ಪಿಎಸ್‍ಐ ನೇಮಕಾತಿಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನರುಚ್ಚರಿಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಇದನ್ನು ಈಗಾಗಲೇ ಇದನ್ನು ಸಿಐಡಿಗೆ ವಹಿಸಿದ್ದೇವೆ. ತನಿಖಾ ತಂಡದವರು ಕೆಲವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಪ್ಪಿತಸ್ಥರು ಯಾರೇ ಇರಲಿ ರಕ್ಷಣೆ ಮಾಡುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಿಂದೆ ನಡೆದಿರುವ ನೇಮಕಾತಿ ಹಾಗೂ ಕಳೆದ ಫೆಬ್ರವರಿಯಲ್ಲಿ …
Read More »ಸಿನಿಮೀಯ ಶೈಲಿಯಲ್ಲಿ ಹುಬ್ಬಳ್ಳಿ ಗಲಭೆಯ ಆರೋಪಿಗಳ ಬಂಧನ
ಹುಬ್ಬಳ್ಳಿ ಪೊಲೀಸರು ಇಬ್ಬರು ಗಲಭೆ ಆರೋಪಿಗಳನ್ನು ಬೆಂಗಳೂರಿನ ಕಾಟನ್ಪೇಟೆ ಹೊಟೆಲ್ನಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದರು. ಇವರ ಚಲನವಲನ ಕಂಡು ಹಿಂಬಾಲಿಸಿದ್ದ ಹುಬ್ಬಳ್ಳಿ ಪೊಲೀಸರು ಸ್ಥಳೀಯ ಪೊಲೀಸರೊಂದಿಗೆ ಸುತ್ತುವರೆದಿದ್ದರು. ಆರೋಪಿಗಳು ಹಿಂದಕ್ಕೆ ತಿರುಗಿದಾಗ ಹೆಗಲ ಮೇಲೆ ಕೈ ಹಾಕಿ ಬಿಗಿಯಾಗಿ ಹಿಡಿದುಕೊಂಡರು. ಹುಬ್ಬಳ್ಳಿಯಿಂದ ತಪ್ಪಿಸಿಕೊಂಡು ಹೊರಟಿದ್ದ ನಾಲ್ವರು ಹಾವೇರಿಯ ಬಂಕಾಪುರ ಬಸ್ಸ್ಟಾಪ್ನಲ್ಲಿ ಇಳಿದು, ಅಲ್ಲಿಂದ ಬೇರೆಡೆಗೆ ಪರಾರಿಯಾಗಿದ್ದರು. ಇನ್ನಿಬ್ಬರು ಬೆಂಗಳೂರಿನತ್ತ ಪ್ರಯಾಣ ಮಾಡಿದ್ದರು. ರೌಡಿಶೀಟರ್ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತುಫೇಲ್ …
Read More »ಕನ್ನಡಿಗರ ಮನೆ-ಮನಗಳಲ್ಲಿ ರಾಜ್ ಎಂದಿಗೂ ಅಮರ.
ಡಾ.ರಾಜ್ (Dr. Raj) , ಕನ್ನಡಿಗರ ಎದೆಬಡಿತದ ಸದ್ದು, ಕನ್ನಡಿಗರ ಉಸಿರು, ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಜ್ಯದ ಅಧಿಪತಿ. ರಾಜ್ ಕುಮಾರ್ (Rajkumar) ಅಂದ್ರೆ ಬರೀ ಹೆಸರಲ್ಲ, ಅದೊಂದು ಶಕ್ತಿ, ಅದು ಕನ್ನಡದ ಪ್ರತಿಧ್ವನಿ, ಕನ್ನಡಿಗರಿಗಾಗಿ, ಕನ್ನಡಿಗರಿಂದ, ಕನ್ನಡಕ್ಕಾಗಿ ಬಾಳಿ ಬದುಕಿದ ಮೇರುನಟ, ಹೆಮ್ಮೆಯ ಕನ್ನಡಿಗ, ಇಂದು ವರನಟ ಡಾ.ರಾಜಕುಮಾರ್ ಅವರ 93ನೇ ಹುಟ್ಟುಹಬ್ಬ (Dr Rajkumar Birthday) . ಕರುನಾಡಿಗೆ ಒಂದು ರೀತಿ ವಿಶೇಷ. ಸತತ ಎರಡು …
Read More »ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ
ಬಾಗಲಕೋಟೆ: ಪಿಎಂ ಕಿಸಾನ್ ಫಲಾನುಭವಿಗಳಿಗೆ ಕಿಸಾನ್ ಕ್ರೇಡಿಟ್ ಕಾರ್ಡ ವಿತರಣೆಗೆ ಏಪ್ರೀಲ್ 24 ರಿಂದ ಮೇ 1 ವರೆಗೆ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವ ಅವರು ನಬಾರ್ಡ ವತಿಯಿಂದ ಕಿಸಾನ್ ಭಾಗಿದಾರಿ ಪ್ರಾಥಮಿಕ್ತಾ ಹಮಾರಿ ಅಭಿಯಾನದ ಅಂಗವಾಗಿ ಕಿಸಾನ್ ಕ್ರೆಡಿಟ್ ಕಾರ್ಡ ವಿತರಣೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಆಂದೋಲದಲ್ಲಿ ಅರ್ಹ ಫಲಾನುಭವಿಗಳಿಗೆ ಇದರ ಪ್ರಯೋಜನವಾಗಲಿದೆ. ಜಿಲ್ಲೆಯಲ್ಲಿ ಒಟ್ಟು 220141 …
Read More »ಮಳಲಿ: ಇದು ತೇರುಗಳ ಊರು
ಹುಬ್ಬಳ್ಳಿ: ದೇವರ ಮೂರ್ತಿಗಳ ಆಕರ್ಷಕ ಕೆತ್ತನೆ, ತೇರುಗಳ ಮೇಲೆ ಬದುಕಿನ ಮೌಲ್ಯ ಸಾರುವ ಸಾಲುಗಳು, ಸುಂದರವಾದ ಕಲಾಕೃತಿ ಹಾಗೂ ದಿನಪೂರ್ತಿ ಕೆಲಸ. ಕುಂದಗೋಳ ತಾಲ್ಲೂಕಿನ ಮಳಲಿ ಗ್ರಾಮದ ಮುರಳೀಧರ ಮಾನಪ್ಪ ಬಡಿಗೇರ ಅವರ ಶೆಡ್‌ನಲ್ಲಿ ನಿತ್ಯ ಕಂಡು ಬರುವ ದೃಶ್ಯಗಳಿವು. ಮುರಳೀಧರ ಅವರು 1991ರಿಂದ ತೇರುಗಳನ್ನು ಕೆತ್ತನೆ ಮಾಡುವ, ಅವುಗಳಿಗೆ ಚೆಂದದ ರೂಪ ಕೊಟ್ಟು ಆಕರ್ಷಕವಾಗಿ ಕಾಣುವಂತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ 100ಕ್ಕೂ ಹೆಚ್ಚು ತೇರುಗಳನ್ನು ರಾಜ್ಯದ ವಿವಿಧ …
Read More »ಗೋಕಾಕ ಸಿಪಿಐ, ಪಿಎಸ್ಐ ಕಿರುಕುಳಕ್ಕೆ ಬೇಸತ್ತ ಬಬಲಿ ಕುಟುಂಬ…!
ಬೆಳಗಾವಿ :ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಮತ್ತು ಪಿಎಸ್ ಐ ಪೊಲೀಸ್ ಅಧಿಕಾರಿಗಳಿಂದ ಆಗಿರುವ ಅನ್ಯಾಯಕ್ಕೆ ನಮಗೆ ನ್ಯಾಯ ದೊರಕಿಸಿಕೊಡುವಂತೆ ಬಬಲಿ ಕುಟುಂಬಸ್ಥರು ಶನಿವಾರ ಜಿಲ್ಲಾಧಿಕಾರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು ತೋಡಿಕೊಂಡರು. ಕಳೆದ ಜೂನ್ 2021 ರಂದು ಗೋಕಾಕ ತಾಲೂಕಿನ ಮಹಾಂತೇಶ ನಗರ ಬಡಾವಣೆಯ ಮಾಲದಿನ್ನಿ ಕ್ರಾಸ್ ಬಳಿ ಸಂಜೆ 7ಕ್ಕೆ ಮಂಜು ಶಂಕರ ಮುರುಕಿಬಾವಿ ಎಂಬ ವ್ಯಕ್ತಿಯ ಅನುಮಾನಸ್ಪಾದವಾಗಿ ಕೊಲೆಯಾಗಿದ್ದಾನೆ. ಈತನಿಗೂ ನಮ್ಮ ಮಕ್ಕಳಿಗೆ ಯಾವುದೇ …
Read More »ಅರುಂಧತಿ ನಕ್ಷತ್ರ ಬದಲು ಪುನೀತ್ ಫೋಟೋ ನೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಚಿಕ್ಕೋಡಿ(ಬೆಳಗಾವಿ): ರಾಜರತ್ನ ಪುನೀತ್ ಸಾವನ್ನಪ್ಪಿ ಕೆಲ ತಿಂಗಳುಗಳು ಕಳೆದರೂ ಅಪ್ಪು ಮೇಲಿನ ಅಭಿಮಾನ ಮಾತ್ರ ಕಡಿಮೆಯಾಗಿಲ್ಲ. ಪುನೀತ್ ರಾಜ್‍ಕುಮಾರ್ ಅವರ ಅಪ್ಪಟ್ಟ ಅಭಿಮಾನಿಯೋರ್ವ ತನ್ನ ವಿವಾಹದ ದಿನಂದಂದು ರಾಜರತ್ನನಿಗೆ ವಿಭಿನ್ನವಾಗಿ ನಮನ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ಆನಂದ ಪಟ್ಟಣ ಹಾಗೂ ಜ್ಯೋತಿ ಎನ್ನುವ ಯುವ ಜೋಡಿ ಪುನೀತ್ ಅವರ ನೆನಪಿನಲ್ಲಿ ವಿಶೇಷವಾಗಿ ವಿವಾಹವಾಗಿದ್ದಾರೆ. ರಾಯಬಾಗ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆದ ವಿವಾಹ ಸಮಾರಂಭ ಸಂಪೂರ್ಣವಾಗಿ ಪುನೀತ್ ಮಯವಾಗಿತ್ತು. ಮದುವೆ …
Read More »ಡಾ.ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ಭರ್ಜರಿ ಸಿದ್ಧತೆ
ನಾಳೆ (ಏ.24) ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬ. ಈ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಲು ನಾನಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ ಸ್ಯಾಂಡಲ್ ವುಡ್. ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅಲ್ಲದೇ, ಕರ್ನಾಟಕ ಸರಕಾರ 2017ನೇ ಸಾಲಿ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ …
Read More »ಸಿಐಡಿ ತನಿಖೆ ಪೂರ್ಣವಾದ್ಮೇಲೆ 402 ಪಿಎಸ್‍ಐ ಹುದ್ದೆಗಳ ಪರೀಕ್ಷೆ
ಬೆಂಗಳೂರು: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಪೂರ್ಣಗೊಂಡ ನಂತರ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಪರೀಕ್ಷೆ ಮಾಡಲಾಗುವುದು ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದರು ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಐಡಿಯಿಂದ ಪ್ರಸ್ತುತ ತನಿಖೆ ಪೂರ್ಣಗೊಂಡ ತಕ್ಷಣ 402 ಪಿಎಸ್‌ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರನ್ನು ಪ್ರಸ್ತುತ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ತಿಳಿಸಿದ್ದಾರೆ. ಖಾಲಿಯಿರುವ 402 ಪೊಲೀಸ್ ಸಬ್ …
Read More »“ಸಿದ್ದರಾಮಯ್ಯನವರು ಈ ರಾಜ್ಯದ ಮಾಸ್ ಲೀಡರ್, ಅವರು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆಲವನ್ನು ಕಾಣುತ್ತಾರೆ.
ಚುನಾವಣಾ ವರ್ಷಕ್ಕೂ ಮುನ್ನವೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ/ಚರ್ಚೆ ನಡೆಯುತ್ತಲೇ ಇತ್ತು. ಕನಿಷ್ಠ ನಾಲ್ಕರಿಂದ ಐದು ಕ್ಷೇತ್ರದ ಹೆಸರು ಮುನ್ನಲೆಗೆ ಬಂದಿತ್ತು. ಇದಕ್ಕೆ ಪೂರಕ ಎನ್ನುವಂತೆ ಎಲ್ಲೂ ಈ ಸುದ್ದಿಗಳಿಗೆ ಖಡಾಖಂಡಿತ ಬ್ರೇಕ್ ಹಾಕುವ ಕೆಲಸವನ್ನು ಸಿದ್ದರಾಮಯ್ಯನವರೂ ಮಾಡಿರಲಿಲ್ಲ. ಚಾಮರಾಜಪೇಟೆಯಿಂದ ಸಿದ್ದರಾಮಯ್ಯನವರು ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಾ ಸಾಗಿತು. ಇದರ ನಡುವೆ, ಹಾಲೀ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡನವರು ಸಿದ್ದರಾಮಯ್ಯನವರಿಗೆ …
Read More »