದ್ಯಾಭ್ಯಾಸಕ್ಕೆಂದು ನಗರಕ್ಕೆ ಬಂದಿದ್ದ ಯುವತಿಗೆ ರಿವಾಲ್ವಾರ್ ತೋರಿಸಿ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಬಿಹಾರ ಮೂಲದ ಉದ್ಯಮಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನಿಲ್ ರವಿಶಂಕರ್ ಪ್ರಸಾದ್ ಬಂಧಿತ. ಈತ ಟೈಲ್ಸ್ ಬಿಸಿನೆಸ್ ಮಾಡುತ್ತಿದ್ದ. ಈತನ ಒಡೆತನದ ಪಿಜಿಯಲ್ಲಿದ್ದ ಯುವತಿಯೊಬ್ಬಳಿಗೆ ಆರೋಪಿಯು ರಿವಾಲ್ವಾರ್ ತೋರಿಸಿ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾನೆ ಎಂದು ದೂರು ದಾಖಲಾಗಿದೆ. ಪೊಲೀಸರು ಆರೋಪಿ ಜತೆಗೆ ರಿವಾಲ್ವರ್ ಅನ್ನೂ ಜಪ್ತಿ ಮಾಡಿದ್ದಾರೆ. ಆರೋಪಿಯನ್ನ ನ್ಯಾಯಾಲಯಕ್ಕೆ …
Read More »ಶಿವಮೊಗ್ಗದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ಶಿವಮೊಗ್ಗ: ಇಲ್ಲೊಬ್ಬ ಮಹಿಳೆ ಒಂದಲ್ಲ, ಎರಡಲ್ಲ, ಬರೋಬ್ಬರಿ ನಾಲ್ಕು ಮಕ್ಕಳಿಗೆ ಏಕಕಾಲದಲ್ಲಿ ಜನ್ಮ ನೀಡಿದ್ದಾರೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಮಹಿಳೆಯು ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ್ದು, ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಭದ್ರಾವತಿ ತಾಲೂಕಿನ ಕಡಸ ಗ್ರಾಮದ ಆರೀಫ್ ಅವರ ಪತ್ನಿ ಅಲ್ಮಾ ಬಾನು 4 ಮಕ್ಕಳಿಗೆ ಜನ್ಮ ನೀಡಿದ ತಾಯಿ. ಸೋಮವಾರ ಬೆಳಗ್ಗೆ ಅಲ್ಮಾಗೆ ಹೆರಿಗೆಯಾಗಿದ್ದು, 2 ಗಂಡು ಮತ್ತು 2 ಹೆಣ್ಣು ಮಗು ಜನಿಸಿವೆ.
Read More »ಗಾಯಕ್ಕೆ ನಮ್ಮಿಂದ್ಲೆ ಬ್ಯಾಂಡೇಜ್ ಮಾಡಿಸ್ತಾರ್ರೀ…
ಹುಬ್ಬಳ್ಳಿ: ರಕ್ತ ಪರೀಕ್ಷೆಗೆ ಹಣ ಕೇಳ್ತಾರ, ನಮ್ಮಿಂದ್ಲೆ ಗಾಯಕ್ಕೆ ಬ್ಯಾಂಡೇಜ್ ಮಾಡಿಸ್ತಾರ, ಔಷಧಿಗಳನ್ನು ಹೊರಗಡೆಯಿಂದ ತರಾಕ ಹೇಳ್ತಾರ, ಸರಿಯಾಗಿ ಚಿಕಿತ್ಸೆ ನೀಡ್ತಿಲ್ಲ… ಧಾರವಾಡದ ಬಾಡ ಕ್ರಾಸ್ ಬಳಿ ಶುಕ್ರವಾರ ರಾತ್ರಿ ನಡೆದ ಅಪಘಾತದಲ್ಲಿ ಗಾಯಗೊಂಡು ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಸಂಬಂಧಿಕರು, ಭಾನುವಾರ ಕಿಮ್ಸ್‌ಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಎದುರು ಆಸ್ಪತ್ರೆ ಸಿಬ್ಬಂದಿಯ ವರ್ತನೆ ಕುರಿತು ಮಾಡಿದ ಆರೋಪಗಳಿವು. ‘ಒಡಹುಟ್ಟಿದವರು ಮತ್ತು ಸಂಬಂಧಿಕರನ್ನು ಕಳೆದುಕೊಂಡು …
Read More »ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್ ಮುಖಂಡರು: ಆರಗ ಜ್ಞಾನೇಂದ್ರ
ಶಿವಮೊಗ್ಗ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ. ತನಿಖೆ ನಂತರ ಎಲ್ಲವೂ ಹೊರಬರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ‘ಪಿಎಸ್‌ಐ ಹಗರಣ ಕುರಿತು ಸಿಐಡಿ ವಿಶೇಷ ತನಿಖೆ ನಡೆಸುತ್ತಿದೆ. ಈಗಾಗಲೇ ಕಲಬುರಗಿಯಲ್ಲಿ ₹ 1 ಕೋಟಿ, ಬೆಂಗಳೂರಿನಲ್ಲಿ ₹ 2.19 ಕೋಟಿ ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಲಾಗುವುದು. …
Read More »ಸಿಲಿಕಾನ್ ಸಿಟಿ’ಯನ್ನು ‘ಸ್ವಿಮ್ಮಿಂಗ್ ಪೂಲ್’ ಮಾಡಿದ ಹೆಗ್ಗಳಿಕೆ ‘ಬಿಜೆಪಿ ಸರ್ಕಾರ’ದ್ದು:H.D.K.
ಬೆಂಗಳೂರು: ಸಿಲಿಕಾನ್ ಸಿಟಿಯನ್ನು ( Silicon City ) ಸ್ವಿಮ್ಮಿಂಗ್ ಪೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ( BJP Government ) ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ. ಅನುದಾಲದ ಹೊಳೆ ಹರಿದ ಕ್ಷೇತ್ರಗಳೇ ಈಗ ನೀರಿನಲ್ಲಿ ತೇಲುತ್ತಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( HD Kumaraswamy ) ವಾಗ್ದಾಳಿ ನಡೆಸಿದ್ದಾರೆ. …
Read More »ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ – ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ
ಬೆಂಗಳೂರು: ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು …
Read More »ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಬೆಂಗಳೂರು: ರಾಜ್ಯವು ಈಗಾಗಲೇ ಮಳೆಯಿಂದ ತತ್ತರಿಸಿದೆ. ಇನ್ನೂ ಮತ್ತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ ಕಡಿಮೆಯಾಗಿತ್ತು. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ …
Read More »ರಾಜ್ಯದಲ್ಲೂ ಪೆಟ್ರೋಲ್ ತೆರಿಗೆ ಕಡಿತ ಸಂಭವ: ಸಿಎಂ ಬೊಮ್ಮಾಯಿ
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕೇಂದ್ರ ಇಳಿಕೆ ಮಾಡಿದ ಬೆನ್ನಲ್ಲೇ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನದಲ್ಲಿ ರಾಜ್ಯಗಳು ತೆರಿಗೆ ಇಳಿಕೆ ಮಾಡಿವೆ. ಇದರಿಂದಾಗಿ ಪೆಟ್ರೋಲ್ 2 ರೂ ಮತ್ತು ಡೀಸೆಲ್ 1 ರೂ. ನಷ್ಟು ಅಗ್ಗವಾಗಿದೆ. ಇದದ ಬೆನ್ನಲ್ಲೇ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಕಡಿಮೆ ಮಾಡಬೇಕು ಎಂಬ ವ್ಯಾಪಕ ಆಗ್ರಹ ಕೇಳಿ ಬಂದಿದೆ. ಹೀಗಾಗಿ, ತೆರಿಗೆ ಇಳಿಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ …
Read More »