Breaking News

ಜ.12ರಿಂದ ‘ನೀಟ್ ಪಿಜಿ ಕೌನ್ಸಿಲಿಂಗ್’ ಆರಂಭ – ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಘೋಷಣೆ | NEET-PG counselling

ನವದೆಹಲಿ: 2021-22ನೇ ಸಾಲಿನ ನೀಟ್ ಪಿಜಿ ಕೌನ್ಸಿಲಿಂಗ್ ( NEET-PG counselling ) ಅನ್ನು ಜನವರಿ 12ರಿಂದ ಆರಂಭಿಸುತ್ತಿರೋದಾಗಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ( Union health minister Mansukh Mandaviya ) ಘೋಷಿಸಿದ್ದಾರೆ.   ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದಂತ ಅವರು, 2021-2022ರ ನೀಟ್-ಪಿಜಿ ಕೌನ್ಸಿಲಿಂಗ್ ಅನ್ನು ಜನವರಿ 12ರಿಂದ ಪ್ರಾರಂಭವಾಗಲಿದೆ ಎಂದು ಹೇಳಿದರು.   ಅಖಿಲ ಭಾರತ ಕೋಟಾ ಸ್ಥಾನಗಳಲ್ಲಿ …

Read More »

ಬೆಳಗಾವಿ ಗಡಿಭಾಗದ ಚೆಕ್ ಪೋಸ್ಟ್‌ಗಳಿಗೆ ಡಿಸಿ ಭೇಟಿ : ಕಟ್ಟುನಿಟ್ಟಿನ ತಪಾಸಣೆ ಮಾಡುವಂತೆ ಸೂಚನೆ

ಬೆಳಗಾವಿ : ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಕಾಗವಾಡ ತಾಲೂಕಿನ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಭೇಟಿ ನೀಡಿ ಭದ್ರತಾ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಈ ವೇಳೆ ಚೆಕ್ ಪೋಸ್ಟ್‌ನಲ್ಲಿರುವ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗೆ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡುವಂತೆ ಸೂಚಿಸಿದರು.   ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೋವಿಡ್ ಹಾಗೂ ಒಮಿಕ್ರಾನ್ ಸೋಂಕಿತ ಪ್ರಕರಣ ಹೆಚ್ಚಳವಾಗುತ್ತಿವೆ‌. ಹೀಗಾಗಿ, ಮಹಾರಾಷ್ಟ್ರದಿಂದ ಆಗಮಿಸುವ ಜನರ ಅನವಶ್ಯಕ ಓಡಾಟಕ್ಕೆ …

Read More »

ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಸಚಿವ ಸೋಮಶೇಖರ್ ಪುತ್ರನಿಗೆ ಬ್ಲಾಕ್​ಮೇಲ್ : ಆರೋಪಿ ಬಂಧನ

ಬೆಂಗಳೂರು : ಅಶ್ಲೀಲ ವಿಡಿಯೋ ಬಿಡುಗಡೆ ಮಾಡುವುದಾಗಿ ಸಹಕಾರ ಸಚಿವ ಎಸ್.ಟಿ‌.ಸೋಮಶೇಖರ್ ಪುತ್ರನಿಗೆ ಕರೆ‌ ಮಾಡಿ ಬೆದರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದಡಿ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸೋಮಶೇಖರ್ ಪುತ್ರ ನಿಶಾಂತ್ ನೀಡಿದ ದೂರಿನ ಮೇರೆಗೆ ಜ್ಯೋತಿಷಿಯೊಬ್ಬರ ಪುತ್ರ ರಾಹುಲ್ ಭಟ್ ಎಂಬಾತನನ್ನು ಬಂಧಿಸಲಾಗಿದೆ. ಐದು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.   ಕಳೆದ ತಿಂಗಳು 25ರಂದು ನಿಶಾಂತ್ ಸೈಬರ್ ಕ್ರೈಂ ಪೊಲೀಸರಿಗೆ ದೂರು …

Read More »

ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ಸಿಎಂ ಸೂಚನೆ

ಬೆಂಗಳೂರು,ಜ.9- ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ರಾಮನಗರ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.ಇಂದಿನ ಪಾದಯಾತ್ರೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ. ನಾವು ಕಾಂಗ್ರೆಸ್‍ನವರ ಪಾದಯಾತ್ರೆಯನ್ನು ತಡೆಯುವುದಿಲ್ಲ. ಆದರೆ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸದೆ ಬಿಡುವುದಿಲ್ಲ. ಕಾನೂನು ಪ್ರಕಾರವಾಗಿ ಜಿಲ್ಲಾಡಳಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ರೇಸ್‍ಕೋರ್ಸ್ ರಸ್ತೆಯ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ; ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆದ ಮಾಜಿ ಸಿಎಂ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಜ್ವರದಿಂದ ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆದ ಘಟನೆ ನಡೆದಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಇಂದು ಸಂಗಮ ಕ್ಷೇತ್ರದಿಂದ ಪಾದಯಾತ್ರೆಗೆ ಚಾಲನೆ ದೊರೆತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿ ಕೆಲ ದೂರ ಸಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಜ್ವರ ಹೆಚ್ಚಿದ್ದು, ಪಾದಯಾತ್ರೆ ಬಿಟ್ಟು ಕಾರಿನಲ್ಲಿ ಹೆಗ್ಗನೂರು ಗ್ರಾಮಕ್ಕೆ ತೆರಳಿ ವಿಶ್ರಾಂತಿ ಪಡೆದಿದ್ದಾರೆ. ಈ ನಡುವೆ …

Read More »

ಹುದಲಿಯಲ್ಲಿ ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗ ಉದ್ಘಾಟನೆ

ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ರಾಹುಲಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಸಮಾಜದಲ್ಲಿ ಉತ್ತಮ ಕಾರ್ಯಗಳು ಆಗಲಿ. ಬಡವರ ಕಣ್ಣೀರೊರೆಸುವ ಕಾರ್ಯಗಳು ನಮ್ಮಿಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ಶುಕ್ರವಾರ ರಾಹುಲ್‌ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ರಾಹುಲ್‌ ಅಭಿಮಾನಿಗಳ ಬಳಗ ವರ್ಷದ 365 ದಿನವೂ ಸಕ್ರಿಯವಾಗಿರಬೇಕು. ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ, ಬಡವರ ಪರ ಕೆಲಸಗಳನ್ನು ಮಾಡಬೇಕು. ಕ್ರೀಡೆ ಹಾಗೂ …

Read More »

ವೀಕೆಂಡ್ ಕಫ್ರ್ಯೂಗೆ ಎರಡನೇ ದಿನವೂ ಬೆಳಗಾವಿಯಲ್ಲಿ ಜನ ಡೋಂಟ್ ಕೇರ್ ಎಂದಿದ್ದಾರೆ.

ವೀಕೆಂಡ್ ಕಫ್ರ್ಯೂಗೆ ಎರಡನೇ ದಿನವೂ ಬೆಳಗಾವಿಯಲ್ಲಿ ಜನ ಡೋಂಟ್ ಕೇರ್ ಎಂದಿದ್ದಾರೆ. ಬೆಳಗಾವಿಯ ಜೈ ಕಿಸಾನ್ ವೋಲ್‍ಸೇಲ್ ತರಕಾರಿ ಖಾಸಗಿ ಮಾರುಕಟ್ಟೆಯಲ್ಲಿ ಜನಜಾತ್ರೆ ಕಂಡು ಬಂದಿದೆ. ಇತ್ತಿಚೆಗೆ ಉದ್ಘಾಟನೆಗೊಂಡಿರುವ ಬೆಳಗಾವಿ ಹೊರವಲಯದ ಗಾಂಧಿನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲೇ ಇರುವ ಜೈ ಕಿಸಾನ್ ವೋಲ್‍ಸೇಲ್ ತರಕಾರಿ ಖಾಸಗಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟು ಜೋರಾಗಿ ನಡೆದಿದೆ. ಮಹಾರಾಷ್ಟ್ರ, ಗೋವಾದಿಂದ ನಿತ್ಯ ನೂರಾರು ವ್ಯಾಪಾರಿಗಳು ಆಗಮಿಸುತ್ತಿದ್ದಾರೆ. …

Read More »

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸೆರ್ಲಾಕ್​ ಪ್ಯಾಕ್​ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಮಹಿಳೆ ಬಂಧನ

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ದಾಳಿ ನಡೆಸಿರುವ ಬೆಂಗಳೂರು ಎನ್​ಸಿಬಿ ಅಧಿಕಾರಿಗಳು ಸುಮಾರು 1.5 ಕೋಟಿ ರೂ. ಮೌಲ್ಯದ 995 ಗ್ರಾಂ ಡ್ರಗ್ಸ್ (Methamphetamine)​ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತು ಸಾಗಿಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ. ನಿಖರ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಶುಕ್ರವಾರ ಈ ಕಾರ್ಯಾಚರಣೆ ನಡೆದಿದೆ. ಉಗಾಂಡ ಮೂಲದ ಮಹಿಳೆಯು ದೆಹಲಿಯಿಂದ ಡ್ರಗ್ಸ್ ತರಿಸಿಕೊಂಡು ರಾಜ್ಯದಲ್ಲಿ ಮಾರಾಟಕ್ಕೆ ಮುಂದಾಗಿದ್ದಳು ಎಂದು ತಿಳಿದು ಬಂದಿದೆ. ಮಕ್ಕಳಿಗೆ ಆಹಾರವಾಗಿ ನೀಡಲಾಗುವ …

Read More »

ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ 400 ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗೆ ಕೊವಿಡ್ ಪಾಸಿಟಿವ್

ದೆಹಲಿ: ಸಂಸತ್​​ನ ಬಜೆಟ್ ಅಧಿವೇಶನದ (Budget Session of the Parliament) ಮೊದಲು ಅಧಿಕೃತ ಮೂಲಗಳ ಪ್ರಕಾರ, 400 ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗೆ ಕೊವಿಡ್ (Covid-19) ದೃಢಪಟ್ಟಿದೆ. ಜನವರಿ 4 ರಿಂದ 8 ರವರೆಗೆ ಸಂಸತ್ತಿನ 1,409 ಸಿಬ್ಬಂದಿಗಳಲ್ಲಿ 402 ಸಿಬ್ಬಂದಿಗೆ ವೈರಸ್‌ಗೆ ಧನಾತ್ಮಕ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ಎಎನ್ಐಗೆ ತಿಳಿಸಿದ್ದಾರೆ. ನಂತರ ಅವರ ಮಾದರಿಗಳಲ್ಲಿ ರೂಪಾಂತರಿ ಇದೆಯೇ ಎಂಬುದನ್ನು ಖಚಿತಪಡಿಸಲು ಜೀನೋಮ್ ಅನುಕ್ರಮಕ್ಕಾಗಿ ಕಳುಹಿಸಲಾಗಿದೆ. ಸಂಸತ್ತಿನ …

Read More »

ಹಿರಿಯ ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ ನಿಧನ

ಧಾರವಾಡ: ಹಿರಿಯ ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ(63) ಇಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಕಲಾವಿದ ಬಸಲಿಂಗಯ್ಯ, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಜಾನಪದ ಕಲಾವಿದ ಬಸಲಿಂಗಯ್ಯ ಧಾರವಾಡದ ನಿವಾಸಿಯಾಗಿದ್ದರು. ಜಾನಪದ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದರು. ಇವರ ಪತ್ನಿ ವಿಶ್ವೇಶ್ವರಿ ಹಿರೇಮಠ ಕೂಡ ಜಾನಪದ ಕಲಾವಿದೆಯಾಗಿದ್ದು ಜಾನಪದ ಸಂಶೋಧನಾ ಸಂಸ್ಥೆ ಮೂಲಕ ಬಸಲಿಂಗಯ್ಯ ಹಿರೇಮಠ ದಂಪತಿ ಕಲಾ ಸೇವೆ ಮಾಡುತ್ತಿದ್ದರು. ಅಲ್ಲದೇ ಅನೇಕ ಜಾನಪದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ …

Read More »