ತುರುವೇಕೆರೆ ಪೊಲೀಸ್ ಠಾಣೆ ಮುಂದೆ ನಿಂತಿರುವ ಎಸ್ಪಿ ರಾಹುಲ್ ಕುಮಾರ್ ಶಹಾಪುರವಾಡ್ ಅವರ ಕಾರು ಮತ್ತು ಪಿಎಸ್ಐ ಶಿವಲಿಂಗಯ್ಯ ಇಷ್ಟಕ್ಕೂ ಈ ಪ್ರಕರಣ ಏನು ಅಂತಂತಂದ್ರೆ… ಅದು ಆಗಸ್ಟ್ 28 , 2021 ರಂದು ದಾಖಲಾಗಿದ್ದ ಪ್ರಕರಣ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಾಗೇಂದ್ರಪ್ಪ ಹಾಗೂ ಪಕ್ಕದ ಮನೆಯ ಚಂದನ್, ಶಿವಪ್ರಕಾಶ್ ನಡುವೆ ಮಾಮೂಲಿ ಸಣ್ಣ ಮಟ್ಟದ ಜಗಳ ನಡೆದಿತ್ತು. ಮನೆ ಮುಂದೆ ಕೊಬರಿ ಮೊಟ್ಟೆ ಹಾಕಿದ್ದಕ್ಕೆ …
Read More »ಇಂದು ಈ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ₹ 2.11 ಇಳಿಕೆ: ನಿಮ್ಮ ನಗರದ ಬೆಲೆ ಎಷ್ಟಿದೆ ಗೊತ್ತಾ?
ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಉಳಿದ …
Read More »ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ತರಬೇತಿ ಅಗತ್ಯವಿದೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಮನ್ ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು ಆನ್ ಲೈನ್ ಮೂಲಕ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಆವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. …
Read More »ಬ್ಯಾಂಕ್‌ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್ ಸೀಲ್‌ಡೌನ್
ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬ್ಯಾಂಕ್‌ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್ ಸೀಲ್‌ಡೌನ್ ಮಾಡಿರುವ ಘಟನೆ ನಡೆದಿದೆ. ಸೋಮವಾರಪೇಟೆ ಪಟ್ಟಣದಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಎಲ್ಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಬ್ಯಾಂಕ್ ಮುಚ್ಚಿದೆ. ವಹಿವಾಟಿಗೆ ಬ್ಯಾಂಕ್ ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಹೊಸ ಮಾರ್ಗಸೂಚಿ …
Read More »ರಾಜ್ಯದಲ್ಲಿ ಮತ್ತೆ ಮಹಾಮಾರಿ ಕೊರೊನಾ ರಣಕೇಕೆ , ಹೊಸದಾಗಿ 25005 ಪಾಸಿಟಿವ್ ಕೇಸ್,ಬೆಳಗಾವಿ ಜಿಲ್ಲೆಯಲ್ಲಿ 276 ಕೇಸ್‍ಗಳು ಪತ್ತೆ
ರಾಜ್ಯದಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಇಂದು ಹೊಸದಾಗಿ 25005 ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ 276 ಕೇಸ್‍ಗಳು ಪತ್ತೆಯಾಗಿವೆ. ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ರಾಜ್ಯದಲ್ಲಿ 25005 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದೇ ರೀತಿ 8 ಜನರು ಇಂದು ಸಾವನ್ನಪ್ಪಿದ್ದಾರೆ. ಇಂದು ಶೇ.12.39ರಷ್ಟು ಪಾಸಿಟಿವಿಟಿ ರೇಟ್ ದಾಖಲಾಗಿದೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ 276 …
Read More »ಮೇಲ್ಮನೆ ರಾಜಕೀಯ ಪುನರ್ವಸತಿ ಕೇಂದ್ರವಾಗುತ್ತಿರುವುದು ದುರದೃಷ್ಟಕರ: ಬಸವರಾಜ ಹೊರಟ್ಟಿ
ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಪರಿಷತ್, ರಾಜಕೀಯ ಪುನರ್ವಸತಿ ಕೇಂದ್ರದಂತಾಗುತ್ತಿರುವುದು ದುರದೃಷ್ಟಕರ ಎಂದು ಸಭಾಪತಿ ಬಸವರಾಜ ಹೊರಟ್ಟಿ ವಿಷಾದ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 114 ವರ್ಷ ಇತಿಹಾಸವಿರುವ ಪರಿಷತ್‍ಗೆ ತನ್ನದೇ ಆದ ಘನತೆಯಿದೆ. ಅದಕ್ಕೆ ಚ್ಯುತಿಯಾಗದಂತೆ ಉಳಿಸಿ ಮುಂದುವರಿಸಿಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಕಿರಿಯ ವಯಸ್ಸಿನವರೇ ಹೆಚ್ಚಾಗಿ ಆರಿಸಿ ಬಂದಿದ್ದು, ಸೂಕ್ತ ತರಬೇತಿ, ಮಾಹಿತಿ ನೀಡಲು ಕ್ರಮ ವಹಿಸಲಾಗುತ್ತಿದೆ. ಪರಿಷತ್‍ಗೆ ಸಾಧ್ಯವಾದಷ್ಟು …
Read More »ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋದಲ್ಲಿ ಮಿಂಚಿದ ಬಾಲಕಿ ದುರಂತ ಸಾವು
ಬೆಂಗಳೂರು: ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಆರು ವರ್ಷದ ಬಾಲಕಿ ಟಿಪ್ಪರ್ ಹರಿದು ಮೃತಪಟ್ಟಿರುವ ಘಟನೆ ಕುಮಾರಸ್ವಾಮಿ ಪೊಲೀಸ್ ಠಾಣೆಯ ಕೋಣನಕುಂಟೆ ಕ್ರಾಸ್ ಬಳಿ ಸಂಭವಿಸಿತು. ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಮೃತಪಟ್ಟ ಬಾಲಕಿ. ಅಪಘಾತ ವೇಳೆ ಗಾಯಗೊಂಡಿರುವ ತಾಯಿ ಅಮೃತಾ ನಾಯ್ಡು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮ್ಮನೊಂದಿಗೆ ಸಮನ್ವಿ ಅಮೃತಾ ನಾಯ್ಡು ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಗುರುವಾರ ಸಂಜೆ ಕೋಣನಕುಂಟೆ ರಸ್ತೆಯಿಂದ …
Read More »ಮಕರ ಸಂಕ್ರಾಂತಿ ಹಬ್ಬದ ಮಹತ್ವ, ಆಚರಣೆ
ಮಾನವೀಯ ಸಂಬಂಧ ಬೆಸೆಯುವ ಉತ್ತರಾಯಣ ಪುಣ್ಯಕಾಲದ ಮಕರ ಸಂಕ್ರಾಂತಿ ಹಬ್ಬವನ್ನು ರಾಜ್ಯದಲ್ಲಿಂದು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತದೆ. ಸೂರ್ಯನು ತನ್ನ ಚಲನೆಯನ್ನು ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಪಥವನ್ನು ಬದಲಿಸುವ ದಿನವನ್ನು ದೇಶದಲ್ಲಿ ಮಕರ ಸಂಕ್ರಮಣ ಎಂದು ಆಚರಿಸುತ್ತೇವೆ. ಈ ಹಬ್ಬವನ್ನು ವಿವಿಧ ರಾಜ್ಯಗಳಲ್ಲಿ ಒಂದೊಂದು ಹೆಸರಿನಲ್ಲಿ ಕರೆಯಲಾಗುತ್ತದೆ. ಕರ್ನಾಟಕದಲ್ಲಿ ಸುಗ್ಗಿ, ತಮಿಳುನಾಡಿನಲ್ಲಿ ಪೊಂಗಲ್, ಕೇರಳದಲ್ಲಿ ಮಕರವಿಳಕ್ಕು ಹಾಗೂ ತೆಲುಗು ರಾಜ್ಯಗಳಾದ ಆಂಧ್ರ, ತೆಲಂಗಾಣದಲ್ಲಿ ಭೋಗಿ ಹಬ್ಬವನ್ನಾಗಿ ಆಚರಿಸುತ್ತಾರೆ. ಈ ದಿನ ಶ್ರೀರಾಮನ ಪೂಜೆಯನ್ನು …
Read More »355 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 42,000 ಸಂಬಳ
karnataka Village Accountant Recruitment 2022: ಕರ್ನಾಟಕ ಕಂದಾಯ ಇಲಾಖೆಯು(Karnataka Revenue Department) 355 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ಉದ್ಯೋಗ(Government Job) ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಕ್ಟೋಬರ್ 25ರಂದು ಕರ್ನಾಟಕ ಗ್ರಾಮ ಲೆಕ್ಕಿಗ(Village Accountant) ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ revenue.kar.nic.in ಗೆ ಭೇಟಿ ನೀಡಿ. ಅರ್ಜಿ …
Read More »ಮೂರನೇ ಹಂತದ ಕೋವಿಡ್ ಅಲೆ ಜೋರಾಗಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ
ನವದೆಹಲಿ: ದೇಶದಲ್ಲಿ ಮೂರನೇ ಹಂತದ ಕೋವಿಡ್ ಅಲೆ ಜೋರಾಗಿದೆ. ಪ್ರತಿದಿನ ಲಕ್ಷಾಂತರ ಹೊಸ ಹೊಸ ಸೋಂಕಿತ ಪ್ರಕರಣಗಳು ದಾಖಲಾಗ್ತಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಈ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಕೋವಿಡ್ ವಿರುದ್ಧ ಲಸಿಕೆ ಅತ್ಯುತ್ತಮ ಅಸ್ತ್ರ. ಯಾವುದೇ ಕಾರಣಕ್ಕೂ ಭಯ, ಗಾಬರಿಯಾಗಬೇಡಿ ಎಂದರು. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪಿಎಂ ವಿಡಿಯೋ ಕಾನ್ಫರೆನ್ಸ್ವೈದ್ಯಕೀಯ …
Read More »