Breaking News

545 PSI ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಕೇಸ್​: ಬಿಜೆಪಿ ನಾಯಕಿಯ ಮನೆಗೆ ಸಿಐಡಿ ತಂಡ ಭೇಟಿ

ಕಲಬುರಗಿ: ರಾಜ್ಯದಲ್ಲಿ 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ಸಂಬಂಧ ಕಲಬುರಗಿಯ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಮನೆಗೆ ಸಿಐಡಿ ತಂಡ ಭೇಟಿ ನೀಡಿದೆ. ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯಾ ಹಾಗರಗಿ ಅವರ ಮನೆಯನ್ನು ಶೋಧಿಸಲು ಸಿಐಡಿ ಡಿವೈಎಸ್ಪಿ ಶಂಕರಗೌಡ ನೇತೃತ್ವದ ತಂಡ ಆಗಮಿಸಿದೆ.   ದಿವ್ಯಾ ಅವರಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು …

Read More »

ಬರೀ ರೌಡಿಸಂ ತೋರಿಸಿ ಸಮಾಜವನ್ನು ಹಾಳು ಮಾಡುತ್ತಿದ್ದೀರಾ?: KGF-2 ಬಗ್ಗೆ ಭಾಸ್ಕರ್​ ರಾವ್​ ಅಸಮಾಧಾನ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಾಪ್ಟರ್​-2 ಸಿನಿಮಾ ಬಾಕ್ಸ್​ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ಆದರೆ, ಕೆಜಿಎಫ್​ ಚಾಪ್ಟರ್​ 2 ಚಿತ್ರದ ಬಗ್ಗೆ ಮಾಜಿ ಪೊಲೀಸ್​ ಆಯುಕ್ತ ಹಾಗೂ ಆಮ್​ ಆದ್ಮಿ ಪಕ್ಷದ ನಾಯಕ ಭಾಸ್ಕರ್​ ರಾವ್​ ಅಸಮಾಧಾನವನ್ನು ಹೊರಹಾಕಿದ್ದಾರೆ.   ಬೆಂಗಳೂರಿನ ಪಾರ್ಟಿ ಕಚೇರಿಯಲ್ಲಿ ಮಾತನಾಡಿರುವ ಭಾಸ್ಕರ್​ ರಾವ್​, ನಿಮ್ಮ ಸಿನಿಮಾ ಮತ್ತು ಹೀರೋ ಪ್ರಖ್ಯಾತಿ ಇರಬಹುದು. ಆದರೆ, ನಾನು ಈ ಸಿನಿಮಾವನ್ನು ಒಪ್ಪುವುದಿಲ್ಲ. ಸಿನಿಮಾದಲ್ಲಿ ಏನು ತೋರಿಸ್ತೀರಾ ನೀವು? ಬರೀ …

Read More »

ಇನ್ಮುಂದೆ ರಾಜ್ಯದ ‘ಗ್ರಾಮ ಪಂಚಾಯತಿ’ಯಲ್ಲೇ ಸಿಗುತ್ತದೆ ‘ಮ್ಯಾರೇಜ್ ಸರ್ಟಿಫಿಕೇಟ್’

ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್‌ ಸರ್ಟಿಫಿಕೇಟ್‌ ಸಿಗಲಿದೆ ಎಂದಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನ ನೇಮಿಸಿದ್ದು, ಮದುವೆ ನೋಂದಣಿ‌ ಅಧಿಕಾರವನ್ನ ನೀಡಲಾಗಿದೆ. ಹೀಗಾಗಿ ಇನ್ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಮದುವೆ ಸರ್ಟಿಫಿಕೇಟ್‌ ಸಿಗಲಿದೆ ಎಂದಿದೆ.

Read More »

ಗದಗನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವು

ಚುನಾವಣೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಕಾಸ್ತ್ರಗಳಿಂದ ಗಲಾಟೆ ನಡೆದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಗದಗದಲ್ಲಿ ನಡೆದಿದೆ. ಚುನಾವಣೆಯ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಘಟನೆಯಲ್ಲಿ ಮೂವರಿಗೆ ಚಾಕು ಇರಿಯಲಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿತ್ತು. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗದಗನ ಬೆಟಗೇರಿಯ ಮಂಜುನಾಥ ನಗರದಲ್ಲಿಯೇ ಈ ಘಟನೆ ನಡೆದಿದೆ. ಗಜೇಂದ್ರ ಸಿಂಗ್ ಸೊಲ್ಲಾಪುರ ಎಂಬುವವರ ಸ್ಥಿತಿ ಚಿಂತಾಜನಕವಾಗಿತ್ತು. ಶಿವರಾಜ್ ಪೂಜಾರ, …

Read More »

ಹುಬ್ಬಳ್ಳಿ; ಪೊಲೀಸರ ಮೇಲೆ ಕಲ್ಲು ತೂರಾಟ, 144 ಸೆಕ್ಷನ್ ಜಾರಿ

ಹುಬ್ಬಳ್ಳಿ, ಏಪ್ರಿಲ್ 17; ಸಾಮಾಜಿಕ ಜಾಲತಾಣದಲ್ಲಿ ಯುವಕ ಹಾಕಿದ ಪ್ರಚೋದನಾಕಾರಿ ಪೋಸ್ಟರ್‌ನಿಂದಾಗಿಹುಬ್ಬಳ್ಳಿಯಲ್ಲಿ ವಿವಾದ ಉಂಟಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರವನ್ನು ಎಡಿಟ್ ಮಾಡಿ ಯುವಕನೊಬ್ಬ ಸ್ಟೇಟಸ್ ಹಾಕಿಕೊಂಡಿದ್ದ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಚಿತ್ರ ವೈರಲ್ ಆಗುತ್ತಿದ್ದಂತೆ ಒಂದು ಕೋಮಿನವರು ಕಲ್ಲು ತೂರಾಟ ನಡೆಸಿದರು.   ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸಮೀಪದಲ್ಲೇ ಕಲ್ಲು ತೂರಾಟ …

Read More »

ಪಾಯಿಂಟ್ ಟೇಬಲ್ ಅನ್ನೇ ತಲೆಕೆಳಗಾಗಿಸಿದ ಆರ್​ಸಿಬಿ ಗೆಲುವು

IPL 2022 Orange Cap and Purple Cap: ಐಪಿಎಲ್ 2022 ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದ್ದ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮೂನೇ ಸ್ಥಾನಕ್ಕೆ ಜಿಗಿದಿದೆ.ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ …

Read More »

ಹುಬ್ಬಳ್ಳಿ ಗಲಭೆ : ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಬಂಧಿತರ ಸಂಬಂಧಿಕರು!

ಹುಬ್ಬಳ್ಳಿ (ಧಾರವಾಡ): ಹುಬ್ಬಳ್ಳಿಯಲ್ಲಿ ಧರ್ಮದ ವಿಚಾರವಾಗಿ ರಾತ್ರೋರಾತ್ರಿ ಅಶಾಂತಿ ಸೃಷ್ಟಿಯಾಗಿದೆ. ಗಲಾಟೆಗೆ ಕಾರಣರಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಅವರ ಸಂಬಂಧಿಕರು ಠಾಣೆಯ ಎದುರು ಹೈಡ್ರಾಮಾ ನಡೆಸಿದ್ದಾರೆ. ಧಾರ್ಮಿಕ ವಿಷಯಕ್ಕೆ ಧಕ್ಕೆ ಉಂಟಾಗುವ ಪೋಸ್ಟ್ ಮಾಡಿದ್ದ ಯುವಕನನ್ನು, ಪೊಲೀಸ್​ ಠಾಣೆ ಆವರಣದಲ್ಲಿ ಕಲ್ಲು ತೂರಾಟ ನಡೆಸಿ ಗಲಾಟೆ ಮಾಡಿದವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧಿತರ ಸಂಬಂಧಿಕರು ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ಸಂಬಂಧಿಕರನ್ನು ಕೈ ಬಿಡುವಂತೆ ಒತ್ತಾಯಿಸುತ್ತಿದ್ದಾರೆ. ಪೊಲೀಸರು ಹಾಗೂ ಬಂಧಿತರ …

Read More »

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ATM ಕಾರ್ಡ್ ಬಳಸದೆ ನಗದು ಹಿಂಪಡೆಯಬಹುದು!

ನವದೆಹಲಿ: ಹಣಕಾಸು ವಂಚನೆಯನ್ನು ಎದುರಿಸುವ ಪ್ರಯತ್ನವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಈ ತಿಂಗಳ ಆರಂಭದಲ್ಲಿ ಎಟಿಎಂ ನೆಟ್ವರ್ಕ್ಗಳಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಮೂಲಕ ಪರಸ್ಪರ ಕಾರ್ಯನಿರ್ವಹಿಸುವ ಕಾರ್ಡ್ರಹಿತ ಹಿಂಪಡೆಯುವ ಆಯ್ಕೆಯನ್ನು ಶಿಫಾರಸು ಮಾಡಿದೆ. ‘ನಗದು ಹಿಂಪಡೆಯುವ ವಹಿವಾಟುಗಳನ್ನು ಪ್ರಾರಂಭಿಸಲು ಕಾರ್ಡ್‌ನ ಅಗತ್ಯವಿಲ್ಲದಿರುವುದು ಸ್ಕಿಮ್ಮಿಂಗ್, ಕಾರ್ಡ್ ಕ್ಲೋನಿಂಗ್, ಡಿವೈಸ್ ಟ್ಯಾಂಪರಿಂಗ್ ಇತ್ಯಾದಿಗಳಂತಹ ವಂಚನೆಗಳನ್ನು ಒಳಗೊಂಡಿರುವಲ್ಲಿ ಸಹಾಯ ಮಾಡುತ್ತದೆ. ಎಲ್ಲಾ ಬ್ಯಾಂಕ್‌ಗಳು ಮತ್ತು ಎಲ್ಲಾ ಎಟಿಎಂ ನೆಟ್‌ವರ್ಕ್‌ಗಳು/ಆಪರೇಟರ್‌ಗಳಾದ್ಯಂತ ಕಾರ್ಡ್-ರಹಿತ ನಗದು …

Read More »

”ನಿಮ್ಮ ಹೀರೋ ಪಾಪ್ಯುಲರ್ ಆಗಿರಬಹುದು, ಆದ್ರೆ ನಾನು ಒಪ್ಪಲ್ಲ”: ಭಾಸ್ಕರ್‌ ರಾವ್ ‘ಕೆಜಿಎಫ್ 2’ ಸಿನಿಮಾದ ಬಗ್ಗೆ ಅಸಮಾಧಾನ

ಕೆಜಿಎಫ್ 2′ ಸಿನಿಮಾ ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಸಿನಿಮಾ ನೋಡಿದವರೆಲ್ಲ ಅದ್ಭುತ ಎಂದಿದ್ದಾರೆ. ಅಭಿಮಾನಿಗಳು ಮಾತ್ರವೇ ಅಲ್ಲದೆ, ಚಿತ್ರರಂಗದ ಗಣ್ಯರು, ಸಿನಿಮಾ ವಿಧ್ಯಾರ್ಥಿಗಳು ಕೆಲವು ರಾಜಕಾರಣಿಗಳು ಸಹ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಆದರೆ ಬೆಂಗಳೂರಿನ ಮಾಜಿ ಕಮೀಷನರ್ ಭಾಸ್ಕರ್‌ ರಾವ್ ‘ಕೆಜಿಎಫ್ 2’ ಸಿನಿಮಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿರುವ ಭಾಸ್ಕರ್ ರಾವ್, ‘ಕೆಜಿಎಫ್ 2’ ಸೇರಿದಂತೆ ರೌಡಿಸಂ ಸಿನಿಮಾಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಜಿಎಫ್ …

Read More »

ಕಣ್ಣೀರಿಡುತ್ತಲೇ ಕುಮಾರಸ್ವಾಮಿ, ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಪದಗ್ರಹಣ

ಬೆಂಗಳೂರು: ನಗರದ ಜೆಡಿಎಸ್ ಕಚೇರಿಯಲ್ಲಿ ಇಂದು ಪಕ್ಷಕ್ಕೆ ಸೇರಿದಂತ ಮಾಜಿ ಸಚಿವ ಸಿಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರವನ್ನು ಹೆಚ್ ಕೆ ಕುಮಾರಸ್ವಾಮಿ ಹಸ್ತಾಂತರಿಸಿದರು. ಈ ವೇಳೆ ಮಾತನಾಡೋದಕ್ಕೆ ಆರಂಭಿಸಿದ ಅವರು, ಕಾರ್ಯಕ್ರಮದಲ್ಲಿ ಗಳಗಳ ಎಂದು ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು. ಇಂದು ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿದ ಬಳಿಕ, ಅಳುತ್ತಲೇ ಮಾತನಾಡಿದಂತ ಹೆಚ್ ಕೆ …

Read More »