ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ನಿಗೂಢ ಸಾವಿನ ಪ್ರಕರಣ(Contractor Santosh Patil death case) ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ(Minister K S Eshwarappa) ಬಂಧನಕ್ಕೆ ಆಗ್ರಹ ಹೆಚ್ಚಾಗಿದ್ದು, ಮಂಗಳೂರಿನಲ್ಲಿ ಇಂದು ಬುಧವಾರ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಬಂಟ್ವಾಳದಲ್ಲಿ ಪಕ್ಷದ ಸಭೆಯಲ್ಲಿ ಭಾಗವಹಿಸಲು ಸಿಎಂ ಬೊಮ್ಮಾಯಿಯವರು ಮಂಗಳೂರಿನಿಂದ ವಾಹನದಲ್ಲಿ ತೆರಳುತ್ತಿದ್ದ ವೇಳೆ ದಾರಿಯುದ್ದಕ್ಕೂ SDPI ಕಾರ್ಯಕರ್ತರು ವಳಚ್ಚಿಲ್ ಬಳಿ …
Read More »ಈಶ್ವರಪ್ಪ ನಡೆಸಿದ ಸುದ್ದಿಗೋಷ್ಠಿಯಲ್ಲಿ ಏನೆಲ್ಲ ಹೇಳಿದ್ದಾರೆ?
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸಂತೋಷ್ ಅವರು ಯಾರು ಎಂಬುದೇ ಗೊತ್ತಿಲ್ಲ. ಡೆತ್ ನೋಟ್ ಬರೆದೇ ಇಲ್ಲ. ಮೊಬೈಲ್ ಸಂದೇಶ ಯಾರು ಕಳುಹಿಸಿದ್ದಾರೆ ಎನ್ನುವ ಕುರಿತು ಖಚಿತತೆ ಇಲ್ಲ. ಇದೊಂದು ರಾಜಕೀಯ ಷಡ್ಯಂತ್ರ ಎಂದು ಬುಧವಾರ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ನಡೆದ ದಿಢೀರ್ ಪತ್ರಿಕಾಗೋಷ್ಠಿಯಲ್ಲಿ ದೂರಿದರು. ತಮ್ಮ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿರುವ …
Read More »ತಸ್ಥೀಕ್ ಮೊತ್ತ 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿ ಆದೇಶ
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸಿ ವರ್ಗದ ದೇವಾಲಯಗಳಲ್ಲಿ ಪ್ರಸ್ತುತ ವಾರ್ಷಿಕ 48 ಸಾವಿರ ರೂಪಾಯಿಗಳ ತಸ್ಥೀಕ್ ಹಣವನ್ನು 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ತಸ್ಥೀಕ್ ಹಣ ಹೆಚ್ಚಿಸುವಂತೆ ಹಲವು ವರ್ಷಗಳಿಂದ ದೇವಸ್ಥಾನಗಳ ಅರ್ಚಕರು ಹಲವಾರು ಮನವಿಗಳನ್ನು ಸಲ್ಲಿಸಿದ್ದರು. ದಿನ ಬಳಕೆಯ ವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಿರುವ ಹಿನ್ನಲೆಯಲ್ಲಿ ಪೂಜಾ ಕೈಂಕರ್ಯಗಳ ನಿರ್ವಹಣೆಗಾಗಿ ತಸ್ಥೀಕ್ ಮೊತ್ತವನ್ನು ಹೆಚ್ಚಿಸುವ ಭರವಸೆಯನ್ನು ಮಾನ್ಯ ಮುಜರಾಯಿ, ಹಜ್ ಮತ್ತು …
Read More »ರಾಹುಲ ಕಪ ವೇದಿಕೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ
ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಎನ್.ಎಸ್.ಎಫ್ ಶ್ರೀ ಸಿದ್ದಾರೂಢ ಪ್ರೌಢಶಾಲೆ ಮೈದಾನದಲ್ಲಿ ಎಪ್ರಿಲ್ 12, 13 ರಂದು ಜಿಲ್ಲಾ ಅಮೆಚೂರ ಕಬಡ್ಡಿ ಅಸೋಸಿಯೆಷನ್ ಹಾಗೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಗೋಕಾಕ ಪ್ರಾಯೋಜಕತ್ವದಲ್ಲಿ ಬೆಳಗಾವಿ ಜಿಲ್ಲಾ ಪುರುಷ ಹಾಗೂ ಮಹಿಳಾ ಹೊನಲು ಬೆಳಕಿನ ಕಬಡ್ಡಿ ಚಾಂಪಿಯನಶಿಫ್ 2022 ನ್ನು ಮಂಗಳವಾರದಂದು ಉದ್ಘಾಟಿಸಿ ಮಾತನಾಡಲಾಯಿತು. ಈ ಸಂಧರ್ಬದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ್ , ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ , ಶಾಸಕ ಮಹಾಂತೇಶ …
Read More »ಕಾಂಗ್ರೆಸ್ ಹಿರಿಯ ದಿಗ್ಗಜರು ಇಂದು ಸಂಜೆ ಬೆಳಗಾವಿಗೆ
ಬೆಳಗಾವಿ- ಬೆಳಗಾವಿಯ ಹಿಂಡಲಗಾ ಗ್ರಾಮದ ಗುತ್ತಿಗೆದಾರ್ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ,ಈಗ ರಾಜ್ಯದ ಗಮನ ಸೆಳೆಯುತ್ತಿದೆ.ಸಂತೋಷ ಪಾಟೀಲ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಇಂದು ಸಂಜೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ,ಸುರಜೇವಾಲಾ,ಡಿಕೆ ಶಿವಕುಮಾರ್ ,ಸಿದ್ರಾಮಯ್ಯ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸುವ ಈ ಮೂವರು ಕಾಂಗ್ರೆಸ್ ನಾಯಕರು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.ಜೊತೆಗೆ ಗುತ್ತಿಗೆದಾರನ ಅಂತ್ಯ ಸಂಸ್ಕಾರದಲ್ಲಿ …
Read More »ಬೆಳ್ಳಂಬೆಳಗ್ಗೆ ಗುಂಡಿನ ಸದ್ದು-ಲಾಂಗ್ ಹಿಡಿದು ಜನರಿಗೆ ಬೆದರಿಸಿದ್ದ ರೌಡಿಶೀಟರ್ ಕಾಲಿಗೆ ಗುಂಡೀಟ್ಟ ಪೊಲೀಸ್
ಬೆಂಗಳೂರು: ರೌಡಿಶೀಟರ್ನ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ್ ಪಿಸ್ತೂಲ್ ಸದ್ದು ಮಾಡಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ, ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಸಂಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲರಾಜು ಗುಂಡು ಹಾರಿಸಿದ್ದಾರೆ. ಸಂಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲರಾಜು, ರೌಡಿ ಶೀರ್ ಶರಣಪ್ಪ ಕಾಳಿಗೆ ಗುಂಡು ಹಾರಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಶರಣಪ್ಪ ಪೊಲೀಸರಿಗೆ ಸಿಗದೆ …
Read More »ಬೆಳಗಾವಿ ಇವರ ಆಶ್ರಯಲ್ಲಿ ವೀರಶೈವ ಲಿಂಗಾಯತ ಬಡ ವಿದ್ಯಾರ್ಥಿನಿಯರಿಗಾಗಿ ಉಚಿತ ವಸತಿ ನಿಲಯ
ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕ, ಬೆಳಗಾವಿ ಇವರ ಆಶ್ರಯಲ್ಲಿ ವೀರಶೈವ ಲಿಂಗಾಯತ ಬಡ ವಿದ್ಯಾರ್ಥಿನಿಯರಿಗಾಗಿ ಉಚಿತ ವಸತಿ ನಿಲಯ ಇದರ ಅಡಿಗಲ್ಲು ಸಮಾರಂಭದಲ್ಲಿ ಭಾಗಿಯಾದೆ. ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರಿಂದ ಶಂಕುಸ್ಥಾಪನೆ ನೆರವೇರಿಸಿಲಾಯಿತು ಹಾಗೂ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳು ಕಾರಂಜಿಮಠ ಬೆಳಗಾವಿ ಇವರು ವಹಿಸಿದ್ದರು. ಈ ಸಂದರ್ಭದಲ್ಲಿ ಕೆ.ಎಲ್. ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಸಂಸದರಾದ …
Read More »ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ
ಬೆಂಗಳೂರು: ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಿದೆ. ಹೈಕಮಾಂಡ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅಲ್ಲದೆ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸಚಿವರು ಮೈಸೂರು ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ …
Read More »ನನ್ನ ಪತಿಯದ್ದು ಆತ್ಮಹತ್ಯೆಯಲ್ಲ, ಕೊಲೆ : ಗುತ್ತೆದಾರ ಸಂತೋಷ್ ಪಾಟೀಲ್ ಪತ್ನಿ
ಬೆಳಗಾವಿ : ನನ್ನ ಪತಿ ಸಂತೋಷ್ ಪಾಟೀಲ್‌ರದ್ದು ಆತ್ಮಹತ್ಯೆಯಲ್ಲ, ಕೊಲೆ ಮಾಡಲಾಗಿದೆ. ಅವ್ರು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ನಿನ್ನೆ ನನ್ನ ಜೊತೆ ಚೆನ್ನಾಗಿಯೇ ಮಾತಾಡಿದ್ದರು ಎಂದು ಸಾವಿಗೀಡಾದ ಗುತ್ತೆದಾರ ಸಂತೋಷ್ ಪಾಟೇಲ್ ಪತ್ನಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಬಸವೇಶ್ವರನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂತೋಷ್ ಪತ್ನಿ ಜಯಶ್ರೀ, ‘ನನ್ನ ಪತಿಯನ್ನ ಕೊಲೆ ಮಾಡಲಾಗಿದೆ. ಅವ್ರು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ನಿನ್ನೆ ನನ್ನ ಜೊತೆ ಚೆನ್ನಾಗಿಯೇ ಮಾತಾಡಿದ್ದರು. …
Read More »ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಹಿನ್ನೆಲೆ ಏನು? ಆರೋಪ ಏನು?
ಸಂತೋಷ್ ಪಾಟೀಲ್ ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ. ಕಳೆದ ತಿಂಗಳಷ್ಟೇ, ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ಗೆ ಪತ್ರ ಬರೆದಿದ್ದು. ಬೆಳಗಾವಿಯ ಹಿಂಡಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದೊಂದು ವರ್ಷದಿಂದ ತಾವು ಮತ್ತು ಇತರ ಗುತ್ತಿಗೆದಾರರು ರಸ್ತೆ ಕಾಮಗಾರಿ ಸೇರಿ ಒಟ್ಟು 108 ಕಾಮಗಾರಿಗಳನ್ನ ಪೂರ್ಣಗೊಳಿಸಿದ್ದೀವಿ. ಇದಕ್ಕಾಗಿ …
Read More »