Breaking News

ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ

ವಿಜಯಪುರ, ಏಪ್ರಿಲ್ 29 ; ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ನಡೆಯುತ್ತಿದೆ. ಈ ವೇಳೆ ಶಿಕ್ಷಕರಿಗೆ ಉತ್ತರ ಪತ್ರಿಕೆಯೊಂದು ಸಿಕ್ಕಿದ್ದು, ವಿದ್ಯಾರ್ಥಿ ಸಾಷ್ಟಾಂಗ ನಮಸ್ಕಾರ ಹಾಕಿದ್ದಾನೆ. ವಿಜಯಪುರದ ಸ್ನೇಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೌಲ್ಯ ಮಾಪನದ ವೇಳೆ ಈ ಪತ್ರಿಕೆ ಪತ್ತೆಯಾಗಿದೆ. ಬಿಲ್ ಕಲೆಕ್ಟರ್ ಆಗಿ ಮುಂಬಡ್ತಿ ಪಡೆಯಲು ಒಂದು ಅಂಕ ನೀಡಿ ಎಂದು ಮನವಿ ಮಾಡಿರುವ ಈ ಪತ್ರಿಕೆ ಫೋಟೋ ವೈರಲ್ ಆಗಿದೆ. ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿರುವ …

Read More »

ಕುಡಿದು ಬಂದ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿ ಅಪ್ರಾಪ್ತ ಬಾಲಕ..!

ಧಾರವಾಡ : ಅಪ್ರಾಪ್ತ ಬಾಲಕನೊಬ್ಬ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪುಂಡಲೀಕ (43) ಎಂದು ಗುರುತಿಸಲಾಗಿದೆ. ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತಿದ್ದ ತಂದೆ ಯಿಂದ ರೋಸಿ ಹೋಗಿದ್ದ ಮಗ, ಕೊನೆಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಾಲಕ ಇನ್ನೂ 17 ವರ್ಷದವನಾಗಿದ್ದು, ತಂದೆಯ ಜೊತೆ ಕಳೆದ ನಾಲ್ಕು ದಿನಗಳ ಹಿಂದೆ ಕೂಡಾ ಜಗಳ ಮಾಡಿದ್ದ. ಆದರೂ ತಂದೆ ಕುಡಿದು …

Read More »

ರಾಜ್ಯದಾದ್ಯಂತ ಮೇ.16ರಿಂದ ಶಾಲೆ ಪ್ರಾರಂಭ,

ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.   ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳಾಪಟ್ಟಿಯಂತೆ ಪ್ರಸಕ್ತ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಸಂಕಲ್ಪಿಸಲಾಗಿದ್ದು, ವಾರ್ಷಿಕ ಪಠ್ಯವಸ್ತು ಬೋಧನೆಯನ್ನು ಕಲಿಕಾ …

Read More »

ಗೃಹ ಇಲಾಖೆ ನಿಭಾಯಿಸಲಾಗದೇ ಒದ್ದಾಡುತ್ತಿರುವ ಆರಗ ಜ್ಞಾನೇಂದ್ರರನ್ನು ಬದಲಿಸಲು ಹೈಕಮಾಂಡ್ ಗಂಭೀರ ಚಿಂತನೆ

ಬೆಂಗಳೂರು: ಪಿಎಸ್‍ಐ ಪರೀಕ್ಷಾ ಅಕ್ರಮದ ವಿಚಾರದಲ್ಲಿ ಬೊಮ್ಮಾಯಿ ಸರ್ಕಾರದ ಧೋರಣೆಗೆ ಅದರಲ್ಲೂ ಗೃಹ ಸಚಿವ ಆರಗ ಜ್ಞಾನೇಂದ್ರ ತೋರಿದ ನಡವಳಿಕೆಗಳಿಗೆ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಮರು ಪರೀಕ್ಷೆ ನಡೆಸಲು ಸಿಐಡಿ ವರದಿ ಕೊಟ್ಟರೂ ಆದೇಶ ಹೊರಡಿಸಲು ಮೀನಾಮೇಷ ಎಣಿಸಿದ ಸರ್ಕಾರವನ್ನು ಅಮಿತ್ ಶಾ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಪರಿಣಾಮ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವರು, ಮರು ಪರೀಕ್ಷೆ ಆದೇಶವನ್ನು ತರಾತುರಿಯಲ್ಲಿ …

Read More »

ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ, ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ –

ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ. ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಸಿಐಡಿ ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ …

Read More »

ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ಸ್ವಾಗತಿಸಿದ ಡಿ. ರೂಪಾ

ಬೆಂಗಳೂರು: ಪಿಎಸ್‌ಐ ನೇಮಕಾತಿಗೆ ಮರುಪರೀಕ್ಷೆ ನಿರ್ಧಾರದ ಮೂಲಕ ನೊಂದ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರವು ನ್ಯಾಯ ಒದಗಿಸಿದೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಹೇಳಿದ್ದಾರೆ. ನೇಮಕಾತಿ ಉಸ್ತುವಾರಿ ಹೊತ್ತಿರುವ ಹಿರಿಯ ಅಧಿಕಾರಿಗಳಿಂದ ಹಿಡಿದು ಎಲ್ಲರಿಗೂ ಅಮಾನತು ಮುಂತಾದ ಶಿಸ್ತು ಕ್ರಮ(ಟ್ರಾನ್ಸ್‌ಫರ್ ಶಿಸ್ತುಕ್ರಮ ಅಲ್ಲ) ಆದಾಗ ಮಾತ್ರ ಮುಂದೆ ಇಂತಹ ಘಟನೆ ತಡೆಯಲು ಸಾಧ್ಯ. ಇಲ್ಲವಾದಲ್ಲಿ ಅಧಿಕಾರಿಗಳು ಆಡಿದ್ದೇ ಆಟ. ಎಂದು ‌ ಡಿ.ರೂಪಾ ಟ್ವೀಟ್ ಮಾಡಿದ್ದಾರೆ. 545 ಪಿಎಸ್‌ಐ ಹುದ್ದೆ …

Read More »

ಸ್ವಾವಲಂಬನೆ ಬದುಕು; ಆಘಾತಕ್ಕೆ ಸಿಲುಕಿದ್ದ ಬದುಕಿಗೆ ಆಧಾರವಾದ ರೊಟ್ಟಿ

ಹುಬ್ಬಳ್ಳಿ: ಇದ್ದದ್ದು ಎರಡೇ ಎಕರೆ ಜಮೀನು ಆದರೂ ನೆಮ್ಮದಿ-ತೃಪ್ತಿಯಿಂದ ಬದುಕುತ್ತಿದ್ದ ಆ ಕುಟುಂಬಕ್ಕೆ ಬರಸಿಡಲಿನ ಆಘಾತ ಬಂದೆರಗಿತ್ತು. ತಾನಾಯಿತು ತನ್ನ ಮನೆಯಾಯಿತು ಎಂದುಕೊಂಡಿದ್ದ ಮಹಿಳೆ ಆಧಾರಸ್ತಂಭ ಕಳೆದುಕೊಂಡು ಇಡೀ ಕುಟುಂಬಕ್ಕೆ ಆಧಾರವಾಗಿ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಂಕಷ್ಟ ಸಂದರ್ಭದಲ್ಲಿ ತರಬೇತಿ ಪಡೆದಿದ್ದೇನೆ. ಇದ್ದರೆ ಮನೆಯಲ್ಲಿರಲಿ ಎಂದು ಪಡೆದಿದ್ದ ರೊಟ್ಟಿ ಯಂತ್ರವೇ ಇದೀಗ ಆ ಕುಟುಂಬಕ್ಕೆ ಪ್ರಮುಖ ಆಧಾರವಾಗಿದೆ. ರೊಟ್ಟಿ ತಟ್ಟುವ ಮೂಲಕವೇ ಆ ಮಹಿಳೆ ಇಡೀ ಕುಟುಂಬ ನಿರ್ವಹಣೆ ಮಾಡುವ …

Read More »

ಜನ ವಿರೋಧಿ ಬಿಜೆಪಿ ಸರ್ಕಾರಕ್ಕೆ 40% ಕಮಿಷನ್ ಬಿಟ್ಟು ಬೇರೆ ಎನೂ ಕಾಣಿಸುತ್ತಿಲ್ಲ.: ಮೊಹಮ್ಮದ್ ನಲಪಾಡ್

ಬೆಳಗಾವಿ: ದೇಶದಲ್ಲಿ ಬಿಜೆಪಿಯರು ಹಿಂದುತ್ವವನ್ನು ಲೀಸ್‍ಗೆ ಪಡೆದಿದ್ದಾರಾ ಎಂದು ಸಂಸದ ಪ್ರತಾಪ್ ಸಿಂಹಗೆ ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರ್ಖ ಜನ ವಿರೋಧಿ ಬಿಜೆಪಿ ಸರ್ಕಾರಕ್ಕೆ 40% ಕಮಿಷನ್ ಬಿಟ್ಟು ಬೇರೆ ಎನೂ ಕಾಣಿಸುತ್ತಿಲ್ಲ. ಕಳೆದ ಏಳು ವರ್ಷದಿಂದ ಪೆಟ್ರೋಲ್, ಡೀಸೆಲ್ ದರ ಡಬಲ್ ಆಗಿದೆ. ಸಾಮಾನ್ಯ ಒಬ್ಬ ವ್ಯಕ್ತಿ ಮನೆಯಿಂದ ಆಚೆ ಬರಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು. …

Read More »

ಅರ್ಧ ಜ್ಞಾನವಿರೋ ಆರಗ ಜ್ಞಾನೇಂದ್ರ ಎಂದ ಮೊಹಮ್ಮದ್ ನಲಪಾಡ್

ಬೆಳಗಾವಿ: ಗೃಹ ಸಚಿವರು ಅರ್ಧ ಜ್ಞಾನೇಂದ್ರ. ಫುಲ್ ಜ್ಞಾನ ಇದ್ದಿದ್ರೆ ಕಷ್ಟ ಇರಲಿಲ್ಲ. ಆದರೆ ಅರ್ಧ ಜ್ಞಾನ ಇಟ್ಟುಕೊಂಡು ಇಂತಹ ಕೆಲಸಗಳನ್ನ ಮಾಡಿಕೊಂಡು ಹೋಗುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ಯೂಥ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಇರುವವರೇ ಹಗರಣ ಮಾಡಿದ್ದಾರೆ. 56 ಸಾವಿರ ಯುವಕರ ಜೀವನದ ಜೊತೆಗೆ ಆಟವಾಡಿದ್ದಾರೆ. ಈ ಬಿಜೆಪಿ ಸರ್ಕಾರಕ್ಕೆ ಮಾನ, ಮರ್ಯಾದೆ, …

Read More »

ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ: ಮೊಹಮ್ಮದ್ ನಲ್ ಪಾಡ

ಬೆಳಗಾವಿ: ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷಮೊಹಮ್ಮದ್ ನಲ್ ಪಾಡ ಆರೋಪ ಮಾಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಎಂದರೆ ಬೆಲೆ ಏರಿಕೆ ಸರ್ಕಾರ. ಕಾಂಗ್ರೆಸ್ ಸರ್ಕಾರ ಇದ್ದಾಗ ಒಂದು ರೂಪಾಯಿ ಎರಡೂ ರೂಪಾಯಿ ಏರಿಕೆಯಾದರೂ ಬಿಜೆಪಿ ನಾಯಕರು ರಸ್ತೆಗೆ ಬಂದು ಗ್ಯಾಸ್ ಹಿಡಿದು ಪ್ರತಿಭಟನೆ ಮಾಡುತ್ತಿದ್ದರು. ಈಗ ಎಲ್ಲಿದ್ದಾರೆ ಆ. ಚುನಾವಣೆ ಸಂದರ್ಭದಲ್ಲಿ ಬೆಲೆ …

Read More »