Breaking News

ಆಪರೇಷನ್ ಗಂಗಾ ಮೂಲಕ ಬೆಂಗಳೂರಿಗೆ ಬಂದ್ರು 13 ವಿದ್ಯಾರ್ಥಿಗಳು

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಉಕ್ರೇನ್​​ನಲ್ಲಿ ಸಿಲುಕಿರುವ ಭಾರತೀಯರನ್ನ ಕರೆ ತರಲು ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಕಾರ್ಯಾಚರಣೆ ಕೈಗೊಂಡಿದ್ದು, ಇಂದು 13 ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ.ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿದ್ದು, ವಿದ್ಯಾಭ್ಯಾಸಕ್ಕೆಂದು ತೆರಳಿದವರು ಉಕ್ರೇನ್​​ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂದು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 13 ವಿದ್ಯಾರ್ಥಿಗಳು ಬಂದಿಳಿದರು. ಇವರನ್ನು ಬರಮಾಡಿಕೊಂಡ ಪೋಷಕರು ತಮ್ಮ ಮಕ್ಕಳನ್ನ ತಬ್ಬಿಕೊಂಡು ಆನಂದಭಾಷ್ಪ ಸುರಿಸಿದರು.ದೇ ವೇಳೆ ಮಾತನಾಡಿದ ವಿದ್ಯಾರ್ಥಿ ಮೋಹನ್, ಫೆ. …

Read More »

ದುಬಾರಿ ದುನಿಯಾದಲ್ಲಿ ಆಶಾ ಕಾರ್ಯಕರ್ತೆಯರಿಗೆ 1 ಸಾವಿರ ಗೌರವಧನ ಕಡಿಮೆ: ನಾಗಲಕ್ಷ್ಮಿ

ಬೆಂಗಳೂರು: ಇಂದಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಕೇವಲ 1 ಸಾವಿರ ಗೌರವಧನ ಹೆಚ್ಚಳ ಮಾಡಿರುವುದು ತೃಪ್ತಿ ತಂದಿಲ್ಲ ಅಂತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಆರೋಗ್ಯ ಇಲಾಖೆಯ ಆಧಾರ ಸ್ತಂಭವಾಗಿ ನಿಂತಿದ್ದು ಆಶಾ ಕಾರ್ಯಕರ್ತೆಯರು.‌ ರಾಜ್ಯದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಇದ್ದು, ಗೌರವಧನ ಹೆಚ್ಚಳ ಮಾಡಿರುವುದನ್ನ ಸ್ವಾಗತ ಮಾಡುತ್ತೇವೆ ಎಂದರು. ಕಳೆದ ಮೂರು ವರ್ಷಗಳಿಂದ ಕೋವಿಡ್ …

Read More »

ಪರಿಷತ್​​​ನಲ್ಲಿ ಬಜೆಟ್ ಮಂಡಿಸಿದ ಕೋಟಾ: ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು: ವಿಧಾನ ಪರಿಷತ್​​ನಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿಗಳ ಪರವಾಗಿ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಬಜೆಟ್ ಮಂಡಿಸಿದರು. ಆಯವ್ಯಯ ಮಂಡನೆ ಆದ ಬಳಿಕ ಮಾತನಾಡಿದ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್, ನಮಗೂ ಮುಖ್ಯಮಂತ್ರಿಗಳು ಬಜೆಟ್ ಭಾಷಣ ಓದುವುದನ್ನು ಕೇಳುವ ಆಸೆ ಇದೆ. ಮುಂದಿನ ಸಾರಿಯಾದರೂ ಇದಕ್ಕೊಂದು ಅವಕಾಶ ಕಲ್ಪಿಸಿ ಎಂದು ಸಭಾಪತಿಗಳಿಗೆ ಮನವಿ ಮಾಡಿದರು.ಇದಕ್ಕೆ ಪೂರಕವಾಗಿ ಮಾತನಾಡಿದ ಸಭಾಪತಿಗಳು, ನನಗೂ ಈ ಬಗ್ಗೆ ಆಸೆ ಇದೆ. ಈ ಬಾರಿಯೇ ಇದಕ್ಕೊಂದು …

Read More »

ಕಾಶಿಯಾತ್ರೆಗೆ 5 ಸಾವಿರ ರೂ ಸಹಾಯಧನ; ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿಗೆ ವಿಶೇಷ ಪ್ಯಾಕೇಜ್‌ ಟ್ರಿಪ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 2022ನೇ ಸಾಲಿನ ರಾಜ್ಯ ಬಜೆಟ್​ ಮಂಡಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಈ ಬಾರಿ ಬಜೆಟ್​ನಲ್ಲಿ ನೀಡಿರುವ ಕೊಡುಗೆಗಳು ಈ ಕೆಳಕಂಡಂತಿವೆ. * ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತ ಹಾಗೂ ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ. * ಬೇಲೂರು, ಹಳೇಬೀಡು, ಸೋಮನಾಥಪುರ ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ. * ಜೋಗ ಜಲಪಾತದಲ್ಲಿ 116 …

Read More »

ಬಸವರಾಜ್ ಬೊಮ್ಮಾಯಿ ಬಜೆಟ್ ನಲ್ಲಿ ಬೆಳಗಾವಿಗೆ ಏನೇನು ಸಿಕ್ಕಿದ್ದೇ ಇಲ್ಲಿದೆ ಕಂಪ್ಲೀಟ್ ವರದಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಇಂದು 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಕುಂದಾ ನಗರಿ ಬೆಳಗಾವಿ ಜಿಲ್ಲೆಗೆ ಪ್ರಸಕ್ತ ಆಯವ್ಯವದಲ್ಲಿ ಏನೆಲ್ಲ ಕೊಡುಗೆಗಳು ಸಿಕ್ಕಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಬೆಳಗಾವಿ, ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರ್ಗಿ, ಮಂಗಳೂರು ನಗರಗಳಲ್ಲಿ ಉದ್ಯೀಗಸ್ಥ ಮಹಿಳೆಯರಿಗೆ ವಸತಿ ನಿಲಯ ಪ್ರಾರಂಭ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರಿಗೆ ಆದ್ಯತೆ. ಬೆಳಗಾವಿ …

Read More »

ಕೀವ್‌ನಿಂದ ಹೊರಬರಲು ಯತ್ನಿಸುತ್ತಿದ್ದ ಭಾರತೀಯ ವಿದ್ಯಾರ್ಥಿಗೆ ಗುಂಡು

ಕೀವ್, ಮಾರ್ಚ್ 04: ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ ಎಂದು ಕೇಂದ್ರ ಸಚಿವ ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ. ಇಂದು ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡು ಹಾರಿಸಲಾಗಿದೆ ಎಂದು ನನಗೆ ಮಾಹಿತಿ ಸಿಕ್ಕಿದ್ದು ಅವರನ್ನು ಮಧ್ಯದಲ್ಲಿ ವಾಪಸ್ ಕರೆದೊಯ್ದಿದ್ದಾರೆ ಎಂದು ಅವರು ಹೇಳಿದರು. ಸಾಧ್ಯವಾದಷ್ಟು ಜನರನ್ನು ಸ್ಥಳಾಂತರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಪ್ರಸ್ತುತ ಪೋಲೆಂಡ್‌ನಲ್ಲಿರುವ ವಿಕೆ ಸಿಂಗ್ ಅವರು ಹೇಳಿದರು. ವಿಕೆ ಸಿಂಗ್ ಅವರು ಉಕ್ರೇನ್‌ನಿಂದ ಬರುವ …

Read More »

ಅರ್ಚಕರ ತಸ್ತೀಕ್ ಭತ್ಯೆ, ಬಜೆಟ್‌ನಲ್ಲಿ ಘೋಷಣೆ: ಶಶಿಕಲಾ ಜೊಲ್ಲೆ

ಬೆಂಗಳೂರು, ಮಾರ್ಚ್ 4: ರಾಜ್ಯದ ಮುಜರಾಯಿ ಇಲಾಖೆ ‘ಸಿ’ ದರ್ಜೆ ದೇವಾಲಯಗಳ ಅರ್ಚಕರ ತಸ್ತೀಕ್ ಭತ್ಯೆಯನ್ನು ಬಜೆಟ್‌ನಲ್ಲಿ ಹೆಚ್ಚಿಸುವ ನಿರೀಕ್ಷೆ ಇದೆ. ದೇವಸ್ಥಾನಗಳ ಅಭಿವೃದ್ದಿಯತ್ತ ವಿಶೇಷ ಕಾಳಜಿಯನ್ನು ಹೊಂದಿರುವ ಮುಖ್ಯಮಂತ್ರಿಗಳು ಮುಂದಿನ ಆಯವ್ಯಯದಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಲಿದ್ದಾರೆ,” ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ಹೇಳಿದರು.   ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಬಜೆಟ್‌ನಲ್ಲಿ …

Read More »

ಹರ್ಷ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸಿ;

ದಾವಣಗೆರೆ, ಮಾರ್ಚ್ 04; “ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಂದು ಹಾಕಿದ ಹಂತಕರ ಮೇಲೆ ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಜಾಮೀನಿನ ಮೇಲೆ ಹೊರಬಾರದಂತೆ ಕ್ರಮ ಕೈಗೊಳ್ಳಬೇಕು. ಹಂತಕರನ್ನು ಗಲ್ಲಿಗೇರಿಸಬೇಕು” ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು‌.ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಹರ್ಷ ಕೊಂದ ಹಂತಕರಿಗೆ ಒಂದು ವರ್ಷದಲ್ಲಿ ಶಿಕ್ಷೆಯಾಗಬೇಕು. ವರ್ಷದೊಳಗೆ ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿ ವಾದ, ಪ್ರತಿವಾದ ಮುಗಿದು ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಮಾಡಬೇಕು” ಎಂದು …

Read More »

ಹತ್ಯೆಯಾದ ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ: ಈಶ್ವರಪ್ಪ

ಶಿವಮೊಗ್ಗ, ಮಾ.3: ಬಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ. ಈ ವೇಳೆ ತಾವು ಮತ್ತು ಯಡಿಯೂರಪ್ಪ ಅವರು ಸರಕಾರದ ಪರವಾಗಿ 25 ಲಕ್ಷ ಪರಿಹಾರ ನೀಡುತ್ತೇವೆ. ವಿಶ್ವನಾಥ ಶೆಟ್ಟಿ ಕೊಲೆಯಾದಾಗ …

Read More »

ಕರ್ನಾಟಕ ಬಜೆಟ್‌: ಬಿಎಂಟಿಸಿ ಬಸ್‌ ಪ್ರಯಾಣ ದರ ಇಳಿಸಲು ಒತ್ತಾಯ

ಬೆಂಗಳೂರು, ಮಾರ್ಚ್ 04: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನ ಚೊಚ್ಚಲ ಬಜೆಟ್‌ ಅನ್ನು ಮಾರ್ಚ್ 4ರಂದು ಮಂಡನೆ ಮಾಡಲಿದ್ದಾರೆ. ಈ ನಡುವೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) ವಾರ್ಷಿಕ 1000 ಕೋಟಿ ರೂ.ಗಳನ್ನು ಮಂಜೂರು ಮಾಡುವಂತೆ ಸಾರ್ವಜನಿಕ ಸಾರಿಗೆ ವಕೀಲರ ಗುಂಪು ಬೆಂಗಳೂರು ಬಸ್ ಪ್ರಯಾಣಿಕ ವೇದಿಕೆ (ಬಿಬಿಪಿವಿ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಾರಿಗೆ ಸಚಿವ ಬಿ ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದೆ. ಇದರಿಂದಾಗಿ ಸಾಮಾನ್ಯ …

Read More »