Breaking News

ಕೋರ್ಟ್ ಅಭಿಪ್ರಾಯ, ಸರ್ಕಾರದ ಆದೇಶ ಪಾಲನೆಯ ಸದ್ಬುದ್ಧಿ ಕೊಡಲಿ: ಪ್ರೀತಂಗೌಡ

ಹಾಸನ: ಪಾದಯಾತ್ರೆ ಮಾಡಿದ್ರೆ ಮಾತ್ರ ಮತ ಹಾಕ್ತಾರೆ ಅನ್ಕೊಂಡ್ರೆ ಮತ ಹಾಕದೇ ಇರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಶಾಸಕ ಪ್ರೀತಂಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಮೇಕೆದಾಟು ಪಾದಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಎಲ್ಲರೂ ಅವರವರ ಇತಿಮಿತಿಯಲ್ಲಿರಬೇಕು. ರಾಜಕೀಯ ಪಕ್ಷವೂ ಸೇರಿದಂತೆ ಎಲ್ಲರೂ ತಮ್ಮ ಮಿತಿಯಲ್ಲಿ ಇರಬೇಕು. ಆರೋಗ್ಯ ಕಾಪಾಡಿಕೊಳ್ಳೋದಕ್ಕೆ ಎಲ್ಲರೂ ಸೂಕ್ಷ್ಮವಾಗಿರಬೇಕು. ನಿಯಮಪಾಲನೆ ಮಾಡಬೇಕು. ನಾನಂತೂ ಪಾಲನೆ ಮಾಡ್ತಾ ಇದ್ದೇನೆ. ಭಾರತೀಯ ಜನತಾ ಪಾರ್ಟಿಯೂ ಪಾಲನೆ ಮಾಡುತ್ತಿದೆ …

Read More »

ಗೋವು ತಲೆ ರಸ್ತೆ ಬದಿ ಎಸೆದ ಪ್ರಕರಣ: ಆರೋಪಿಗಳ ಬಂಧನಕ್ಕೆ ಕಾಂಗ್ರೆಸ್ ಮನವಿ

ಮಂಗಳೂರು: ಗೋವಿನ ತಲೆಯನ್ನು ರಸ್ತೆ ಬದಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಗುರುವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಭೇಟಿ ಮನವಿ ಸಲ್ಲಿಸಿದೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೀರ್ತಿ ನಗರದಲ್ಲಿ ದುಷ್ಕರ್ಮಿಗಳು ಗೋವಿನ ರುಂಡವನ್ನು ಗೋಣಿ ಚೀಲದಲ್ಲಿ ಕಟ್ಟಿ ರಸ್ತೆ ಬದಿಯಲ್ಲಿ ಬಿಸಾಡಿತ್ತು. ಇದರಿಂದಾಗಿ ಸಮಾಜದಲ್ಲಿ …

Read More »

UP Election – ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ 50 ಮಹಿಳೆಯರು,

ನವದೆಹಲಿ: ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 125 ಅಭ್ಯರ್ಥಿಗಳು ಪಟ್ಟಿಯಲ್ಲಿದ್ದು, ಅವರ ಪೈಕಿ 50 ಮಂದಿ ಮಹಿಳಾ ಅಭ್ಯರ್ಥಿಗಳಿದ್ದಾರೆ. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಬಿಡುಗಡೆ ಮಾಡಿದರು. ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಅವರನ್ನು ಕಾಂಗ್ರೆಸ್ ಉನ್ನಾವ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ …

Read More »

ಮಾಸ್ಕ್, ಸಾಮಾಜಿಕ ಅಂತರ ಮರೆತು ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಮಾರುತಿ ಅಷ್ಟಗಿ

ಚಿಕ್ಕೋಡಿ: ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ಮಾರ್ಗಸೂಚಿಗಳನ್ನು ಜಾರಿ ಮಾಡಿದರೂ ಬಿಜೆಪಿ ಮುಖಂಡರಿಂದಲೇ ನಿಯಮಗಳನ್ನು ಉಲ್ಲಂಘಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿವಾಡಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಮಾರುತಿ ಅಷ್ಟಗಿ ಅದ್ಧೂರಿ ಸಮಾರಂಭದಲ್ಲಿ ಚಿಕ್ಕಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟಗೊಳ್ಳುತ್ತಿದ್ದು, ಗಡಿ ಜಿಲ್ಲೆಯಲ್ಲೆ ಈ ರೀತಿ ಸರ್ಕಾರದ ನಿಯಮಗಳನ್ನು ಬಿಜೆಪಿ ಮುಖಂಡರು ಗಾಳಿಗೆ …

Read More »

ಯಮಕನಮರಡಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಕಸ ವಿಲೇವಾರಿ ವಾಹನಕ್ಕೆ ಚಾಲನೆ

ಯಮಕನಮರಡಿ: ಎಲ್ಲ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ಯಮಕರನಮಡಿ ಕ್ಷೇತ್ರವನ್ನು ರಾಜ್ಯದಲ್ಲಿ ಮಾದರಿಯನ್ನಾಗಿ ಮಾಡಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಕರೆ ನೀಡಿದರು.     ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಹಮ್ಮಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.     ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಸದಸ್ಯರು ಸ್ವಚ್ಛತೆ ಕಾರ್ಯಕ್ರಮ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ. …

Read More »

ಟಿಪ್ಪರ್-ಬೈಕ್ ಡಿಕ್ಕಿ: ಸ್ಥಳದಲ್ಲಿಯೇ ಅಂಬೇವಾಡಿ ಯುವಕ ದುರ್ಮರಣ

ಟಿಪ್ಪರ್ ಮತ್ತು ಬೈಕ್ ಮಧ್ಯ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಬೆಳಗಾವಿಯ ಬಾಕ್ಸೈಟ್ ರೋಡ್‍ನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ 10.30ರ ಸುಮಾರಿಗೆ ಟಿಪ್ಪರ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಂಬೇವಾಡಿಯ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿಖಿಲ್ ಬಸವಂತ್ ಕಾಟ್ಕರ್(24) ಮೃತ ದುರ್ದೈವಿ. ಟಿಪ್ಪರ್ ಸಂಖ್ಯೆ ಕೆಎ 22ಬಿ 1389ರ ಚಾಲಕ ಬೈಕ್‍ಗೆ ಡಿಕ್ಕಿ ಹೊಡೆದು, ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ಗ್ರಾಮಾಂತರ …

Read More »

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ವಿರುದ್ಧ ಸರ್ಕಾರದ ಕಾರ್ಯದರ್ಶಿಗೆ ದೂರು

ಬೆಂಗಳೂರು, ಜ. 13: ಪೊಲೀಸ್ ‘ಸಿಂಗಂ’ ಎಂದು ಕರೆಸಿಕೊಳ್ಳುವ ರವಿ ಡಿ. ಚನ್ನಣ್ಣನವರ್ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳು ಆರೋಪಿಗಳಿಂದ 50 ಲಕ್ಷ ರೂ. ವಸೂಲಿ ಮಾಡಿರುವ ಗಂಭೀರ ಅರೋಪ ಕೇಳಿ ಬಂದಿದೆ. ಈ ಕುರಿತು ಸಂತ್ರಸ್ತ ವ್ಯಕ್ತಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದ ದೂರನ್ನು ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶ ಮಾಡಲಾಗಿದೆ.   ಸದ್ಯ ಸಿಐಡಿಯಲ್ಲಿ ಎಸ್ಪಿಯಾಗಿರುವ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್, ಅಂದಿನ ಡಿವೈಎಸ್ಪಿ …

Read More »

ಪಾಸ್‌ಪೋರ್ಟ್ ಹೊಂದಿರುವವರು ಈಗ ವೀಸಾ ಇಲ್ಲದೆ ಪ್ರಪಂಚದ 60 ದೇಶಗಳಿಗೆ ಭೇಟಿ ನೀಡಬಹುದಾಗಿದೆ.

2022 ರಲ್ಲಿ ವಿಶ್ವದ ಅತ್ಯಂತ ಪ್ರಬಲ ಪಾಸ್‌ಪೋಟ್‌ಗಳ ಪೈಕಿ ಭಾರತದ ಶ್ರೇಯಾಂಕವು ಏಳು ಸ್ಥಾನಗಳಿಗೆ ಸುಧಾರಿಸಿ 83 ನೇ ಸ್ಥಾನಕ್ಕೆ ತಲುಪಿದೆ. ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರು ಈಗ ವೀಸಾ ಇಲ್ಲದೆ ಪ್ರಪಂಚದ 60 ದೇಶಗಳಿಗೆ ಭೇಟಿ ನೀಡಬಹುದಾಗಿದೆ. ಭಾರತವು 2022 ರಲ್ಲಿ ತನ್ನ ಪಾಸ್‌ಪೋರ್ಟ್ ಬಲವನ್ನು ಸುಧಾರಿಸಿಕೊಂಡಿದ್ದು, ಕಳೆದ ವರ್ಷದ 90 ನೇ ಸ್ಥಾನದಿಂದ ಏಳು ಸ್ಥಾನಗಳನ್ನು ಮೇಲೇರಿ ಈಗ 83 ನೇ ಸ್ಥಾನಕ್ಕೆ ತಲುಪಿದೆ. ಈಗ ಪೂರ್ವ ವೀಸಾ …

Read More »

ಐದೇ ದಿನಕ್ಕೆ ಮೊಟಕುಗೊಂಡ ಮೇಕೆದಾಟು ಪಾದಯಾತ್ರೆ

ರಾಮನಗರ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಬ್ರೇಕ್ ಹಾಕಲು ಹೈಕಮಾಂಡ್ ಸೂಚಿಸಿದ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹೈಕೋರ್ಟ್ ನೋಟೀಸ್, ರಾಜ್ಯ ಸರ್ಕಾರದ ಎಚ್ಚರಿಕೆ, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ, ಕೊರೊನಾ ಸೋಂಕು ಕಡಿಮೆಯಾದ ಬಳಿಕ ಪಾದಯಾತ್ರೆಯನ್ನು ಮತ್ತೆ ಮುಂದುವರಿಸೋದು, …

Read More »

ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನಗಳ ಸಂಚಾರ ಸಂಪೂರ್ಣ ಬ್ಯಾನ್!

ಬೆಂಗಳೂರು: ಬೆಂಗಳೂರು ಹೊರವಲಯದ ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸವಾರರ ಮೇಲೆ ದಾಳಿಗಳು ಮತ್ತು ದರೋಡೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜನವರಿ 16ರಿಂದ ಜಾರಿಗೆ ಬರುವಂತೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ದ್ವಿಚಕ್ರ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ. ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್​ ಆಯುಕ್ತ (Joint Commissioner of Police, Traffic Bengaluru City) ಡಾ. ಬಿ ಆರ್​ ರವಿಕಾಂತೇ ಗೌಡ (Dr. …

Read More »