Breaking News

ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಮೂರು ಪಕ್ಷಗಳು ಮೇಕೆದಾಟು ಯೋಜನೆ ನೆಪದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ

ಬೆಂಗಳೂರು, – ಪರಿಸರ ಉಳಿವಿಗಾಗಿ ಮೇಕೆದಾಟು ಯೋಜನೆಯ ಜಾರಿಯಾಗಬಾರದು ಎಂದು ಪರಿಸರ ಸಂರಕ್ಷಣಾ ಸಮಿತಿಯಿಂದ ಪ್ರೆಸ್ ಕ್ಲಬ್ ಆವರಣದಲ್ಲಿ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಸಂವಾದದಲ್ಲಿ ಭಾಗವಹಿಸಿದ್ದರು ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಮಾತನಾಡುತ್ತಾ ಮೇಕೆದಾಟು ಪರವಾಗಿದ್ದೇವೆ ಆದರೆ ಅಲ್ಲಿ ಕಟ್ಟುವ ಡ್ಯಾಮಿಗೆ ನಮ್ಮ ವಿರೋಧ ಇದೆ . ಭೂಮಿಯ ಮೇಲೆ ಸ್ವತಂತ್ರವಾಗಿ ನಿರ್ಭೀತಿಯಿಂದ ಜೀವಿಸುವ ಹಕ್ಕು …

Read More »

ರಾಯಬಾಗ ತಾಲೂಕಿನ ಮುಳಗಳಖೋಡ ಶ್ರೀ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಕೋವಿಡ್ ರೂಲ್ಸ್ ಬ್ರೇಕ್

ಚಿಕ್ಕೋಡಿ : ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಶ್ರೀ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ನೂರಾರು ಜನರು ಸೇರಿ ಜಾತ್ರೆ ಮಾಡುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಆದರೆ, ಸಂಬಂಧಿಸಿದ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪಕ್ಕದ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಹಾಗೂ ಕೊರೊನಾ ಸೋಂಕಿತ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆದ್ರೆ, ಮಹಾರಾಷ್ಟ್ರದ ಗಡಿಗೆ ಹೊಂದಿರುವ ಚಿಕ್ಕೋಡಿಯಲ್ಲಿ ಮಾತ್ರ ಅಧಿಕಾರಿಗಳು ನಿರ್ಲಕ್ಷ್ಯತೆ ತೋರಿಸುತ್ತಿದ್ದಾರೆ. ಜನರಿಗೆ …

Read More »

ಒಂದಲ್ಲ..ಎರಡಲ್ಲ..11 ಬಾರಿ ಕೋವಿಡ್ ಲಸಿಕೆ ಪಡೆದ ಭೂಪ..!

ಒಂದು ವರ್ಷದ ಅವಧಿಯಲ್ಲಿ 11 ಬಾರಿ ಕೋವಿಡ್ ಲಸಿಕೆಯನ್ನು 84 ವರ್ಷದ ವೃದ್ಧ ವ್ಯಕ್ತಿಯೊರ್ವ ಪಡೆದಿರುವ ಘಟನೆ ಬಿಹಾರದಲ್ಲಿ ಕಂಡು ಬಂದಿದೆ. ಬಿಹಾರದ ಮಾಧೇಪುರ ಜಿಲ್ಲೆಯ ನಿವಾಸಿ ಬ್ರಹ್ಮದೇವ್ ಮಂಡಲ್ ಎಂಬ ವೃದ್ಧ ವ್ಯಕ್ತಿಯೇ 11 ಬಾರಿ ಲಸಿಕೆ ಪಡೆದ ಪುಣ್ಯಾತ್ಮ. ಬ್ರಹ್ಮದೇವ್ ಮಂಡಲ್ ಅಂಚೆ ಇಲಾಖೆಯ ನಿವೃತ್ತ ಸರ್ಕಾರಿ ನೌಕರ. ಈ ವಾರದ ಆರಂಭದಲ್ಲಿ 12ನೇ ಬಾರಿಗೆ ಕೋವಿಡ್ ಲಸಿಕೆ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಬ್ರಹ್ಮದೇವ್ ಮಂಡಲ್ ಅವರು ಆರೋಗ್ಯ …

Read More »

ಕುಂದಾನಗರಿಯಲ್ಲಿ ನೀರಿಗಾಗಿ ಹಾಹಾಕಾರ:

ಕುಂದಾನಗರಿ ಬೆಳಗಾವಿ ನಗರದಲ್ಲಿ ನೀರಿಗಾಗಿ ಹಾಹಾಕಾರ. ವಾಲ್ಮನ್‍ಗಳ ಪ್ರತಿಭಟನೆಯಿಂದ ಆಜಾದ್ ನಗರದ ನಿವಾಸಿಗಳಿಗೆ ಕಳೆದ 11ದಿನಗಳಿಂದ ನೀರು ಬಾರದ ಕಾರಣ ಆಜಾದ್ ನಗರ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಆಜಾದ್ ನಗರದಲ್ಲಿ ಕಳೆದ 12ದಿನಗಳಿಂದ ನೀರುಬಂದಿಲ್ಲ. ವಾಲ್ಮನ್‍ಗಳು ನಡೆಸಿದ ಸ್ಟ್ರೈಕ್‍ನಿಂದ ನೀರು ಸರಬುರಾಜಲ್ಲಿ ವ್ಯತ್ಯಯವಾಗುತ್ತಿದೆ. ಹಾಗಾಗಿ ಆಜಾದ್ ನಗರದ ನಿವಾಸಿಗಳಿಗೆ ಕಳೆದ 11ದಿನಗಳಿಂದ ನೀರು ಬಾರದೇ ಕಂಗಾಲಾಗಿದ್ದಾರೆ. ಇನ್ನು ಮಹಿಳೆಯರು ಮಕ್ಕಳು ಎನ್ನದೇ ಎಲ್ಲರೂ ನಗರದ ಅಶೋಕ್ ಸರ್ಕಲ್‍ನಲ್ಲಿ …

Read More »

ರಾಜ್ಯದಲ್ಲಿ ಕೊರೊನಾ ಬ್ಲಾಸ್ಟ್‌ : ಬೆಂಗಳೂರಿನಲ್ಲಿ 20,121, ರಾಜ್ಯದಲ್ಲಿ 28,723 ಹೊಸ ಕೇಸ್ ಪತ್ತೆ, ವೈರಸ್‌ಗಿಂದು 14 ಮಂದಿ ಬಲಿ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ( Coronavirus ) ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 28,723 ಜನರಿಗೆ ಕೊರೊನಾ ಸೋಂಕು ( Corona Positive ) ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಅವರು, ಕಳೆದ 24 ಗಂಟೆಯಲ್ಲಿ 2,21,205 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 20,121 ಸೇರಿದಂತೆ …

Read More »

ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ: ಫೆ.1ರಂದು ಕೇಂದ್ರ ಬಜೆಟ್ ಮಂಡನೆ |

ನವದೆಹಲಿ: ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ( Budget session for FY22 ) ದಿನಾಂಕ ನಿಗದಿ ಪಡಿಸಲಾಗಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಆ ಬಳಿಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.   ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ( Budget session …

Read More »

ಚೇಂಬರ್-ಚೇರು ಬಿಟ್ಟರೆ ಈ ಹುದ್ದೆಯಲ್ಲಿ ಮತ್ತೇನೂ ಇಲ್ಲ : ರೇಣುಕಾಚಾರ್ಯ

ಬೆಂಗಳೂರು, ಜ.14-ರಾಜಕೀಯ ಕಾರ್ಯದರ್ಶಿ ಹುದ್ದೆ ಕೇವಲ ಹೋದ್ಯ ಪುಟ್ಟ, ಬಂದ್ಯಾ ಪುಟ್ಟ ಎಂಬಂತಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೇಂಬರ್ ಮತ್ತು ಚೇರು ಬಿಟ್ಟರೆ ಈ ಹುದ್ದೆಯಲ್ಲಿ ಮತ್ತೇನೂ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಕಿಡಿ: ಸರ್ಕಾರವನ್ನು ಅಸ್ತಿರ ಗೊಳಿಸಲು , ಬಿಜೆಪಿಗೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ನಾಟಕೀಯವಾಗಿ ಪಾದಯಾತ್ರೆ ಮಾಡಿದ್ದರು …

Read More »

ಗೋವಾ : 40 ಕ್ಷೇತ್ರಗಳ ಪೈಕಿ 38ರಲ್ಲಿ ಮಾತ್ರ ಬಿಜೆಪಿ ಸ್ಪರ್ಧೆ

ಪಣಜಿ,ಜ.14- ಪ್ರಸ್ತುತ ಗೋವಾದಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಂದಿನ ತಿಂಗಳು ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯದಲ್ಲಿ 40 ವಿಧಾನಸಭಾ ಕ್ಷೇತ್ರಗಳ ಪೈಕಿ 38ರಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ಇಂದು ತಿಳಿಸಿದ್ದಾರೆ.ಬೆನೌಲಿಮ್ ಮತ್ತು ನುವೆಮ್ ಈ ಕ್ಷೇತ್ರಗಳಲ್ಲಿ ಪಕ್ಷವು ತನ್ನ ಚಿಹ್ನೆಯಡಿ ಯಾವುದೇ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುತ್ತಿಲ್ಲ ಎಂದು ಅವರು ಸುದ್ದಿ ಸಂಸ್ಥೆಗೆ ಹೇಳಿದ್ದಾರೆ. ಸಾಂಪ್ರದಾಯಿಕವಾಗಿ ಬೆನೌಲಿಮ್ ಮತ್ತು ನುವೆಮ್ ಕ್ಷೇತ್ರಗಳ ಮತದಾರರು …

Read More »

ಮದ್ಯ ಸೇವಿಸಿ ನಿದ್ರೆಗೆ ಜಾರಿದ ಕಾರು ಚಾಲಕ, ಹಾರಿ ಹೋಯ್ತು 7 ಜನರ ಪ್ರಾಣ..!

ದಾವಣಗೆರೆ:- ಇಂಡಿಕಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಏಳು ಜನ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಣಕಟ್ಟೆ ಟೋಲ್ (NH 13) ರಲ್ಲಿ ಜರುಗಿದೆ. ಈ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ರಭಸವಾಗಿ ಬರುತ್ತಿದ್ದಾ ಕಾರು ಚಲಾಯಿಸುತ್ತಿದ್ದಾ ಕಾರು ಚಾಲಕ ಮದ್ಯ ಸೇವಿಸಿ ನಿದ್ದೆಗೆ ಜಾರಿದ ಪರಿಣಾಮ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು …

Read More »

ಲಂಚ ಪಡೆಯುವಾಗ ರೆಡ್​ಹ್ಯಾಂಡ್ ಆಗಿ ಸಿಕ್ಕಿ ಬಿದ್ದು ಜೈಲುಪಾಲಾಗಿದ್ದ ಪಿಎಸ್‌ಐಗೆ ಅದ್ಧೂರಿ ಸ್ವಾಗತ!

ವಿಜಯನಗರ: ಇದು ಪೊಲೀಸ್​ ಇಲಾಖೆಗೆ ಮುಜುಗರ ಉಂಟು ಮಾಡುವ ಸುದ್ದಿ. ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದು, ಜೈಲು ಸೇರಿ, ಬಿಡುಗಡೆಯಾದ ಪೊಲೀಸ್​ ಸಬ್​ಇನ್ಸ್​ಪೆಕ್ಟರ್​ಗೆ ಭರ್ಜರಿ ಸ್ವಾಗತ ಕೋರುವ ಮೂಲಕ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದ್ದಾರೆ.   ಈ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕೊಟ್ಟರು ಠಾಣೆಯ ಪಿಎಸ್​ಐ ನಾಗಪ್ಪ, 2.50 ಲಕ್ಷ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಕೈಗೆ ರೆಡ್ …

Read More »