Breaking News

ಕಟ್ಟಡ ಕಾರ್ಮಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’

ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳಗಳಲ್ಲಿ ರಾಜ್ಯ ಸರ್ಕಾರ, ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ಗಳನ್ನು ಆರಂಭಿಸಲು ಸಿದ್ಧತೆ ನಡೆಸಿದ್ದು ಇದರ ಜೊತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಪ್ರಸ್ತುತ ಬಿಎಂಟಿಸಿ ಬಸ್ ಗಳಲ್ಲಿ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಇದನ್ನು ಈಗ ರಾಜ್ಯದಾದ್ಯಂತ ಇದನ್ನು ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ.   ಹೀಗಾಗಿ ಇನ್ನು ಮುಂದೆ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ರಾಜ್ಯ …

Read More »

ಮೂರಡಿಯ ದೇಹದ ನೂರಡಿ ಸಾಧನೆ

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವ ಗಾದೆಯನ್ನು ನಿಜ ಮಾಡಿ ತೋರಿಸಿದವರು ಆರತಿ ಡೋಗ್ರಾ. ದೇಹದ ಎತ್ತರ ಹೆಚ್ಚದಿದ್ದರೂ, ಮಾಡುವ ಕಾರ್ಯದ ಮೂಲಕ ಅತ್ಯಂತ ಎತ್ತರದ ಸ್ಥಾನಕ್ಕೇರಿ ಇಂದು ಸ್ಫೂರ್ತಿಯಾಗಿ ನಿಂತಿರುವ ಐಎಎಸ್‌ ಅಧಿಕಾರಿಯ ಜೀವನಗಾಥೆಯಿದು.   ಅದು ಉತ್ತರಾಖಂಡದ ಮಧ್ಯಮ ವರ್ಗದ ಕುಟುಂಬ. ತಂದೆ ರಾಜೇಂದ್ರ ಡೋಗ್ರಾ ಭಾರತೀಯ ಸೇನೆಯಲ್ಲಿ ಕರ್ನಲ್‌ ಆಗಿ ಸೇವೆ ಸಲ್ಲಿಸುತ್ತಿದ್ದರೆ, ತಾಯಿ ಕುಂಕುಮ ಡೋಗ್ರಾ ಶಾಲೆಯೊಂದರ ಮುಖ್ಯೋಪಾಧ್ಯಾಯರಾಗಿದ್ದರು. ಆ ಮನೆಯ ಏಕೈಕ ಮಗಳಾಗಿ …

Read More »

ಬಾ ದೋಸ್ತಾ ಸೈಕಲ್ ತುಳಿ:ಇಬ್ಬರು ಸವಾರರಿಗೆ ಒಂದೇ ಸೈಕಲ್ – ಆನಂದ್ ಮಹೀಂದ್ರಾ ಮೆಚ್ಚುಗೆ

ಉದ್ಯಮಿ ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟರ್‌ನಲ್ಲಿ ನಿಯಮಿತವಾಗಿ ಜನರಿಗೆ ಸ್ಪೂರ್ತಿದಾಯಕ ಪೋಸ್ಟ್‌ಗಳು ಮತ್ತು ವಿಡಿಯೊಗಳನ್ನು ಹಂಚಿಕೊಳ್ಳಲೇ ಇರುತ್ತಾರೆ. ಹೀಗಾಗಿ ಏನೋ ಅವರ ಟ್ವಿಟರ್ ಖಾತೆ 9 ಮಿಲಿಯನ್ ಅನುಯಾಯಿಗಳನ್ನು ಹೊಂದಿದೆ. ಇತ್ತೀಚೆಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷರು ಇಬ್ಬರು ದೇಸಿ ಹುಡುಗರು ಒಟ್ಟಿಗೆ ಬೈಸಿಕಲ್ ಸವಾರಿ ಮಾಡುವ ವಿಡಿಯೊವನ್ನು ತಮಾಷೆಯಾಗಿ ಟ್ವೀಟ್ ಮಾಡಿದ್ದಾರೆ. Even Harvard Business School would not have a better video to communicate …

Read More »

ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆ; 10 ಶ್ವಾನಗಳಿಗೆ ವಿಷವುಣಿಸಿ ಕೊಂದ ದುರುಳರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಮಾಯಕ ಘಟನೆ ನಡೆದಿದ್ದು, 10 ಶ್ವಾನಗಳಿಗೆ ವಿಷ ಕೊಟ್ಟು ಸಾಯಿಸಿದ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ನಡೆದಿದೆ. ರಾತ್ರಿ ವೇಳೆ ನಾಯಿಗಳು ಬೊಗಳುತ್ತಿವೆ ಎಂಬ ಕಾರಣಕ್ಕೆ ಅಪಾರ್ಟ್ ಮೆಂಟ್ ಬಳಿ ಬೀಡು ಬಿಟ್ಟಿದ್ದ 10 ಶ್ವಾನಗಳಿಗೆ ದುರುಳರು ವಿಷ ನೀಡಿ ಕೊಂದಿದ್ದಾರೆ. ಇನ್ನು ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಶ್ವಾನಗಳನ್ನು ಅನಿಮಲ್ ಅಸೋಸಿಯೇಷನ್ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ವಾನಗಳನ್ನು ಕೊಂದ ಕಟುಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …

Read More »

PSI ನೇಮಕಾತಿ ಅಕ್ರಮ; ಬ್ಲೂಟೂತ್ ಮೂಲಕ ಪರೀಕ್ಷಾರ್ಥಿಗಳಿಗೆ ಉತ್ತರ; ಅಕ್ರಮದ ಮತ್ತೊಂದು ವಿಡಿಯೋ ಸಾಕ್ಷ್ಯ ಬಟಾಬಯಲು

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ 545 ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸಾಕ್ಷ್ಯ ಬಟಾಬಯಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಖತರ್ ನಾಕ್ ಗ್ಯಾಂಗ್ ಲಾಡ್ಜ್ ನ ರೂಮ್ ನಲ್ಲಿ ಕುಳಿತು ಬ್ಲೂಟೂತ್ ಮೂಲಕ ಉತ್ತರ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.   ಆರೋಪಿಗಳು ಬೆಂಗಳೂರಿನ ಲಾಡ್ಜ್ ನಲ್ಲಿ ಕುಳಿತು ಪಿಎಸ್‌ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಜತೆಯಲ್ಲಿಟ್ಟುಕೊಂಡು ಪ್ರತಿಯೊಂದು ಪ್ರಶ್ನೆಗಳಿಗೂ ಉತ್ತರ ಹೇಳುತ್ತಿರುವ …

Read More »

ಮಕ್ಕಳಾಗದ ದಂಪತಿಗಳೇ ಈ ವಕೀಲೆ ಟಾರ್ಗೆಟ್ :ಈ ಕಿಲಾಡಿ ಲೇಡಿ ಮಾಡಿದ್ದೇನು ಗೊತ್ತಾ?

ಮಕ್ಕಳಾಗದ ದಂಪತಿಗಳನ್ನ ಟಾರ್ಗೆಟ್ ಮಾಡಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚಿಸುತ್ತಿದ್ದ ಭಾನುಮತಿಯನ್ನು ವಶಕ್ಕೆ ಪಡೆಯಲಾಗಿದೆ. ವೃತ್ತಿಯಲ್ಲಿ ವಕೀಲೆಯಾಗಿದ್ದ ಭಾನುಮತಿ, ಮಕ್ಕಳ ಕಳ್ಳತನ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕ ಹೊಂದಿದ್ದಳು. ಪೋಷಕರನ್ನ ಪುಸಲಾಯಿಸಿ, ಕದ್ದು ಮಕ್ಕಳನ್ನ ತಂದು ಇತರ ಆರೋಪಿಗಳು ಭಾನುಮತಿಗೆ ನೀಡುತ್ತಿದ್ದರು. ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚನೆ ಮಾಡುತ್ತಿದ್ದರು …

Read More »

ಪ್ರಿಯಕರನ ಜತೆ ಸೇರಿ ಪತಿಯ ಕೊಂದ ಪತ್ನಿ

ಚಿಂಚೋಳಿ: ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶ ವ್ಯಾಪ್ತಿಯ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಶವದ ರಹಸ್ಯ ಬಯಲಾಗಿದ್ದು, ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ತೆಲಂಗಾಣ ರಾಜ್ಯದ ಘನಪುರ ಹತ್ತಿರದ ಮಲ್ಕಿಮೇನ ತಾಂಡಾದ ರವಿ ಪಿರ್ಯಾ ಪತ್ಲಾವತ್‌ (29) ಕೊಲೆಯಾದ ವ್ಯಕ್ತಿ.   ಮೃತನ ಪತ್ನಿ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್‌ ಮಾನಯ್ಯ ತಲ್ಹಾರಿ ಮೊಗದಂಪುರ ಸೇರಿಕೊಂಡು ರವಿಯನ್ನು ದ್ವಿಚಕ್ರ ವಾಹನದಲ್ಲಿ ಕಾಡಿಗೆ ಕರೆದುಕೊಂಡು ಬಂದು …

Read More »

ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ

ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ ಇರಲಿದೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿ ಪೀಠಗಳಿಗೆ ಈ ಬೇಸಿಗೆ ರಜೆ ಅನ್ವಯವಾಗಲಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ವಿವಿಧ ದಿನಾಂಕಗಳಂದು ಏಳು ದಿನ ರಜಾ ಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಣೆ ಮಾಡಲಿದೆ.   ಬೇಸಿಗೆ ರಜೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮಮೂರ್ತಿಗಳ ಆದೇಶಾನುಸಾರ ಹೈಕೋರ್ಟ್‌ ರಿಜಿಸ್ಟ್ರಾರ್‌ ಕೆ.ಎಸ್‌. ಭರತ್‌ ಕುಮಾರ್‌ ಅಧಿಸೂಚನೆ ಹೊರಡಿಸಿದ್ದಾರೆ. ರಜಾ …

Read More »

ಆರಗ ಜ್ಞಾನೇಂದ್ರ ಗೃಹ ಸಚಿವ ಹುದ್ದೆಯಲ್ಲಿರಲು ನಾಲಾಯಕ್ :ಶಾಸಕ ಅಬ್ಬಯ್ಯ ಪ್ರಸಾದ್

ಮಾಹಿತಿ ಕೊರತೆಯಿರುವ ಆರಗ ಜ್ಞಾನೇಂದ್ರ ಹೋಮ್​​ ಮಿನಿಸ್ಟರ್ ಹುದ್ದೆಯಲ್ಲಿ ಇರಲು ನಾಲಾಯಕ್ , ಎಂದು ಹುಬ್ಬಳ್ಳಿ- ಧಾರವಾಡ ಪೂರ್ವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿ ಘಟನೆಯಲ್ಲಿ ಕಾಂಗ್ರೆಸ್ ಡಬಲ್ ಸ್ಯ್ಟಾಂಡ್ ಎಂದು ಆರಗ ಜ್ಞಾನೇಂದ್ರ ಆರೋಪ ಮಾಡಿದ್ದರು.   ಈ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಹೋಮ್ ಮಿನಿಸ್ಟರ್​​ಗೆ ಮಾಹಿತಿ ಕೊರತೆಯಿದೆ. ಗದ್ದಲ ಗಲಾಟೆಯಿಂದಲೇ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ತಂತ್ರ. ಎಸ್​​ಡಿಪಿಐ, ಪಿಎಫ್‌ಐ …

Read More »

ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರಿಗೆ ಸರ್ಕಾರದಿಂದ ಎಚ್ಚರಿಕೆ: ಮಾಹಿತಿ ಸಂಗ್ರಹಿಸಲು ಆದೇಶ

ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ದಿನಾಂಕ 20-04-2022ರಂದು ನಡೆದ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಪಂಗಡಗಳ ಕಲ್ಯಾಮ ಸಮಿತಿ ಸಭೆಯಲ್ಲಿ ಚರ್ಚೆಯಾಗಿರುತ್ತದೆ.   ಅಲ್ಲದೇ ಬೇಡ …

Read More »