Breaking News

ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲು

ಬೆಳಗಾವಿ: ಕೋವಿಡ್ 3ನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಔಷಧಿಗಳೂ ಲಭ್ಯ ಇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಜ.1ರಿಂದ ಆರಂಭವಾದ ಅಲೆ ವೇಗವಾಗಿ ಹರಡುತ್ತಿದೆ. ನಿಯಂತ್ರಣಕ್ಕೆ ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 1,05,233 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ …

Read More »

ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ

ನವದೆಹಲಿ : ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆಮಾಡಿದೆ. 1949ರ ನವೆಂಬರ್ 26ರಂದು ರಚಿಸಲಾದ ದೇಶದ ಸಂವಿಧಾನವನ್ನು 1950ರ ಜನವರಿ 26ರಂದು ಅಂಗೀಕರಿಸಲಾಯಿತು. ಈ ದಿನವನ್ನು ದೇಶದ ಗಣರಾಜ್ಯೋತ್ಸವ ಎಂದು ಆಚರಿಸಲಾಗುತ್ತದೆ. ಭಾರತದ ಗಣರಾಜ್ಯೋತ್ಸವವು ಕೇವಲ ಆಚರಣೆಯಾಗಿರದೆ, ಅದು ದೇಶದ ರಾಜತಾಂತ್ರಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ಈ ಬಾರಿ ಮಹಾಮಾರಿ ಕೊರೊನಾ ನಡುವೆಯೂ ಗಣತಂತ್ರ ದಿನದ ಆಚರಣೆಗೆ ಇಡೀ ದೇಶ ಸನ್ನದ್ಧವಾಗಿದೆ. ಈ ದಿನದ ಇಂದು ಭಾರತೀಯ ಸೇನಾ ಪಡೆಗಳು ಮತ್ತು …

Read More »

ಬೆಳಗಾವಿ ಜಿಲ್ಲೆಯಲ್ಲಿ ಸಿಡಿದ ಕೊರೊನಾ ಬಾಂಬ್: ಇಂದು 977 ಪಾಸಿಟಿವ್, 4 ಸಾವು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಮೆರೆದಿದೆ. ಇಂದು ಹೊಸದಾಗಿ 977 ಹೊಸ ಕೊರೊನಾ ಕೇಸ್‍ಗಳು ಪತ್ತೆಯಾಗಿವೆ. ಅದೇ ರೀತಿ ನಾಲ್ವರು ಸಾವನ್ನಪ್ಪಿದ್ದಾರೆ.ಮಂಗಳವಾರ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ 977 ಹೊಸ ಕೇಸ್‍ಗಳು ಕಾಣಿಸಿಕೊಂಡಿವೆ. ಅದೇ ರೀತಿ ಇಂದು ನಾಲ್ವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ 36 ವರ್ಷ ವ್ಯಕ್ತಿ, 64 ವರ್ಷದ ವೃದ್ಧ, 73 …

Read More »

ನಾನು ಯಾವ ಕಡೆ ಇಲ್ಲ: ಬಿಜೆಪಿ ಪಕ್ಷದ ಪರವಾಗಿ ಇದ್ದೇನೆ: ದುರ್ಯೋಧನ ಐಹೊಳೆ

ನಾನಂತು ಸಚಿವಗಿರಿಗಾಗಿ ಗುಂಪುಗಾರಿಕೆ, ಜಗಳ ಮಾಡಲ್ಲ. ಸಚಿವ ಸ್ಥಾನ ಕರೆದು ಕೊಟ್ಟರೇ ನಿಭಾಯಿಸುತ್ತೇವೆ. ಸಚಿವ ಸ್ಥಾನ ಬೇಕು ಎಂದು ಹಠ ಮಾಡಲ್ಲ. ನಮ್ಮ ನಾಯಕರಾದ ಗೋವಿಂದ ಕಾರಜೋಳ ಅವರು ಇರೋ ತನ ನಾವು ಮಂತ್ರಿ ಸ್ಥಾನ ಕೇಳುವುದಿಲ್ಲ ಎಂದು ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ದುರ್ಯೋಧನ ಐಹೊಳೆ ಬಿಜೆಪಿ ಪಕ್ಷದ ಚಿಹ್ನೆ ಮೇಲೆ ಮೂರು ಬಾರಿ …

Read More »

ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.   ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು …

Read More »

ಗೋವಾದಲ್ಲಿ ಕಾಂಗ್ರೆಸ್‌ ಗೆಲುವು ಖಚಿತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  ಪಣಜಿ: ಗೋವಾ ಚುವಾವಣೆಯಲ್ಲಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯ ಸಾಧಿಸಲಿದ್ದು, ಕಾಂಗ್ರೆಸ್‌ ಅಧಿಕಾರ ಹಿಡಿಯುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಚುನಾವಣೆ ವೀಕ್ಷಕ ಸತೀಶ್‌ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗೋವಾ ರಾಜ್ಯದ ಮಡಗಾವನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗೋವಾದಲ್ಲಿ 40 ವಿಧಾನಸಭಾ ಕ್ಷೇತ್ರಗಳಿದ್ದು, 37 ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂದು ತಿಳಿಸಿದರು. ಗೋವಾ ಮತ್ತು ಬೆಳಗಾವಿಗೆ ಉತ್ತಮ ನಂಟು ಹೊಂದಿದ್ದು, …

Read More »

ಶಾಲೆಯಲ್ಲೇ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ- ದೃಶ್ಯ ಮೊಬೈಲ್‌ನಲ್ಲಿ ಸೆರೆ

ಮೈಸೂರು: ಶಾಲೆಯಲ್ಲೇ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯ ಹೆಚ್‌.ಡಿ ಕೋಟೆ ತಾಲೂಕಿನ ಶಾಲೆವೊಂದರಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ ದೃಶ್ಯ ಅದೇ ಶಾಲೆಯ ವಿದ್ಯಾರ್ಥಿಗಳ ಮೊಬೈಲ್​ನಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಹರಿದಾಡ್ತಿದ್ದು, ವಿಡಿಯೋ ಬಗ್ಗೆ ತಿಳಿಯುತ್ತಿದಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿನಿಯ ಪೋಷಕರು ಹೆಚ್​​.ಡಿ ಕೋಟೆ ಬಿಇಓ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ …

Read More »

ಎಂಆರ್ ಲಸಿಕೆ ಪಡೆದು ಮಗು ಸಾವು: ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಮೊರೆ ಹೋದ ಪಾಲಕರು..!

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ 13 ತಿಂಗಳ ಮಗು ಮಧು ಉಮೇಶ ಕುರಗುಂದಿ ಎಂಆರ್ ಲಸಿಕೆಯನ್ನು ಪಡೆದು ಸಾವನ್ನಪ್ಪಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಮಗುವಿನ ಸಾವಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.ಈ ಹಿಂದೆಯೇ ರಾಮದುರ್ಗ ತಾಲೂಕಿನಲ್ಲಿ ಈ ಎಂಆರ್ ಲಸಿಕೆಯನ್ನು ಹಾಕಿಸಿದ್ದಕ್ಕೆ ಮೂರು ಮಕ್ಕಳು ಸಾವನ್ನಪ್ಪಿದ್ದವು. ಸಾಲಹಳ್ಳಿಯ ಅದೇ ಪ್ರಾಥಮಿಕ ಕೇಂದ್ರದ ಸ್ಟ್ಯಾಫ್ ನರ್ಸ್ ಸಲೀಮಾ ಮಹಾತ್ ನೀಡಿದ ಎಂ.ಆರ್ ಲಸಿಕೆಯಿಂದ 13 …

Read More »

ಕಾಂಗ್ರೆಸ್‍ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ರಮೇಶ ಜಾರಕಿಹೊಳಿ

ಕಾಂಗ್ರೆಸ್‍ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್ ಒಪ್ಪಿದರೆ ಅವರನ್ನು ಪಕ್ಷಕ್ಕೆ ಕರೆತರುವೆ ಎನ್ನುವ ಮೂಲಕ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ತಾಂತ್ರಿಕ ಕಾರಣದಿಂದ 16 ಜನ ಅಲ್ಲಿಯೇ ಇದ್ದಾರೆ. ಆ ಸಂದರ್ಭದಲ್ಲಿ ನಮ್ಮ ಜತೆ ಬರಲಿಲ್ಲ. ಕಾಂಗ್ರೆಸ್‍ನ 16 …

Read More »

ವಿದ್ಯಾರ್ಥಿಗಳ ಎದುರಲ್ಲಿ ವೈದ್ಯೆಯ ಮೇಲೆಯೇ ಪ್ರೊಫೆಸರ್ ಲೈಂಗಿಕ ಕಿರುಕುಳ

ಹಾಸನ; ಡ್ಯೂಟಿ ಡಾಕ್ಟರ್ ಮೇಲೆಯೇ ಮೆಡಿಕಲ್ ಕಾಲೇಜು ಪ್ರೊಫೆಸರ್ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದ್ದು, ಹಾಸನ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಲೋಕೇಶ್ ರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.   ಹಾಸನ ಮೆಡಿಕಲ್ ಕಾಲೇಜಿನಲ್ಲಿಯೇ ಈ ಘಟನೆ ನಡೆದಿದ್ದು, ತರಬೇತಿ ವೈದ್ಯೆಯಾಗಿ ಸೇರಿಕೊಂಡಿದ್ದ ಯುವತಿ ಮೇಲೆ ಡಾ.ಲೋಕೇಶ್ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾಗಿದೆ. ಜನವರಿ 12ರಂದು ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯೆ ರೋಗಿಯೊಬ್ಬಗರಿಗೆ ಚಿಕಿತ್ಸೆ ನೀಡುತ್ತಿದ್ದರು ಈ ವೇಳೆ ವಿದ್ಯಾರ್ಥಿಗಳ ಎದುರಲ್ಲಿಯೇ …

Read More »