Breaking News

ಒತ್ತುವರಿದಾರರಿಗೇ ಭೂಮಿ ಹಂಚಿಕೆಗೆ ಸರ್ಕಾರದ ನಿರ್ಧಾರ; ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ಪರಿಹಾರ

ಬೆಂಗಳೂರು: ಅರಣ್ಯ ಇಲಾಖೆ ವಶದಲ್ಲಿರುವ 6 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ. ಈ ಭೂಮಿಯಲ್ಲಿ ಅಗತ್ಯವಿರುವಷ್ಟು ಸರ್ಕಾರದ ಬಳಿ ಉಳಿಸಿಕೊಂಡು ಉಳಿದ ಭೂಮಿಯನ್ನು ಒತ್ತುವರಿದಾರರಿಗೆ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕಂದಾಯ ಇಲಾಖೆಗೆ ಸುಮಾರು 6 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಪ್ರದೇಶ ಹಸ್ತಾಂತರವಾಗುತ್ತದೆ. ಇದನ್ನು ಸಾರ್ವಜನಿಕ ಉದ್ದೇಶದ ಬಳಕೆಗೆ ಮೀಸಲಿಡಲು ಆದ್ಯತೆ …

Read More »

ಬಿಜೆಪಿ ಶಾಸಕ ಯತ್ನಾಳ್ ಕುತೂಹಲದ ಹೇಳಿಕೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಬಿಜೆಪಿಯಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ನಾಲ್ವರಿಗೆ ಸಚಿವ ಸ್ಥಾನ, ನಾಲ್ವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿ, ಸಂಪುಟದ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಬೇಕೆಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಎಲ್ಲ ಸಮುದಾಯ ಮತ್ತು ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡುವ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಾಗುತ್ತದೆ …

Read More »

ಆಸ್ಪತ್ರೆ ಸಿಬ್ಬಂದಿಗಳ ನಿರ್ಲ್ಯಕ್ಷ: ನವಜಾತ ಶಿಶುವಿನ ಮೊಣಕಾಲು, ಕೈಕಾಲುಗಳನ್ನು ಕಚ್ಚಿ ಗಾಯಗೊಳಿಸಿದ ಇಲಿಗಳು.

ಜಾರ್ಖಂಡ್‌: ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಇಲಿಗಳು ನವಜಾತ ಶಿಶುವಿನ ಮೊಣಕಾಲು ಮತ್ತು ಕೈಕಾಲುಗಳನ್ನು ಕಚ್ಚಿರುವ ಘಟನೆ ಗಿರಿದಿಹ್‌ನಲ್ಲಿರುವ ಜಾರ್ಖಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ನಿರ್ಲಕ್ಷ್ಯದ ಆಘಾತಕಾರಿ ಪ್ರಕರಣದಲ್ಲಿ ಇಲಿಗಳು ನವಜಾತ ಶಿಶುವಿನ ಮೊಣಕಾಲು ಮತ್ತು ಕೈಕಾಲುಗಳನ್ನು ಕಚ್ಚಿದ ಘಟನೆ ಗಿರಿದಿಹ್‌ನಲ್ಲಿರುವ ಜಾರ್ಖಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಹೊರಗುತ್ತಿಗೆ ಕಾರ್ಮಿಕರ ಸೇವೆಯನ್ನು ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.   ಈ ಘಟನೆಯು ಮೇ 2 ರಂದು ಗಿರಿದಿಹ್ ಸದರ್ ಆಸ್ಪತ್ರೆಯಲ್ಲಿ …

Read More »

ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ

ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಅವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಲವೆಡೆಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಆರೋಗ್ಯ ಶಿಬಿರವನ್ನು ಮಂಗಳವಾರ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು.  ಆರೋಗ್ಯ ಶಿಬಿರ ಮುಗಿಸಿ ಸಾಗರಕ್ಕೆ ವಾಪಸ್ ಆಗುವಾಗ ರಾಜನಂದಿನಿ ಅವರ ಕಾರನ್ನು ಮಂಜು ಎಂಬಾತ ರಸ್ತೆ ಮಧ್ಯೆದಲ್ಲಿ ಅಡ್ಡ …

Read More »

ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ‌

ಬೆಂಗಳೂರು: ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ‌ ಮುಂದೂಡಲಾಗಿದೆ. ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಅದನ್ನು ರದ್ದುಪಡಿಸಿ ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಬುಧವಾರ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ‌. ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಕುರಿತು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ. ಮೇ …

Read More »

ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ: ಸಿಎಂ ಬೊಮ್ಮಾಯಿ

ಬೆಂಗಳೂರು: ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಪ್ರಸಕ್ತ ಸಾಲಿನ ಬಜೆಟ್ ಅನುಷ್ಠಾನಕ್ಕೆ ವೇಗ ನೀಡುವುದಕ್ಕಾಗಿ ಬುಧವಾರ ಇಲಾಖಾವಾರು ಸಭೆಗಳನ್ನು ಆರಂಭಿಸುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಈಗಾಗಲೇ ಶೇಕಡ 80ರಷ್ಟು ಆದೇಶಗಳನ್ನು ಹೊರಡಿಸಲಾಗಿದೆ. ಉಳಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತ್ವರಿತವಾಗಿ ಆದೇಶ ಹೊರಡಿಸಲಾಗುವುದು’ ಎಂದರು. ಎಲ್ಲ ಇಲಾಖೆಗಳಿಗೂ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ವೇಳಾಪಟ್ಟಿ ನೀಡಲಾಗುವುದು. …

Read More »

ಮೋದಿ ಮಾಧ್ಯಮಗಳ ಮೈಕ್ ಕಂಡರೆ ಎಕೆ-47 ಗನ್ ಕಂಡಂತೆ ಹೆದರುತ್ತಾರೆ: ಕಾಂಗ್ರೆಸ್

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿಯವರು ಮಾಧ್ಯಮಗಳ ಮೈಕ್ ಕಂಡರೆ ಎಕೆ-47 ಗನ್‌ ಕಂಡಂತೆ ಹೆದರುತ್ತಾರೆ’ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಗಂಗಾ ನದಿಯಲ್ಲಿ ಕೋವಿಡ್ ಮೃತದೇಹಗಳು ತೇಲಿದಾಗ, ಚೀನಾ ನಮ್ಮ ದೇಶದ 20 ಮಂದಿ ಯೋಧರನ್ನು ಹತ್ಯೆ ಮಾಡಿದಾಗ, ಪುಲ್ವಾಮ ದಾಳಿಯಲ್ಲಿ 40 ಯೋಧರು ಮಡಿದಾಗ ಬಾರದ ‘ಓಹ್ ಮೈ ಗಾಡ್’ ಉದ್ಘಾರ ಮಾಧ್ಯಮಗಳ ಮೈಕ್ ಎದುರಾದಾಗ ಬರುತ್ತದೆ ಎಂದರೆ ಅದೆಷ್ಟು ಗಾಬರಿಯಾಗಿರಬಹುದು’ ಎಂದು …

Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ,ಓರ್ವ ಸಾವು, ಇನ್ನೊಬ್ಬನಿಗೆ ಗಾಯ

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಲದಲ್ಲಿಯೇ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಹುಕ್ಕೇರಿ ತಾಲೂಕಿನ ಸುತಗಟ್ಟಿ ಕ್ರಾಸ್ ಬಳಿ ನಡೆದಿದೆ. ಒರಿಸ್ಸಾ ಮೂಲದ ವ್ಯಕ್ತಿಗಳಿಬ್ಬರು ಬೈಕ್ ಮೇಲೆ ಬೆಳಗಾವಿ ಕಡೆಯಿಂದ ಮಹಾರಾಷ್ಟ್ರ ಕಡೆಗೆ ಹೋಗುತ್ತಿದ್ದ ವೇಳೆ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಓರಿಸ್ಸಾ ರಾಜ್ಯದ ಬದ್ರಕ ಜಿಲ್ಲೆಯ ದೊಳಾಪಡ ಗ್ರಾಮದ ಬೇನುದರ ನಾಯಕ …

Read More »

ಪಿಎಸ್‌ಐ ಅಕ್ರಮ – ಮಾಜಿ ಸಿಎಂ ಪುತ್ರನ ವಿರುದ್ಧ ದೂರು

ಬೆಂಗಳೂರು: ಪಿಎಸ್‌ಐ(ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌) ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಾಜಿ ಮುಖ್ಯಮಂತ್ರಿ ಮಗನ ಮೇಲೆ ದೂರು ದಾಖಲಾಗಿದೆ. ಭ್ರಷ್ಟಾಚಾರದ ವಿರುದ್ಧ ನಾವು ಸಂಘಟನೆಯ ಪರವಾಗಿ ವಕೀಲರು ಸಿಐಡಿಗೆ ದೂರು ನೀಡಿದ್ದಾರೆ. ಹೆಸರನ್ನು ಸೂಚಿಸದೇ, ಮಾಜಿ ಮುಖ್ಯಮಂತ್ರಿ ಮಗ ಎಂದು ಆರೋಪ ಮಾಡಲಾಗಿದೆ.   ಪಿಎಸ್‌ಐ ಪರೀಕ್ಷೆ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯ ಪುತ್ರನ ಕೈವಾಡವಿದೆ ಎಂದು ಅಭ್ಯರ್ಥಿಗಳು ಆರೋಪಿಸುತ್ತಿದ್ದಾರೆ. ಮಗ ಕೂಡ ಈ ಹಗರಣದಲ್ಲಿ ತೊಡಗಿರುವ ಬಗ್ಗೆ ರಾಜ್ಯಾದ್ಯಂತ …

Read More »

ಅರ್ಧ ದಾರಿಯಲ್ಲಿ ರೈಲು ನಿಲ್ಲಿಸಿ ಎಣ್ಣೆ ಹೊಡೆಯಲು ಹೋದ ಚಾಲಕ : ಗಂಟೆಗಟ್ಟಲೆ ಕಾದ ಪ್ರಯಾಣಿಕರು

ಬಿಹಾರ: ರೈಲಿನ ಲೊಕೊ ಪೈಲಟ್ ( ಚಾಲಕ) ಅರ್ಧ ದಾರಿಯಲ್ಲಿ ರೈಲು ನಿಲ್ಲಿಸಿ ಟೀ ಕುಡಿಯಲು ತೆರಳಿದ ಸುದ್ದಿ ಇತ್ತೀಚಿಗೆ ವರದಿಯಾಗಿತ್ತು. ಇದೀಗ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಇಲ್ಲಿ ಬೇಜವಾಬ್ದಾರಿ ಲೊಕೊ ಪೈಲಟ್ ಅರ್ಧ ದಾರಿಯಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲನ್ನು ನಿಲ್ಲಿಸಿ ಮದ್ಯ ಸೇವಿಸಲು ತೆರಳಿದ್ದಾನೆ. ಬಿಹಾರದ ಸಮಸ್ತಿಪುರ್-ಖಗಾರಿಯಾ ನಡುವಿನ ರೈಲು ಮಾರ್ಗದ ಹಸನ್‌ಪುರ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ನಿಲ್ದಾಣದಲ್ಲಿ ನಿಂತ ರೈಲು ಎಷ್ಟೇ ಹೊತ್ತಾದರೂ …

Read More »