Breaking News

ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಗೆ ಮಸೀದಿಗಳಲ್ಲಿ ‘ಆಜಾನ್’ ಕೂಗದಿರಲು ‘ಮುಸ್ಲೀಂ ಮುಖಂಡರ ಸಭೆ’ಯಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಯ ಬಗ್ಗೆ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವಂತ ಮುಸ್ಲೀಂ ಮುಖಂಡರು, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಯ ಆಜಾನ್ ಕೂಗೋದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.   ಈ ಕುರಿತಂತೆ ಮುಸ್ಲೀಂ ಮುಖಂಡರು ಸಭೆ ನಡೆಸಿದ ಬಳಿಕ, ಸುದ್ದಿಗಾರರಿಗೆ ಮಾಹಿತಿ ನೀಡಿದಂತ …

Read More »

ಮೇಲ್ಮನೆ ಚುನಾವಣೆ : ವಿಜಯೇಂದ್ರ ಕಣಕ್ಕೆ..?

ಬೆಂಗಳೂರು,ಮೇ14- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ಅಭಿಪ್ರಾಯ ಕೋರ್ ಕಮಿಟಿ ಸಭೆಯಲ್ಲಿ ವ್ಯಕ್ತವಾಗಿದೆ.   ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮೇಲ್ಮನೆಗೆ ವಿಜಯೇಂದ್ರ ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು ಗಂಭೀರ ಚಿಂತನೆ ನಡೆಸಿದ್ದಾರೆ. ಅಂತಿಮವಾಗಿ ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಬೇಕು. ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕೆಂಬ ಒಂದು ಸಾಲಿನ …

Read More »

ವಲಸೆ ತಡೆಗೆ ‘ಕೈ’ಕಮಾಂಡ್‌ ಸೂಚನೆ; ಆತಂಕ ತಂದ ಕಮಲ ಪಕ್ಷದ ತಂತ್ರ

ಬೆಂಗಳೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ನಿಂದ ವಲಸೆ ಪರ್ವ ಆಗದಂತೆ ನೋಡಿಕೊಳ್ಳಲು ಹೈಕಮಾಂಡ್‌ ರಾಜ್ಯ ನಾಯಕರಿಗೆ ಸಂದೇಶ ರವಾನಿಸಿದೆ. ಬಿಜೆಪಿ ಹಳೇ ಮೈಸೂರು ಭಾಗದ ಕಾಂಗ್ರೆಸ್‌ ನಾಯಕರನ್ನು ಗುರಿಯಾಗಿರಿಸಿಕೊಂಡಿದ್ದು, ಮಾಜಿ ಸಂಸದ ಮುದ್ದಹನುಮೇಗೌಡ ಸೇರಿ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಹಾಗೂ ಮೈಸೂರು ಭಾಗದವರನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಪಡೆದಿರುವ ಹೈಕಮಾಂಡ್‌, ಸ್ವಸಾಮರ್ಥ್ಯ ಹಾಗೂ ಪ್ರಭಾವ ಇರುವವರು ಪಕ್ಷ ತ್ಯಜಿಸದಂತೆ ನೋಡಿಕೊಳ್ಳಲು ಸೂಚಿಸಿದೆ.   ಚುನಾವಣೆಗೆ ಇನ್ನೊಂದು ವರ್ಷ ಇರುವಾಗ …

Read More »

ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ

ಬೆಳಗಾವಿ: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ.   2023ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ಅಥಣಿ, ನಿಪಾಣಿ, ಕಾಗವಾಡ, ಖಾನಾಪುರ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಉತ್ತರ — ಅಂತರರಾಜ್ಯ ಗಡಿ ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ …

Read More »

ಬಿ.ವೈ.ವಿಜಯೇಂದ್ರ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಜಯೇಂದ್ರಗೆ ಸಚಿವ ಸ್ಥಾನ ನೀಡುವಂತೆ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪ ಒತ್ತಾಯಿಸಿದ್ದರು. ಲಿಂಗಾಯತ ಮತಬ್ಯಾಂಕ್ ಉಳಿಸಿಕೊಳ್ಳಬೇಕಾದರೆ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿ ಒತ್ತಡ ಹಾಕಿದ್ದರು. ಇದೀಗ ಬಿ.ವೈ.ವಿಜಯೇಂದ್ರಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ‌ವರಿಷ್ಠರು ಭರವಸೆ ನೀಡಿದ್ದಾರೆ. ಆದರೆ, ಇಂತದ್ದೇ ಖಾತೆಬೇಕೆಂದು‌ ಹಠ ಹಿಡಿಯುವಂತಿಲ್ಲ ಎಂದಯ ಕಂಡೀಷನ್ ಹಾಕಿದ್ದಾರೆ. …

Read More »

ಮಾತುಕತೆ ಯಶಸ್ವಿ, ಜಿ.ಟಿ ದೇವೇಗೌಡರು ಬಿಜೆಪಿಗೆ??

ಮೈಸೂರು ಭಾಗದಲ್ಲಿ ಪ್ರಬಲ ನಾಯಕರಾಗಿರುವ ಜಿ.ಟಿ ದೇವೇಗೌಡರನ್ನು(GT Devegowda) ಬಿಜೆಪಿಗೆ(BJP) ಸೆಳೆಯಲು ಕಮಲ ಪಾಳಯದಲ್ಲಿ ಭರ್ಜರಿ ಕಸರತ್ತು ನಡೆದಿದೆ. ಈಗಾಗಲೇ ಜೆಡಿಎಸ್‍ನಿಂದ ಒಂದು ಕಾಲು ಹೊರಗಿಟ್ಟಿರುವ ಜಿ.ಟಿ ದೇವೇಗೌಡರನ್ನು ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ನಿರಂತರ ಮಾತುಕತೆ ನಡೆಸುತ್ತಿವೆ. ಇದೀಗ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್(ST Somashekar) ಮತ್ತು ಜಿ.ಟಿ ದೇವೇಗೌಡರು(GT Devegowda) ಮೈಸೂರಿನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸೇರಲು ಜಿ.ಟಿ …

Read More »

ಮೆಜೆಸ್ಟಿಕ್‌ನಲ್ಲಿ ಹೇಳಿದ ಬೆಲೆಗೆ ಖರೀದಿಸದಿದ್ದರೆ ವ್ಯಾಪಾರಿಗಳಿಂದ ಹಲ್ಲೆ! ಕಣ್ಮುಚ್ಚಿ ಕುಳಿತಿದ್ದಾರೆ ಪೊಲೀಸರು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಾರಿಗಳು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ದೈಹಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚಾಗಿದ್ದು, …

Read More »

889 ನೇ ಬಸವ ಜಯಂತಿಯ ನಿಮಿತ್ಯ ಆಂಜನೇಯ ನಗರದಲ್ಲಿ 10 ನೆ ದಿನದ ಲಿಂಗಾಯತ ಧರ್ಮ ಜಾಗೃತಿ ಪಾದಯಾತ್ರೆ

889 ನೇ ಬಸವ ಜಯಂತಿಯ ನಿಮಿತ್ಯ ಆಂಜನೇಯ ನಗರದಲ್ಲಿ 10 ನೆ ದಿನದ ಲಿಂಗಾಯತ ಧರ್ಮ ಜಾಗೃತಿ ಪಾದಯಾತ್ರೆಯ ನಾಗನೂರು ರುದ್ರಾಕ್ಷಿಮಠದ ಪರಮ ಪೂಜ್ಯ ಅಲ್ಲಮ ಪ್ರಭು ಸ್ವಾಮೀಜಿಗಳ ನೇತೃತ್ವದಲ್ಲಿ ಆಂಜನೇಯ ನಗರದ ಎಲ್ಲ ಬಡಾವಣೆಗಳಲ್ಲಿ ಜರುಗಿತು. ಪಾದಯಾತ್ರೆಯಲ್ಲಿ ಶಿವಾನಂದ ಮಹಾಸ್ವಾಮಿಗಳು ಹಂಡಿಗುಂದ , ಡಾ. ಬಸವಾನಂದ ಸ್ವಾಮೀಜಿ, ಪೂಜ್ಯ ಓಂ ಗುರೂಜಿ, ಕಾರಂಜಿಮಠದ ಪೂಜ್ಯ ಶಿವಾಯೋಗಿ ದೇವರು ಮತ್ತು ಇತರ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ 10 ನೆ ದಿನದ ಪಾದಯಾತ್ರೆಯ …

Read More »

ಬೆಳಗಾವಿಯಲ್ಲಿ ದ್ಯಾಮಮ್ಮ, ದುರಗಮ್ಮ ದೇವಿ ಜಾತ್ರೆ , ಭಂಡಾರದೋಕುಳಿಯಲ್ಲಿ ಸಂಭ್ರಮಿಸಿದ ಭಕ್ತರು

ಬೆಳಗಾವಿ ಜಿಲ್ಲೆ ಕಿತ್ತೂರು ಕೋಟೆಯ ಗ್ರಾಮ ದೇವತೆಗಳಾದ ದ್ಯಾಮಮ್ಮ, ದುರಗಮ್ಮ ದೇವಿ ಜಾತ್ರೆಯನ್ನ ದಶಮಾನಗಳ ಬಳಿಕ ಈಗ ಆಚರಿಸಲಾಗ್ತಿದೆ. ಮೇ 4 ರಿಂದ ಜಾತ್ರೆ ಶುರುವಾಗಿದ್ದು, 7 ಹಳ್ಳಿಗಳ ಗ್ರಾಮಸ್ಥರು ಪಲ್ಲಕ್ಕಿಯನ್ನ ಕಿತ್ತೂರಿಗೆ ತಂದ್ರು. ಉತ್ಸವದ ವಿಶೇಷತೆ ಅಂದ್ರೆ ಭಂಡಾರ ಎರಚುತ್ತಾ ಭಕ್ತರು ಹೊನ್ನಾಟದಲ್ಲಿ ತೊಡಗಿ ಭಕ್ತಿ ಅರ್ಪಿಸಿದ್ರು. ಬೆಳಗಾವಿಯ ಜಾತ್ರೆ ಇಷ್ಟಾದ್ರೆ ಕೋಟೆನಾಡಲ್ಲೂ ಕುಲದೇವಿಯ ಉತ್ಸವ ಅದ್ಧೂರಿಯಾಗಿ ನಡೆದಿತ್ತು. ಭಂಡಾರದೋಕುಳಿಯಲ್ಲಿ ಸಂಭ್ರಮಿಸಿದ ಭಕ್ತರು ಚಿತ್ರದುರ್ಗದಲ್ಲಿ ಕೋಟೆ ಆಳಿದ ಪಾಳೇಗಾರರ …

Read More »

ಇಲ್ಲಿವರಗೂ ಬಂಧಿಸಿದ್ದ 32 ಜನರ ವಿಚಾರಣೆ ನಿನ್ನೆಗೆ ಮುಕ್ತಾಯ: ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ ಜೈಲು ಭಾಗ್ಯ ಫಿಕ್ಸ್​!

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇಲ್ಲಿವರಗೆ 32 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿತ್ತು. 32 ಜನರ ವಿಚಾರಣೆ ನಿನ್ನೆಗೆ ಮುಕ್ತಾಯವಾಗಿದೆ. ಆರೋಪಿಗಳ ಪೈಕಿ ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ 32 ಜನರಿಗೂ ಇದೀಗ ಜೈಲು ಭಾಗ್ಯ ಫಿಕ್ಸ್​! ಆಗಿದೆ. ಎಲ್ಲರನ್ನು ಕಲಬುರಗಿ ಕೇಂದ್ರ ಕಾರಾಗೃಹಗೆ ಸಿಐಡಿ ಸಿಬ್ಬಂದಿ ಬಿಟ್ಟಿದ್ದು, ನಗರದ ಐವಾನ್ ಈ ಶಾಹಿ ಅತಿಥಿ ಗೃಹದಲ್ಲಿರೋ ಸಿಐಡಿ ಕಚೇರಿ, ಕಳೆದ ಒಂದು ತಿಂಗಳಿಂದ ಆರೋಪಿಗಳಿಂದ …

Read More »