Breaking News

ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದ್ರೆ ತಪ್ಪೇನಿಲ್ಲ: ಮುರುಗೇಶ್ ನಿರಾಣಿ

ಮೈಸೂರು/ಚಿಕ್ಕಮಗಳೂರು/ ವಿಜಯಪುರ: ಹಿದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದರೆ ತಪ್ಪೇನಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಸುದೀಪ್, ಅಜಯ್ ದೇವಗನ್ ಮಧ್ಯೆ ಹಿಂದಿವಾರ್ ಸಂಬಂಧ ಪ್ರತಿಕ್ರಿಯಿಸಿದ ಅವರು, ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ. ಹಿಂದಿ ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ. ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬುದು ಮೊದಲಿನಿಂದಲೂ ಇದೆ, ಇದರಿಂದ ತಪ್ಪೇನಿಲ್ಲ ಎಂದರು.ಹೆಚ್ಚು ಭಾಷೆ ಕಲಿಯೋದ್ರಿಂದ ನಾವು ಶ್ರೀಮಂತರಾಗುತ್ತೇವೆ. ನಾವು …

Read More »

ಡೀಲಿಂಗ್ ಸರ್ಕಾರದಲ್ಲಿ ದುಡ್ಡಿದ್ದವನಿಗೆ ಉದ್ಯೋಗ ಎಂದ ಮೇಲೆ ಬಡವರು ಪರೀಕ್ಷೆ ಬರೀಬೇಕು ಯಾಕೆ – ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅರ್ಹತಾ ಪರೀಕ್ಷೆಯ ಮೂಲಕ ಸರ್ಕಾರಿ ಉದ್ಯೋಗ ಭರ್ತಿ ಮಾಡುವುದೇಕೆ? ಈ ಸರ್ಕಾರದಲ್ಲಿ ದುಡ್ಡಿದ್ದವನಿಗೆ ಉದ್ಯೋಗ ಎಂದ ಮೇಲೆ ಬಡವರು ಯಾಕೆ ಪರೀಕ್ಷೆ ಬರೆಯಬೇಕು ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ಪ್ರಶ್ನೆ ಮಾಡಿದೆ. ಟ್ವೀಟ್‍ನಲ್ಲಿ ಏನಿದೆ? ರಾಜ್ಯದ ಬೊಮ್ಮಾಯಿ ನೇತೃತ್ವದ ಸರ್ಕಾರ ಡಬಲ್ ಇಂಜೀನ್ ಸರ್ಕಾರವಲ್ಲ. ಇದು ಡೀಲಿಂಗ್ ಸರ್ಕಾರ. ಈ ಸರ್ಕಾರದಲ್ಲಿ ಪ್ರತಿ ಸರ್ಕಾರಿ ಉದ್ಯೋಗಕ್ಕೂ ಇಂತಿಷ್ಟು ರೇಟ್ ಎಂದು ಫಿಕ್ಸ್ ಆಗಿದೆ. PSI ನೇಮಕಾತಿಯಲ್ಲಿ …

Read More »

ಸಂಕಷ್ಟಕ್ಕೆ ಸಿಲುಕಿದ ʼಕಹೋ ನಾ ಪ್ಯಾರ್ ಹೈʼ ನಟಿ ಅಮೀಷಾ

ಎರಡು ದಶಕಗಳ ಹಿಂದೆ ಚಿತ್ರರಂಗದಲ್ಲಿ‌ ಸೆನ್ಸೇಶನ್ ಸೃಷ್ಟಿಸಿದ್ದು ಕಹೋ ನಾ ಪ್ಯಾರ್ ಹೈ ಹಿಂದಿ ಚಿತ್ರ. ಹೃತಿಕ್ ರೋಷನ್ ಈ ಚಿತ್ರದ ಮೂಲಕವೇ ಬಹಳಷ್ಟು ಖ್ಯಾತಿ ಪಡೆದಿದ್ದರು. 22 ವರ್ಷದ ಹಿಂದಿನ ಚಿತ್ರದ ಬಗ್ಗೆ ಈಗೇಕೆ ಪೀಠಿಕೆ ಎಂದಿರಾ? ಈ ಚಿತ್ರದ ನಟಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.   ಹೃತಿಕ್ ರೋಷನ್‌ಗೆ ನಾಯಕಿಯಾಗಿ ನಟಿಸಿ ಜನರ ಮನಗೆದ್ದಿದ್ದ ಖ್ಯಾತ ನಟಿ ಅಮೀಶಾ ಪಟೇಲ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. …

Read More »

ಪುಷ್ಪಾ’ ಸ್ಟಾರ್ ಅಲ್ಲು ಅರ್ಜುನ್ ಡೈಲಾಗ್ ಮರುಸೃಷ್ಟಿಸಿದ ಹೂ ವ್ಯಾಪಾರಿ…!

ಟಾಲಿವುಡ್ ನಟ ಅಲ್ಲು ಅರ್ಜುನ್‌ರ ಬ್ಲಾಕ್‌ಬಸ್ಟರ್ ಪುಷ್ಪ: ದಿ ರೈಸ್ ಸಿನಿಮಾ ಬಿಡುಗಡೆಯಾಗಿ ಸುಮಾರು ನಾಲ್ಕು ತಿಂಗಳಾಗಿದೆ. ಇನ್ನೂ ಚಿತ್ರದ ಸಂಭಾಷಣೆಗಳು, ಹಾಡುಗಳ ಬಗ್ಗೆ ಕ್ರೇಜ್ ಕಡಿಮೆಯಾಗಿಲ್ಲ. ಇದೀಗ ಅಲ್ಲು ಅವರ ಕಾಶ್ಮೀರದ ಅಭಿಮಾನಿಯೊಬ್ಬರ ಚಿತ್ರದ ಪ್ರಮುಖ ಡೈಲಾಗ್ ಅನ್ನು ಹೇಳಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.ಕಾಶ್ಮೀರದಿಂದ ಆಗಾಗ್ಗೆ ಫೋಟೋಗಳು ಮತ್ತು ವಿಡಿಯೋಗಳನ್ನು ಪೋಸ್ಟ್ ಮಾಡುವ ಟ್ವಿಟ್ಟರ್ ಬಳಕೆದಾರರಾದ ನಮ್ರತಾ, ಇದೀಗ ಹೂವು ಮಾರಾಟಗಾರನ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ …

Read More »

ನಿರುದ್ಯೋಗ ಬಿಕ್ಕಟ್ಟು ಬಗೆಹರಿಸಿ ಮೋದಿಜೀ ಎಂದ ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿರುವ ನಿರುದ್ಯೋಗದ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸುತ್ತಿರುತ್ತಾರೆ. ಈ ಬಾರಿಯೂ ಇದೇ ವಿಚಾರಕ್ಕೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಹೇಟ್-ಇನ್-ಇಂಡಿಯಾ ಮತ್ತು ಮೇಕ್-ಇನ್-ಇಂಡಿಯಾ ಒಟ್ಟಿಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.   ನಿರುದ್ಯೋಗದ ಬಗ್ಗೆ ಧ್ವನಿ ಎತ್ತಿ ಅಪಾಯಕಾರಿ ನಿರುದ್ಯೋಗದ ಬಿಕ್ಕಟ್ಟನ್ನು ಪರಿಹರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. “”ಭಾರತದಿಂದ …

Read More »

ಪೈಲೆಟ್‍ನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಇಬ್ಬರು ಸಚಿವರು

ಬೆಂಗಳೂರು,ಏ.28- ಪೈಲೆಟ್‍ನ ಸಮಯ ಪ್ರಜ್ಞೆಯಿಂದಾಗಿ ಸಚಿವರಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಎಂ.ಟಿ.ಬಿ.ನಾಗರಾಜ್ ಮತ್ತು ಮುರುಗೇಶ್ ನಿರಾಣಿ ಅವರು ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಬೇಕಿದ್ದ ಉದ್ಯಮಿಯಾಗು -ಉದ್ಯೋಗ ನೀಡು ಮತ್ತು ಕೈಗಾರಿಕಾ …

Read More »

ರಮ್ಮಿ ಜೂಜಾಟಕ್ಕೆ ಮಾಡಿದ ಸಾಲ ತೀರಿಸಲು ವಿಫಲಳಾಗಿ ನೇಣಿಗೆ ಶರಣು-ಯುವತಿಯ ಸಾವಿನ ರಹಸ್ಯ ಬಯಲು

ಕೋಯಿಕ್ಕೋಡ್: ಕೇರಳದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದ ಬಿಜಿಶಾ ಸಾವಿನ ರಹಸ್ಯವನ್ನು ಕೊನೆಗೂ ಪೊಲೀಸರು ಬೇಧಿಸಿದ್ದು, ಆನ್‌ಲೈನ್ ಗೇಮಿಂಗ್‌ನಲ್ಲಿ ಕೋಟ್ಯಾಂತರ ರೂ. ವ್ಯವಹಾರ ಮಾಡಿ ಸಾಲ ತೀರಿಸಲು ಸಾಧ್ಯವಾಗದಿರುವುದೇ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ. ಚೆಲಾಯಿಲ್ ಮೂಲದ ಬಿಜಿಶಾ ಶವ ಕಳೆದ ಡಿಸೆಂಬರ್‌ನಲ್ಲಿ ನೇಣಿ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆದರೆ ಆಕೆಯ ಆತ್ಮಹತ್ಯೆಗೆ ಕಾರಣ ಏನೆಂದು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಆದರೆ ತದನಂತರ ಆಕೆಯ ಬ್ಯಾಂಕ್ ವ್ಯವಹಾರಗಳನ್ನು ಗಮನಿಸಿದಾಗ ತನ್ನ …

Read More »

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಆರ್ಥಿಕತೆಯನ್ನು ಗಮನಿಸಿದ ನಂತರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮೇಲಿನ ತೆರಿಗೆಯನ್ನು ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬುಧವಾರ ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು …

Read More »

ಹುಬ್ಬಳ್ಳಿ ಗಲಭೆ ಕೇಸ್ : ಮತ್ತೆ 8 ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ.   ಗಲಭೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಬಂಧಿಸಿರುವ ಆರೋಪಿಗಳ ನೀಡಿರುವ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿದ್ದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ.   ಪೊಲೀಸ್ ವಶದಲ್ಲಿದ್ದ ಗಲಭೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ವಸೀಂ ಪಠಾಣ್‍ನನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು …

Read More »

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಕಿಚ್ಚನ ಬೆನ್ನಿಗೆ ನಿಂತ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಆದರೆ ಇದೀಗ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸುದೀಪ್ ಪರ ನಿಂತಿದ್ದಾರೆ. ಚಿತ್ರನಟ ಸುದೀಪ್ ಹೇಳಿರುವ ಮಾತು ಸರಿಯಿದೆ. ಮಾತೃಭಾಷೆ ವಿಚಾರದಲ್ಲಿ ನಮ್ಮ‌ ನಿಲುವು ಸ್ಪಷ್ಟವಾಗಿದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗಲೇ ನಿರ್ಧಾರವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ.‌ ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಗೌರವಿಸಬೇಕು. …

Read More »