Breaking News

ಮೆಟ್ರೋದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಹುದ್ದೆ ನಿಮ್ಮದಾಗಿಸಿಕೊಳ್ಳಬಹುದು.   ಆಸಕ್ತ ಅಭ್ಯರ್ಥಿಗಳು ಮೇ 11ರ ಮೊದಲು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಹಾಕಬಹುದಾಗಿದೆ. ಬೆಂಗಳೂರಿನಲ್ಲಿ ಖಾಲಿ ಇರುವ 6 ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ …

Read More »

ಸುಮ್ಮನೆ ಆರೋಪ ಮಾಡಿದ್ರೆ ಕಾನೂನು ಕ್ರಮ :ಸಚಿವ ಸುಧಾಕರ್ ವಾರ್ನಿಂಗ್

ಸುಖಾ ಸುಮ್ಮನೆ ಆರೋಪ ಮಾಡುತ್ತಿರುವ ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕೆಂಪಣ್ಣಗೆ ವಾರ್ನಿಂಗ್ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಅವರು ದಾಖಲೆ ಇಲ್ಲದೆ ಸರ್ಕಾರದ ವಿರುದ್ಧ ಆರೋಪ ಮಾಡಬಾರದು.   ಇಂಥವರನ್ನು ಇಟ್ಟುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಸುಳ್ಳು ಆರೋಪ ಮಾಡುವವರಿಗೆ ನಾಚಿಕೆ ಅಗಬೇಕು. ಎಲ್ಲಾ ಶಾಸಕರ ಮೇಲೂ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ …

Read More »

ಎಸ್‌ಎಸ್‌ಎಲ್​ಸಿ ಪರೀಕ್ಷೆ ಪತ್ರಿಕೆ ಮೌಲ್ಯಮಾಪನ ಆರಂಭ: ಫಲಿತಾಂಶ ಪ್ರಕಟ ಯಾವಾಗ ಗೊತ್ತಾ?

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಸುಸೂತ್ರವಾಗಿ ನಡೆದಿದೆ. ಪರೀಕ್ಷಾ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಿಂದ ಆರಂಭವಾಗಲಿದೆ. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿನ, 234 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನಕ್ಕಾಗಿ 60,000 ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ. ಇತ್ತ ಎಸ್‌ಎಸ್‌ಎಲ್​ಸಿ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವ ಮೌಲ್ಯಮಾಪಕರು, ಸಿಬ್ಬಂದಿಯ ಸಂಭಾವನೆ …

Read More »

ನಾನು ಇಲ್ಲಿ ಮುಖ ಅಷ್ಟೇ; ಕೆಜಿಎಫ್-2 ಬಗ್ಗೆ ಯಶ್ ಮಾತು

ಬೆಂಗಳೂರು: ‘ಒಬ್ಬ ಮನುಷ್ಯ ಆಸೆಪಟ್ಟು ಕೆಲಸ ಮಾಡಿದರೆ ಇಡೀ ಜಗತ್ತು ಅವನ ಬೆನ್ನ ಹಿಂದೆ ನಿಲ್ಲುತ್ತದೆ ಎನ್ನುವುದಕ್ಕೆ ಇದೊಂದು ಅದ್ಭುತ ಉದಾಹರಣೆ…’ ಯಶ್ ಹೇಳಿದ್ದು ‘ಕೆಜಿಎಫ್ 2’ ಚಿತ್ರದ ಬಗ್ಗೆ. ಎಂಟು ವರ್ಷಗಳ ಹಿಂದೆ ಅವರು ‘ಕೆಜಿಎಫ್’ ಚಿತ್ರ ಶುರು ಮಾಡಿದಾಗ, ಅದು ಇಷ್ಟು ದೊಡ್ಡದಾಗಿ ಬೆಳೆಯಬಹುದು, ಪ್ಯಾನ್ ಇಂಡಿಯಾ ಸಿನಿಮಾ ಆಗಿ ಹೊರಹೊಮ್ಮಬಹುದು, ಜಾಗತಿಕವಾಗಿ ಬಿಡುಗಡೆಯಾಗಬಹುದು … ಎಂದು ನಿರೀಕ್ಷಿಸುವುದಕ್ಕೆ ಸಾಧ್ಯವೇ ಇರಲಿಲ್ಲ. ಈಗ ಅವೆಲ್ಲವೂ ಆಗುತ್ತಿದೆ. ‘ಕೆಜಿಎಫ್’ ಯಶಸ್ವಿಯಾಗಿದ್ದಷ್ಟೇ …

Read More »

, ಸುಧಾಕರ್ ನೇರವಾಗಿ ಕಮಿಷನ್ ಪಡೆಯುತ್ತಾರೆ,ಆರೋಗ್ಯ ಇಲಾಖೆಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ; ಗುತ್ತಿಗೆದಾರರ ಸಂಘದ ಗಂಭೀರ ಆರೋಪ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡಬೇಕು, ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಹೈಕೋರ್ಟ್ ಹಾಲಿ ನ್ಯಾಯಧೀಶರಿಂದ ನಡೆಸಬೇಕು ಎಂದು ರಾಜ್ಯ ಗುತ್ತಿಗೆದಾರರ ಅಸೋಸಿಯೇಷನ್ ಒತ್ತಾಯಿಸಿದೆ.   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ,ಗುತ್ತಿಗೆದಾರನ ಸಾವಿಗೆ ಸರ್ಕಾರವೇ ನೇರ ಹೊಣೆ. ಕೂಡಲೇ ಬಾಕಿ ಇರುವ ಗುತ್ತಿಗೆ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ಪರಿಹಾರ ನೀಡುವಂತೆ …

Read More »

ಬಡವರು, ದಲಿತರಿಗೆ ಬಲ ಕೊಡಬೇಕೆಂಬ ಅಂಬೇಡ್ಕರರ ಕನಸನ್ನು ನನಸು ಮಾಡಲು ಜನಧನ, ಆಯುಷ್ಮಾನ್ ಭಾರತ, ಸ್ಟಾರ್ಟಪ್, ಮುದ್ರಾ ಇತ್ಯಾದಿ ಯೋಜನೆಗಳನ್ನು ರೂಪಿಸಲಾಗಿದೆ.

ಬಡವರು, ದಲಿತರಿಗೆ ಬಲ ಕೊಡಬೇಕೆಂಬ ಅಂಬೇಡ್ಕರರ ಕನಸನ್ನು ನನಸು ಮಾಡಲು ಜನಧನ, ಆಯುಷ್ಮಾನ್ ಭಾರತ, ಸ್ಟಾರ್ಟಪ್, ಮುದ್ರಾ ಇತ್ಯಾದಿ ಯೋಜನೆಗಳನ್ನು ರೂಪಿಸಲಾಗಿದೆ. ಮುದ್ರಾ ಯೋಜನೆಯಡಿಯಲ್ಲಿ ಸಾಲ ಪಡೆದವರಲ್ಲಿ ಶೇಕಡ 50 ಜನ ದಲಿತರು ಮತ್ತು ಹಿಂದುಳಿದವರೇ ಇದ್ದಾರೆ. ಕರ್ನಾಟಕದಲ್ಲಿ ಅಂಬೇಡ್ಕರ್ ಭೇಟಿ ನೀಡಿದ ಸ್ಥಳಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ವರ್ಗ ಅಸಮಾನತೆ, ಜಾತಿ ಅಸಮಾನತೆ ಹಾಗೂ ಲಿಂಗ ಅಸಮಾನತೆಯನ್ನು ಜೀವಿತದುದ್ದಕ್ಕೂ ವಿರೋಧಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶ ಮತ್ತು ಸಿದ್ಧಾಂತಗಳು ಭಾರತದ …

Read More »

ʼಕೆಪಿಸಿಸಿʼಯಿಂದ ಮೃತ ಗುತ್ತಿಗೆದಾರ ಸಂತೋಷ್‌ ಕುಟುಂಬಕ್ಕೆ ʼ11 ಲಕ್ಷ ಪರಿಹಾರʼ :ಡಿ.ಕೆ. ಶಿ.

ಬೆಂಗಳೂರು : ಉಡುಪಿಯಲ್ಲಿ ಅತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್‌ ಕುಟುಂಬಕ್ಕೆ ಕೆಪಿಸಿಸಿಯಿಂದ 11 ಲಕ್ಷ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಘೋಷಿಸಿದ್ದಾರೆ. ಮೃತ ಸಂತೋಷ್‌ ಮನೆಗೆ ಭೇಟಿದ ನಂತ್ರ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್‌ ನಾಯಕ, ‘ ಸಾವಿಗೆ ಕಾರಣವೇನು? ಯಾರು ಕಾರಣವೆಂದು ಹೇಳಿದ್ದಾರೆ. ಸಂತೋಷ್‌ ತಾಯಿ ಮತ್ತು ಪತ್ನಿ ಎಲ್ಲ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುಂದೆ ಇಂತಹ ಘಟನೆ ನಡೆಯಬಾರದು. ಪ್ರಧಾನಿಗೆ ದೂರು ನೀಡದರೂ ಸಂತೋಷ್‌ಗೆ ನ್ಯಾಯ …

Read More »

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮಕ್ಕಳ ಸಾಹಿತಿ ಶರಣಪ್ಪ ಕಂಚ್ಯಾಣಿ ನಿಧನ

ವಿಜಯಪುರ: ಮಕ್ಕಳ ಸಾಹಿತಿ ಶರಣಪ್ಪ ಕಂಚ್ಯಾಣಿ (82) ಬುಧವಾರ ಬೆಳಿಗ್ಗೆ ನಿಧನರಾದರು.ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದವರಾಗಿದ್ದ ಕಂಚ್ಯಾಣಿ ಶರಣಪ್ಪನವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವಿವಿಧೆಡೆ ಸೇವೆ ಸಲ್ಲಿಸಿ ವಿಜಯಪುರದಲ್ಲಿ ನೆಲೆಸಿದ್ದರು.   ವಿಜಯಪುರದ ರಾಜೇಂದ್ರನಗರ ಎನ್.ಸಿ. ಸಿ. ಆಫೀಸ್ ಬಳಿ ಇರುವ ಅವರ ಕಿರಿಯ ಪುತ್ರ ಮಹಂತೇಶ ಕಂಚ್ಯಾಣಿಯವರ ಮನೆಯಲ್ಲಿ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಬಿ.ಎಲ್.ಡಿ. ಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕವಿ …

Read More »

ಸಚಿವ ಈಶ್ವರಪ್ಪ ವಿರುದ್ಧ ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಿಂದ ಸ್ಪೋಟಕ ಮಾಹಿತಿ

ಸಚಿವ ಈಶ್ವರಪ್ಪ ಪತ್ರಿಕಾಗೋಷ್ಠಿ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನೋನ್ನೊಳ್ ಕರ್, ನಾನು ಮತ್ತು ಸಂತೋಷ್ ಬೈಲಹೊಂಗಲದ ಸ್ವಾಮೀಜಿ ಅವರ ಜೊತೆ ಈಶ್ವರಪ್ಪ ಅವರನ್ನು ಎರಡು ಬಾರಿ ಭೇಟಿಯಾಗಿದ್ದೆವು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.   100 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆಯ ಜಾತ್ರೆಗೆ 108 ಕಾಮಗಾರಿಗಳನ್ನು ನಡೆಸುವುದಾಗಿ ಪಟ್ಟಿ ತಯಾರಿಸಿಕೊಂಡು ಹೋಗಿದ್ದವು. ಕಾಮಗಾರಿಗಳನ್ನು ಚೆನ್ನಾಗಿ ನಡೆಸಿ ಎಂದು ಈಶ್ವರಪ್ಪನವರು ಸೂಚನೆ ನೀಡಿದ್ದರು ಎಂದು ತಿಳಿಸಿದ್ದಾರೆ. ಈಶ್ವರಪ್ಪನವರ …

Read More »

ಬೆಂಗಳೂರಿನಲ್ಲಿ ಭಾರಿ ಮಳೆ ;

ಬೆಂಗಳೂರು: ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಬೆಂಗಳೂರಿನಾದ್ಯಂತ ಭಾರಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಸಂಜೆ 4ರ ನಂತರ ಮಳೆ ಶುರುವಾಯಿತು. ಕೆಲವು ರಸ್ತೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.   ಮಲ್ಲೇಶ್ವರ, ಶೇಷಾದ್ರಿಪುರಂ, ಮೆಜೆಸ್ಟಿಕ್‌, ಆರ್.ಆರ್.ನಗರ, ಅಂಜನಾಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಮುಂತಾದ ಕಡೆ ಭಾರಿ …

Read More »