ಶಾಮನೂರು ಶಿವಶಂಕರಪ್ಪನವರ ಮೊಮ್ಮಗಳಾದ ಅಕ್ಷತ ಹಾಗು ಸಿಎಂ ಬಸವರಾಜ ಬೊಮ್ಮಾಯಿಯರ ಆಪ್ತನ ಮಗನಾದ ಅಭಿಷೇಕ್ ಪಾಟೀಲ್ ಕಲ್ಯಾಣ ಅದ್ಧೂರಿಯಾಗಿ ಜರುಗಿತು. ದಾವಣಗೆರೆಯ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬೊಮ್ಮಾಯಿ ಬೆಳಿಗ್ಗೆಯೇ ಆಗಮಿಸಿದ್ದರು.
Read More »ಪೋಲೀಸ್ ಅಧಿಕಾರಿ ಉದಯ ರವಿ ಮನೆಗಳ ಮೇಲೆ ಎಸಿಬಿ ದಾಳಿ
ಗಂಗಾವತಿ : ಗಂಗಾವತಿ ಗ್ರಾಮೀಣ ವೃತ್ತದ ಪೊಲೀಸ್ ಅಧಿಕಾರಿಯಾಗಿದ್ದ ಪ್ರಸ್ತುತ ಪೊಲೀಸ್ ಗುಪ್ತಚರ ಇಲಾಖೆ ಅಧಿಕಾರಿ ಉದಯರವಿ ಅವರ ಗಂಗಾವತಿ ಮನೆ ಸೇರಿದಂತೆ ವಿವಿಧೆಡೆ ಇರುವ 4 ಮನೆಗಳ ಮೇಲೆ ಎಸಿಬಿ ಡಿವೈಎಸ್ಪಿ ಶಿವಕುಮಾರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಆಂಜನೇಯ ನೇತೃತ್ವದ ಅಧಿಕಾರಿಗಳು ದಾಳಿ ಮಾಡಿ ಶೋಧ ನಡೆಸಿದ್ದಾರೆ . ಉದಯರವಿ ಅವರು ಗಂಗಾವತಿ ನಗರ ಠಾಣೆ ಗ್ರಾಮೀಣ ಠಾಣೆಗಳಲ್ಲಿ ಪಿ ಐ ಆಗಿ ಕಾರ್ಯ ನಿರ್ವಹಿಸಿದ್ದರು.ಇತ್ತೀಚೆಗಷ್ಟೇ ಬೆಂಗಳೂರಿಗೆ …
Read More »ಪಂಚಾಯತ್‌ಗಳಲ್ಲಿ ಪತ್ನಿ ಬದಲು ಪತಿ ಅಧಿಕಾರಕ್ಕೆ ಬ್ರೇಕ್ !
ಬೆಂಗಳೂರು: ಗ್ರಾಮ ಪಂಚಾಯತ್‌ಗೆ ಚುನಾಯಿತರಾಗಿರುವ ಮಹಿಳೆಯು ತನ್ನ ಅಧಿಕಾರದಲ್ಲಿ ಗಂಡ ಅಥವಾ ಮನೆಯ ಬೇರೆ ಯಾರಾದರೂ ಹಸ್ತಕ್ಷೇಪ ನಡೆಸಲು ಅವಕಾಶ ನೀಡಿದರೆ ಆಕೆಯ ಸದಸ್ಯತ್ವವೇ ರದ್ದಾಗಲಿದೆ. ಇಂಥದ್ದೊಂದು ಕಟ್ಟುನಿಟ್ಟಿನ ಆದೇಶವನ್ನು ರಾಜ್ಯ ಸರಕಾರ ಹೊರಡಿಸಿದೆ. ಸಿಎಂಗೆ ಮನವಿ : ಗ್ರಾಮ ಪಂಚಾಯತ್‌ಗಳಲ್ಲಿ ಮಹಿಳಾ ಸದಸ್ಯರುಗಳ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿ, ಬಧಿಸಿದಂತೆ, ಗ್ರಾಮ ಪಂಚಾಯತಿಗಳಲ್ಲಿ ಚುನಾಯಿತರಾಗಿರುವ ಮಹಿಳಾ ಸದಸ್ಯರುಗಳ ಪರವಾಗಿ ಮಹಿಳಾ ಸದಸ್ಯರ ಪತಿ ಮತ್ತು ಮತ್ತು ಕುಟುಂಬದವರು ಪಂಚಾಯತಿಗಳ ಕಾರ್ಯಕಲಾಪಗಳಲ್ಲಿ …
Read More »ಗೊಬ್ಬರ ಕೇಳಿದ್ದಕ್ಕೆ ಕೇಂದ್ರ ಸಚಿವ ಖೂಬಾ ತರಾಟೆ
ಔರಾದ್/ ಬೀದರ್: ಗೊಬ್ಬರ ಕಳುಹಿಸುವಂತೆ ದೂರವಾಣಿ ಕರೆ ಮಾಡಿದ ಔರಾದ್ ತಾಲ್ಲೂಕಿನ ಹೆಡಗಾಪುರ ಗ್ರಾಮದ ವ್ಯಕ್ತಿಯೊಬ್ಬರನ್ನು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ತರಾಟೆಗೆ ತೆಗೆದುಕೊಂಡಿರುವ ಮೊಬೈಲ್ ಸಂಭಾಷಣೆಯ ರೆಕಾರ್ಡಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಸಚಿವ ಖೂಬಾ ಅವರಿಗೆ, ಕುಶಾಲ ಪಾಟೀಲ ಎಂಬುವರು ಕರೆ ಮಾಡಿ, ‘ನಮ್ಮ ಊರಲ್ಲಿ ಗೊಬ್ಬರ ಸಿಗುತ್ತಿಲ್ಲ. ಜನ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಹೀಗಾದರೆ ನಿಮಗೆ ಮುಂದೆ ಚುನಾವಣೆಯಲ್ಲಿ ತೊಂದರೆಯಾಗುತ್ತದೆ’ ಎಂದು ಹೇಳಿದ್ದಾರೆ. …
Read More »ಜ್ಞಾನಭಾಸ್ಕರ ಸ್ವಾಮೀಜಿ ಶಂಕಾಸ್ಪದ ಸಾವು
ಹಿರಿಯೂರು: ನಗರದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನದ ಗುರುಗಳಾದ ಜ್ಞಾನಭಾಸ್ಕರ ಸ್ವಾಮೀಜಿ (75) ಗುರುವಾರ ಬೆಳಿಗ್ಗೆ ಚಿಟುಗು ಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿನ ನಿವಾಸದಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬೆಳಿಗ್ಗೆ ಸ್ನಾನಗೃಹದಲ್ಲಿ ಅವರ ಮೃತದೇಹ ಕಂಡುಬಂದಿದೆ. ಸ್ನಾನಕ್ಕೆ ನೀರು ಕಾಯಿಸಿಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರಬಹುದೇ ಅಥವಾ ಸಾವಿಗೆ ಬೇರೆ ಕಾರಣ ಇರಬಹುದೇಎಂಬ ಶಂಕೆ ಭಕ್ತರಲ್ಲಿದೆ. ನಗರಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶ್ವಕರ್ಮ ಸಮಾಜದ ಒಕ್ಕೂಟದಲ್ಲಿನ 63 ಗುರುಗಳ ಪೈಕಿ ಈ ಇವರು ಒಬ್ಬರು. …
Read More »ರಾಜಕುಮಾರ’ನ ನಿವಾಸ ತೊರೆದ ಗನ್‌ಮ್ಯಾನ್ ಚಲಪತಿ ಯಾರಿಗೂ ಗನ್‌ಮ್ಯಾನ್ ಗಲ್ಲ
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಎಲ್ಲಿಗೆ ಹೋದರೂ ಅಲ್ಲಿ ಅವರ ಗನ್‌ಮ್ಯಾನ್ ಚಲಪತಿ ಇದ್ದೇ ಇರುತ್ತಿದ್ದರು. ಕನ್ನಡ ಚಿತ್ರರಂಗಕ್ಕೆ, ಅಪ್ಪು ಅಭಿಮಾನಿಗಳಿಗೆ ಚಲಪತಿ ಹೆಸರು ಹೊಸದೇನು ಅಲ್ಲ. ಸದಾ ಪವರ್‌ಸ್ಟಾರ್ ಹಿಂದೆ ನಿಂತಿರುತ್ತಿರುದ್ದ ಆಜಾನುಬಾಹು ವ್ಯಕ್ತಿ. ಅಪ್ಪು ವ್ಯಕ್ತಿತ್ವದಂತೆಯೇ ಗನ್‌ಮ್ಯಾನ್ ಚಲಪತಿ ವ್ಯಕ್ತಿತ್ವವೂ ಮಾರ್ಪಾಡಾಗಿತ್ತು. ಪುನೀತ್ ರಾಜ್‌ಕುಮಾರ್ ಅಗಲಿದ ದಿನದಿಂದ ಚಲಪತಿ ಕೂಡ ನೋವಿನಲ್ಲಿಯೇ ಕಾಲಕಳೆಯುತ್ತಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ನೆನಪನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಚಲಪತಿ ದಿಢೀರನೇ …
Read More »ಬೆಳಗಾವಿ ಸೇರಿ ರಾಜ್ಯಾದ್ಯಂತ 80 ಕಡೆಗಳಲ್ಲಿ ಬೇಳಂ ಬೆಳಗ್ಗೆ ಎಸಿಬಿ ದಾಳಿ
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದ್ದು, ಬಿಸಿ ಮುಟ್ಟಿಸಿದೆ. ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಗ್ಗೆ ಆರು ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, …
Read More »ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ, ಯಡಿಯೂರಪ್ಪ ಸಹ ಜೈಲಿಗೆ ಹೋಗ್ತಾರೆ: ಯತ್ನಾಳ್
ಹಾವೇರಿ: ಕಾಂಗ್ರೆಸ್‍ನವರು ಮಾತ್ರವಲ್ಲ ಬಿಜೆಪಿಯ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಜೈಲಿಗೆ ಹೋಗುವ ಸಮಯ ಬರುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ ಮತ್ತು ಯಡಿಯೂರಪ್ಪ ಸಹ ಜೈಲಿಗೆ ಹೋಗುತ್ತಾರೆ. …
Read More »ಪ್ರಕಾಶ ಹುಕ್ಕೇರಿಗೆ ಭರ್ಜರಿ ಗೆಲುವು: ಅದ್ದೂರಿಯಾಗಿ ವಿಜಯೋತ್ಸವ ಆಚರಿಸಿದ ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರು..
ಪ್ರಕಾಶ ಹುಕ್ಕೇರಿಗೆ ಭರ್ಜರಿ ಗೆಲುವು: ಅದ್ದೂರಿಯಾಗಿ ವಿಜಯೋತ್ಸವ ಆಚರಿಸಿದ ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರು.. ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ಜೂನ 13 ರಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಭರ್ಜರಿ ಗೆಲುವು ಸಾಧಿಸಿದ್ದು. ಇದರಿಂದ ಚಿಕ್ಕೋಡಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ವಿಜಯೋತ್ಸವ ಆಚರಿಸಿದರು. ಪುರಸಭೆ ಸದಸ್ಯ ಸಾಭೀರ ಜಮಾದಾರ ನೇತೃತ್ವದಲ್ಲಿ ನಡೆದ ವಿಜಯೋತ್ಸವದಲ್ಲಿ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ …
Read More »ಎತ್ತಿನ ಮೇಲೆ ದಿವಂಗತ ಅಪ್ಪು ಚಿತ್ರ ಬಿಡಿಸಿ ವಿಶೇಷ ರೀತಿಯಲ್ಲಿ ಕಾರ ಹುಣ್ಣಿಮೆ ಆಚರಣೆ
ಕಾರ ಹುಣ್ಣಿಮೆ ಎನ್ನುವುದು ಉತ್ತರ ಕರ್ನಾಟಕದ ರೈತರಿಗೆ ವಿಷೇಶ ಹಬ್ಬವಾಗಿದೆ. ಈ ಹಬ್ಬದಂದು ರೈತರು ತಾವು ಸಾಕಿರುವ ಎತ್ತುಗಳನ್ನು ವಿಶೇಷ ರೀತಿಯಲ್ಲಿ ಬಣ್ಣಗಳಿಂದ ಅಲಂಕಾರ ಮಾಡಿ ಮೆರವಣಿಗೆ ಮಾಡುವುದು ವಿಶೇಷವಾಗಿದೆ. ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿಯಲ್ಲಿ ಕಾರು ಹುಣ್ಣಿಮೆ ನಿಮಿತ್ಯ ಗ್ರಾಮದ ಯುವಕ ಪ್ರದೀಪ್ ಖೋತ ಇವರ ಎತ್ತುಗಳ ಮೇಲೆ ದಿವಂಗತ ಪುನೀತ್ ರಾಜಕುಮಾರ್ ಇವರ ಭಾವಚಿತ್ರ ಬಿಡಿಸುವ ಮೂಲಕ ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಪುನೀತ್ ರಾಜಕುಮಾರ …
Read More »
Laxmi News 24×7