ಬಾಗಲಕೋಟೆ: ಅಭ್ಯರ್ಥಿಗಳ ಘೋಷಣೆ: ಪಕ್ಷದಲ್ಲಿ ಬೇಗ ಅಭ್ಯರ್ಥಿಗಳ ಘೋಷಣೆ ಮಾಡಬೇಕೆನ್ನುವ ಒತ್ತಡ ಇದೆ. ಹೀಗಾಗಿ, ಖಂಡಿತ 6 ತಿಂಗಳ ಮೊದಲೇ ಘೋಷಣೆಯಾಗಬಹುದು. ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬಂದರೂ ಬರಬಹುದು. ಯಾವುದಕ್ಕೂ ಪಕ್ಷ ಸಿದ್ದವಾಗಿರುತ್ತೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಅವರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟ ಪಡಿಸಿದರು. ಸ್ವಾಮೀಜಿಗಳಿಗೆ ಸಿದ್ದರಾಮಯ್ಯ ಅವಮಾನ ವಿಚಾರ: ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ಏನು? ಹಿಂದೂ ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುವಾಗ ಮುಸ್ಲಿಂ ಹೆಣ್ಣು …
Read More »ಹಿಜಾಬ್ ಧರಿಸಿ ಯಾವುದೇ ಪರೀಕ್ಷೆ ಬರೆಯಲು ಅವಕಾಶವಿಲ್ಲ: ಶಿಕ್ಷಣ ಸಚಿವ
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಪರೀಕ್ಷೆಗಳಿಗೂ ಹಿಜಾಬ್ ಧರಿಸಿ ಹಾಜರಾಗಲು ಅವಕಾಶ ನೀಡುವುದಿಲ್ಲ. ಇದು ಬೋರ್ಡ್ ಪರೀಕ್ಷೆಗಳಿಗೂ ಅನ್ವಯಿಸುತ್ತದೆ. ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಅದೇ ಆದೇಶಾನುಸಾರ ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಕಳೆದ ವಾರ ತನ್ನ ಮಹತ್ವದ ತೀರ್ಪಿನಲ್ಲಿ, ‘ಹಿಜಾಬ್ ಇಸ್ಲಾಂನ ಅಗತ್ಯ ಆಚರಣೆಯಲ್ಲ’ ಎಂದು ಸ್ಪಷ್ಟಪಡಿಸಿದ್ದು ವಿದ್ಯಾರ್ಥಿಗಳ ಅರ್ಜಿಯನ್ನು ವಜಾಗೊಳಿಸಿತ್ತು. ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯ …
Read More »ಎಸಿಬಿಯಲ್ಲಿ ಸಿಬ್ಬಂದಿ ಕೊರತೆ: ಲೋಕಾಯುಕ್ತಕ್ಕೆ ಹೋಲಿಸಿದರೆ 300 ಹುದ್ದೆಗಳು ಕಮ್ಮಿ!
ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರುವ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಸಿಬ್ಬಂದಿ ಕೊರತೆ ಎದುರಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ಮಂಜೂರಾತಿ ಕೋರಿ ಪ್ರಸ್ತಾವನೆ ಸಲ್ಲಿಸಿ 9 ತಿಂಗಳು ಕಳೆದರೂ ರಾಜ್ಯ ಸರ್ಕಾರ ಈ ಬಗ್ಗೆ ಒಲವು ತೋರಿಸಿಲ್ಲ. ಇದು ಪ್ರಕರಣಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಇತ್ತೀಚಿನ ದಿನಗಳಲ್ಲಿ ಬಿಡಿಎ, ಬಿಬಿಎಂಪಿ ಹಾಗೂ ವಿವಿಧ ಸರ್ಕಾರಿ ಇಲಾಖೆಯ ಅಧಿಕಾರಿಗಳ ಮೇಲೆ ಎಸಿಬಿ …
Read More »ಪುರಸಭೆ ಸದಸ್ಯನ ಮೇಲೆ 6 ಜನರಿದ್ದ ಗುಂಪಿಂದ ಮಾರಣಾಂತಿಕ ಹಲ್ಲೆ
ವಿಜಯಪುರ: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಪುರಸಭೆ ಸದಸ್ಯನ ಮೇಲೆ 6 ಜನರಿದ್ದ ಗುಂಪು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಕಟ್ಟಿಗೆ, ಬಡಿಗೆಗಳಿಂದ ಮನಸೋಇಚ್ಚೆ ಹಲ್ಲೆ ಮಾಡಲಾಗಿದೆ. ಇಂಡಿ ವಾರ್ಡ್ ನಂಬರ್ 15ರ ಸದಸ್ಯ ಶಬೀರ್ ಖಾಜಿ ಹಲ್ಲೆಗೊಳಗಾಗಿದ್ದಾರೆ. ಎಂ.ಬಿ.ಮಾಣಿಕ್ ಹಾಗೂ ಆತನ ಸಹಚರರು ಹಲ್ಲೆಗೈದ ಆರೋಪಿಗಳಾಗಿದ್ದಾರೆ. ಮನೆಯ ಪಕ್ಕದ ಜಾಗಕ್ಕಾಗಿ ಪುರಸಭೆ ಸದಸ್ಯ ಮತ್ತು ಮಾಣಿಕ್ ಮಧ್ಯೆ ನಡೆದ ಜಗಳದ ವೇಳೆ ಮಾಣಿಕ್ ಮತ್ತು ಆತನ ಸಹಚರರು …
Read More »NWKSRTC ಸಿಬ್ಬಂದಿಗೆ 3 ವರ್ಷದಿಂದ ಸಿಕ್ಕಿಲ್ಲ ಸಮವಸ್ತ್ರ..
ಹುಬ್ಬಳ್ಳಿ : ವಾಯವ್ಯ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಕಳೆದೆರಡು ವರ್ಷಗಳಿಂದ ಸಂಪೂರ್ಣ ವೇತನ ಸಿಗುತ್ತಿಲ್ಲ. ಪ್ರತಿ ವರ್ಷ ನೀಡ್ತಿದ್ದ ಒಂದು ಜತೆ ಸಮವಸ್ತ್ರ ನೀಡುವ ಕ್ರಮವನ್ನೂ ಮೂರುವರ್ಷಗಳಿಂದ ಅನುಸರಿಸುತ್ತಿಲ್ಲ. ಅಧಿಕಾರಿಗಳನ್ನು ಈ ಬಗ್ಗೆ ಪ್ರಶ್ನೆ ಮಾಡಿದರೆ, ಟೆಂಡರ್ ಪ್ರಕ್ರಿಯೆಯಲ್ಲಿದೆ ಎಂಬ ರೆಡಿಮೇಡ್ ಉತ್ತರ ಕೇಳಿ ಬರುತ್ತದೆ. ವಾಯವ್ಯ ಸಾರಿಗೆ ಸಂಸ್ಥೆ ಕಳೆದೆರಡೂ ವರ್ಷಗಳಿಂದ ಸಿಬ್ಬಂದಿಗೆ ಸಂಪೂರ್ಣ ವೇತನ ನೀಡತ್ತಿಲ್ಲ. ಸಿಬ್ಬಂದಿ ಅರ್ಧಂಬರ್ಧ ವೇತನದಲ್ಲಿಯೇ ಜೀವನವನ್ನು ಸಾಗಿಸುತ್ತಿದ್ದಾರೆ. ಈ ಸಂಸ್ಥೆಯಲ್ಲಿ 23 ಸಾವಿರ …
Read More »ಅಂಗವೈಕಲ್ಯ ಮೆಟ್ಟಿ ನಿಂತು ಸಾಧನೆಯ ಶಿಖರದತ್ತ ಹುಬ್ಬಳ್ಳಿ ಹೈದನ ದಿಟ್ಟ ಹೆಜ್ಜೆ
ಹುಬ್ಬಳ್ಳಿ: ಸಣ್ಣದೊಂದು ಅಂಗವೈಕಲ್ಯ ಇಡೀ ಜೀವನವನ್ನೇ ಅಂಧಕಾರಕ್ಕೆ ತಳ್ಳಿ ಬಿಡುತ್ತದೆ. ಆದ್ರೆ ಹುಬ್ಬಳ್ಳಿಯ ಹುಡುಗನೊಬ್ಬ ತನ್ನ ಜೀವನದಲ್ಲಾದ ಒಂದು ಅವಘಡದಿಂದ ಮತ್ತೆ ಫೀನಿಕ್ಸ್ ಪಕ್ಷಿಯಂತೆ ಮೈಕೊಡವಿ ಮೇಲೆದ್ದು ಬಂದ. ಅಂಗವೈಕಲ್ಯ ಇದ್ದವರು ಕೂಡಾ ಏನು ಬೇಕಾದ್ರೂ ಸಾಧಿಸಬಹುದು ಎಂಬುದನ್ನು ನಿರೂಪಿಸಿ, ಸಾಧಿಸಿ ತೋರಿಸುತ್ತಿದ್ದಾನೆ.26 ಬಾರಿ ಶಸ್ತ್ರಚಿಕಿತ್ಸೆ: ಈ ಬಾಲಕ ವಾಣಿಜ್ಯನಗರಿ ಹುಬ್ಬಳ್ಳಿಯ ನಿವಾಸಿ ಮಂಜುನಾಥ ಬಳ್ಳಾರಿ ಎಂಬುವವರ ಪುತ್ರ. ಹೆಸರು ಸಿದ್ಧಾರ್ಥ ಬಳ್ಳಾರಿ. ಸಾಧನೆ ಮಾಡಬೇಕು ಅಂದರೆ ಅದಕ್ಕೆ ಸಾಧಿಸುವ ಛಲವೊಂದಿದ್ದರೆ …
Read More »ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
-ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು ಪರೀಕ್ಷೆ ಒಂದು ಹಬ್ಬ ಕಾರ್ಯಕ್ರಮ ಯಮಕನಮರಡಿ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಮಾವನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು …
Read More »ಸಹಕಾರಿ ಸಂಘಗಳು ರೈತರ ಜೀವನಾಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
-ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ ಹೊಸ ಸರ್ಕಾರಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಯಮಕನಮರಡಿ: ಸಕಾಲಕ್ಕೆ ಸಾಲ ಮರುಪಾವತಿಸಿದಾಗ ಮಾತ್ರ ಸಹಕಾರಿ ಸಂಘಗಳು ಮುಂದೆ ಬರಲು ಸಾಧ್ಯ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಉ. ಖಾನಾಪುರ ಗ್ರಾಮದಲ್ಲಿ ನಡೆದ ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ …
Read More »ಬೆಳಗಾವಿ ಜಿಲ್ಲೆಯ ಅರಭಾಂವಿಯಲ್ಲಿ ಅತೀ ಹೆಚ್ಚು,ಯಮಕನಮರ್ಡಿ ಕ್ಷೇತ್ರದಲ್ಲಿ ಅತೀ ಕಡಿಮೆ ಪದವೀಧರರು
ಬೆಳಗಾವಿ ಜಿಲ್ಲೆಯ ಅರಭಾಂವಿಯಲ್ಲಿ ಅತೀ ಹೆಚ್ಚು,ಯಮಕನಮರ್ಡಿ ಕ್ಷೇತ್ರದಲ್ಲಿ ಅತೀ ಕಡಿಮೆ ಪದವೀಧರರು ಬೆಳಗಾವಿ:ವಾಯುವ್ಯ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಜಯಪುರ ಬೆಳಗಾವಿ ಬಾಗಲಕೋಟೆ ಬರುತ್ತಿದ್ದು ಈ ಮೂರು ಜಿಲ್ಲೆಗಳ ಪೈಕಿ ಬೆಳಗಾವಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಪದವೀಧರ ಮತದಾರರಿದ್ದಾರೆ. ಪದವೀಧರರ ಮತದಾರರ ಇವತ್ತಿನ ಪಟ್ಟಿ ಪ್ರಕಾರ ಒಟ್ಟು 73,509 ಮತದಾರರಿದ್ದು ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು 31,293 ಪದವೀಧರರು ಬಾಗಲಕೋಟೆ ಜಿಲ್ಲೆಯಲ್ಲಿ 27,196 ಹಾಗೂ ವಿಜಯಪುರ …
Read More »ನ್ಯಾಯಾಧೀಶರಿಗೆ ಬೆದರಿಕೆ ಕರೆ; ಮತ್ತೋರ್ವ ಆರೋಪಿ ಬಂಧನ
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಧಾನಸೌಧ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜಮಾಲ್ ಮಹಮ್ಮದ್ ಉಸ್ಮಾನಿಯ ಬಂಧಿತ ಆರೋಪಿ. ಆರೋಪಿಯನ್ನು ಈಗಾಗಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿರುವ ಪೊಲೀಸರು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಈಗಾಗಲೇ ಕೋವೈ ರೆಹಮತ್ ಉಲ್ಲಾನನ್ನು ಪೊಲೀಸರು ಬಂಧಿಸಿದ್ದರು. ಇಬ್ಬರೂ ತಮಿಳುನಾಡಿನ …
Read More »