Breaking News

ಸಕ್ಕರೆ ಕಾರ್ಖಾನೆಗಳಿಂದ ಬಿಲ್​​ ಪಾವತಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಬಾಗಲಕೋಟೆ: ಸಕ್ಕರೆ ಕಾರ್ಖಾನೆಗಳಿಂದ ಬಿಲ್​​​ ಪಾವತಿಸುವಂತೆ ಒತ್ತಾಯಿಸಿ ರೈತರು ಇಲ್ಲಿನ ಜಿಲ್ಲಾಡಳಿತ ಭವನದೆದುರು ಗುರುವಾರ ಪ್ರತಿಭಟನೆ ನಡೆಸಿದರು. ಕಳೆದ ಒಂದು ವರ್ಷದಿಂದ ಸಕ್ಕರೆ ಕಾರ್ಖಾನೆಯವರು ಕಬ್ಬು ನುರಿಸಿದ ರೈತರ ಬಿಲ್ ಹಾಗೂ ಬಾಕಿ ಹಣ ಪಾವತಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ರೈತ ಮುಖಂಡರಾದ ಮುತ್ತಪ್ಪ ಕೋಮಾರ್, ಈರಣ್ಣ ಹಂಚಿನಾಳ ಹಾಗೂ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿದರು. ಜಿಲ್ಲಾಡಳಿತ ಭವನದೊಳಗೆ ಹೋಗಲು ಪೊಲೀಸರು ತಡೆಯೊಡ್ಡಿದ್ದರಿಂದ ರೈತರು …

Read More »

ಕಂದಾಯ ಇಲಾಖೆ ಕಚೇರಿಯಲ್ಲಿ ಲಂಚದ ರೇಟ್ ಕಾರ್ಡ್ ಹಾಕಿ: ಸಚಿವ ಕೃಷ್ಣ ಬೈರೇಗೌಡ ಕಿಡಿ

ಬೆಂಗಳೂರು (ಜೂ.20): ಪ್ರತಿಯೊಂದು ಕೆಲಸಕ್ಕೂ ಲಂಚ, ಅಲೆದಾಟ, ವಿಳಂಬ ನೀತಿಯ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹೆಚ್ಟುವರಿ ಆಯುಕ್ತರ ಕಚೇರಿಗಳು ಮತ್ತು ತಹಸೀಲ್ದಾರ್ ಕಚೇರಿಗಳಿರುವ ಕಂದಾಯ ಭವನಕ್ಕೆ ಗುರುವಾರ ದಿಢೀರ್ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಇಂಥ ಕೆಲಸಕ್ಕೆ ಇಂತಿಷ್ಟು ಲಂಚ ಆಗುತ್ತದೆ ಎನ್ನುವ ‘ಲಂಚದ ದರ ಫಲಕವನ್ನೇ ಅಳವಡಿಸಿಬಿಡಿ’ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡು ಬೆವರಿಳಿಸಿದರು. ದಿಢೀರ್ ಭೇಟಿಗೆ …

Read More »

ಮೃಗಾಲಯದ ಹೆಣ್ಣು ಹುಲಿ ದೇವಿ ಸಾವು

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿರುವ ಶ್ರೀ ಅಟಲ್​​​ ಬಿಹಾರಿ ವಾಜಪೇಯಿ ಜೂಲಾಜಿಕಲ್​​ ಪಾರ್ಕ್‌ನಲ್ಲಿ​ ‘ದೇವಿ’ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದಾಗಿ ಮೃತಪಟ್ಟಿದೆ ಎಂದು ಉಪ ಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ. ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಹುಲಿಯನ್ನು ಹೆಚ್ಚಿನ ಚಿಕಿತ್ಸೆಗೆ ವಾಜಪೇಯಿ ಜೂಲಾಜಿಕಲ್ ಪಾರ್ಕ್‌ಗೆ ಸ್ಥಳಾಂತರಿಸಲಾಗಿತ್ತು. ಇಲ್ಲಿನ ರಕ್ಷಣಾ ಕೇಂದ್ರದಲ್ಲಿ ಕಳೆದ ಎರಡು ವರ್ಷಗಳಿಂದ ವೈದ್ಯೋಪಚಾರ ನೀಡಿದ್ದು, ಆರೋಗ್ಯದಲ್ಲಿ ಸುಧಾರಣೆ …

Read More »

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

ಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬುಧವಾರ ಬೆಳಗ್ಗೆ ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕನ್ನಮಂಗಲ ಗೇಟ್​ನಿಂದ ವೈಟ್ ಫೀಲ್ಡ್ ಕಡೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಜೈನ್ ಹೆರಿಟೇಜ್ ಶಾಲೆಯ ಬಸ್ ಇದಾಗಿದೆ. ಮಕ್ಕಳನ್ನ ಶಾಲೆಗೆ ಬಿಟ್ಟು ಇಂಧನ ತುಂಬಿಸಿಕೊಳ್ಳಲು ಬಸ್ ಚಾಲಕ ಪೆಟ್ರೋಲ್ ಬಂಕ್​ಗೆ ಹೋಗುವಾಗ ಬ್ರೇಕ್ …

Read More »

ಇಸ್ರೇಲ್ ನಿಂದ ತವರಿಗೆ ಬಂದ ಕನ್ನಡಿಗರು

ಬೆಂಗಳೂರು : ಪೌರಾಡಳಿತ ಅಧ್ಯಯನಕ್ಕೆಂದು ಇಸ್ರೇಲ್ ಪ್ರವಾಸಕ್ಕೆ ರಾಜ್ಯದಿಂದ ತೆರಳಿದ್ದ 18 ಜನರ ತಂಡ ರಾಜ್ಯಕ್ಕೆ ಗುರುವಾರ ಹಿಂದಿರುಗಿದೆ. ಇಸ್ರೇಲ್ ದೇಶದಲ್ಲಿ ಪೌರಾಡಳಿತ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಅಧ್ಯಯನ ಮಾಡುವುದಕ್ಕಾಗಿ ರಾಜ್ಯದಿಂದ ಬಿ ಪ್ಯಾಕ್ ತಂಡದಲ್ಲಿ 18 ಜನರು ತೆರಳಿದ್ದರು. ಇರಾನ್​ -ಇಸ್ರೇಲ್​ ದೇಶಗಳ ನಡುವೆ ಕಳೆದ ಕೆಲ ದಿನಗಳಿಂದ ಭೀಕರ ಯುದ್ಧ ನಡೆಯುತ್ತಿದೆ. ಈ ಮಧ್ಯೆ ಇಸ್ರೇಲ್​ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಇಸ್ರೇಲ್ ನಿಂದ ಕುವೈತ್​, ಕುವೈತ್​ನಿಂದ ಮುಂಬೈ …

Read More »

ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ ಕಾಲೇಜಿನ ಮೈದಾನದಲ್ಲಿ

ಗೋಕಾಕ- ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ ಕಾಲೇಜಿನ ಮೈದಾನದಲ್ಲಿ ಜರುಗಲಿದ್ದು, ಪಟ್ಟಣದ ನಾಗರೀಕರು ಇದರಲ್ಲಿ ಭಾಗಿಯಾಗುವ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸುವಂತೆ ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳು ಮತ್ತು ಸಾರ್ವಜನಿಕಕರಲ್ಲಿ ಮನವಿ ಮಾಡಿಕೊಂಡರು. ಗುರುವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಮೂಡಲಗಿ ಪಟ್ಟಣದ ಮುಖಂಡರು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ …

Read More »

ಕಳ್ಳನನ್ನು ಬಂಧಿಸಿ 9 ಬೈಕುಗಳನ್ನು ವಶಪಡಿಸಿಕೊಂಡ ಎಪಿಎಂಸಿ ಪೊಲೀಸ್

ಕಳ್ಳನನ್ನು ಬಂಧಿಸಿ 9 ಬೈಕುಗಳನ್ನು ವಶಪಡಿಸಿಕೊಂಡ ಎಪಿಎಂಸಿ ಪೊಲೀಸ್ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯ ಹಿಂಬದಿಯ ಕ್ಯಾನ್ಸರ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ನಿಲ್ಲಿಸಿದ್ದ ಬೈಕ್’ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸಿ ಒಟ್ಟು 9 ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯ ಹಿಂಬದಿಯ ಕ್ಯಾನ್ಸರ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ನಿಲ್ಲಿಸಿದ್ದ ಬೈಕ್’ಗಳನ್ನು ಕಳ್ಳತನ ಮಾಡುತ್ತಿದ್ದ ಗೋಕಾಕ್ ಮೂಲದ ಹಾಲಿ ಬೆಳಗಾವಿ ವೈಭವನಗರದ ನಿವಾಸಿ ಸಂತೋಷ ಅಂದಾನಿಯನ್ನು ಬಂಧಿಸುವಲ್ಲಿ ಬೆಳಗಾವಿ ಎಪಿಎಂಸಿ ಪೊಲೀಸರು …

Read More »

ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ…

ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ… ಸಂಚರಿಸಲು ಪರದಾಡುತ್ತಿರುವ ವಾಹನ ಸವಾರರು…ಸಮಸ್ಯೆ ಬಗೆಹರಿಸಿದ್ದರೇ ಪ್ರತಿಭಟನೆಯ ಎಚ್ಚರಿಕೆ !!! ಬೆಳಗಾವಿಯ ಕಸಾಯಿ ಗಲ್ಲಿ ಫಿಶ್ ಮತ್ತು ಮಟನ್ ಮಾರ್ಕೇಟ್’ನಲ್ಲಿ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರು ಪರಿತಪಿಸುವಂತಾಗಿದೆ. ಸಂಬಂಧಿಸಿದವರು ಕೂಡಲೇ ರಸ್ತೆ ದುರಸ್ಥಿ ಮಾಡದಿದ್ದರೇ, ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಬೆಳಗಾವಿಯ ಬೆಳಗಾವಿಯ ಕಸಾಯಿ ಗಲ್ಲಿ ಫಿಶ್ ಮತ್ತು ಮಟನ್ ಮಾರ್ಕೇಟ್’ನ ರಸ್ತೆ ಅಧೋಗತಿಗೆ ಬಂದಿದೆ. ರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ …

Read More »

ಗುತ್ತಿಗೆ ಬೆನ್ನಲ್ಲೇ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ

ಬೆಂಗಳೂರು, (ಜೂನ್ 19): ಸರ್ಕಾರಿ ಯೋಜನೆಗಳ (Government scheme) ಗುತ್ತಿಗೆಯಲ್ಲಿ ಮೀಸಲಾತಿ (Reservation) ನೀಡಿದ ಬಳಿಕ ಈಗ ವಸತಿ ಯೋಜನೆಯಲ್ಲೂ  ಅಲ್ಪಸಂಖ್ಯಾತರ ಮೀಸಲಾತಿ (minorities reservation) ಹೆಚ್ಚಳಕ್ಕೆ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ. ಇಂದು (ಜೂನ್ 19) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ ಹೆಚ್ಚಳಕ್ಕೆ ಮಹತ್ವದ ತೀರ್ಮಾನ ಮಾಡಿದೆ. ವಸತಿಯೋಜನೆಯಡಿ ಮುಸ್ಲಿಂ ಸೇರಿದಂತೆ ಇತರೆ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಅಸ್ತು ಎಂದಿದೆ.ಅಲ್ಪಸಂಖ್ಯಾತ ಸಮುದಾಯಗಳಿಗೆ …

Read More »

ಬಮೂಲ್​ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್​ ಆಯ್ಕೆ

ಬೆಂಗಳೂರು, ಜೂನ್​ 19: ಬೆಂಗಳೂರು ಹಾಲು ಒಕ್ಕೂಟದ (BAMUL) ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ (DK Suresh) ಆಯ್ಕೆ ಆಗಿದ್ದಾರೆ. ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರಿಂದ ಆಯ್ಕೆ ಮಾಡಲಾಗಿದ್ದು, ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋತ ಬಳಿಕ ಡಿಕೆ ಸುರೇಶ್ ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದರು. ಬಳಿಕ ವಿಶಾಂತ್ರಿ ಪಡೆದಿದ್ದರು, ಇದೀಗ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬಮೂಲ್​ ನೂತನ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಿಷ್ಟು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದು, ರೈತರು, …

Read More »