ಬೆಂಗಳೂರು: ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. 19/20 ರಲ್ಲಿ ಬಾರಿ ಪ್ರವಾಹ ಬಂದಿತ್ತು. ಆಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ. ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ರಾಜ್ಯಕ್ಕೆ ವಿಶೇಷ ಅನುದಾನ ಕೊಡಲಿಲ್ಲ. ಈಗ ಅವರಿಗೆ ರಾಜ್ಯದ ನೆನಪಾಗಿದೆ. ಆಕ್ಸಿಜನ್ ಕೊಡುವುದಕ್ಕೆ …
Read More »ಮೋದಿ ಭೇಟಿ ವಿರೋಧಿಸಲು ಬೆಂಗಳೂರಿಗೆ ಹೊರಟ ಕಾಂಗ್ರೆಸ್ ಕಿಸಾನ್ ಸದಸ್ಯರು ವಶಕ್ಕೆ
ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಅವರಿಗೆ ಇಡಿ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಅವರ ಕರ್ನಾಟಕ ಭೇಟಿ ವಿರೋಧಿಸಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾಂಗ್ರೆಸ್ ಕಿಸಾನ್ ಘಟಕದ ಸಚಿನ್ ಮೀಗಾ ಸಹಿತ 23 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿಗೆ ಹೊರಡಲು ಸಿದ್ಧರಾಗಿ ನಗರದ ನಿರೀಕ್ಷಣಾ ಮಂದಿರಕ್ಕೆ ಬಂದಿದ್ದ ಸಚಿನ್ ಮೀಗಾ, ಸಿ.ಎನ್.ಅಕ್ಮಲ್, ರಸೂಲ್ ಖಾನ್, ಇತರರನ್ನು …
Read More »ಗೋಕಾಕ: ಹಿರೆನಂದಿ ಗ್ರಾಮದಲ್ಲಿ ಹಡಪದ ಸಮಾಜದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ನೇಮಕ.
ಗೋಕಾಕ್ :ತಾಲೂಕಿನ.ಹಿರೇನಂದಿ ಹೋಬಳಿ ಘಟಕ ಶ್ರೀ ಶಿವಶರಣ ಹಡಪದ.ಅಪ್ಪಣ್ಣ ಸಮಾಜಸೇವಾ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು. ನೇಮಕಾತಿ ಆಯ್ಕೆ ಮಾಡಲಾಯಿತು. ಗೋಕಾಕ್ ತಾಲೂಕ ಅಧ್ಯಕ್ಷರು ಸಿದ್ದಪ್ಪ ನಾವಲಗಿ.ಉಪಾಧ್ಯಕ್ಷರು ಶಿವು ಯಾರನಾಳ. ಸಭೆಯ ಅಧ್ಯಕ್ಷರಾದ ಜಿಲ್ಲಾ ಕಮಿಟಿಯ ಸಹಕಾರ್ಯದರ್ಶಿ ಶ್ರೀಕಾಂತ ನಾವಿ. ಹಾಗೂ ಬೆಳಗಾವಿ ಜಿಲ್ಲಾ ಕಮಿಟಿಯ ಸದಸ್ಯರು ಶಿವಲಿಂಗ ನಾವಿ ಸಾಹಿತ್ಯ ಗಳಾದ ಶ್ರೀ ಈಶ್ವರ್ ಚಂದ್ರ ಎಸ್ ಬೆಟಿಗೇರಿ. ಹಿರೇನಂದಿ ಘಟಕದ ಕಾರ್ಯಾಧ್ಯಕ್ಷರು . ಅರ್ಜುನ್ …
Read More »ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷ್ಯ: ಶಿವಾಚಾರ್ಯ ಸ್ವಾಮೀಜಿ ಕಳವಳ
ಬೆಳಗಾವಿ: ‘ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಇಂದು ಎಲ್ಲರೂ ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ಇಲ್ಲಿನ ಹುಕ್ಕೇರಿ ಹಿರೇಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಯೋಗ ಶಿಬಿರದಲ್ಲಿ ಮಾತನಾಡಿದ ಅವರು, ‘ಇಂದು ಜನರು ಆರೋಗ್ಯ ಕಡೆಗಣಿಸುತ್ತಿದ್ದಾರೆ. ಬಳಿಕ ಜೀವನವಿಡೀ ಗಳಿಸಿದ ಹಣವನ್ನು ಆರೋಗ್ಯಕ್ಕಾಗಿ ವ್ಯಯಿಸುತ್ತಿದ್ದಾರೆ. ಯೋಗದಿಂದ ಆರೋಗ್ಯ ಮತ್ತು ಮಾನಸಿಕ ಶಾಂತಿ …
Read More »ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ.
ಹಿರೇಬಾಗೇವಾಡಿ: ಇಲ್ಲಿನ ಬಡೇಕೊಳ್ಳಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ. ಹೆದ್ದಾರಿ ಒಂದು ಬದಿಯಿಂದ ಮತ್ತೊಂದು ಬದಿಗೆ ದಾಟುವಾಗ ನವಿಲಿಗೆ ವಾಹನ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅರಣ್ಯ ಇಲಾಖೆಯವರಿಗೆ ಮೃತ ನವಿಲು ಒಪ್ಪಿಸಿದರು.
Read More »ಅಗ್ನಿ ಪತ ಬಂದ್ ಕರೆ ಟುಸ್ಸ್ ಆಗಿದೆ ಎಲ್ಲವೂ ಎಂದಿನಂತೆ ಶುರು…
ಬೆಳಗಾವಿ: ಅಗ್ನಿಪಥ ಯೋಜನೆ ವಿರೋಧಿಸಿ ಸೋಮವಾರ ಬೆಳಗಾವಿ ಬಂದ್ ಕರೆ ನೀಡಿದ ಕಾರಣ, ನಗರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಬೆಳಿಗ್ಗೆಯೇ ಕ್ಷಿಪ್ರಕಾರ್ಯ ಪಡೆ, ನಗರ ಪೊಲೀಸರು, ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿಕೊಂಡು ನಗರದ ಪ್ರಮುಖ ವೃತ್ತ, ಚೌಕ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಪರೇಡ್ ನಡೆಸಿದರು. ಇಲ್ಲಿನ ರಾಣಿ ಚನ್ನಮ್ಮ ವೃತ್ತ, ಕಾಲೇಜ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಕಿರ್ಲೋಸ್ಕರ್ಯ ರೋಡ್, ಖಡೇಬಜಾರ್ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಶಸ್ತ್ರಸಜ್ಜಿತ ಪಡೆಗಳು …
Read More »ಬಿಜೆಪಿ ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ?: ದಿನೇಶ್ ಗುಂಡೂರಾವ್
ಬೆಂಗಳೂರು: ಬಿಜೆಪಿ ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ ಸೆಕ್ಯೂರಿಟಿ ಗಾರ್ಡ್ ಮಾಡಿಕೊಳ್ಳಲು ಬಿಜೆಪಿಯವರಿಗೆ ಸೈನ್ಯಕ್ಕೆ ಸೇರಿದ ಅಗ್ನಿವೀರರೆ ಬೇಕೆ? ಯುವ ಸಮುದಾಯದ ಬಗ್ಗೆ ಬಿಜೆಪಿಯವರ ನಿಲುವೇನು ಎಂಬುದು ಅವರ ಹೇಳಿಕೆಗಳಿಂದಲೇ ತಿಳಿಯುತ್ತದೆ ಎಂದು ಬಿಜೆಪಿ ವಿರುದ್ಧ ಟ್ವಿಟ್ಟರ್ ಮೂಲಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ.ಟ್ವೀಟ್‍ನಲ್ಲಿ ಏನಿದೆ? ಅಗ್ನಿಪಥ್ ವಿರುದ್ದ ಹೋರಾಡುತ್ತಿರುವ ಯುವಕರ ಬಗ್ಗೆ ಬಿಜೆಪಿಯವರ ಹೇಳಿಕೆಗಳು ಆ ಪಕ್ಷದ ಮನೋವಿಕಾರವನ್ನು ಅನಾವರಣ ಮಾಡಿದೆ. ಯೋಜನೆಯ ಮೂಲಕ …
Read More »ಮೋದಿ ಭೇಟಿ ಹಿನ್ನೆಲೆ ಶಾಲೆ ಬಂದ್: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ
ಜೂ. 20: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಬೆಂಗಳೂರಿನಲ್ಲಿ ಐಐಎಸ್‌ಸಿ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮೋದಿ ಭೇಟಿ ಹಿನ್ನಲೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟೀಕಿಸಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಯಿಂದಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಶಾಲೆಗಳನ್ನು ಮುಚ್ಚಿರುವುದು ಸಮರ್ಥನೀಯವೇ ಎಂದು ಕರ್ನಾಟಕ ಪ್ರದೇಶ …
Read More »ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 16 ಸಾವಿರ ಕಾರ್ಡ್ ರದ್ದು
ಶಿವಮೊಗ್ಗ: ಸರ್ಕಾರ ಮತ್ತು ಸರ್ಕಾರಿ ಅನುದಾನದ ಸಂಸ್ಥೆಗಳು ಸರ್ಕಾರಿ ಪ್ರಾಯೋಜಿತ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ -ಮಂಡಳಿಗಳನ್ನು ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ಪಡೆದುಕೊಳ್ಳುವಂತಿದಿಲ್ಲ. ಹೀಗಿದ್ದರೂ, ಸುಳ್ಳು ಮಾಹಿತಿ ನೀಡಿ ಹೆಚ್ಚಿನವರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಜೀವನೋಪಾಯಕ್ಕಾಗಿ ವಾಣಿಜ್ಯ ವಾಹನ ಓಡಿಸುವವರನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನ ಇರುವ ಕುಟುಂಬಗಳು ಮತ್ತು 1.20 …
Read More »ಮಾಧ್ಯಮ ದೂರವಿಟ್ಟು ಕಾಡು ಸುತ್ತಿದ ಅರಣ್ಯ ಸಚಿವ ಉಮೇಶ್ ಕತ್ತಿ
ಚಾಮರಾಜನಗರ, ಜೂನ್ 20: ಅರಣ್ಯ ಸಚಿವ ಉಮೇಶ್ ಕತ್ತಿ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದರಾದರೂ, ಮಾಧ್ಯಮದವರಿಂದ ಅಂತರ ಕಾಯ್ದುಕೊಂಡು ಕಾಡು ಸುತ್ತಿದ್ದಾರೆ. ಜೊತೆಗೆ, ಅಧಿಕಾರಿಗಳ ಸಭೆಯನ್ನು ನಡೆಸಿದ್ದಾರೆ. ಬಿಳಿಗಿರಿರಂಗನ ಬೆಟ್ಟ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಯಲ್ಲಿ ವಾಸ್ತವ್ಯ ಹೂಡಿದ್ದ ಅವರು ಭಾನುವಾರ ವನ್ಯಜೀವಿ ಸಫಾರಿ ನಡೆಸಿದ್ದಲ್ಲದೇ, ಮಾನವ ವನ್ಯಜೀವಿ ಸಂಘರ್ಷ ತಡೆಗೆ ರೈಲು ಕಂಬಿಗಳು ಕೊರತೆ ಹಿನ್ನೆಲೆ ಬೇಲಿಗಳನ್ನು ಅಳವಡಿಸಲು ಮುಂದಾಗಿರುವುದಾಗಿ ತಿಳಿದುಬಂದಿದೆ. ಸಚಿವರ ಖಾಸಗಿ ಭೇಟಿ …
Read More »
Laxmi News 24×7