‘ಗಂಡ ಹೆಂಡತಿ’ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಲ್ಲದೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡ ನಟಿ ಸಂಜನಾ ಗಲ್ರಾನಿ. ಡ್ರಗ್ಸ್ ಪ್ರಕರಣದಲ್ಲಿ ಹೆಸರು ತಳುಕು ಹಾಕಿಕೊಂಡ ಹಿನ್ನಲೆಯಲ್ಲಿ, ಗಂಡ ಹೆಂಡತಿ ನಾಯಕಿಯ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅದೇ ಸಮಯದಲ್ಲಿ ಬಹುದಿನದ ಗೆಳೆಯ, ಅಜೀಜ್ ಪಾಷಾ ಜೊತೆ ಸಂಜನಾ ಗಲ್ರಾನಿ ಮದುವೆ ಮಾಡಿಕೊಂಡಿದ್ದರು. ಇದರ ಫಲವಾಗಿ ಸಂಜನಾ ಗಲ್ರಾನಿ ಅವರಿಗೆ ಇಂದು, ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ …
Read More »PSI ಹುದ್ದೆ ಅಕ್ರಮ: ಮೊದಲ ರಾತ್ರಿಯ ಮೂಡ್ನಲ್ಲಿದ್ದವನಿಗೆ ಸಿಐಡಿ ಶಾಕ್
ಬಾಗಲಕೋಟೆ: ಪಿಎಸ್ಐ ಹುದ್ದೆ ನೇಮಕಾತಿಯಲ್ಲಿನ ಅಕ್ರಮ ಉರುಳು ನವ ವಿವಾಹಿತನಿಗೂ ಸುತ್ತಿಕೊಂಡಿದ್ದು, ಮೊದಲ ರಾತ್ರಿಯ ಮೂಡ್ನಲ್ಲಿದ್ದವನಿಗೆ ಸಿಐಡಿ ಶಾಕ್ ಕೊಟ್ಟಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಶ್ರೀಕಾಂತ್ ಚೌರಿ ಬಂಧಿತ. ಮೇ 14ರಂದು ಜಮಖಂಡಿ ನಗರದಲ್ಲಿ ಶ್ರೀಕಾಂತ್ನ ಮದುವೆ ಅದ್ದೂರಿಯಾಗಿ ನೆರವೇರಿತ್ತು. ಇದಾದ 5 ದಿನಕ್ಕೆ ಸಿಐಡಿ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡದಲ್ಲಿರುವ ಇನ್ಸ್ಪೈರ್ ಇಂಡಿಯಾ ಐಎಎಸ್ ಆಯಂಡ್ ಕೆಎಎಸ್ ಕೋಚಿಂಗ್ ಸೆಂಟರ್ನ ಮಾಜಿ ನಿರ್ದೇಶಕನಾಗಿದ್ದ ಶ್ರೀಕಾಂತ, ಪಿಎಸ್ಐ ಅಭ್ಯರ್ಥಿಗಳಿಂದ …
Read More »ಹುಬ್ಬಳ್ಳಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಕಾರಣ ಒಂದಲ್ಲ ಎರಡಲ್ಲ
ಹುಬ್ಬಳ್ಳಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಕಾರಣ ಒಂದಲ್ಲ ಎರಡಲ್ಲ ಎಂಬಂತಾಗಿದೆ. ಸಮಸ್ಯೆ ಜೊತೆಗೆ ಗೊಂದಲವೂ ಸೇರಿ ಕೊನೆಗೆ ಈ ವಿದ್ಯಾರ್ಥಿನಿ ಸಾವಿನ ಮೊರೆ ಹೋಗಿದ್ದಳು. ಹುಬ್ಬಳ್ಳಿಯ ಕಾರವಾರ ರಸ್ತೆಯ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಈ ಆತ್ಮಹತ್ಯೆ ನಡೆದಿದೆ. ಹೆಡ್ ಕಾನ್ಸ್ಟೆಬಲ್ ಮಲ್ಲಪ್ಪ ಬದಾಮಿ ಎಂಬುವರ ಪುತ್ರಿ ಕಾವ್ಯಾ ಬದಾಮಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ್ದಳು. ಆದರೆ ಪಿಯುಸಿ ಪ್ರಥಮ ವರ್ಷದ ಪರೀಕ್ಷೆಯಲ್ಲಿ …
Read More »ಮಳೆ ಹಾನಿ ವೀಕ್ಷಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಬೆಳಗ್ಗೆ ಸಿಟಿ ರೌಂಡ್ಸ್
ಬೆಂಗಳೂರು: ಮಂಗಳವಾರ ರಾತ್ರಿ ಸುರಿದ ಮಹಾಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ಅಕ್ಷರಶಃ ತತ್ತರಿಸಿದೆ. ಬುಧವಾರವೂ ಅಬ್ಬರಿಸಿದ ವರುಣ, ಇಂದು ಬೆಳ್ಳಂಬೆಳಗ್ಗೆಯೂ ಅಬ್ಬರಿಸುತ್ತಿದ್ದು, ಜನಜೀವನ ಮೂರಾಬಟ್ಟೆಯಾಗಿದೆ. ಸಾವಿರಾರು ಮನೆಗಳಿಗೆ ಮಳೆ ನೀರಿನ ಜತೆಗೆ ಕೊಳಚೆ ನೀರೂ ನುಗ್ಗಿದೆ, ತಗ್ಗುಪ್ರದೇಶದಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಮಳೆ ಹಾನಿ ವೀಕ್ಷಿಸಲು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಇಂದು ಬೆಳಗ್ಗೆ ಸಿಟಿ ರೌಂಡ್ಸ್ ಮಾಡುತ್ತಿದ್ದಾರೆ. ಸಿಎಂ ನಿವಾಸದಿಂದ ಅಧಿಕಾರಿಗಳ ಜತೆ ವೋಲ್ವೋ ಬಸ್ ಹತ್ತಿದ ಬೊಮ್ಮಾಯಿ ಅವರು …
Read More »ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್
ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಸುಪ್ರೀಕೋರ್ಟ್ ಗುರುವಾರ ಆದೇಶಿಸಿದೆ.ಮೂರು ದಶಕಗಳ ಬಳಿಕ ಇದೀಗ ನ್ಯಾಯಾಲಯ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ. 1988ರಲ್ಲಿ ನಡೆದ ರಸ್ತೆ ಗಲಾಟೆ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ಅಪರಾಧಿ ಎಂದು ಪರಿಗಣಿಸಿ ಜೈಲು ಶಿಕ್ಷೆ ವಿಧಿಸಿದೆ. ಈ ಗಲಾಟೆಯಲ್ಲಿ ಓರ್ವ ಮೃತಪಟ್ಟಿದ್ದ.ಇನ್ನು ಒಂದು ವರ್ಷದ ಜೈಲು ಶಿಕ್ಷೆ ಜತೆಗೆ 1 ಸಾವಿರ ರೂ. ದಂಡ ವಿಧಿಸಿದೆ. …
Read More »ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ
ನವದೆಹಲಿ, ಮೇ 19: ಈಗಾಗಲೇ ಬೆಲೆ ಏರಿಕೆಯಿಂದ ಬಸವಳಿದಿರುವ ಗ್ರಾಹಕರಿಗೆ ಮತ್ತೆ ಸಿಲಿಂಡರ್ ಬೆಲೆ ಏರಿಕೆಯ ಶಾಕ್ ನೀಡಲಾಗಿದೆ. ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ರೂ. 3.50, ವಾಣಿಜ್ಯ ಸಿಲಿಂಡರ್ನ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ, ಹಲವಾರು ನಗರಗಳಲ್ಲಿ ಗೃಹಬಳಕೆಯ LPG ಸಿಲಿಂಡರ್ಗಳ ದರವು 1000 ರೂಪಾಯಿ ಆಗಿದೆ. ಗುರುವಾರ, ಮೇ 19 ರಂದು ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್ …
Read More »‘ಮೈ ಬೆಳಗಾವಿ’ ಆಯಪ್ನಲ್ಲಿ ಹಲವು ಸೇವೆ
ಬೆಳಗಾವಿ: ‘ಮೈ ಬೆಳಗಾವಿ’ ಮೊಬೈಲ್ ಆಯಪ್ ಮೂಲಕ ಸಾರ್ವಜನಿಕರಿಗೆ ಹಲವು ಸೇವೆಗಳನ್ನು ಒದಗಿಸಲಾಗುತ್ತಿದೆ’ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಬಾಗೇವಾಡಿ ತಿಳಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ನಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ‘ಆಯಪ್ ಬಳಕೆ ಮೂಲಕ ಆಂಬುಲೆನ್ಸ್ ಸೇವೆ, ಪ್ರವಾಸಿ ತಾಣಗಳು ಮತ್ತು ಬಸ್ ಸಂಚಾರದ ಸಮಗ್ರ ಮಾಹಿತಿ ಪಡೆಯಬಹುದು. ನಗರ ಸಾರಿಗೆ ಬಸ್ಗಳ ಸ್ಥಳ ಪತ್ತೆ ಹಚ್ಚಬಹುದು. ಸರ್ಕಾರಿ ಜಿಲ್ಲಾ ಕಚೇರಿಗಳ …
Read More »ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸತ್ತಿಗೇರಿಯ ಸಹನಾ ಕನ್ನಡದಲ್ಲಿ ಟಾಪರ್
ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪ್ರಕಟವಾಗಿದ್ದು, ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸಹನಾ ಮಹಾಂತೇಶ ರಾಯರ, ಕನ್ನಡ ವಿಭಾಗದಲ್ಲಿ ಪೂರ್ಣ ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಸಂತಸ ಹಂಚಿಕೊಂಡ ಅವರು, ‘ಕೋವಿಡ್-19 ಸಂಕಷ್ಟದಿಂದ ತರಗತಿ ಸಮರ್ಪಕವಾಗಿ ನಡೆಯಲಿಲ್ಲ. ಆನ್ಲೈನ್ ತರಗತಿಗೆ ಹಾಜರಾಗಲು ನೆಟ್ವರ್ಕ್ ಸಮಸ್ಯೆಯೂ ಕಾಡುತ್ತಲಿತ್ತು. ಆದರೂ, ಸಮಸ್ಯೆಗೆ ಎದೆಗುಂದದೆ ಆತ್ಮವಿಶ್ವಾಸದಿಂದ ಓದು ಮುಂದುವರಿಸಿದೆ. ಶಿಕ್ಷಕರು ಮತ್ತು ಹೆತ್ತವರು ಪ್ರೋತ್ಸಾಹಿಸಿದರು. …
Read More »ಬೆಳಗಾವಿ ಜಿಲ್ಲೆಯ 10 ಮಂದಿ ಟಾಪರ್ಸ್
ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿದ 145 ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪೈಕಿ ಜಿಲ್ಲೆಯ 10 ಮಂದಿ ಇದ್ದಾರೆ. ಈ ಪೈಕಿ 6 ವಿದ್ಯಾರ್ಥಿಗಳು ಬೆಳಗಾವಿ ಶೈಕ್ಷಣಿಕ ಜಿಲ್ಲೆಗೆ ಸೇರಿದವರಾಗಿದ್ದು, ನಾಲ್ವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯವರಾಗಿದ್ದಾರೆ. ಇವರಲ್ಲಿ ಕನ್ನಡ ಮಾಧ್ಯಮದವರು ಮೂವರು ಹಾಗೂ ಉಳಿದವರು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತವರಾಗಿದ್ದಾರೆ. ಎರಡೂ ಶೈಕ್ಷಣಿಕ ಜಿಲ್ಲೆಗಳು ‘ಎ’ ಗ್ರೇಡ್ ಪಡೆದಿವೆ. ಕನ್ನಡ ಮಾಧ್ಯಮದಲ್ಲಿ ಜಿಲ್ಲೆಯ ಯರಗಟ್ಟಿ ತಾಲ್ಲೂಕು ಸತ್ತಿಗೇರಿ …
Read More »ವಿಧಾನಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟ
ಬೆಳಗಾವಿ: ಕರ್ನಾಟಕ ವಾಯವ್ಯ ಪಧವೀಧರು ಮತ್ತು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನಪರಿಷತ್ತಿಗೆ ತಲಾ ಒಬ್ಬ ಸದಸ್ಯರನ್ನು ಚುನಾಯಿಸಲು ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿಯಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ. ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಕಚೇರಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಮೇ 26ರೊಳಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಸಲ್ಲಿಸಬಹುದು ಎಂದು ತಿಳಿಸಲಾಗಿದೆ. …
Read More »