Breaking News

ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ: ನಿತೇಶ್ ಪಾಟೀಲ

ಬೆಳಗಾವಿ: ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಹಾಗೂ ವಾಯವ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 13 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ರ ಪ್ರಕಾರ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಬಹಿರಂಗ ಪ್ರಚಾರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ …

Read More »

ಬೆಳಗಾವಿಯ ಏರ್ಮನ್ ತರಬೇತಿ ಶಾಲೆಯ ನೂತನ ಕಮಾಂಡಿಂಗ್ ಏರ್ ಆಫೀಸರ್ ಆಗಿ ಏರ್ ಕಮಾಂಡರ್ ಎಸ್.ಶ್ರೀಧರ್ ಅಧಿಕಾರ ಸ್ವೀಕರಿಸಿದ್ದಾರೆ.

ಬೆಳಗಾವಿಯ ಏರ್ಮನ್ ತರಬೇತಿ ಶಾಲೆಯ ನೂತನ ಕಮಾಂಡಿಂಗ್ ಏರ್ ಆಫೀಸರ್ ಆಗಿ ಏರ್ ಕಮಾಂಡರ್ ಎಸ್.ಶ್ರೀಧರ್ ಅಧಿಕಾರ ಸ್ವೀಕರಿಸಿದ್ದಾರೆ. ಏರ್ ಕಮಾಂಡರ್ ಎಸ್.ಶ್ರೀಧರ್  ಅವರನ್ನು 14 ಜೂನ್ 1989 ರಂದು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಸ್ಟ್ರೀಮ್‌ನಲ್ಲಿ ನಿಯೋಜಿಸಲಾಗಿತ್ತು. ಸಾಯಿಕ್ ಸ್ಕೂಲ್ ಕೊರೊಕೊಂಡ ಮತ್ತು ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ, ಅವರ ವೃತ್ತಿಜೀವನದಲ್ಲಿ 33 ವರ್ಷಗಳ ಕಾಲ, ಸುಮಾರು 5000 ಗಂಟೆಗಳ ಕಾಲ ಅಕಾಶದಲ್ಲಿಯೇ ಹಾರಾಟ ನಡೆಸಿದ್ದಾರೆ. ಐಎಎಫ್‌ನ ವಿವಿಧ …

Read More »

ಕಬ್ಬು ಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಫ್‌ಆರ್‌ಪಿಪಿ ದರ ಹೆಚ್ಚಿಸುವ ವಿಚಾರದಲ್ಲಿ ಮೋಸ ಮಾಡುತ್ತಿವೆ

ಕಬ್ಬು ಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಫ್‌ಆರ್‌ಪಿಪಿ ದರ ಹೆಚ್ಚಿಸುವ ವಿಚಾರದಲ್ಲಿ ಮೋಸ ಮಾಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಡಿಸಿ ಕಚೇರಿ ಮುಂದೆ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯದಲ್ಲಿ …

Read More »

ಮೂರು ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಬೆದರಿಕೆ ಕರೆ ಬರುತ್ತಿದೆ: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಮೂರು ನಂಬರ್‌ನಿಂದ ನನಗೆ ಕಿರಿಕಿರಿ, ಧಮ್ಕಿ, ಬೆದರಿಕೆ ಕರೆ ಬರುತ್ತಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು. ಪ್ರಮೋದ್ ಮುತಾಲಿಕ್ ವಿರುದ್ಧ ಇನ್‍ಸ್ಟಾಗ್ರಾಮ್‍ನಲ್ಲಿ ಜೀವ ಬೆದರಿಕೆ ಪೋಸ್ಟ್ ಮಾಡಲಾಗಿತ್ತು. ಈ ಹಿನ್ನೆಲೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮುತಾಲಿಕ್ ಅವರು ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ದಿನದ ಹಿಂದೆ ಮಾರಿಗುಡಿ ಗ್ರೂಪ್‍ನಲ್ಲಿ ನನಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಸದ್ಯ ಪೊಲೀಸ್ ಆಯುಕ್ತರ ಜೊತೆ ಚರ್ಚೆ ಮಾಡಿದ್ದೇನೆ …

Read More »

PSI ನೇಮಕಾತಿಅಕ್ರಮ – ಫಸ್ಟ್‌ ರ‍್ಯಾಂಕ್‌ ಅಭ್ಯರ್ಥಿ ಅರೆಸ್ಟ್

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಲೆಕ್ಷನ್ ಲಿಸ್ಟ್‌ನಲ್ಲಿ ಫಸ್ಟ್ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಪಿಎಸ್‌ಐ ನೇಮಕಾತಿ ಪರೀಕ್ಷೆಯ ಆಯ್ಕೆ ಪಟ್ಟಿಯಲ್ಲಿ ಫಸ್ಟ್‌ ರ‍್ಯಾಂಕ್‌ ಬಂದಿದ್ದ ಮಾಗಡಿ ತಾಲ್ಲೂಕಿನ ನಿವಾಸಿ ಜೆ.ಕುಶಾಲ್‌ಕುಮಾರ್ ನನ್ನು ಪೊಲೀಸರು ಬಂಧಿಸಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ. ಬಂಧಿತ ಆರೋಪಿ ಪ್ರಮುಖ ರಾಜಕಾರಣಿಯೊಬ್ಬರ ಮಗ ಎನ್ನಲಾಗಿದೆ. ಈತ 200 ಅಂಕಗಳಿಗೆ 168 ಅಂಕ ಪಡೆಯುವ ಮೂಲಕ 545 ಅಭ್ಯರ್ಥಿಗಳ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್ ಅಟ್ಯಾಕ್, ಬೆಳಗಾವಿ ಜಿಲ್ಲಾಡಳಿತ ಡೋಂಟ್ ಕೇರ್

ಮಹಾರಾಷ್ಟ್ರದಲ್ಲಿ ಮತ್ತೆ ಡೆಡ್ಲಿ ಕೋವಿಡ್ ಅಟ್ಯಾಕ್ ಮಾಡಿದ್ದು, ಮಹಾರಾಷ್ಟ್ರದಲ್ಲಿ ಕೋವಿಡ್ 4ನೇ ಅಲೆಯ ಆತಂಕ ಸೃಷ್ಟಿಯಾಗಿದೆ. ಕಳೆದ 24 ಗಂಟೆಯಲ್ಲಿ 2701 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದರೂ ಕೂಡ ಬೆಳಗಾವಿ ಜಿಲ್ಲಾಡಳಿತ ಡೋಂಟ್ ಕೇರ್ ಎಂದಿದ್ದು. ಬಿಂದಾಸ್ ಆಗಿ ರಾಜ್ಯಕ್ಕೆ ಮಹಾರಾಷ್ಟ್ರ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಹೌದು ಮಹಾರಾಷ್ಟ್ರದಲ್ಲಿ ಕೋವಿಡ್ ತಾಂಡವವಾಡುತ್ತಿದೆ. ಮುಂಬೈ ಮಹಾನಗರವೊಂದರಲ್ಲೇ 1765 ಪ್ರಕರಣಗಳು ಪತ್ತೆಯಾಗಿವೆ. ಇನ್ನು ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಮತ್ತೆ …

Read More »

ಹಿರೇ ಬಾಗೇವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಪುಂಡರಿಗೆ ಹೆಡೆಮುರಿ ಕಟ್ಟಿದ್ದಾರೆ.

ನಿನ್ನೆ ರಾತ್ರಿ ಹಿರೇ ಬಾಗೇವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಪುಂಡರಿಗೆ ಹೆಡೆಮುರಿ ಕಟ್ಟಿದ್ದಾರೆ. ಹೌದು ಹಿರೇಬಾಗೇವಾಡಿ ಠಾಣೆ ಸಿಪಿಐ ವಿಜಯಕುಮಾರ್ ಸಿನ್ನೂರ್ ಮಾರ್ಗದರ್ಶನದಲ್ಲಿ ಪಿಎಸ್‍ಐ ಶಶಿಕುಮಾರ್ ಕೊರಲೆ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದ್ದು. ನಿನ್ನೆ ರಾತ್ರಿ ಸುಮಾರು 2.30ರ ಸುಮಾರಿಗೆ ಹಾಲಗಿಮರಡಿ ಕ್ರಾಸ್ ಮೂಲಕ ಎರಡು ವ್ಯಾನ್‍ಗಳಲ್ಲಿ ಗೋವಾಗೆ ಗೋಮಾಂಸವನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಗೋಮಾಂಸ ಸಮೇತ ಇಬ್ಬರು …

Read More »

ಪೊಲೀಸ ಠಾಣೆ ಮೆಟ್ಟಿಲೇರಿದ ಪದ್ಮಾವತಿ

ಚಂದನವನದ ರಾಣಿ ರಮ್ಯಾ ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಸಿನಿಮಾ ಕಾರ್ಯಕ್ರಮಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ. ತೀರಾ ರಾಜಕೀಯವಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳದೇ ಇದ್ದರೂ, ಸಿನಿಮಾಗಳ ಕಾರ್ಯಕ್ರಮಗಳು, ಟ್ರೈಲರ್, ಟೀಸರ್ ಹೀಗೆ ಒಂದಿಲ್ಲೊಂದು ವಿಷಯವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳುತ್ತಾರೆ. ಹೆಚ್ಚೆಚ್ಚು ಸೋಷಿಯಲ್ ಮೀಡಿಯಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಅಭಿಮಾನಿಗಳಿಗೆ ಹೊಸ ಹೊಸ ವಿಷಯಗಳನ್ನು ಕೊಡುವ ರಮ್ಯಾ ಅವರಿಗೆ ಕಿಡಿಗೇಡಿಯೊಬ್ಬ ಇನ್ಸ್ಟಾದಲ್ಲಿ ನಿಂದನೆ ಮಾಡಿದ್ದಾನಂತೆ. ಹಾಗಾಗಿ …

Read More »

ವಿದ್ಯಾರ್ಥಿನಿ ಜೊತೆಗೆ ಲವ್ವಿಡವ್ವಿ ಶಿಕ್ಷಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿತ

ವಿದ್ಯಾರ್ಥಿನಿ ಜೊತೆಗೆ ಲವ್ವಿಡವ್ವಿಯ ಅಶ್ಲೀಲ ಪೆÇೀಟೋಗಳನ್ನು ವೈರಲ್ ಮಾಡಿದ ಶಿಕ್ಷಕನಿಗೆ ಗ್ರಾಮಸ್ಥರು ಧರ್ಮದೇಟು ಕೊಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಯಕ್ಕುಂಡಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಮಹೇಶ ಶಿವಲಿಂಗಪ್ಪ ಬಿರಾದಾರ ಶಾಲೆಯ ವಿದ್ಯಾರ್ಥಿನಿಯೊಬ್ಬರನ್ನ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿರೋ ಆರೋಪ ಕೇಳಿ ಬಂದಿದ್ದು ವಿದ್ಯಾರ್ಥಿನಿಯೊಂದಿಗೆ ಕಳೆದ ಮಧುರ ಕ್ಷಣಗಳನ್ನ ಶಿಕ್ಷಕ ತನ್ನ ಮೊಬೈಲ್ ನಲ್ಲಿ ಸೆರೆ ಮಾಡಿಟ್ಟುಕೊಂಡಿದ್ದ.ಶಾಲೆ ಮಗಿದ್ಮೇಲೆ ಯುವತಿಗೆ ಬೇರೆ …

Read More »

ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅವಘಡ 20ಕ್ಕೂ ಹೆಚ್ಚು ಜನರಿಗೆ ಗಾಯ

ಕಾಲೇಜು ಬಸ್ಸಿನ ಹಿಂಬದಿಗೆ ಕೆಎಸ್‌ಆರ್‌ಟಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದ ಬಳಿ ಸಂಭವಿಸಿದೆ.ಜತ್ತ-ಜಾಂಬೋಟಿ ಹೆದ್ದಾರಿ ಸಮೀಪ ಗುರ್ಲಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಮೂಡಲಗಿ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಕಾಲೇಜು ಬಸ್‌ನಲ್ಲಿದ್ದ ೧೦ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ೧೦ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು. ಇದರಲ್ಲಿ …

Read More »