Breaking News

ಶಾಲಾ ಮಕ್ಕಳನ್ನು ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಿಸಿದ ಗ್ರಾಮಸ್ಥರು

ಗದಗ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಗಜೇಂದ್ರಗಡ ತಾಲೂಕಿನ ದ್ಯಾಮುಣಶಿ ಗ್ರಾಮದ ಬಳಿಯ ಹಳ್ಳವು ತುಂಬಿ ಹರಿಯುತ್ತಿದ್ದು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಜಲಾವೃತವಾಗಿವೆ. ಈ ಪರಿಸ್ಥಿತಿಯಲ್ಲಿ ಸೂಡಿ ಗ್ರಾಮದ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಮಕ್ಕಳು ತೀವ್ರ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಸೂಡಿ ಗ್ರಾಮದ ಶಾಲೆಯಿಂದ ದ್ಯಾಮುಣಶಿ ಗ್ರಾಮಕ್ಕೆ ಬಸ್​ನಲ್ಲಿ ತೆರಳುತ್ತಿದ್ದ ಮಕ್ಕಳು, ಹಳ್ಳದಲ್ಲಿನ ಅಧಿಕ ನೀರಿನಿಂದಾಗಿ ದಡದಲ್ಲಿಯೇ ಇಳಿಯಬೇಕಾಯಿತು. ಬಸ್ ಚಾಲಕನಿಗೆ ಹಳ್ಳವನ್ನು ದಾಟಲು ಸಾಧ್ಯವಾಗದೆ, …

Read More »

ಸಿಸೇರಿಯನ್ ಹೆರಿಗೆಯಾದ ಎರಡೇ ದಿನಕ್ಕೆ ಬಾಣಂತಿ ಸಾವು

ದಾವಣಗೆರೆ: ಸಿಸೇರಿಯನ್​ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಎರಡೇ ದಿನದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟ ಘಟನೆ ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ದುರ್ಗಮ್ಮ (21) ಎಂಬವರೇ ಮೃತ ಬಾಣಂತಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿರುವ ತನ್ನ ತಾಯಿ ಮನೆಗೆ ಹೆರಿಗೆ ಬಂದಿದ್ದ ಅವರಿಗೆ ಮೂರು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಪೋಷಕರು ತಕ್ಷಣ ಹತ್ತಿರದ ಹರಪನಹಳ್ಳಿ …

Read More »

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್

ಬೆಂಗಳೂರು(ಜೂ.13): ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ …

Read More »

ಬಸ್​​-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

ಹಾವೇರಿ: ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ದಾವಣಗೆರೆ ಮೂಲದ ಪ್ರವೀಣ (36) ಮತ್ತು ವಿಜಯ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ, ಕೊಟ್ರೇಶ ಅಬಲೂರ ಎಂಬವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟಿತ್ತು. ಈ ವೇಳೆ, ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಬಸ್​ಗೆ ಕಾರು ಡಿಕ್ಕಿಯಾಗಿ …

Read More »

ಹುಬ್ಬಳ್ಳಿ- ರಾಮೇಶ್ವರಂ- ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಅವಧಿ ವಿಸ್ತರಣೆ:

ಹುಬ್ಬಳ್ಳಿ: ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಮಂಡಳಿಯು 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಈ ರೈಲು ಇನ್ನು ಮುಂದೆ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣ ಕೊನೆಗೊಳಿಲಿದೆ. ಈ ಹಿಂದೆ ರಾಮೇಶ್ವರಂನಲ್ಲಿ ಕೊನೆಗೊಳ್ಳುತ್ತಿದ್ದ 07355 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ ರಾಮನಾಥಪುರಂನಲ್ಲಿ ಕೊನೆಗೊಳ್ಳಲಿದೆ. …

Read More »

ತಾಯಿ ಬದುಕಿದ್ದಾಗಲೇ ಮರಣ ಪ್ರಮಾಣ ಪತ್ರ ಸೃಷ್ಟಿಸಿದ ಮಗ

ಹಾವೇರಿ: ತಾಯಿ ಜೀವಂತವಿರುವಾಗಲೇ ಮಗನೋರ್ವ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿರುವ ಪ್ರಕರಣ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ವರದಿಯಾಗಿದೆ. ಶಿಗ್ಗಾಂವಿಯ ಖಾಜೇಖಾನ್​ ಗಲ್ಲಿಯ ಶೌಕತ್ ಅಲಿ (39) ಜೀವಂತವಿರುವ ತಾಯಿಯ ಮರಣಪತ್ರ ಸೃಷ್ಟಿಸಿರುವ ಆರೋಪಿಯಾಗಿದ್ದಾನೆ. 60 ವರ್ಷದ ವಯೋವೃದ್ಧೆ ಹೂರಾಂಬಿ ಮುಲ್ಕಿ ಎಂಬವರು ಒಂಟಿಯಾಗಿ ಪಟ್ಟಣದಲ್ಲಿ ಜೀವನ ನಡೆಸುತ್ತಿದ್ದಾರೆ. ಅವರ ಮಗ ಶೌಕತ್​ ತಾಯಿಯನ್ನು ತೊರೆದು ಹುಬ್ಬಳ್ಳಿಯಲ್ಲಿ ವಾಸವಾಗಿದ್ದಾನೆ. ಸುಮಾರು 2 ಎಕರೆ ಜಮೀನು ಹೂರಾಂಬಿ ಹಾಗೂ ಪುತ್ರನ ಜಂಟಿ ಖಾತೆಯಲ್ಲಿತ್ತು. …

Read More »

ನ್ಯಾಯಾಲಯಕ್ಕೆ ಶರಣಾದ ಶಾಸಕ ವಿನಯ್ ಕುಲಕರ್ಣಿ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್​ ಸದಸ್ಯ ಯೋಗೇಶ್​ ಗೌಡ ಕೊಲೆ ಪ್ರಕರಣದ ಆರೋಪಿ ಶಾಸಕ ವಿನಯ್ ಕುಲಕರ್ಣಿ ಶುಕ್ರವಾರ ನ್ಯಾಯಾಲಯದ ಮುಂದೆ ಶರಣಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಅಲ್ಲದೆ, ವಿನಯ್ ಕುಲಕರ್ಣಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಸುಪ್ರೀಂ …

Read More »

ಲೋಕ ಅದಾಲತ್ ನಲ್ಲಿ ಕಕ್ಷಿದಾರರು ದ್ವೇಷವನ್ನು ಕಟ್ಟಿಕೊಂಡು‌ ಹಳೆಯ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.‌ ಅಂಥವರನ್ನು ಒಂದುಗೂಡಿಸಿ ಇಬ್ಬರು ಕಕ್ಷಿದಾರರಿಗೆ ಮನವರಿಕೆ ಮಾಡಿಕೊಟ್ಟು ಪ್ರಕರಣವನ್ನು ಇತ್ಯರ್ಥಗೊಳಿಸುವ ಪ್ರಯತ್ನವನ್ನು ಮಾಡಲಾಗುವುದು

ಬೆಳಗಾವಿ ರಂದು ಬೆಳಗಾವಿಯಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದಿಂದ ಲೋಕ ಅದಾಲತ್ ನಡೆಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶ್ ಸಂದೀಪ್ ಪಾಟೀಲ್ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋಕ ಅದಾಲತ್ ನಲ್ಲಿ ಕಕ್ಷಿದಾರರು ದ್ವೇಷವನ್ನು ಕಟ್ಟಿಕೊಂಡು‌ ಹಳೆಯ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.‌ ಅಂಥವರನ್ನು ಒಂದುಗೂಡಿಸಿ ಇಬ್ಬರು ಕಕ್ಷಿದಾರರಿಗೆ ಮನವರಿಕೆ ಮಾಡಿಕೊಟ್ಟು ಪ್ರಕರಣವನ್ನು ಇತ್ಯರ್ಥಗೊಳಿಸುವ ಪ್ರಯತ್ನವನ್ನು ಮಾಡಲಾಗುವುದು ಎಂದರು. ಲೋಕ ಅದಾಲತ್ ನಿಂದ ನೆಮ್ಮದಿಯ ಬದುಕು ಕಟ್ಟಿಕೊಳ್ಳಬಹುದು. ಕಕ್ಷಿದಾರರ ಸಮಯ, ಹಣ …

Read More »

ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ

ಖಾನಾಪೂರದ ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ  ಹೌದು ಖಾನಾಪೂರ ತಾಲೂಕಿನ ಕಾಡಂಚಿನ ಮಕ್ಕಳಿಗೆ ಶಾಲೆಗೆ ಹೋಗುವುದೇ ಒಂದು ಸವಾಲಿನ ಕೆಲಸ ಪ್ರತಿದಿನವೂ ಸುಮಾರು ಕಿಲೋಮೀಟರ್ ದೂರದಿಂದ ತಮ್ಮ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಹರಸಾಹಸ ಪಡುವ ಕೆಲವು ಭಾಗಗಳಲ್ಲಿ ನಡೆಯುತ್ತಿದೆ. ಇಂತಹಾ ಒಂದು ಪರಿ ಬೆಳಗಾವಿ ಡಿಡಿಪಿಐ ಅವರಿಗೆ ಕಂಡಿತು ಡಿಡಿಪಿಐ ಲೀಲಾವತಿ ಹಿರೇಮಠ ಅವರು ಖಾನಾಪೂರ …

Read More »

ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು

ಇವತ್ತು ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಯು ಬಹಳ ದಿನಗಳಿಂದ ತಕರಾರದಲ್ಲಿತ್ತು ಇವತ್ತು ಈ ಭೂಮಿಯನ್ನು ಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು ಗ್ರಾಮದ ಸಮಸ್ತ ನಾಗರಿಕರು ಕೂಡಿಕೊಂಡು ಇದನ್ನು ಮೋಜ ಮಾಪ ಮಾಡಲು ತಕರಾರು ಇದೆ ಅಂತ ಹೇಳಿದರು ಈ ಒಂದು ಸ್ಥಳಕ್ಕೆ CPI PSI ಹಾಗೂ ಅವರ ಸಿಬ್ಬಂದಿ ಹಾಜರಿದ್ದರು PDO ತಲಾಟಿ ಸರ್ಕಲ ಡೆಪೊಟಿ ತಹಸೀಲ್ದಾರ್ ಹಾಗೂ ಸತೀಶಣ್ಣಾ ಜಾರಕಿಹೊಳಿಯವರ ಆಪ್ತ …

Read More »