Breaking News

ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನ

ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಹೇಳಿದ್ದಾರೆ.   ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಸಾರ್ವಜನಿಕರಿಗೆ ಸ್ವಯಂ ಸೇವೆಯ(Self service) ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿದೆ. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ನಾಗರಿಕರು 1) 11ಇ ಸ್ಕೆಚ್, 2) …

Read More »

ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನ:ಪ್ರಹ್ಲಾದ್ ಜೋಶಿ

ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತಿತ್ತು. ನನಗೆ ಈ ಕುರಿತಂತೆ ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿಯೂ ಕೆಜೆ ಹಳ್ಳಿ ಡಿಜೆ ಹಳ್ಳಿ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಗಲಾಟೆಗೆ ಪ್ಲ್ಯಾನ್ ನನಗೆ ಪೊಲೀಸರು ಈ ಕುರಿತಂತೆ ಮಾಹಿತಿಯನ್ನು ನೀಡಿದ್ದಾರೆ ಎಂದ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ತನ್ನ ತುಷ್ಠೀಕರಣ ಪಾಲಿಸಿಯನ್ನು ಮೊದಲು ಬಿಡಲಿ ಗಲಭೆಯಿಂದ ಲಾಭ …

Read More »

ಶಿಕ್ಷಕನ ಮೇಲೆ ಹಲ್ಲೆಗೆ ಯತ್ನ: ಮೂವರು ವಿದ್ಯಾರ್ಥಿಗಳು ಅಮಾನತು!

ತಮಿಳುನಾಡು: ಶಾಲೆಯ ಮೂವರು ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ನಿಂದಿಸಿದ್ದಲ್ಲದೇ, ಹಲ್ಲೆಗೆ ಯತ್ನಿಸಿದ್ದು, ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವ ಘಟನೆ ತಮಿಳುನಾಡಿನ ಮದನೂರ್ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ.   ಏನಿದು ಘಟನೆ? ಸಸ್ಯಶಾಸ್ತ್ರದ ಶಿಕ್ಷಕ ಸಂಜಯ್ ಗಾಂಧಿ ಅವರು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ತಮ್ಮ ದಾಖಲೆ ಪುಸ್ತಕಗಳನ್ನು ಸಲ್ಲಿಸುವಂತೆ ಹೇಳಿದರು. ಈ ವೇಳೆ ತರಗತಿಯ ವಿದ್ಯಾರ್ಥಿಯಾದ ಮಾರಿ ಎಂದು ಗುರುತಿಸಲಾದ ಹುಡುಗ …

Read More »

ತಹಶೀಲ್ದಾರ್ ಮನವೊಲಿಕೆಗೂ ಬಗ್ಗದ ಹಿಜಾಬ್ ಹೋರಾಟಗಾರ್ತಿಯರು: ಪಿಯು ಪರೀಕ್ಷೆ ಬರೆಯದೇ

ಉಡುಪಿ: ಇಂದಿನಿಂದ ಆರಂಭಗೊಂಡಿರುವಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ, ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯೋದಕ್ಕೆ ಅವಕಾಶ ನೀಡುವಂತೆ ಹಿಜಾಬ್ ಹೋರಾಟಗಾರ್ತಿಯರಾದಂತ ಆಲಿಯಾ ಅಸಾದಿ ಹಾಗೂ ರೇಷ್ಮಾ ಪಟ್ಟು ಹಿಡಿದಿದ್ದರು. ಅವರನ್ನು ತಹಶೀಲ್ದಾರ್ ಕೋರ್ಟ್ ಆದೇಶದಂತೆ ಹಿಜಾಬ್ ತೆಗೆದು ಪರೀಕ್ಷೆ ಬರೆಯುವಂತೆ ಮನವೊಲಿಕೆ ಮಾಡಿದ್ರು. ಆದ್ರೇ ಅದಕ್ಕೂ ಬಗ್ಗದಂತ ಹಿಜಾಬ್ ಹೋರಾಟಗಾರ್ತಿಯರು, ಪರೀಕ್ಷೆಯನ್ನೇ ಬರೆಯದೇ ಮನೆಗೆ ವಾಪಾಸ್ ಆಗಿದ್ದಾರೆ.

Read More »

ನಿನ್ನೆ ವಸಿಂ ಪಠಾಣ್ ನನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ, ಗಲಭೆ ಮಾಡಿಸಿದ್ದು ನಾನೇ ಎಂದು ಹೇಳಿದ್ದಾನೆಂದ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ವಸಿಂ ಪಠಾಣ್, ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ಗಲಭೆ ಮಾಡಿಸಿದ್ದು ನಾನೇ ಎಂದು ಹೇಳಿದ್ದಾನೆಂದು ತಿಳಿದುಬಂದಿದೆ ನಿನ್ನೆ ವಸಿಂ ಪಠಾಣ್ ನನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ. ಖಾಕಿ ಡ್ರಿಲ್ ಗೆ ಸತ್ಯ ಬಾಯ್ಬಿಟ್ಟ ವಸಿಂ ಪಠಾಣ್, ತಾನೇ ವಾಟ್ಸಪ್ ಗ್ರೂಪ್ ರಚಿಸಿದ್ದಾಗಿ ಹಾಗೂ ಪೊಲೀಸರು ಬಗ್ಗದೇ ಹೋದರೆ ಪ್ರತಿಭಟನೆ ಮಾಡೋಣ ಎಂದು ಹೇಳಿದ್ದಾಗಿ ತಿಳಿಸಿದ್ದಾನೆ. …

Read More »

ಬಗೆದಷ್ಟು ಹೊರ ಬರ್ತಿದೆ PSI ಪರೀಕ್ಷಾ ಅಕ್ರಮ: ಮುನ್ನಾಭಾಯಿ MBBS ಸ್ಟೈಲ್​ನಲ್ಲಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು

ಕಲಬುರಗಿ: ರಾಜ್ಯದಲ್ಲಿ 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಪಿಎಸ್​ಐ ಪರೀಕ್ಷೆಯ ಅಕ್ರಮಗಳು ಬಗೆದಷ್ಟು ಹೊರ ಬರುತ್ತಿವೆ. ಮತ್ತೊಂದು ರೀತಿಯಲ್ಲಿ ಅಕ್ರಮವಾಗಿ ಪರೀಕ್ಷೆ ಬರೆದಿರುವ ಗ್ಯಾಂಗ್ ಪತ್ತೆ ಸಿಐಡಿ ತನಿಖೆಯಿಂದ ಬಯಲಾಗಿದೆ. ಮುನ್ನಾಭಾಯಿ ಎಂಬಿಬಿಎಸ್ ಸಿನಿಮಾದ ಸ್ಟೈಲ್​ನಲ್ಲಿ ಎಲೆಕ್ಟ್ರಾನಿಕ್ ಡಿವೈಸ್​ ಬಳಸಿ ಅನೇಕ ಅಭ್ಯರ್ಥಿಗಳು ಪರೀಕ್ಷೆ ಬರೆದಿರುವ ಸಂಗತಿ ಬಯಲಾಗಿದೆ. ನಿನ್ನೆ (ಏ.21) ಬಂಧನವಾಗಿರುವ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ …

Read More »

ಸಿದ್ದರಾಮಯ್ಯ ನನ್ನನ್ನು ಜೈಲಿಗೆ ಕಳುಹಿಸಲು ಯತ್ನಿಸಿದ್ದರು: ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ತೀವ್ರಗೊಂಡಿದ್ದು, ಅಹಿಂದ ನಾಯಕರು ನನ್ನನ್ನು ಜೈಲಿಗೆ ಕಳುಹಿಸಿಲು ಪಿತೂರಿ ನಡೆಸಿದ್ದರು ಎಂದು ಗುರುವಾರ ಆರೋಪಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುರಿದು ಬೀಳಲು ಸಿದ್ದರಾಮಯ್ಯ ಅವರೇ ಕಾರಣ’ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಈಶ್ವರಪ್ಪ ಬದಲಿಗೆ ಕುಮಾರಸ್ವಾಮಿಯವರನ್ನು ಬಂಧಿಸಬೇಕೆಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಕಿಡಿಕಾರಿದ …

Read More »

ಕಾಡುತ್ತಿದೆ ಕಲ್ಲಿದ್ದಲು ಕೊರತೆ, ವಿದ್ಯುತ್ ಅಭಾವ ಭೀತಿ; 81 ಸ್ಥಾವರಗಳಲ್ಲಿ ನಿಶ್ಚಿತ ದಾಸ್ತಾನಿಲ್ಲ

ನವದೆಹಲಿ: ದೇಶಾದ್ಯಂತ ಬೇಸಿಗೆ ತಾಪ ಏರುತ್ತಿರುವ ಬೆನ್ನಲ್ಲೇ ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದೆ. ಈ ನಡುವೆ, ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಕೊರತೆ ಗೋಚರಿಸಿದೆ. ಹೀಗಾಗಿ ಕೆಲವು ರಾಜ್ಯಗಳಲ್ಲಿ ಪವರ್ ಕಟ್ ಶುರುವಾಗಿದೆ. ಸೆಂಟ್ರಲ್ ಇಲೆಕ್ಟ್ರಿಸಿಟಿ ಅಥಾರಿಟಿ ಆಫ್ ಇಂಡಿಯಾದ ಇತ್ತೀಚಿನ ಕಲ್ಲಿದ್ದಲು ದೈನಿಕ ವರದಿ ಪ್ರಕಾರ, ದೇಶದ 150 ಉಷ್ಣ ವಿದ್ಯುತ್ ಸ್ಥಾವರಗಳ ಪೈಕಿ ಸ್ಥಳೀಯ ಕಲ್ಲಿದ್ದಲು ಬಳಸುವ 81 ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಗಂಭೀರ ಸ್ಥಿತಿಯಲ್ಲಿದೆ. ಇದೇ ರೀತಿ, …

Read More »

ಜೆಡಿಎಸ್ ತ್ಯಜಿಸುವರೇ ಶಿವಲಿಂಗೇಗೌಡ?

ಹಾಸನ: ಸತತ ಮೂರು ಬಾರಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿರುವ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಜೆಡಿಎಸ್‌ ಪಕ್ಷ ತೊರೆಯುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಹಲವು ತಿಂಗಳಿಂದ ಗೌಡರು ಕಾಂಗ್ರೆಸ್ ಸೇರುತ್ತಾರೆ ಎಂಬ ಗುಸುಗುಸು ಹರಿದಾಡುತ್ತಿತ್ತು. ಅನೇಕ ಬಾರಿ ಸಿದ್ದರಾಮಯ್ಯ ಅವರ ಜೊತೆ ಕಾಣಿಸಿಕೊಂಡು, ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಿ ಹೊಗಳುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ನಾಯಕರೊಂದಿಗೆ ಅಂತರ ಕಾಯ್ದುಕೊಂಡಿದ್ದ ಶಿವಲಿಂಗೇಗೌಡರು, ಜಿಲ್ಲೆಯಲ್ಲಿ ಜಲಧಾರೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೂ ಗೈರಾಗಿದ್ದರು. …

Read More »

ಸತತ 7 ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲು ಉಳಿದಿರೋದು ಇದೊಂದೇ ಮಾರ್ಗ!

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂಬೈ ಇಂಡಿಯನ್ಸ್ ತಂಡದ ಪಾಲಿಗೆ ಅತಿ ಕೆಟ್ಟ ಆವೃತ್ತಿಯಾಗಿ ಪರಿಣಮಿಸಿದೆ. ಹೌದು, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲನೇ ಪಂದ್ಯವನ್ನಾಡಿ ಸೋಲುವುದರ ಮೂಲಕ ತನ್ನ ಪಯಣವನ್ನು ಆರಂಭಿಸಿದ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿದ್ದು, ಎಲ್ಲಾ ಪಂದ್ಯಗಳಲ್ಲಿಯೂ ಸೋತು ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ.   ಈ ಹಿಂದಿನ …

Read More »