Breaking News

ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದು ಉಪ್ಪು ಉಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ನೀರಸ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು. ಬಜೆಟ್ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಅಂಕಿ ಅಂಶಗಳನ್ನು ಅಲಂಕರಿಸಿ ಮಂಡಿಸಿದ ಬಜೆಟ್ ಇದಾಗಿದೆಯಷ್ಟೇ. ಇದು ಕೇವಲ ಅಲಂಕಾರಿಕ ಮುಂಗಡ ಪತ್ರ ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳು ಅನುಭವಿಗಳು. ಐದು ವರ್ಷ ಜಲಸಂಪನ್ಮೂಲ ಸಚಿವರಾಗಿದ್ದರು. ಎರಡೂವರೆ ವರ್ಷ ಗೃಹ …

Read More »

ಇಬ್ಬರು ಪತ್ನಿಯರನ್ನು ಬಿಟ್ಟು ಮೂರನೇಯವಳನ್ನು ಮದುವೆ ಆಗಿದ್ದ ವ್ಯಕ್ತಿ ಆಕೆಯಿಂದಲೇ ಬರ್ಬರವಾಗಿ ಹತ್ಯೆ

ಬೆಳಗಾವಿ: ಇಬ್ಬರು ಪತ್ನಿಯರನ್ನು ಬಿಟ್ಟು ಮೂರನೇಯವಳನ್ನು ಮದುವೆ ಆಗಿದ್ದ ವ್ಯಕ್ತಿ ಆಕೆಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಬಸೂರ್ತೆ ಗ್ರಾಮದ ನಿವಾಸಿ ಗಜಾನನ ನಾಯಕ್ ಕೊಲೆಯಾದ ವ್ಯಕ್ತಿ. ಹತ್ಯೆ ಪ್ರಕರಣ ಸಂಬಂಧ ಮೃತನ ಪತ್ನಿ ವಿದ್ಯಾ ಪಾಟೀಲ್, ಆಕೆಯ ಪುತ್ರ ಹೃತಿಕ್ ಹಾಗೂ ಸ್ನೇಹಿತ ಪರಶುರಾಮ ಗೋಂದಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಫೆ.26ರ ಮಧ್ಯರಾತ್ರಿ ಮೂವರು ಆರೋಪಿಗಳು ಗಜಾನನ ನಾಯ್ಕನನ್ನು ಕತ್ತು ಕೊಯ್ದು …

Read More »

ಭಾರತೀಯರ ರಕ್ಷಣೆಗಾಗಿ ರಷ್ಯಾ ಅಧ್ಯಕ್ಷ ಕದನ ವಿರಾಮ ಘೋಷಿಸಲು ಪ್ರಧಾನಿ ಮನವೊಲಿಸಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳು ಆ ದೇಶ ಬಿಟ್ಟು ಸುರಕ್ಷಿತವಾಗಿ ಪ್ರಯಾಣಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 24 ಗಂಟೆ ಯುದ್ಧಕ್ಕೆ ವಿರಾಮ ಘೋಷಣೆ ಮಾಡಿದರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತದಂತಹ ಹಲವಾರು ಶಾಂತಿ ಪ್ರಿಯ ದೇಶಗಳ ಪ್ರಜೆಗಳು ಉಕ್ರೇನ್‍ನಲ್ಲಿ ಸಿಲುಕಿದ್ದಾರೆ. ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸುವುದರಿಂದ ರಷ್ಯಾ ಮತ್ತಷ್ಟು ಜಗತ್ತಿನ ಇತರೆ ರಾಷ್ಟ್ರಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. …

Read More »

ಎಟಿಎಂಗಳಿಗೆ ಬರುವ ಗ್ರಾಹಕರನ್ನು ಟಾರ್ಗೆಟ್​ ಮಾಡಿ ಅವರ ಕಾರ್ಡ್​ ಬದಲಿಸಿ ಹಣ ಲಪಟಾಯಿಸುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ: ಎಟಿಎಂ​ಗಳಿಗೆ ಹಣ ಬಿಡಿಸಲು ಬರುವ ಜನರಿಗೆ ಸಹಾಯ ಮಾಡುವ ನೆಪದಲ್ಲಿ ಅಮಾಯಕರ ಕಾರ್ಡ್​ಗಳನ್ನು ಬದಲಾಯಿಸಿ ಮೋಸ ಮಾಡಿ ಹಣ ಲಪಟಾಯಿಸುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಿವಾಸಿ ಯೋಗಾನಂದ (47) ಬಂಧಿತ ಆರೋಪಿ. ಈತ ಪಿಎಚ್​​ಡಿ ಪದವೀಧರನಾಗಿದ್ದು, ಎಟಿಎಂಗೆ ಗ್ರಾಹಕರಿಗೆ ಮೋಸ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ. ಹಣ ಬಿಡಿಸಲು ಎಟಿಎಂಗೆ ಬರುವ ವೃದ್ಧರನ್ನು ಖದೀಮ ಟಾರ್ಗೆಟ್​ ಮಾಡುತ್ತಿದ್ದನು. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.ಆರೋಪಿ ಸುಮಾರು 78 ಅಮಾಯಕರನ್ನು …

Read More »

ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್​ ವಾರ್ನ್ ನಿಧನ

ಮೆಲ್ಬೋರ್ನ್​: ಆಸ್ಟ್ರೇಲಿಯಾದ ಕ್ರಿಕೆಟ್‌ ದಂತಕಥೆ ಶೇನ್​ ವಾರ್ನ್​​ ಹೃದಯಾಘಾತದಿಂದ ನಿಧನರಾಗಿದ್ದಾರೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್​ ವಾರ್ನ್​ ಶಂಕಿತ​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. https://twitter.com/virendersehwag/status/1499748352048599041/photo/1?ref_src=twsrc%5Etfw%7Ctwcamp%5Etweetembed%7Ctwterm%5E1499748352048599041%7Ctwgr%5E%7Ctwcon%5Es1_&ref_url=https%3A%2F%2Fwww.etvbharat.com%2Fkannada%2Fkarnataka%2Fsports%2Fcricket%2Faustralian-cricket-icon-shane-warne-has-died%2Fka20220304194424913

Read More »

ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-22ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ನಿರ್ಧಿಷ್ಟ ಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ( Written Test ) ನಡೆಸುವ ಮೂಲಕ, ಭರ್ತಿ ಮಾಡಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.   ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಪ್ರಾಥಮಿಕ ಶಾಲಾ ಸಹಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ವಿಭಾಗದ ಹೊರಗಿನ ವರ್ಗಾವಣೆಗೆ ನ್ಯಾಯಾಲಯವು ತಡೆಯಾಜ್ಞೆ ನೀಡಿರುವುದರಿಂದ, ಈ …

Read More »

ರಾಜ್ಯದ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ ಪ್ರತಿ ತಿಂಗಳು ಸಿಗಲಿದೆ 2 ಸಾವಿರ ಸಂಕಷ್ಟ ಭತ್ಯೆ

ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ಅವರು ಕ್ಲಿಷ್ಟಕರ ಹಾಗೂ ಅಪಾಯಕರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು, ಪೌರಕಾರ್ಮಿಕರಿಗೆ ಮಾಸಿಕ ರೂ.2000 ಸಂಕಷ್ಟ ಭತ್ಯೆಯನ್ನು ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.   ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಕೇಂದ್ರ ಪುರಸ್ಕೃತ ಯೋಜನೆಯಾದ ಸ್ವಚ್ಛಭಾರತ ಮಿಷನ್ 2.0 ಅನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ 2,245 ಕೋಟಿ ರೂಗಳ ಕೇಂದ್ರ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು ಎಂದರು. ಪೌರ ಕಾರ್ಮಿಕರು ಕ್ಲಿಷ್ಟಕರ ಹಾಗೂ ಅಪಾಯಕರ …

Read More »

ರಾಜ್ಯಾದ್ಯಂತ ಗ್ರಾಮ ಒನ್ ಯೋಜನೆ ವಿಸ್ತರಣೆ :ಸಿಎಂ ಬೊಮ್ಮಾಯಿ

ಬೆಂಗಳೂರು: ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವುದಾಗಿ ತಿಳಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸುವುದಾಗಿ ಹೇಳಿದ್ದಾರೆ.ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗುವುದು ಎಂದರು.   2022-23ನೇ ಸಾಲಿನ ಬಜೆಟ್ ಮಂಡನೆ ವೇಳೆ, ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ಮೀಸಲಿಡಲಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗಾಗಿ 1600 …

Read More »

2022ನೇ ಸಾಲಿನ ಬಜೆಟ್‌ : ಕೃಷಿ ಕ್ಷೇತ್ರಕ್ಕೆ 33700 ಕೋಟಿ ರೂ. ಘೋಷಣೆ

2022ನೇ ಸಾಲಿನ ಬಜೆಟ್‌ ನಲ್ಲಿ ರೈತರಿಗೆ ರಾಜ್ಯ ಸರ್ಕಾರ ಬಂಪರ್‌ ಕೊಡುಗೆ ನೀಡುತ್ತಿದೆ. ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಯಂತ್ರೋಪಕರಣ ಖರೀದಿಗೆ ಸಿಎಂ ಬೊಮ್ಮಾಯಿ ಕರೆ ನೀಡಿದ್ದಾರೆ. ಕೃಷಿ ಕ್ಷೇತ್ರಕ್ಕೆ 33700 ಕೋಟಿ ರೂ. ಘೋಷಣೆ ಮಾಡುವ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ಇನ್ನು ಕೃಷಿ ಉತ್ಪನ್ನ ಗಳನ್ನು ಮಾರುಕಟ್ಟೆಗೆ ಸ್ಥಾಪಿಸಲು 50 ಕೋಟಿ ರೂ. ಅನುದಾನ ನೀಡಲಾಗುತ್ತದೆ ಎಂದರು. ಉಳಿದಂತೆ ರೈತರ ಆದಾಯ ಹೆಚ್ಚುಸಲು ಸೆಕೆಂಡರಿ …

Read More »

ಬಜೆಟ್: UPSC ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್​ಲೈನ್ ಕೋಚಿಂಗ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಕೆಪಿಎಸ್​​ಸಿ, ಯುಪಿಎಸ್​​ಸಿ, ಎಸ್​ಎಸ್​​ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತವಾಗಿ ಆನ್​ಲೈನ್​ ಕೋಚಿಂಗ್​ ನೀಡಲಾಗುವುದು ಎಂದು ಘೋಷಿಸಿದರು.ಬಜೆಟ್ ಮಂಡನೆ ವೇಳೆ ಮಾಹಿತಿ ನೀಡಿರುವ ಸಿಎಂ ರಾಜ್ಯದಲ್ಲಿ ಬ್ಯಾಂಕಿಂಗ್​, ರೈಲ್ವೇ, ಸಿಡಿಎಸ್​, ನೀಟ್​, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯ ಸರ್ಕಾರದಿಂದ ಉಚಿತವಾಗಿ ಆನ್​ಲೈನ್​ ಕೋಚಿಂಗ್​ ನೀಡುವುದಾಗಿ ತಿಳಿಸಿದ್ದಾರೆ.ಬಜೆಟ್ ಮಂಡನೆ ವೇಳೆ …

Read More »