ನವದೆಹಲಿ: ಸುಪ್ರೀಂಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 150 ಮಂದಿ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 32 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ ನಾಲ್ವರಿಗೆ ಪಾಸಿಟಿವ್ ಪತ್ತೆಯಾಗಿದೆ. ಇಬ್ಬರಿಗೆ ಗುರುವಾರವೇ ಸೋಂಕು ಕಾಣಿಸಿಕೊಂಡಿತ್ತು. ಇತ್ತೀಚೆಗೆ ನಿವೃತ್ತರಾದ ನ್ಯಾಯಮೂರ್ತಿ ಆರ್.ಸುಬ್ಬಾಶ್ ರೆಡ್ಡಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗಿಯಾಗಿದ್ದ ನಾಲ್ವರು ನ್ಯಾಯಮೂರ್ತಿಗಳಿಗೆ ಪಾಸಿಟಿವ್ ದೃಢಪಟ್ಟಿದೆ.
Read More »ಹಾವು ಕಚ್ಚಿ ವಿದ್ಯಾರ್ಥಿ ಸಾವು
ಮೈಸೂರು: ಹಾವು ಕಚ್ಚಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ಭಾನುವಾರ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ವಿಶ್ವಚೇತನ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅಬ್ರಾರ್ ಪಾಷ ಎಂಬಾತನೇ ಹಾವು ಕಚ್ಚಿ ಸಾವನ್ನಪ್ಪಿದ ವಿದ್ಯಾರ್ಥಿ. ಭಾನುವಾರ ರಜೆಯಿದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಕೊಳ್ಳೇಗಾಲದಿಂದ ತಲಕಾಡಿಗೆ ಬಂದಿದ್ದನು. ಇಲ್ಲಿನ ಕಾವೇರಿ ನದಿ ಮತ್ತು ಮರಳಿನಲ್ಲಿ ಓಡಾಡುತ್ತಾ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಾ ಸುತ್ತಮುತ್ತ ಓಡಾಡುತ್ತಿದ್ದ ವೇಳೆ ಬದಿಯಲ್ಲಿದ್ದ …
Read More »ಕಿತ್ತೂರು ಪಟ್ಟಣದ ಬಾಲಕಿಯರ ವಸತಿ ಶಾಲೆಯ 68 ವಿದ್ಯಾರ್ಥಿಗಳಿಗೆ ಸೋಂಕು ದೃಢ
ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಬಾಲಕಿಯರ ವಸತಿ ಶಾಲೆಯ 68 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.ಕಿತ್ತೂರು ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 15 ರಿಂದ 18ವರ್ಷದ 68 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳ ಹಿಂದೆ 12 ವಿದ್ಯಾರ್ಥಿನಿಯರಿಗೆ ಸೋಂಕು ದೃಢಪಟ್ಟಿತ್ತು. ಸೋಂಕಿತರ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೋಲಾರದ ದೇವರಾಜ್ ಅರಸು ಮೆಟ್ರಿಕ್ ನಂತರದ ವಸತಿ ಶಾಲೆಯಲ್ಲಿ 6 ವಿದ್ಯಾರ್ಥಿನಿಯರು ಹಾಗೂ ಅಡುಗೆಭಟ್ಟನಿಗೆ ಕೊರೊನಾ …
Read More »ರಾಜಧಾನಿ ಬೆಂಗಳೂರಲ್ಲೇ ಶೇ.10ರ ಗಡಿ ದಾಟಿದ ಕೊರೊನಾ!
ಬೆಂಗಳೂರು: ನಗರದಲ್ಲಿ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದರಿಂದ ಸೋಂಕು ನಿಯಂತ್ರಣ ಅಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಯಾವ ನಗರದಲ್ಲಿ ಪಾಸಿಟಿವಿಟಿ ದರ ಶೇ.5ರ ಗಡಿ ದಾಟಿದರೆ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸೂಚನೆ ನೀಡಿತ್ತು. ರಾಜ್ಯದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಕೊರೊನಾ …
Read More »ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿಯಲ್ಲಿ ಅವಳಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ. ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. …
Read More »ವೈಕುಂಠ ಏಕಾದಶಿಗೂ ಕೋವಿಡ್ ಕಠಿಣ ರೂಲ್ಸ್: ದೇವಸ್ಥಾನಕ್ಕೆ ಕೇವಲ 50 ಜನರಿಗೆ ಮಾತ್ರ ಅವಕಾಶ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತ ಕೊರೋನಾ ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ವಿರ್ಚುಯಲ್ ಸಭೆ ನಡೆಯುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ನಂತಹ ಕಠಿಣ ನಿಯಮ ಜಾರಿಗೊಳಿಸೋ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ. ಇದೇ ಸಂದರ್ಭದಲ್ಲಿ ವೈಕುಂಠ ಏಕಾದಶಿಗೂ ಕೋವಿಡ್ ಕಠಿಣ ರೂಲ್ಸ್ ಜಾರಿಗೊಳಿಸುತ್ತಿರುವಂತ ಸರ್ಕಾರ, ಕೇವಲ 50 ಜನರಿಗೆ ಮಾತ್ರ ಶ್ರೀನಿವಾಸ ಸ್ವಾಮಿಯ ದರ್ಶನ ಪಡೆಯೋದಕ್ಕೆ ಅವಕಾಶ ನೀಡಲಿದೆ …
Read More »ರಾಜ್ಯಾದ್ಯಂತ ನಾಳೆಯಿಂದಲೇ ಹೊಸ ರೂಲ್ಸ್
ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ನಾಳೆಯಿಂದಲೇ ರಾಜ್ಯದಲ್ಲಿ ಹೊಸ ಬಿಗಿ ನಿಯಮಗಳು ಜಾರಿಗೆ ಬರಲಿವೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಕುರಿತ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ರಾಜ್ಯಾದ್ಯಂತ ಕೋವಿಡ್ ಟೆಸ್ಟ್ ಹೆಚ್ಚಿಸಲಾಗುವುದು ಪ್ರತಿದಿನ ಈಗಿರುವ 1 ಲಕ್ಷದ 10 ಸಾವಿರ ಟೆಸ್ಟಿಂಗ್ ಸಂಖ್ಯೆಯನ್ನು 1 ಲಕ್ಷದ 50 …
Read More »ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ
ಬೆಂಗಳೂರು: ಜನವರಿ 19ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಕಠಿಣ ಮಾರ್ಗಸೂಚಿ ಜಾರಿಯಲ್ಲಿದ್ದು, ಅದನ್ನು ತಿಂಗಳಾಂತ್ಯದವರೆಗೂ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಧಿಕಾರಿಗಳು ಹಾಗು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು. ಈ ವೇೆಳೆ, ಸದ್ಯ ರಾಜ್ಯದಲ್ಲಿ ಕೈಗೊಂಡಿರುವ ಕಠಿಣ ನಿರ್ಬಂಧಗಳನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಕುರಿತು …
Read More »ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅವಳಿ ತಾಲೂಕುಗಳಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ಪ್ರಸಕ್ತ …
Read More »ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು
ಬೆಳಗಾವಿ, ಜ.11: ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದಲ್ಲಿ ಆಧ್ಯಾತ್ಮ ಪ್ರವಚನಕ್ಕಾಗಿ ತೆರಳಿದ್ದ ಅವರು ಅಲ್ಲಿನ ಭಕ್ತರೊಬ್ಬರ ತೋಟದ ಮನೆಯೊಂದರಲ್ಲಿ ಉಳಿದುಕೊಂಡಿದ್ದರು. ಸ್ನಾನ ಗೃಹದಲ್ಲಿ ಕಾಲು ಜಾರಿ ಬಿದ್ದ ಕಾರಣ ಗಾಯಗೊಂಡಿದ್ದಾರೆ. ಕೂಡಲೇ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಚಿಕ್ಕೋಡಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿದೆ. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ …
Read More »