Breaking News

ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮೈದಾನಕ್ಕೆ ಇಳಿದ ಡೆಲ್ಲಿ ಕ್ಯಾಪಿಟಲ್ಸ್

ಇಂಡಿಯನ್​ ಪ್ರೀಮಿಯರ್​ ಲೀಗ್​ ಟೂರ್ನಿಯ 64ನೇ ಪಂದ್ಯದಲ್ಲಿಂದು ಪಂಜಾಬ್​ ಕಿಂಗ್ಸ್​​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಕನ್ನಡಿಗ ಮಯಾಂಕ್ ಅಗರ್ವಾಲ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮುಂಬೈನ ಡಿ.ವೈ.ಪಾಟೀಲ್​ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಎರಡೂ ತಂಡಗಳು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿವೆ. ಈ ಟೂರ್ನಿಯಲ್ಲಾದ ಮೊದಲ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್​ ಪಡೆಯನ್ನ​ 9 ವಿಕೆಟ್​ಗಳಿಂದ ಮಣಿಸಿತ್ತು. ಇದೀಗ ಪಂಜಾಬ್​ ಕಿಂಗ್ಸ್​​ ಸೇಡು ತೀರಿಸಿಕೊಳ್ಳೋ ಲೆಕ್ಕಾಚಾರದಲ್ಲಿದೆ.

Read More »

ಹುಬ್ಬಳ್ಳಿಯ ಲತಾ ಮೋಹನ ಸಂಕೇಶ್ವರ ನಿಧನ

ಹುಬ್ಬಳ್ಳಿ: ಹುಬ್ಬಳ್ಳಿಯ ಮೋಹನ ಪ್ರಿಂಟಿಂಗ್ ಪ್ರೆಸ್ ಮಾಲೀಕರಾದ ಮೋಹನ ಸಂಕೇಶ್ವರ ಅವರ ಧರ್ಮಪತ್ನಿ ಶ್ರೀಮತಿ ಲತಾ ಮೋಹನ ಸಂಕೇಶ್ವರ(59) ಸೋಮವಾರ ನಿಧನರಾದರು. ಲತಾ ಮೋಹನ ಸಂಕೇಶ್ವರ ಅವರು ದೇಶಪಾಂಡೆ ನಗರದ ವಾಸವಿದ್ದರು. ಇವರಿಗೆ ಪತಿ, ಪುತ್ರ ಸಂತೋಷ ಸಂಕೇಶ್ವರ, ಪುತ್ರಿ ಸ್ನೇಹಾ ಗುರುರಾಜ ಕಡಿವಾಳ, ಸೊಸೆ ಶ್ವೇತಾ ಸಂತೋಷ ಸಂಕೇಶ್ವರ ಹಾಗೂ ಅಪಾರ ಬಂಧುಗಳು ಇದ್ದಾರೆ. ಮಂಟೂರ ರಸ್ತೆಯ ಕಲಬುರ್ಗಿ ಮಠದ ರುದ್ರಭೂಮಿಯಲ್ಲಿ ಇಂದು ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. …

Read More »

ಎಂಎಲ್‌ಸಿ ಚುನಾವಣೆ, ಪಟ್ಟಿಯಲ್ಲಿ ಲಕ್ಷ್ಮಣ ಸವದಿ ಹೆಸರು:

ಬೆಂಗಳೂರು, ಮೇ 16: ರಾಜ್ಯದ ಮುಂಬುರುವ ಎಂಎಲ್‌ಸಿ ಚುನಾವಣೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಮತ್ತು ಬಿಜೆಪಿ ಕರ್ನಾಟಕ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ತಮ್ಮ ಹೆಸರು ಸೇರಿದಂತೆ 20 ಹೆಸರುಗಳನ್ನು ಬಿಜೆಪಿ ಕೋರ್ ಕಮಿಟಿಯ ಸಭೆಯಲ್ಲಿ ಶಿಫಾರಸು ಮಾಡಲಾಗಿದೆ ಎಂದು ಬಿಜೆಪಿಯ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.   ಲಕ್ಷ್ಮಣ ಸವದಿ ಅವರ ಎಂಎಲ್‌ಸಿ ಅವಧಿಯು ಇದೇ ಜೂನ್‌ನಲ್ಲಿ ಕೊನೆಗೊಳ್ಳಲಿದ್ದು ಈ ಕುರಿತಂತೆ …

Read More »

ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದ ವಿಜಯೇಂದ್ರ ಹೆಸರು; ವರಿಷ್ಠರತ್ತ ಎಲ್ಲರ ಚಿತ್ತ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಯಲ್ಲಿ ಸೇರಿಸಿರುವುದು ಬಿಜೆಪಿ ಆಂತರಿಕ ವಲಯದಲ್ಲಿ ತಳಮಳ ಸೃಷ್ಟಿಸಿದೆ. ಕೋರ್ ಕಮಿಟಿಯ ಈ‌ ನಿರ್ಣಯಕ್ಕೆ ರಾಷ್ಟ್ರೀಯ ನಾಯಕರು ಒಪ್ಪಿಗೆಯ ಮುದ್ರೆ ಹಾಕುವರೇ ಎಂಬ ಜಿಜ್ಞಾಸೆ ಈಗ ಆರಂಭವಾಗಿದೆ.   ರಾಜ್ಯ ಬಿಜೆಪಿ ಕೋರ್ ಕಮಿಟಿ ಶಿಫಾರಸ್ಸು ಮಾಡಿದ ಹೆಸರುಗಳು ಹಾಗೂ ನಿರ್ಣಯಗಳನ್ನು ವರಿಷ್ಠರು ತಿರಸ್ಕರಿಸಿದ ಹಲವು ಉದಾಹರಣೆಗಳು ಇವೆ. ಈ ಹಿಂದೆ ಯಡಿಯೂರಪ್ಪ …

Read More »

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಪಿಎಸ್‌ಐ ಅಭ್ಯರ್ಥಿಗಳು; ಪತ್ರ ವೈರಲ್

ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಬಯಲಾಗುತ್ತಿದ್ದಂತೆ ಕರ್ನಾಟಕ ಸರ್ಕಾರ (Karnataka Government) ಮರು ಪರೀಕ್ಷೆ ನಡೆಸುವುದಾಗಿ ಮಹತ್ವದ ತೀರ್ಮಾನ ತೆಗದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಜೊತೆಗೆ ದೇಶದ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ನೊಂದ ಪಿಎಸ್‌ಐ ಅಭ್ಯರ್ಥಿಗಳು ರಕ್ತದಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎರಡು ಪುಟಗಳ ಪತ್ರ …

Read More »

ಲವರ್‌ ಜತೆಗೂಡಿ ತಮ್ಮನನ್ನೇ ಕೊಲೆ ಮಾಡಿ ಶವದ ಮುಂದೆ ಗೋಳೋ ಎಂದು ಅತ್ತ ಹುಬ್ಬಳ್ಳಿ ಹೆಣ್ಣು!

ಹುಬ್ಬಳ್ಳಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನ ಜತೆಗೆ ಸೇರಿ ತಮ್ಮನನ್ನೇ ಅಕ್ಕ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಕಳೆದ ಎರಡೂ ದಿನಗಳ ಹಿಂದೆ ನಡೆದ ಕೊಲೆ ಪ್ರಕರಣ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ಯುವಕ. ಅಕ್ಕ ಮತ್ತು ಪ್ರಿಯಕರ ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ …

Read More »

ಬಿಬಿಎಂಪಿಯ ಡೆಡ್ಲಿ ಕಸದ ಲಾರಿಗಳಿಗೆ ಶೀಘ್ರವೇ ಸ್ಪೀಡ್ ಗವರ್ನರ್ ಅಳವಡಿಕೆ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗಳಿಂದ ಅಪಘಾತ ಹಿನ್ನಲೆ ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೆಗೌಡ ಹೇಳಿದ್ದಾರೆ. ಲಾರಿಗಳು 40 ಕಿಮೀ.ಗಿಂತ ವೇಗವಾಗಿ ಚಲಿಸದಂತೆ ವ್ಯವಸ್ಥೆಗೊಳಿಸಬೇಕು. ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆಲ್ಕೋ ಮೀಟರ್ ಮೂಲಕ ಚಾಲಕರ ತಪಾಸಣೆಗೆ ಸೂಚಿಸಲಾಗಿದೆ. ಈಗಾಗಲೇ ಬಿಬಿಎಂಪಿ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದಿದ್ದಾರೆ.  ಈಗಾಗಲೇ ಸುಮಾರು ಚಾಲಕರಿಗೆ ಟ್ರಾಫಿಕ್ ಪೊಲೀಸರು ಹಂತ ಹಂತವಾಗಿ ತರಬೇತಿ ನೀಡುತ್ತಿದ್ದಾರೆ. …

Read More »

ಬಸವರಾಜ ಬೊಮ್ಮಾಯಿ ಎದುರಾಳಿ ಯಾರು?

ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಜಿಲ್ಲೆಯಲ್ಲಿ ಚುನಾವಣೆ ಕಾವು ನಿಧಾನವಾಗಿ ಏರುತ್ತಿದ್ದು, ರಾಜಕೀಯ ವಲಯದಲ್ಲಿ ಚುನಾವಣೆ ಪೂರ್ವ ಚಟುವಟಿಕೆಗಳು ಗರಿಗೆದರಿವೆ. ಮುಖ್ಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ತಾವು ಸ್ಪರ್ಧಾಕಾಂಕ್ಷಿ ಎಂಬುದನ್ನು ಬಿಂಬಿಸಲು ನಾನಾ ಕಸರತ್ತು ನಡೆಸುತ್ತಿದ್ದು, ಕುತೂಹಲ ಮೂಡಿಸಿದೆ.   ಜಿಲ್ಲೆಯ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ (ಬ್ಯಾಡಗಿ, ಶಿಗ್ಗಾವಿ-ಸವಣೂರು, ರಾಣಿಬೆನ್ನೂರು, ಹಿರೇ ಕೆರೂರು, ಹಾವೇರಿ-ಮೀಸಲು) ಶಾಸಕರಿದ್ದಾರೆ. ಹಾನಗಲ್ಲ ಕ್ಷೇತ್ರ ಮಾತ್ರ ಕಾಂಗ್ರೆಸ್‌ ತೆಕ್ಕೆಯಲ್ಲಿದೆ. ಈ ಬಾರಿಯ ಚುನಾ ವಣೆಯಲ್ಲಿ ಯಾವುದೇ …

Read More »

ಜೈಲಿನಿಂದ ಹೊರ ಬರುತ್ತಲೇ ಅದ್ದೂರಿ ಸಮಾರಂಭ ಏರ್ಪಡಿಸಲು ಸೂಚಿಸಿದ್ದ ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಕಿಂಗ್ ಪಿನ್…!

ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಆರೋಪಿಗಳ ಪೈಕಿ ಈಗಾಗಲೇ ಬಹುತೇಕರು ಕಂಬಿ ಹಿಂದಿದ್ದಾರೆ. ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಪ್ರಕರಣದ ಪ್ರಮುಖ ಆರೋಪಿಗಳಾದ ದಿವ್ಯ ಹಾಗರಗಿ ಹಾಗೂ ಮಂಜುನಾಥ್ ತಮ್ಮ ಮೊಬೈಲ್ ಗಳನ್ನು ನಾಶಪಡಿಸಿದ್ದ ಸಂಗತಿ ಈ ಹಿಂದೆ ಬಯಲಾಗಿತ್ತು.   ಇದೀಗ ಈ ಪ್ರಕರಣದ ‘ಕಿಂಗ್ ಪಿನ್’ ಆರ್.ಡಿ. ಪಾಟೀಲ್ ಅಲಿಯಾಸ್ ರುದ್ರಗೌಡನ ಕುರಿತ ಸ್ವಾರಸ್ಯಕರ ಸಂಗತಿಯೊಂದು ಬಹಿರಂಗವಾಗಿದೆ. ರುದ್ರಗೌಡ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಇರಾದೆ …

Read More »

ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್ ಗೋರಿ ಪಾಳ್ಯದ ಬಸ್ಸು, ಜಮೀರಣ್ಣ: ಡಿಕೆ ಟೀಂನ ಉಪಾಧ್ಯಕ್ಷ ನಲಪಾಡ್, ಇಬ್ಬರಿಗೂ ಸಾಬ್ರೇ ಬೇಕು!

ಮಂಡ್ಯ: ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಗುಂಪುಗಳಿವೆ. ಒಂದು ಗುಂಪು ಸಿದ್ದರಾಮಯ್ಯ ಪರ ಇದ್ದರೆ, ಮತ್ತೊಂದು ಗುಂಪು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪರ ಇದೆ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಟೀಕಿಸಿದ್ದಾರೆ. ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋರಿ ಪಾಳ್ಯದ ಬಸ್ಸು ಸಿದ್ದರಾಮಯ್ಯ ಟೀಂನ ವೈಸ್‌ ಕ್ಯಾಪ್ಟನ್‌ ಆಗಿ ಜಮೀರಣ್ಣ ಇದ್ದಾರೆ. ಡಿ.ಕೆ.ಶಿವಕುಮಾರ್‌ ಟೀಂನ ವೈಸ್‌ ಕ್ಯಾಪ್ಟನ್‌ ಆಗಿ ನಲಪಾಡ್‌ ಕೆಲಸ …

Read More »