ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದ ಹಲವೆಡೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ. ಭಾರೀ ಗಾತ್ರದ ಮರಗಳೂ ವರುಣ ಆರ್ಭಟಕ್ಕೆ ಧರೆಗುರುಳಿದ್ದು, ಅವುಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಗರಪಾಲಿಕೆ ಮುಂದಾಗಿದೆ.ಕೆಲ ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದೆ. ನಿನ್ನೆ ಬೆಂಗಳೂರಿನಲ್ಲಿ ಸೃಷ್ಟಿಸಿದ ಅವಾಂತರಗಳು ಇದಕ್ಕೆ ಸಾಕ್ಷಿಯಾಗಿದೆ. …
Read More »ಮೋದಿ ಬಂದ್ರೂ ಮಣಿದಿಲ್ಲ, ಸವದಿ ಏನ್ ಮಾಡ್ತಾನ್?
ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಆರಂಭಗೊಂಡಿವೆ. “ಉದಯವಾಣಿ’ ಕಳೆದ ಏ.20ರಂದು “ಎಂ.ಬಿ.ಪಾಟೀಲ ವಿರುದ್ಧ ಲಕ್ಷ್ಮಣ ಸವದಿ ಸ್ಪರ್ಧೆ?’ ಎಂಬ ತಲೆಬರಹದಲ್ಲಿ ಪ್ರಕಟವಾಗಿದ್ದ ವಿಶೇಷ ವರದಿ ಇದೀಗ ಸಾಕಷ್ಟು ಸದ್ದು ಮಾಡಿದೆ. “ಬಬಲೇಶ್ವರ ಕ್ಷೇತ್ರದಲ್ಲಿ ಮೋದಿ ಬಂದ್ರೂ ಏನೂ ಮಾಡಿಕೊಳ್ಳಲಾಗಿಲ್ಲ, ಮಣಿಸಲಾಗಿಲ್ಲ. ಇನ್ನ ಸವದಿ ಬಂದೇನ್ ಮಾಡ್ತಾನ್’ ಎಂದು ಬಬಲೇಶ್ವರ ಹಾಲಿ ಶಾಸಕರೂ ಆಗಿರುವ ಮಾಜಿ ಮಂತ್ರಿ, ಕೆಪಿಸಿಸಿ ಪ್ರಚಾರ …
Read More »ಇಂದು ಚಂದ್ರ ದರ್ಶನವಾಗದ ಕಾರಣ ನಾಳೆ ಬದಲು ನಾಡಿದ್ದು ಮಂಗಳವಾರ ರಂಜಾನ್
ಬೆಂಗಳೂರು: ಇಂದು ಚಂದ್ರದರ್ಶನ ವಾಗದ ಹಿನ್ನೆಲೆಯಲ್ಲಿ ಸೋಮವಾರದ ಬದಲು ಮಂಗಳವಾರ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಂದ್ರದರ್ಶನವಾಗದ ಕಾರಣ ಮಂಗಳವಾರ ರಂಜಾನ್ ಆಚರಿಸಲಾಗುವುದು ಎನ್ನಲಾಗಿದೆ. ಮೇ 3 ರಂದು ರಂಜಾನ್ ನಿಗದಿಯಾಗಿತ್ತು. ರಾಜ್ಯದಲ್ಲಿ ಮೇ 2 ರಂದು ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಆದರೆ, ಚಂದ್ರದರ್ಶನವಾಗದ ಕಾರಣ ಸೋಮವಾರದ ಬದಲು ಮಂಗಳವಾರ ರಂಜಾನ್ …
Read More »ಟಿಕೆಟ್‍ಗಾಗಿ ಸೆರಗು, ಪಂಚೆ ಹಿಡಿದುಕೊಂಡು ಬರಬೇಡಿ: ಬಿ.ಎಲ್. ಸಂತೋಷ್ ಎಚ್ಚರಿಕೆ
ಮೈಸೂರು,: ‘ಟಿಕೆಟ್ ಯಾರಿಗೆ ಕೊಡಬೇಕು ಮತ್ತು ಬಿಡಬೇಕು ಎಂಬುದು ಗೊತ್ತಿದೆ. ಟಿಕೆಟ್ ಕೊಡುವ ಮುನ್ನ ಎಲ್ಲರ ಅಭಿಪ್ರಾಯ ಸಲಹೆ ಪಡೆಯಲಾಗುತ್ತಿದೆ. ನಮ್ಮ ಕಡೆಯವರಿಗೆ ಟಿಕೆಟ್ ಕೊಡಬೇಕೆಂದು ಸೆರಗು, ಪಂಚೆ ಹಿಡಿದುಕೊಂಡು ಬೆಂಗಳೂರಿಗೆ ಬರುವುದು ಬೇಡ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ನೀಡಿದರು. ನಗರದ ಖಾಸಗಿಹೋಟೆಲ್‍ನಲ್ಲಿ ದಕ್ಷಿಣ ಪದವೀಧರರ ಕ್ಷೆತ್ರದ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪ್ರಮುಖ ನಾಯಕರುಗಳ ಸಭೆ ನಡೆಸಿ ಅವರು ಮಾತನಾಡಿದ ಅವರು, ‘ಜನರೊಡನೆ …
Read More »ಕಾರ್ಮಿಕ ದಿನದಂದೇ KSRTC ನೌಕರರಿಗೆ ಸಿಕ್ತು ಸಿಹಿ ಸುದ್ದಿ: 7200 ನೌಕರರ ಶಿಸ್ತು ಪ್ರಕರಣ ಮನ್ನಾ
ಬೆಂಗಳೂರು: ಇಂದು ಮೇ.1ರ ಕಾರ್ಮಿಕ ದಿನಾಚರಣೆ. ಈ ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿಯೇ, ಕೆ ಎಸ್ ಆರ್ ಟಿ ಸಿ ನೌಕರರಿಗೆ ( KSRTC Employees ) ನಿಗಮವು ಭರ್ಜರಿ ಗಿಫ್ಟ್ ನೀಡಿದೆ. ಅದೇ.. ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ ಮಾಡಲಾಗಿದೆ. ಹತ್ತು ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ, ಕೂಡಲೇ ಕರ್ತವ್ಯಕ್ಕೆ ಹಾಜರಾಗುವ ನೌಕರರ …
Read More »PSI ನೇಮಕಾತಿ ಹಗರಣ: ಕಾಂಗ್ರೆಸ್ ಜತೆಗಿನ ನಂಟಿನ ಬಗ್ಗೆ ಸಿಐಡಿ ಎದುರು ತಿಳಿಸಿದ ದಿವ್ಯಾ ಹಾಗರಗಿ
ಕಲಬುರಗಿ: ತನಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೂ ಇರುವ ನಂಟನ್ನು ಸಿಐಡಿ ತನಿಖಾ ತಂಡದ ಎದುರು ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಹಿರಂಗ ಪಡಿಸಿದ್ದಾರೆ. ದಿವ್ಯಾಗೆ ಆಶ್ರಯ ನೀಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಸುರೇಶ ಕಾಟೇಗಾಂವರನ್ನು ಬಂಧಿಸಲಾಗಿದೆ. ಸುರೇಶ ಕಾಟೇಗಾಂವ ಸಹೋದರಿ ಸುರೆಖಾ ಕೂಡ ಕಾಂಗ್ರೆಸ್ ನಾಯಕಿ. ಸುರೇಖಾ ಅವರು ಮಹಾರಾಷ್ಟ್ರದ ಅಕ್ಕಲಕೋಟ ತಾಲೂಕು ಪಂಚಾಯತ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿದ್ದಾರೆ. ಸುರೇಶಗೆ ಅಫಜಲಪುರದಲ್ಲಿ ಮರಳು ಬ್ಲಾಕ್ …
Read More »ಅರವಿಂದ್ ಬೆಲ್ಲದ್ ರಾಜ್ಯಾಧ್ಯಕ್ಷರಾದ್ರೆ; ಬೊಮ್ಮಾಯಿ ಸಿಎಂ ಸ್ಥಾನಕ್ಕೆ ತೊಂದ್ರೆ!
ಬೆಂಗಳೂರು, ಮೇ. 01: ಈ ಹಿಂದೆ ಸಿಎಂ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಬಿಜೆಪಿ ಹಿರಿಯ ನಾಯಕ ಅರವಿಂದ್ ಬೆಲ್ಲದ್ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಒಟ್ಟ ಒಲಿಯುವ ಸಾಧ್ಯತೆ. ಬೆಲ್ಲದ್ ಬಿಜೆಪಿ ರಾಜ್ಯಾಧ್ಯಕ್ಷರಾದರೆ ಸಿಎಂ ಹುದ್ದೆಯಿಂದ ಬೊಮ್ಮಾಯಿ ಅವರನ್ನು ಇಳಿಸಿ ಒಕ್ಕಲಿಗ ಸಮುದಾಯದ ನಾಯಕರೊಬ್ಬರನ್ನು ಸಿಎಂ ಖುರ್ಚಿಯಲ್ಲಿ ಕೂರಿಸಲಾಗುತ್ತದೆ! ಇದು ರಾಜಕೀಯ ಪಡಸಾಲೆಯಲ್ಲಿ ಬಲವಾಗಿ ಕೇಳಿ ಬರುತ್ತಿರುವ ಸುದ್ದಿ. ಬಿಜೆಪಿ ಪಕ್ಷದಲ್ಲಿ ಎರಡು ದಿನದಿಂದ ಬಹು ಚರ್ಚಿತ ಸಂಗತಿಗಳಿವು. ರಾಜ್ಯದಲ್ಲಿ …
Read More »PSI ನೇಮಕಾತಿ ಹಗರಣ: ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿ!
ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಆರೋಪಿ ದಿವ್ಯಾ ಹಾಗರಗಿ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಒಡತಿ. ಇದೇ ಶಾಲೆಯಲ್ಲಿ ಅಕ್ರಮ ನಡೆದಿರುವ ಆರೋಪವಿದೆ. ಪರೀಕ್ಷೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ದಿವ್ಯಾ ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ. ಎರಡು ಟೀಮ್ಗಳಿಂದಲು ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ದಿವ್ಯಾ ಬಾಯಿಬಿಟ್ಟಿದ್ದಾರೆ. ಆ …
Read More »ಮದುವೆ ನೋಂದಾಯಿಸಲು ನಕಲಿ ಶಾಲಾ ದೃಢೀಕರಣ ಪತ್ರ: ತನಿಖೆಗೆ ಡಿಡಿಪಿಐ ಆದೇಶ
ಹರಿಹರ: ಶಾಲೆಯಲ್ಲಿ ಓದದೆ ಇರುವ ಯುವತಿಯೊಬ್ಬರಿಗೆ ಶಾಲಾ ದೃಢೀಕರಣ ಪತ್ರ ನೀಡಿದ ಆರೋಪ ಎದುರಿಸುತ್ತಿರುವ ತಾಲ್ಲೂಕಿನ ರಾಮತೀರ್ಥ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ರೈತ ಮುಖಂಡ ಬೇವಿನಹಳ್ಳಿ ಮಹೇಶ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ವಾಸಿ ಎನ್ನಲಾದ ಯುವತಿಯೊಬ್ಬರು ತಾವು ಪ್ರೇಮಿಸಿದ ಯುವಕನೊಂದಿಗೆ ಇಲ್ಲಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ …
Read More »GPL T-20 ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಚಾಲನೆ!
ಗೋಕಾಕ: ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಪ್ರಾಯೋಜಕತ್ವದಲ್ಲಿ ಗೋಕಾಕ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೇದರ್ ಬಾಲ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …
Read More »
Laxmi News 24×7