Breaking News

ವಕೀಲೆ ಸಂಗೀತಾ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಮತ್ತೊಂದು ವೀಡಿಯೋ ತುಣಕು ವೈರಲ್

ಬಾಗಲಕೋಟೆ: ವಕೀಲೆ ಸಂಗೀತಾ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಮತ್ತೊಂದು ವೀಡಿಯೋ ತುಣಕು ವೈರಲ್ ಆಗಿದೆ. ಈ ಹಿಂದೆ ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಆಕೆಯ ಪತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಆದರೆ ಈಗ ಮಹಾಂತೇಶ್ ಚೊಳಚಗುಡ್ಡ ಅವರ ಮೇಲೆ ಸಂಗೀತಾ ಅವರು ಚಪ್ಪಲಿಯಲ್ಲಿ ಹೊಡೆದ ವೀಡಿಯೋ ವೈರಲ್ ಆಗಿದೆ. ನಿಜವಾಗಿ ನಡೆದಿದ್ದೇನು? ಮಹಾಂತೇಶ್ ಚೊಳಚಗುಡ್ಡ …

Read More »

ತಾಯಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನು, ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಮ್ಮ ತಾಯಿ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಭೂಮಿ ಕಬಳಿಕೆ ಮಾಡಿದ್ದಾರೆ. ಬಿಪಿಎಲ್ ತಾಯಿಗೆ ಮಂಜೂರಾದ ಜಮೀನು ಪಕ್ಕದಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಎಸ್.ಎನ್.ಸಿಟಿ ಮಾಡಿಕೊಂಡಿದ್ದಾರೆ. ಆದರೆ ತಾಯಿ ಮುನಿಯಮ್ಮ ಮಾತ್ರ ಈಗಲೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹುದುಕುಳ ಗ್ರಾಮದ ಸರ್ವೇ ನಂ.256 ರಲ್ಲಿ 3 ಎಕರೆ 10 ಗುಂಟೆ ಸರ್ಕಾರಿ …

Read More »

ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವು

ಚಿತ್ರದುರ್ಗ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಏಕಾಏಕಿ ಸೋಮವಾರ ಸಂಜೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಹಲವೆಡೆ ಸುರಿದ ಧಾರಾಕಾರ ಮಳೆಗೆ (Rain) ರೈತರು (Farmers) ತತ್ತರಿಸುವಂತೆ ಮಾಡಿದೆ. ಸಿಡಿಲು (Thunderbolt), ಗುಡುಗು ಸಹಿತ ಮಳೆ ಆರ್ಭಟಕ್ಕೆ ರಾಸು ಜಾನುವಾರುಗಳು ನೆಲಕಪ್ಪಳಿಸಿ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಅಡವಿಮಲ್ಲಾಪುರ ಗ್ರಾಮದಲ್ಲಿ …

Read More »

ಬಿಜೆಪಿ ಸೇರಲು ಹೊರಟಿದ್ದ ಹೊರಟ್ಟಿಗೆ ಎದುರಾಯ್ತು ವಿಘ್ನ

ಬೆಂಗಳೂರು,ಮೇ17-ಬಿಜೆಪಿ ಸೇರುವ ಕಾರಣಕ್ಕಾಗಿಯೇ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಸವರಾಜ ಹೊರಟ್ಟಿ ಅವರಿಗೆ ತಾಂತ್ರಿಕ ವಿಘ್ನ ಎದುರಾಗಿದೆ. ಏಕೆಂದರೆ ವಿಧಾನಪರಿಷತ್ ನಿಯಮಾವಳಿ ಪ್ರಕಾರ ಸಭಾಪತಿಯವರು ತಮ್ಮ ರಾಜೀನಾಮೆ ಪತ್ರವನ್ನು ಹಾಲಿ ವಿಧಾನಪರಿಷತ್‍ನ ಉಪಸಭಾಪತಿಯವರಿಗೆ ಸಲ್ಲಿಸಬೇಕು. ಆದರೆ ಪ್ರಸ್ತುತ ವಿಧಾನಪರಿಷತ್‍ನಲ್ಲಿ ಹಂಗಾಮಿ ಸಭಾಪತಿ ಯಾರೊಬ್ಬರೂ ಇಲ್ಲ. ನಿಯಮಗಳ ಪ್ರಕಾರ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿ ಅವರು ಸ್ವೀಕರಿಸಲು ಅವಕಾಶವಿಲ್ಲ. ಹೀಗಾಗಿ ಅವರು ನೀಡಿರುವ ರಾಜೀನಾಮೆ ಪತ್ರವನ್ನು ಯಾರು ಅಂಗೀಕರಿಸುತ್ತಾರೆ ಎಂಬುದೇ ಯಕ್ಷ …

Read More »

ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಸಂಕಷ್ಟಕ್ಕೆ ಸಿಲುಕಿದ ಮಾಜಿ ಸಿಎಂ ಸಿದ್ದರಾಮಯ್ಯ?

ಮೈಸೂರು: ಒಂದು ಕುಟುಂಬಕ್ಕೆ ಒಂದೇ ಟಿಕೆಟ್​ ಎಂಬ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ವಿರುದ್ಧ ಮೇಲುಗೈ ಸಾಧಿಸಲೂ ಹೈಕಮಾಂಡ್​ ತೀರ್ಮಾನ ಸಿದ್ದರಾಮಯ್ಯಗೆ ತೊಡಕಾಗಿದೆ.   ಮೈಸೂರು ಜಿಲ್ಲೆಯಲ್ಲೇ ಮೂರು ಕುಟುಂಬಗಳು ಕಾಂಗ್ರೆಸ್​ನಿಂದ ಜೋಡಿ ಟಿಕೆಟ್‌ಗೆ ಟವೆಲ್ ಹಾಕಿವೆ. 11 ರಲ್ಲಿ 6 ಕ್ಷೇತ್ರಗಳು ಅಪ್ಪ-ಮಕ್ಕಳಿಗೆ ದಕ್ಕುತ್ತವಾ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಸ್ವತಃ ಸಿದ್ದರಾಮಯ್ಯ ಮನೆಯಲ್ಲೇ …

Read More »

ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ; ಹಾಲಿ ಸಂಸದರಿಗೆ ಇಲ್ಲ ಟಿಕೆಟ್; 8 ಕ್ಷೇತ್ರಗಳಲ್ಲಿ ಭಾರಿ ಬದಲಾವಣೆಗೆ ಪ್ಲಾನ್

ಬೆಂಗಳೂರು: ವಿಧಾನಸಭಾ ಚುನಾವಣೆ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಹಲವು ಮಹತ್ವದ ಬದಲಾವಣೆ ಮಾಡಲು ಯೋಜನೆ ರೂಪಿಸಿದೆ. 2024ರ ಲೋಕಸಭಾ ಚುನಾವಣೆಗೆ ಹೊಸಬರಿಗೆ ಆದ್ಯತೆ ನೀಡಲು ಪ್ಲಾನ್ ಮಾಡಿರುವ ಬಿಜೆಪಿ ಹಿರಿಯ ಸಂಸದರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ರಾಜ್ಯದ 8 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ಚಿಂತನೆ ನಡೆಸಿರುವ ಬಿಜೆಪಿ ವರಿಷ್ಠರು, ಹಾಲಿ ಸಂಸದರಿಗೆ ಟಿಕೆಟ್ ಕೊಡದಿರಲು ನಿರ್ಧರಿಸಿದೆ. ಬೆಳಗಾವಿ ಕ್ಷೇತ್ರದ ಹಾಲಿ ಸಂಸದೆ ಮಂಗಲಾ …

Read More »

ಕಾಂಗ್ರೆಸ್ ನಾಯಕ ಪಿ. ಚಿದಂಬರಂಗೆ ಸಿಬಿಐ ಶಾಕ್: ಚೆನ್ನೈ, ದೆಹಲಿ ಸೇರಿ 7 ಕಡೆ ದಾಳಿ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ನಿವಾಸದ ಮೇಲೆ ಕೇಂದ್ರ ತನಿಖಾ ದಳ ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಈ ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮನೆ …

Read More »

ಮೇ. 20 ರಂದು ಗ್ರಾಮ ಪಂಚಾಯಿತಿ ಚುನಾವಣೆ : ನೌಕರರಿಗೆ ವೇತನ ಸಹಿತ ರಜೆ ಘೋಷಿಸಿ ಚುನಾವಣಾ ಆಯೋಗ ಆದೇಶ

ಬೆಂಗಳೂರು : 2022 ರ ಏಪ್ರಿಲ್ ನಿಂದ 2022 ರ ಜುಲೈವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದಾಗಿ ಖಾಲಿಇರುವ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಮೇ. 20 ರಂದು ಈ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಚುನಾವಣೆ ನಡೆಯುವ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, …

Read More »

ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

  ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …

Read More »

ವಿವಿಧ ಗ್ರಾಮ ಪಂಚಾಯಿತಿಗಳ 314 ಸ್ಥಾನಗಳಿಗೆ ಚುನಾವಣೆ: ಮೇ 20 ರಂದು ಮತದಾನ

ಬೆಂಗಳೂರು: ಇದೇ ಜುಲೈ ಒಳಗೆ ಅವಧಿ ಮುಕ್ತಾಯವಾಗುವ ನಾಲ್ಕು ಗ್ರಾಮ ಪಂಚಾಯಿತಿಗಳ 105 ಸ್ಥಾನಗಳು ಮತ್ತು ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಗೆ ತೆರವಾಗಿರುವ 209 ಸದಸ್ಯ ಸ್ಥಾನಗಳಿಗೆ ಮೇ 20 ರಂದು ಚುನಾವಣೆ ನಡೆಯಲಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.   ಧಾರವಾಡ ಜಿಲ್ಲೆಯ ಚಾಕಲಬ್ಬಿ, ಬೆಂಗಳೂರು ನಗರ ಜಿಲ್ಲೆಯ ಕಗ್ಗಲೀಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು, ಬಾಗಲಕೋಟೆ ಜಿಲ್ಲೆ ಸಾವಳಗಿ ಗ್ರಾಮ ಪಂಚಾಯಿತಿಗಳ 105 ಸ್ಥಾನಗಳಿಗೆ ಚುನಾವಣೆ …

Read More »