ಹೈದರಾಬಾದ್: ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್ನ ಬೇಗುಂ ಬಜಾರ್ನಲ್ಲಿ ನಡೆದಿದೆ. ಐದು ಮಂದಿಯ ಗ್ಯಾಂಗ್ ಯುವನನ್ನು ನಡುರಸ್ತೆಯಲ್ಲೇ ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈವರೆಗೂ ಕೊಲೆಗಾರರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ದೊರೆತಿಲ್ಲ. ಮಾಹಿತಿ ಕಲೆಹಾಕುವ …
Read More »ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು: ವಿಡಿಯೊ ಹಂಚಿ ಟಿಎಸ್‌ಆರ್‌ಟಿಸಿ ಎಚ್ಚರಿಕೆ
ಹೈದರಾಬಾದ್: ಮೋಟರ್ ಬೈಕ್‌ನ ಹಿಂಬದಿ ಚಕ್ರಕ್ಕೆ ಬುರ್ಖಾ ಸಿಲುಕಿ, ಕೆಳಗೆ ಬಿದ್ದ 18 ವರ್ಷದ ಯುವತಿ ಸಾವಿಗೀಡಾಗಿರುವ ಘಟನೆ ಹೈದರಾಬಾದ್‌ನಲ್ಲಿ ಇತ್ತೀಚೆಗೆ ಸಂಭವಿಸಿದೆ. ಸೋದರನೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಯ ಬುರ್ಖಾ ಹಿಂಬದಿಯ ಚಕ್ರಕ್ಕೆ ಸುತ್ತಿಕೊಂಡಿದೆ. ಹೀಗಾಗಿ ಇಬ್ಬರೂ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಆದರೆ, ಯುವತಿಗೆ ಗಂಭೀರ ಗಾಯಗಳಾಗಿತ್ತು ಎನ್ನಲಾಗಿದ್ದು, ಮರುದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ವಿಡಿಯೋವನ್ನು ತೆಲಂಗಾಣದ ಸಾರಿಗೆ ನಿಗಮದ ಎಂಡಿ ವಿಸಿ ಸಜ್ಜನರ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, …
Read More »ಮೇ 21, 22ರಂದು ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ
ಉಡುಪಿ : ಕರಾವಳಿಯ ಜಿಲ್ಲೆಗಳಲ್ಲಿ ಮೇ 21 ಮತ್ತು 22ರಂದು ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ತೀರದಲ್ಲಿ ಗಂಟೆಗೆ 40ರಿಂದ 60 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಳೆ 115ಮಿ.ಮೀಗೂ ಅಧಿಕ ಮಳೆ ಸುರಿಯುವ ಸಾದ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ …
Read More »ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಇನ್ಮುಂದೆ ಸಿಗಲಿದೆ ‘ಬಲವರ್ಧಿತ ಅಕ್ಕಿ’
ಹಾವೇರಿ: ಪಡಿತರ ಚೀಟಿದಾರರಿಗೆ ಮೇ-2022ಮಾಹೆಗೆ ಪೋಷಕಾಂಶಯುಕ್ತ ಬಲವರ್ಧಿತ ಅಕ್ಕಯನ್ನು ಸರ್ಕಾರದಿಂದ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಹಾವೇರಿ ತಹಶೀಲ್ದಾರ ಎನ್.ಬಿ.ಗೆಜ್ಜಿ ಅವರು ತಿಳಿಸಿದ್ದಾರೆ. ಅಂತ್ಯೋದಯ ಪಡಿತರ ಚೀಟಿ ಹೊಂದಿದ ಪ್ರತಿ ಪಡಿತರ ಚೀಟಿಗೆ ಉಚಿತವಾಗಿ 15 ಕೆ.ಜಿ.ಜೋಳ ಹಾಗೂ 20 ಕೆಜಿ ಅಕ್ಕಿ ಮತ್ತು ಪಿಎಂಕೆಎವೈ ಯೋಜನೆಯಡಿ ಉಚಿತವಾಗಿ ಪ್ರತಿ ಸದಸ್ಯರಿಗೆ 5 ಕೆ.ಜಿ.ಅಕ್ಕಿ ಬಿಡುಗಡೆ ಮಾಡಲಾಗಿದೆ. ಪಿ.ಎಚ್.ಎಚ್. (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಎನ್‍ಎಫ್‍ಎಸ್‍ಎ ಯೋಜನೆಯಡಿ ಉಚಿತವಾಗಿ …
Read More »ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ…
ಬಾಗಲಕೋಟೆ : ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. ಮಾನಪ್ಪ ತಳವಾರ (53) ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಜಡ್ಜ್ ಆಗಿದ್ದಾರೆ. ಅಂದ ಹಾಗೇ ಮೂಲತಃ ಶೆಲ್ಲಿಕೇರಿ ಗ್ರಾಮದವರಾಗಿದ್ದ ಮಾನಪ್ಪ ತಳವಾರ ಬಾಗಲಕೋಟೆಯ ನವನಗರದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು..ಇಂದು ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಸಿಪಿಐ ವಿಜಯಕುಮಾರ್ ಮುರಗುಂಡಿ, ಸಿಪಿಐ ಎಸ್.ಎಂ.ಆವಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. …
Read More »ಇಂದಿನಿಂದ ಪದವೀಧರ ಶಿಕ್ಷಕರ ನೇಮಕಾತಿಗೆ `CET’ : ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಭಾರೀ ಅಕ್ರಮಗಳು ಹೊರಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಮೇ. 21, 22 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಭಾರೀ ಕಟ್ಟೆಚ್ಚರ ಮತ್ತು ಕಟ್ಟುನಿಟ್ಟಾಗಿ ನಡೆಸಲು ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮೊದಲೇ ಹಾಜರಿರಬೇಕಾಗುತ್ತದೆ. ಪ್ರತಿ ಅಭ್ಯರ್ಥಿಯನ್ನೂ ಪರೀಕ್ಷಾ …
Read More »: ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಜಿಟಿಜಿಟಿ ಮಳೆ ಮುಂದುವರಿದಿದೆ. ಆಗಾಗ ಜೋರಾಗಿ ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ತ
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಜಿಟಿಜಿಟಿ ಮಳೆ ಮುಂದುವರಿದಿದೆ. ಆಗಾಗ ಜೋರಾಗಿ ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗುರುವಾರ ರಾತ್ರಿಯಿಂದಲೂ ವರ್ಷಧಾರೆ ಮುಂದುವರಿದಿದೆ. ಮೂಡಲಗಿ ತಾಲ್ಲೂಕಿನಲ್ಲಿ ಘಟಪ್ರಭಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಪರಿಣಾಮ, ಮೂಡಲಗಿ- ಸುಣದೋಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ. ಕೆಳಹಂತದ ಸೇತುವೆ ಇದಾಗಿದ್ದು, ಅದರ ಮೇಲೆಯೇ ಅಪಾಯ ಲೆಕ್ಕಿಸದೆ ಜನರು ಸಂಚರಿಸುತ್ತಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಳದಿಂದ ತೀರದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ತಡರಾತ್ರಿ ಮಳೆಯಿಂದಾಗಿ …
Read More »ವಿಧಾನಪರಿಷತ್ ಚುನಾವಣೆ| ಮುಹೂರ್ತ ಪ್ರಕಾರ ನಾಮಪತ್ರ ಸಲ್ಲಿಸಿದ ಹಣಮಂತ ನಿರಾಣಿ
ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಜೂನ್ 13ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸದಸ್ಯ ಹಣಮಂತ ನಿರಾಣಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ 2 ಸೆಟ್ ನಾಮಪತ್ರಗಳನ್ನು ಶುಕ್ರವಾರ ಸಲ್ಲಿಸಿದರು. ಅವರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುಖಂಡ ಆರ್.ಎಸ್. ಮುತಾಲಿಕ್, ಪಕ್ಷದ ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ ಮೊದಲಾದವರು …
Read More »ಏಣಗಿ ಬಾಳಪ್ಪ ಕುರಿತ ಕೃತಿ ಮೇ 22ರಂದು ಬಿಡುಗಡೆ
ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ, ರಂಗ ಸಂಪದ ಹಾಗೂ ಚಂದ್ರಕಾಂತ ಕುಸನೂರ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ರಂಗಕರ್ಮಿ ಏಣಗಿ ಬಾಳಪ್ಪ ಅವರ ರಂಗಾನುಭವಗಳ ಕುರಿತು ಗಣೇಶ ಅಮೀನಗಡ ನಿರೂಪಿಸಿದ ‘ಬಣ್ಣದ ಬದುಕಿನ ಚಿನ್ನದ ದಿನಗಳು’ ಕೃತಿಯ 8ನೇ ಮುದ್ರಣದ ಬಿಡುಗಡೆ ಸಮಾರಂಭವನ್ನು ಇಲ್ಲಿನ ರಾಣಿ ಚನ್ನಮ್ಮ ವೃತ್ತ ಸಮೀಪದ ಕನ್ನಡ ಸಾಹಿತ್ಯ ಭವನದಲ್ಲಿ ಮೇ 22ರಂದು ಸಂಜೆ 4ಕ್ಕೆ ಆಯೋಜಿಸಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಸರಜೂ ಕಾಟ್ಕರ್ ಬಿಡುಗಡೆ ಮಾಡಲಿದ್ದಾರೆ. …
Read More »ರಾಜಧಾನಿಯಲ್ಲಿ ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ದುರ್ಮರಣ, ನಾಲ್ವರ ಸ್ಥಿತಿ ಗಂಭೀರ,
ಬೆಂಗಳೂರು: ಪಾದಾಚಾರಿ ( pedestrian ) ಗಳ ಮೇಲೆ ಕಾರು ಹರಿದು ಹೋಗಿ ಓರ್ವ ದುರ್ಮರಣ ಹೊಂದಿದ ಘಟನೆ ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತ (Accident)ದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಶಿವರಾಜು, ಶೈಲೇಂದ್ರ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ …
Read More »