Breaking News

ಬೆಳಗಾವಿ ಬಳಿ ಕ್ರೂಸರ್ ಪಲ್ಟಿ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ

ಬೆಳಗಾವಿ: ಬೆಳಗಾವಿ ತಾಲೂಕಿನ ಕಲ್ಯಾಳ್ ಸೇತುವೆ ಬಳಿ ಭಾನುವಾರ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. ಕಿರಣ್ ಅಶೋಕ್ ಕಳಸಣ್ಣವರ್ ಮೃತ ಕಾರ್ಮಿಕ. ಮೃತ ಕಿರಣ್ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ನಿವಾಸಿಯಾಗಿದ್ದಾರೆ. ಭಾನುವಾರ ಬೆಳಗ್ಗೆ ಕಳ್ಯಾಳ್ ಸೇತುವೆ ಬಳಿ ಕ್ರೂಸರ್ ಪಲ್ಟಿಯಾಗಿ ಭೀಕರ ಅಪಘಾತ ನಡೆದಿತ್ತು. ಸ್ಥಳದಲ್ಲೇ 7 ಮಂದಿ ಕಾರ್ಮಿಕರು ಮೃತಪಟ್ಟು, 14 …

Read More »

ಸರಕಾರದಿಂದ ನಮಗೆ ಬರಬೇಕಾದ ಮೂರು ತಿಂಗಳ ಗೌರವಧನವನ್ನು ಬಿಡುಗಡೆ ಮಾಡಿಲ್ಲ:ಅಂಗನವಾಡಿ ಕಾರ್ಯಕರ್ತೆಯರು

ಸರಕಾರ ಕಳೆದ ಮೂರು ತಿಂಗಳಿನಿಂದ ತಡೆಹಿಡಿದಿರುವ ಅಂಗನವಾಡಿ ಕಾರ್ಯ ಕರ್ತೆಯರು ಹಾಗೂ ಸಹಾಯಕಿಯರ ಗೌರವಧನವನ್ನು ಹಾಗೂ ಕೋಳಿ ಮೊಟ್ಟೆಯ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇಂದು ಪ್ರತಿಭಟನೆ ನಡೆಸಿದರು. ಹೌದು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸರಕಾರ ತಡೆಹಿಡಿದಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮೂರು …

Read More »

ಬೆಳಗಾವಿ ಡಿಸಿ ಕಚೇರಿಗೆ ಶಕ್ತಿದೇವತೆ, ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತುಕೊಂಡುಬಂದ ಜೋಗತಿಯರು

ಉತ್ತರಕರ್ನಾಟಕದ ಶಕ್ತಿದೇವತೆ, ಲಕ್ಷಾಂತರ ಭಕ್ತರ ಪಾಲಿನ ಆರಾಧ್ಯ ದೇವಿ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಸುಕ್ಷೇತ್ರದಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ಜೋಗತಿಯರು ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ತಲೆ ಮೇಲೆ ಸವದತ್ತಿ ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತುಕೊಂಡು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೋಗತಿಯರು ಯಲ್ಲಮ್ಮ ಗುಡ್ಡದಲ್ಲಿನ ಅವ್ಯವಸ್ಥೆಯ ವಿರುದ್ಧ ಅಸಮಾಧಾನ ಹೊರ ಹಾಕಿದರು. ಜಿಲ್ಲಾಡಳಿತ ಮತ್ತು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ತೀವ್ರ …

Read More »

ರಾಜವಂಶಸ್ಥ ಯದುವೀರ ಒಡೆಯರ್ ಕುಟುಂಬ ಅಂಜನಾದ್ರಿಗೆ ಭೇಟಿ

ಗಂಗಾವತಿ (ಕೊಪ್ಪಳ): ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಸೋಮವಾರ ಭೇಟಿ ನೀಡಿದರು. ಅಂಜನಾದ್ರಿ ಬೆಟ್ಟದ‌ 545 ಮೆಟ್ಟಿಲುಗಳನ್ನು ಹತ್ತಿ ದರ್ಶನ ಪಡೆದರು. ನಂತರ ಅರ್ಚಕರಿಂದ ವಿಶೇಷ ಪೂಜೆ ಸಲ್ಲಿಸಿ ಕೆಳಗಿಳಿದರು. ಈ ವೇಳೆ ದೇವಸ್ಥಾನದ ವ್ಯವಸ್ಥಾಪಕ ವೆಂಕಟೇಶ ಮಡಿವಾಳ, ಪೊಲೀಸ್ ಸಿಬ್ಬಂದಿ ಶ್ರೀನಿವಾಸ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಇದ್ದರು‌.

Read More »

ಆಪರೇಷನ್ ‌ಕಮಲಕ್ಕೆ ಪಾಪದ ಹಣ: ಸಿದ್ದರಾಮಯ್ಯ ಆರೋಪ

ಕೊಪ್ಪಳ: ಪ್ರಜಾಪ್ರಭುತ್ವಕ್ಕೆ ಆಪರೇಷನ್ ಕಮಲ ‌ಮಾರಕ‌ ಎನ್ನುವುದು ಗೊತ್ತಿದ್ದರೂ ಬಿಜೆಪಿ ಪಾಪದ ಹಣದಿಂದ ಈ‌ ಕೆಲಸ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಸಿಂಧನೂರಿಗೆ ತೆರಳುವ ಮುನ್ನ ಇಲ್ಲಿಗೆ ಸಮೀಪದ ಬಸಾಪುರ ಬಳಿ‌ ಇರುವ ಖಾಸಗಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಬಿಜೆಪಿ ಈಗ ಮಾಡುತ್ತಿರುವುದು ಎನು? ಎಂದು ಪ್ರಶ್ನಿಸಿದರು. ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ಪ್ರಜಾಪ್ರಭುತ್ವಕ್ಕೆ …

Read More »

ಮಹಾರಾಷ್ಟ್ರ ಬಂಡಾಯಕ್ಕೆ ಬಿಜೆಪಿಯೇ ಹಿಂದಿನ ಸೀಟಿನ ಚಾಲಕ: ಎಚ್‌.ಕೆ.ಪಾಟೀಲ ಕಿಡಿ

ಗದಗ: ‘ಮಹಾರಾಷ್ಟ್ರದ ಬಂಡಾಯದ ಹಿಂದೆ ಬಿಜೆಪಿ ಇದೆ. ಬಿಜೆಪಿಯೇ ಅದರ ಹಿಂದಿನ ಸೀಟಿನ ಚಾಲಕ’ ಎಂದು ಶಾಸಕ ಎಚ್‌.ಕೆ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಬಿಜೆಪಿಯವರು ಈ ಹಿಂದೆ ಕರ್ನಾಟಕದಲ್ಲಿ 17 ಮಂದಿ ಶಾಸಕರ ರಾಜೀನಾಮೆ ಕೊಡಿಸಿ, ಸಮ್ಮಿಶ್ರ ಸರ್ಕಾರ ಬೀಳಿಸಿದರು. ಅಪರೇಷನ್ ಕಮಲದ ಮುಂದಿನ ಭಾಗವಾಗಿ ಮಹಾರಾಷ್ಟ್ರದಲ್ಲಿ ಇಡೀ ಪಕ್ಷವನ್ನೇ ಒಡೆಯಲು ಬಿಜೆಪಿ ಮುಂದಾಗಿದೆ’ ಎಂದು ಅವರು ಆರೋಪ ಮಾಡಿದರು. ‘ದೇಶದ ಜನರನ್ನು …

Read More »

ಕನಕದಾಸರ ಚರಿತ್ರೆ ಹಿಂದೆ ಇದ್ದಂತೆಯೇ ಪ್ರಕಟಿಸಬೇಕು: C.M. ಬೊಮ್ಮಾಯಿ

ಬೆಂಗಳೂರು: ‘ಪಠ್ಯಪುಸ್ತಕದಲ್ಲಿ ದಾಸ ಶ್ರೇಷ್ಠ ಕನಕದಾಸರ ಜೀವನ ಚರಿತ್ರೆಯನ್ನು ಈ ಹಿಂದೆ ಇದ್ದಂತೆಯೇ ಮತ್ತೆ ಪ್ರಕಟಿಸಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಿಖಿತ ಸೂಚನೆ ನೀಡಿದ್ದಾರೆ. ಕಾಗಿನೆಲೆಯ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಕನಕದಾಸರ ಜೀವನ ಚರಿತ್ರೆ ಮತ್ತು ವಿವರಗಳನ್ನು ಕಡೆಗಣಿಸಿದೆ ಎಂದು ಸ್ವಾಮೀಜಿ ಹೇಳಿದರು. ಒಂಬತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ಒಂದು ಪುಟದಷ್ಟಿದ್ದ ಕನಕದಾಸರ …

Read More »

ಬಡವರ ಕಲ್ಯಾಣ ಕೇಂದ್ರ ಸರ್ಕಾರದ ಆಶಯ: ಸಚಿವ ಸೋಮ ಪ್ರಕಾಶ

ಬೆಳಗಾವಿ: ಕೇಂದ್ರ ಸರ್ಕಾರವು ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಬಡವರು ಹಾಗೂ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ದೇಶವು ಆರ್ಥಿಕ ಪ್ರಾಬಲ್ಯದತ್ತ ದಾಪುಗಾಲು ಹಾಕುತ್ತಿದೆ ಎಂದು ಕೇಂದ್ರ‌ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವ ಸೋಮ‌ ಪ್ರಕಾಶ ಹೇಳಿದರು.   ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಆಯೋಜಿಸಿದ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ …

Read More »

ಪೀರನವಾಡಿಯಲ್ಲಿ ವರ್ಷದೊಳಗೆ ಬಯಲು ರಂಗಮಂದಿರ ನಿರ್ಮಾಣ: ಶಾಸಕ ಅಭಯ ಪಾಟೀಲ ಭರವಸೆ

ಬೆಳಗಾವಿ: ‘ನೂತನ ಗಾಂಧಿ ಭವನ ಆವರಣದಲ್ಲಿ ಒಂದು ವರ್ಷದೊಳಗೆ ಬಯಲು ರಂಗಮಂದಿರ ಮತ್ತು ಡಿಜಿಟಲ್ ಲೈಬ್ರರಿ ನಿರ್ಮಿಸಲಾಗುವುದು’ ಎಂದು ದಕ್ಷಿಣ ಶಾಸಕ ಅಭಯ ಪಾಟೀಲ ಭರವಸೆ ನೀಡಿದರು. ತಾಲ್ಲೂಕಿನ ಪೀರನವಾಡಿಯಲ್ಲಿ ಸೋಮವಾರ ನಡೆದ ಗಾಂಧಿ ಭವನ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ‘ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದರು. ಆ ಐತಿಹಾಸಿಕ ಕ್ಷಣಕ್ಕೆ 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಈ …

Read More »

ಹುಬ್ಬಳ್ಳಿ: ಬಾಡಿಗೆ ಜಾಗದಲ್ಲಿ ವಾಸ ಮಾಡಿ, ಅಲ್ಲಿಯೇ ಗುಡಿ ಕಟ್ಟಿದ ಇನ್‌ಸ್ಪೆಕ್ಟರ್‌

ಹುಬ್ಬಳ್ಳಿ: ಸ್ವಂತ ಜಾಗದಲ್ಲಿಯೂ ಸ್ಥಳೀಯ ಆಡಳಿತದಿಂದ ಅನುಮತಿಯಿಲ್ಲದೆ ಚಿಕ್ಕ ಕಟ್ಟಡ ನಿರ್ಮಿಸಲು ಸಹ ಅವಕಾಶವಿಲ್ಲ. ಬಾಡಿಗೆ ಜಾಗದಲ್ಲಿ ವಾಸ ಮಾಡಿ, ಅಲ್ಲಿಯೇ ಒಂದು ಗುಡಿ ಕಟ್ಟುತ್ತಾರೆ ಅಂದರೆ? ಅದರಲ್ಲೂ, ಕಾನೂನು ಪಾಲನೆ ಮಾಡಬೇಕಾದ ಪೊಲೀಸ್ ಅಧಿಕಾರಿಯೇ ಗುಡಿಯನ್ನು ಅಕ್ರಮವಾಗಿ ನಿರ್ಮಿಸುತ್ತಾರೆಂದರೆ..!   ಇಂತಹದ್ದೊಂದು ಕಾನೂನು ಬಾಹಿರ ಕೃತ್ಯ ಗೋಕುಲ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ಅವರಿಂದ ನಡೆದಿದೆ. ಕಳೆದ ನಲವತ್ತು ವರ್ಷಗಳಿಂದ ಗೋಕುಲ ಪೊಲೀಸ್ ಠಾಣೆ ಸಣ್ಣ ಮತ್ತು ಮಧ್ಯಮ …

Read More »