ಮೈಸೂರು: ”ಸಂಪುಟದ ಕುರಿತಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸ್ಥೂಲವಾಗಿ ಚರ್ಚೆ ಆಗಿದ್ದು, ಅವರು ಇನ್ನಷ್ಟು ವಿವರ ಪಡೆದುಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ಅವರು ತೀರ್ಮಾನ ಮಾಡಿದ ನಂತರ ವಿಸ್ತರಣೆ ಇಲ್ಲ ಪುನಾರಚನೆ ಎನ್ನುವ ಕುರಿತು ತೀರ್ಮಾನ ಆಗುತ್ತದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಗುರುವಾರ ಮಧ್ಯಾಹ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ,’ಹಲವಾರು ಇಲಾಖೆಗಳ ವಿಚಾರಗಳ ಕುರಿತು ಚರ್ಚೆ ಮಾಡಲು ದೆಹಲಿಗೆ ತೆರಳಿದ್ದೆ, ಇಂಧನ, ರಕ್ಷಣೆ, …
Read More »ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು.
ಬೆಳಗಾವಿ ಕುವೆಂಪು ನಗರದ ಕಚೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ಕೆದನೂರ, ಅಗಸಗಿ, ಮನ್ನಿಕೇರಿ ಗ್ರಾಮದಲ್ಲಿ ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು. ಇದೇ ವೇಳೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಸಬಾಗದಿಂದ ಕುಂತಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಅಲ್ಲಿನ ಸಾರ್ವಜನಿಕರ ಮನವಿ ಮೇರೆಗೆ 1 ಲಕ್ಷ …
Read More »ಭಾರತ ನಮ್ಮ ‘ದೊಡ್ಡಣ್ಣ’ -ಪ್ರಧಾನಿ ಮೋದಿ ಸಹಾಯ ನೆನೆದ ಜಯಸೂರ್ಯ
ಭಾರತ ನಮ್ಮ ‘ದೊಡ್ಡಣ್ಣ’ -ಪ್ರಧಾನಿ ಮೋದಿ ಸಹಾಯ ನೆನೆದ ಜಯಸೂರ್ಯ ಶ್ರೀಲಂಕಾಗೆ ಭಾರತ ‘ಬಿಗ್ ಬ್ರದರ್’ ಎಂದು ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಬಣ್ಣಿಸಿದ್ದಾರೆ. ಸ್ವಾತಂತ್ರ್ಯ ಬಳಿಕ ಭೀಕರವಾಗಿ ಆರ್ಥಿಕ ದಿವಾಳಿತನವನ್ನ ಎದುರಿಸುತ್ತಿರುವ ಲಂಕಾಗೆ, ಭಾರತ ಮಾಡಿರುವ ಸಹಾಯವನ್ನ ನೆನೆದು ಜಯಸೂರ್ಯ ಭಾರತ ನಮ್ಮ ದೊಡ್ಡಣ್ಣ ಎಂದಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಮಾಡಿರುವ ಸಹಾಯವನ್ನ ಈ ಸಂದರ್ಭದಲ್ಲಿ ಸ್ಮರಿಸಿರುವ ಅವರು, ಭಾರತ ನಮ್ಮ ನೆರೆಯ ರಾಷ್ಟ್ರ.. ನಮ್ಮ ದೊಡ್ಡಣ್ಣ.. …
Read More »ಹಣಕ್ಕಾಗಿ ವೀರ್ಯಾಣು ದಾನ ಮಾಡುತ್ತಿದ್ದ ಪತಿ, ವಿಷಯ ತಿಳಿದ ಪತ್ನಿಯ ರಿಯಾಕ್ಷನ್ ಹೇಗಿತ್ತು ಗೊತ್ತಾ…?
ಹೆಂಡತಿಗೆ ಹೇಳದೆ ರಹಸ್ಯವಾಗಿ ವೀರ್ಯಾಣು ದಾನ ಮಾಡುವ ವಿಕ್ಕಿ ಡೋನರ್ ಸಿನೆಮಾ ನೆನಪಿದೆಯಾ ? ಇಂಥದ್ದೇ ನೈಜ ಘಟನೆಯೊಂದು ನಡೆದಿದೆ. ಪತ್ನಿಗೆ ತಿಳಿಸದೇ ವೀರ್ಯಾಣು ದಾನ ಮಾಡಿದ ವ್ಯಕ್ತಿ ಈಗ ತೊಂದರೆಗೆ ಸಿಲುಕಿಕೊಂಡಿದ್ದಾನೆ. ಈ ಬಗ್ಗೆ ಖುದ್ದು ಆ ವ್ಯಕ್ತಿಯೇ ರೆಡಿಟ್ ನಲ್ಲಿ ಬರೆದುಕೊಂಡಿದ್ದಾನೆ. ಹೆಚ್ಚುವರಿ ಹಣ ಗಳಿಸಲು ಆತ ಈ ಮಾರ್ಗವನ್ನು ಆಯ್ದುಕೊಂಡಿದ್ದ. ಪತಿ ವೀರ್ಯ ದಾನ ಮಾಡ್ತಿರೋ ವಿಷಯ ತಿಳಿದ ಪತ್ನಿ ಆಘಾತಗೊಂಡಿದ್ದಳು. ಆತ ತನಗೆ ಮೋಸ …
Read More »ಸಣ್ಣ, ಅತಿ ಸಣ್ಣ ರೈತರಿಗೆ ಗುಡ್ ನ್ಯೂಸ್
ಬೆಂಗಳೂರು: ಭೂಕಂದಾಯ ಕಾಯ್ದೆಯಲ್ಲಿನ ಲೋಪದಿಂದಾಗಿ ಶಿಕ್ಷೆಗೆ ಗುರಿಯಾಗುತ್ತಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಿದೆ. ಭೂಗಳ್ಳರು ಮತ್ತು ಸಣ್ಣ ಕೃಷಿಕರಿಗೆ ಸಮಾನ ಶಿಕ್ಷೆಯನ್ನು ನಿವಾರಣೆ ಮಾಡಿ ಭೂ ಒತ್ತುವರಿ ಮತ್ತು ಭೂಕಬಳಿಕೆ ಪ್ರತ್ಯೇಕಗೊಳಿಸಿ ರೈತರ ರಕ್ಷಣೆಗಾಗಿ ಕಾನೂನಿಗೆ ತಿದ್ದುಪಡಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಸಾಗುವಳಿದಾರರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಒತ್ತುವರಿ ಮತ್ತು ಭೂಕಬಳಿಕೆ ಪ್ರತ್ಯೇಕ ಮಾಡಲಾಗುವುದು. ಜೀವನ ನಡೆಸಲು ಒತ್ತುವರಿ ಮಾಡಿಕೊಂಡಿರುವ …
Read More »ಪರೋಕ್ಷವಾಗಿ ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಸಿದ್ದರಾಮಯ್ಯ
ಬಾಗಲಕೋಟೆ: ಬಾದಾಮಿ ಮತ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಆಸೆ ವ್ಯಕ್ತಪಡಿಸಿದ್ದಾರೆ. ಬಿಜೆಪಿಗರು ಕೆಲಸ ಮಾಡದಿದ್ರೆ ನಾನೇ ಬಂದು ಕೆಲಸ ಮಾಡಿ ಕೊಡುತ್ತೇನೆ ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ನಾನೇ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇನೆಂದು ಪರೋಕ್ಷವಾಗಿ ಹೇಳಿದರು. ಆಲೂರ ಎಸ್.ಕೆ ಗ್ರಾಮದಲ್ಲಿ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ …
Read More »ವಿಕ್ರಾಂತ್ ಹಡಗು ಹಗರಣ: ಬಿಜೆಪಿ ನಾಯಕ ಮತ್ತು ಅವರ ಮಗನ ವಿರುದ್ಧ ಮಾಜಿ ಸೈನಿಕರಿಂದ ದೂರು
ಮುಂಬೈ(ಮಹಾರಾಷ್ಟ್ರ): ಐಎನ್ಎಸ್ ವಿಕ್ರಾಂತ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಕಿರೀತ್ ಸೋಮಯ್ಯ ಮತ್ತು ಅವರ ಮಗ ನೀಲ್ ಸೇರಿದಂತೆ ಇತರರ ವಿರುದ್ಧ ಮಾಜಿ ಯೋಧರೊಬ್ಬರು ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಂಚನೆ ದೂರಿನ ಮೇರೆಗೆ ಸೋಮಯ್ಯ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ವಿಕ್ರಾಂತ್ ಹಡಗಿನ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಆರೋಪಿಸಿದ್ದರು. ಮಾಜಿ ಸೈನಿಕ ಬಾಬನ್ …
Read More »ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆಯಾಗುವುದು ಖಚಿತ, ಗ್ರಾಮೀಣಾಭಿವೃದ್ದಿ ಖಾತೆ ನೀಡುವ ಬಗ್ಗೆ ಚರ್ಚೆ
ಬೆಂಗಳೂರು, ಏ. 07: ಜಾರಕಿಹೊಳಿಯೂ ಸಂಪುಟಕ್ಕೆ?: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬೆಳಗಾವಿ ಭಾಗದ ಪ್ರಭಾವಿ ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆಯಾಗುವುದು ಖಚಿತವಾಗುತ್ತಿದೆ. ಜಾರಕಿಹೊಳಿ ಅವರಿಗೆ ಗ್ರಾಮೀಣಾಭಿವೃದ್ದಿ ಖಾತೆ ನೀಡುವ ಬಗ್ಗೆ ಚರ್ಚೆಯಾಗಿದ್ದು, ಸದ್ಯ ಆರ್ಡಿಪಿಆರ್ ಸಚಿವರಾಗಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷ ಸಂಘಟನೆಗೆ ತೊಡಗಿಸುವ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವರ ಅವರ ತಲೆದಂಡವಾಗುವ ಸಾಧ್ಯತೆ …
Read More »ಆಮ್ ಆದ್ಮಿ ರೀ ಎಂಟ್ರಿ ಯಾರಿಗೆ ಆಪತ್ತು?: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಜತೆ ರಾಜ್ಯದಲ್ಲಿ ಮತ್ತೊಂದು ರಾಜಕೀಯ ನೆಲೆ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗುತ್ತಿದ್ದಂತೆ, ರಾಜ್ಯದಲ್ಲಿ ಆ ಪಕ್ಷದ ಮರು ಪ್ರವೇಶದ ಸೂಚನೆ ನೀಡಿದೆ. ಕೇಜ್ರಿವಾಲ್ ಪಕ್ಷಕ್ಕೆ ಕರ್ನಾಟಕ ಹೊಸದೇನಲ್ಲ. 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ರಾಜ್ಯದ ಜನರಿಗೆ ತನ್ನ ಪರಿಚಯ ಮಾಡಿಕೊಂಡಿತ್ತು. ಆದರೆ, ಬೇರು ಗಟ್ಟಿಮಾಡಿಕೊಳ್ಳಲು ಪ್ರಯತ್ನಿಸಿ ಸೋತಿತ್ತು. ಆದರೀಗ ದೊಡ್ಡ ಉದ್ದೇಶ ಇಟ್ಟುಕೊಂಡಂತೆ ಪ್ರವೇಶ ಮಾಡುವ ಸುಳಿವು ನೀಡಿದೆ. ಮುಂಬರುವ …
Read More »ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ:ಡಿ.ಕೆ. ಶಿ.
ಹಾಸನ: ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಇಡೀ ರಾಜ್ಯದಲ್ಲಿ ಜನ ಬಿಜೆಪಿ ಹಾಗೂ ದಳದಲ್ಲಿ ಗುರುತಿಸಿಕೊಂಡವರು ಕಾಂಗ್ರೆಸ್ ಸದಸ್ಯರಾಗುತ್ತಿದ್ದು, ನಮಗೆ ಆತ್ಮ ವಿಶ್ವಾಸ ಹೆಚ್ಚಿಸಿದೆ. ಪಂಚರಾಜ್ಯ ಚುನಾವಣೆಯಲ್ಲಿ ನಾವು ಪಂಜಾಬ್ ರಾಜ್ಯವನ್ನು ನಮ್ಮ ತಪ್ಪಿನಿಂದ ಸೋತಿದ್ದೇವೆ. ಬಿಜೆಪಿಯವರು ಇಲ್ಲಿಯೂ ಗೆಲ್ಲುವುದಾಗಿ ಬೀಗುತ್ತಿದ್ದಾರೆ. ಆದರೆ ಜನ ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. …
Read More »