ಹೈದರಾಬಾದ್: ತೆಲಂಗಾಣದ ವಾರಂಗಲ್ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಯೊಂದು ರೋಗಿಯೊಬ್ಬರಿಗೆ ಕಚ್ಚಿದ್ದರಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಆದರೀಗ ನಾಲ್ಕು ದಿನಗಳ ಹಿಂದೆ ವಾರಂಗಲ್ನ ಎಂಜಿಎಂ ಆಸ್ಪತ್ರೆಯ ಐಸಿಯುವಿನಲ್ಲಿ ದಾಖಲಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ರೋಗಿಯು ಇಲಿ ಕಚ್ಚಿದಾಗಿಲಿಂದಲೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಅವರಿಗೆ ಉಸಿರಾಡಲು ವೆಂಟಿಲೇಟರ್ ಅಳವಡಿಸಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಯ ಬಳಿಕ ರಾಜ್ಯ ಸರ್ಕಾರವು ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿದ್ದ ಐಸಿಯು …
Read More »ಕರಡಿವೇಷ ಹಾಕಿ ಓಡಾಡಿದ್ರೆ ತಿಂಗಳಿಗೆ 15 ಸಾವಿರ ವೇತನ: ಹೀಗೊಂದು ವಿಶಿಷ್ಟ ಉದ್ಯೋಗ
ತೆಲಂಗಾಣ: ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ರೈತರು ತಮ್ಮ ಬೆಳೆಯನ್ನು ಮಂಗಗಳು ಮತ್ತು ಕಾಡುಹಂದಿಗಳಿಂದ ರಕ್ಷಿಸಲು ವಿಶಿಷ್ಟ ಉಪಾಯವೊಂದನ್ನು ಮಾಡಿದ್ದಾರೆ. ವ್ಯಕ್ತಿಯೊಬ್ಬನಿಗೆ ಕರಡಿ ವೇಷ ಹಾಕಿ ತಮ್ಮ ಹೊಲದಲ್ಲಿ ನಿಲ್ಲಿಸುವ ಮೂಲಕ ಅವರು ಕೋತಿಗಳಿಂದ ಬೆಳೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ತೆಲಂಗಾಣದ ಸಿದ್ದಿಪೇಟೆಯ ಕೋಹೆಡದ ರೈತ ಭಾಸ್ಕರ್ ರೆಡ್ಡಿ ಕೋತಿಗಳು ಮತ್ತು ಕಾಡುಹಂದಿಗಳು ಬೆಳೆ ಹಾನಿ ಮಾಡುವುದನ್ನು ತಡೆಯಲು ಕರಡಿಯ ವೇಷ ಧರಿಸಿ ಹೊಲದಲ್ಲಿ ಓಡಾಡಲು ವ್ಯಕ್ತಿಯನ್ನು ನೇಮಿಸಿದ್ದಾರೆ. ಈ ಫೋಟೋ ಮತ್ತು ವಿಡಿಯೋಗಳು …
Read More »ಈ ದೇವರಿಗೆ ಹೂವು, ಹಣ್ಣು, ಕಾಣಿಕೆ ಬೇಡ, ಸಿಗರೇಟು, ಬ್ರಾಂಡೆಡ್ ಮದ್ಯವೇ ಬೇಕು!
ಕಾರವಾರ: ಆ ದೇವರಿಗೆ ಸಿಗರೇಟು ಎಂದರೆ ಎಲ್ಲಿಲ್ಲದ ಪ್ರೀತಿ. ಹೆಂಡ ನೀಡಿದರೆ ಇಷ್ಟಾರ್ಥವನ್ನು ಏನಿದ್ದರೂ ನೆರವೇರಿಸುತ್ತಾನೆ ಎನ್ನುವ ನಂಬಿಕೆ ಭಕ್ತರದ್ದು. ಹೌದು. ಕಾರವಾರ ನಗರದ ಕಾಳಿ ನದಿ ಸಂಗಮದಲ್ಲಿರುವ ಕಾಪ್ರಿ ದೇವರ ಜಾತ್ರಾ ಮಹೋತ್ಸವಕ್ಕೆ ತಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಂಡು ಹರಕೆ ತೀರಿಸಲು ಜನರು ಹೀಗೆ ನಿಂತಿದ್ದಾರೆ. ಪ್ರತಿ ವರ್ಷ ನಡೆಯುವ ಕಾಪ್ರಿ ದೇವರ ವಿಶಿಷ್ಟ ಜಾತ್ರೆಗೆ ಕಾರವಾರ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾದಿಂದಲೂ ಜನರು ಆಗಮಿಸ್ತಾರೆ. ತಮ್ಮ, ತಮ್ಮವರ ಒಳಿತಿಗಾಗಿ ಹತ್ತು ಹಲವು …
Read More »ಕಾಂಗ್ರೆಸ್ಗೆ 150 ಸ್ಥಾನಕ್ಕಿಂತ ಒಂದು ಸ್ಥಾನವೂ ಕಡಿಮೆ ಬರಬಾರದು: ರಾಹುಲ್ ಗಾಂಧಿ
ಬೆಂಗಳೂರು: ರಾಜ್ಯದಲ್ಲಿ ನಡೆಯುವ ಮುಂದಿನ ಚುನಾವಣೆಯಲ್ಲಿ 150 ಸ್ಥಾನಕ್ಕಿಂತ ಒಂದು ಸ್ಥಾನವೂ ಕಡಿಮೆ ಬರಬಾರದು. ಇದು ನಾನು ನಿಮಗೆ ಕೊಡುತ್ತಿರುವ ಟಾಸ್ಕ್ ಎಂದು ಕಾಂಗ್ರೆಸ್ ನಾಯಕರಿಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಕುರಿತಾಗಿ ಮಾತನಾಡಿ, ಕರ್ನಾಟಕ ಸ್ಪಿರಿಟ್ ಅಫ್ ಕಾಂಗ್ರೆಸ್ ಪಾರ್ಟಿ. ದೇಶ, ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳಿವೆ. ಬಿಜೆಪಿ ಸರ್ಕಾರ ಹಣದ ಮೇಲೆ ಅಧಿಕಾರಕ್ಕೆ ಬಂದಿದೆ. …
Read More »130 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಶಂಕು ಸ್ಥಾಪನೆ
ಬೆಳಗಾವಿ: ನಗರದ ವಡಗಾವಿಯ ನಾಲ್ಕು ಎಕರೆ ಜಾಗದಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ಚಾಯಿ ಕ್ಯಾನ್ಸರ್ ಸಂಸ್ಥೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು, ಶಿವಮೊಗ್ಗ, ಮೈಸೂರಿನಲ್ಲಿ ಕೇಂದ್ರ ಆರಂಭಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಮುತುವರ್ಜಿಯಿಂದ ಮುಖ್ಯಮಂತ್ರಿಯವರು ಬೆಳಗಾವಿಗೆ ಕ್ಯಾನ್ಸರ್ ಸಂಸ್ಥೆ ಮಂಜೂರು ಮಾಡಲಾಗಿರುತ್ತದೆ. …
Read More »ಸಮ್ಮತಿಯ ಲೈಂಗಿಕ ಕ್ರಿಯೆ ನಡೆಸಿದರೂ ಸಹ ಅತ್ಯಾಚಾರ : ತೆಲಂಗಾಣ ಕೋರ್ಟ್ನಿಂದ ಮಹತ್ವದ ತೀರ್ಪು
ಹೈದರಾಬಾದ್ : ಅಪ್ರಾಪ್ತ ಬಾಲಕಿಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆ ನಡೆಸಿದರೂ ಸಹ ಅತ್ಯಾಚಾರ ಎಂದು ಪರಿಗಣಿಸಲಾಗುವುದು ಎಂದು ತೆಲಂಗಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 15 ವರ್ಷದ ಬಾಲಕಿ 26 ವರ್ಷದ ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿದ್ದಳು. ಈ ಸಂಬಂಧ ತನ್ನ ಮಗಳಿಗೆ ಗರ್ಭಪಾತ ಮಾಡಲು ಅವಕಾಶ ನೀಡುವಂತೆ ಮಹಿಳೆ ಮಾಡಿದ ಮನವಿಯನ್ನು ಆಲಿಸಿದ ನ್ಯಾಯಾಲಯವು ಈ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ. ಬಾಲಕಿಯ ಕುಟುಂಬಸ್ಥರು ಮಗುವಿಗೆ ಗರ್ಭಪಾತ ಮಾಡುವಂತೆ ನಿಲೋಫರ್ ಆಸ್ಪತ್ರೆಯನ್ನು ಸಂಪರ್ಕಿಸಿದ್ದರು. ಆದರೆ, …
Read More »ಎಲ್ಲಿವರೆಗೆ ಒಲೆ ಉರಿಯುತ್ತಿರುತ್ತದೆಯೋ ಅಲ್ಲಿಯವರೆಗೆ ಬಡ ಮಕ್ಕಳ ಹೊಟ್ಟೆ ತಣ್ಣಗಿರುತ್ತೆ; ಸಿಎಂ
ತುಮಕೂರು: ಶಿವಕುಮಾರ ಸ್ವಾಮೀಜಿಗಳ ಜಯಂತಿಯನ್ನು ದಾಸೋಹ ದಿನ ಎಂದು ಈಗಾಗಲೇ ಸರ್ಕಾರ ಆಚರಿಸುತ್ತಿದೆ. ಮಧ್ಯಾಹ್ನದ ಬಿಸಿ ಊಟದ ಯೋಜನೆಗೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರನ್ನಿಡಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಿದ್ದ ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳ 115ನೇ ಜಯಂತ್ಯುತ್ಸವ ಹಾಗೂ ಗುರುವಂದನಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರೊಂದಿಗೆ …
Read More »ಖಾಸಗಿ ಬಸ್ ತಡೆದು ಪರಿಶೀಲಿಸಿದ ಪೊಲೀಸರಿಗೆ ಪ್ರಯಾಣಿಕರ ಸೀಟಿನ ಅಡಿಯಲ್ಲಿ ಕಾದಿತ್ತು ಶಾಕ್!
ವಿಜಯವಾಡ: ಯಾರಿಗೂ ತಿಳಿಯದಂತೆ ಖಾಸಗಿ ಬಸ್ನಲ್ಲಿ ಸಾಗಿಸುತ್ತಿದ್ದ 5 ಕೋಟಿ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ನಲ್ಲಜರ್ಲ ವಲಯದ ವೀರವಳ್ಳಿಯಲ್ಲಿ ನಡದಿದೆ. ಟೋಲ್ ಪ್ಲಾಜಾದಲ್ಲಿ ಬಸ್ ತಪಾಸಣೆ ಮಾಡುವಾಗ ಭಾರೀ ಮೊತ್ತದ ಹಣ ಪತ್ತಯಾಗಿದ್ದು, ಬಸ್ ಚಾಲಕ ಮತ್ತು ನಿರ್ವಾಹಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಶಕ್ಕೆ ಪಡೆಯಲಾದ ಮೊತ್ತು ಸುಮಾರು 5 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಪೊಲೀಸರು ಟೋಲ್ ಪ್ಲಾಜಾದಲ್ಲಿ ಬಸ್ …
Read More »VHP, ಬಜರಂಗದಳದಿಂದ ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ :H.D.K.
ಬೆಂಗಳೂರು: ಹಲಾಲ್ ಕಟ್ V/S ಜಟ್ಕಾ ಕಟ್ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಮಾಜಿ ಸಿಎಂ ಹೆಚ್ಡಿ ಕುಮಾರ ಸ್ವಾಮಿಯವರು ಮತ್ತೆ ಹಿಂದೂ ಸಂಘಟನೆಗಳ ವಿರುದ್ದ ಸಮರ ಸಾರಿದ್ದು, ಇಂದು ಅವರು ಟ್ವಿಟ್ ಮಾಡಿ ಕಿಡಿ ಕಾರಿದ್ದಾರೆ. ಅವರು ಟ್ವಿಟ್ ನಲ್ಲಿ ಹೇಳಿರೋದು ಏನು? ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು …
Read More »ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಲಾಗಿದೆ. ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಪ್ರಧಾನಿಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿ ವಜಾಗೊಳಿಸಲಾಗಿದೆ. ರೆಹಾನ್ ಖಾನ್ ಎಂಬುವರ PILಅನ್ನು ಹೈಕೋರ್ಟ್ ವಜಾ ಮಾಡಿದೆ. ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ. ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ …
Read More »