ಅಥಣಿ(ಬೆಳಗಾವಿ): ತಾಲೂಕಿನಾದ್ಯಂತ ಇಂದು ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ತಾಲೂಕಿನ ಅಡಹಳ್ಳಿ, ಕೋಹಳ್ಳಿ, ಐಗಳಿ, ಕೋತನಟ್ಟಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಪರೀತ ಗಾಳಿ ಸಮೇತ ಮಳೆಯಾಗಿದ್ದು, ಒಣದ್ರಾಕ್ಷಿ ನೀರಿನಲ್ಲಿ ನೆನೆದು ಭಾರಿ ಹಾನಿ ಸಂಭವಿಸಿದೆ. ನವೆಂಬರ್- ಅಕ್ಟೋಬರ್ ತಿಂಗಳಿನಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಅಕಾಲಿಕ ಮಳೆಯಿಂದ ಭಾರಿ ನಷ್ಟ ಸಂಭವಿಸಿತ್ತು. ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಅದರಲ್ಲಿ ಅಳಿದು ಉಳಿದ ದ್ರಾಕ್ಷಿಯನ್ನು …
Read More »ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
ಬೆಳಗಾವಿ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ನಾಗೇಶ್ ಪಾಟೀಲ್ (30) ಮೃತ ಯುವಕ. ಹಳೆಯ ವೈಷಮ್ಯದ ಕಾರಣಕ್ಕೆ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಯುವಕನ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಬಳಿಕ ಯುವಕನನ್ನು ಎಳೆದೊಯ್ದು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿದೆ. ಶವವನ್ನು ಮನೆಯ ಬಳಿ ಎಸೆದು ಹಂತಕರು ಪರಾರಿಯಾಗಿದ್ದಾರೆ. ಬೆಳಗಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, …
Read More »ಜೈನ್ ಮಂದಿರ ಜೀರ್ಣೋದ್ಧಾರ ವಿಚಾರಕ್ಕೆ ಗಲಾಟೆ
ಬೆಳಗಾವಿ: ತಾಲೂಕಿನ ಮಚ್ಛೆ ಗ್ರಾಮದಲ್ಲಿ ಪುರಾತನ ಕಾಲದ ಜೈನ ಮಂದಿರ. ಜೈನ ಮಂದಿರದ ಜೀರ್ಣೋದ್ಧಾರ ವಿಚಾರಕ್ಕೆ ಜೈನ ಸಮುದಾಯದ ಎರಡು ಪಂಗಡಗಳ ಮಧ್ಯೆ ಗಲಾಟೆ ಉಂಟಾಗಿದೆ. ಜೈನ ಮಂದಿರದಲ್ಲಿರುವ ಜಿನಬಿಂಬ ಉತ್ತಾಪನೆ ಮಾಡುವ ವೇಳೆ ಎರಡು ಪಂಗಡಗಳ ಸದಸ್ಯರ ಮಧ್ಯೆ ಘರ್ಷಣೆ ನಡೆದಿದ್ದು, ಮಂದಿರದಲ್ಲಿದ್ದ ಮೂರ್ತಿ ಆವರಣಕ್ಕೆ ಬಂದಿದೆ. ಮಚ್ಛೆ ಗ್ರಾಮದ 1008 ಭಗವಾನ್ ಮಹಾವೀರ ದಿಗಂಬರ ಜೈನ ಮಂದಿರ ಜೀರ್ಣೊದ್ಧಾರ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ತೀರ್ಪಿನಂತೆ …
Read More »ಯಂತ್ರದ ಬೆಲ್ಟ್ಗೆ ವೇಲ್ ಸಿಲುಕಿ ಯುವತಿ ಸಾವು: ಕಾರ್ಖಾನೆ ಮಾಲೀಕನ ವಿರುದ್ಧ ಪ್ರಕರಣ
ಬೆಂಗಳೂರು: ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ವೇಳೆ ನಡೆದ ಯಡವಟ್ಟಿಗೆ ಯುವತಿ ಬಲಿಯಾದ ಘಟನೆ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಯಂಡಹಳ್ಳಿಯ ಜೆಡ್ ಎಸ್ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸಂಜೆ 5.15ರ ಸುಮಾರಿಗೆ ದುರಂತ ಸಂಭವಿಸಿದೆ. ಶಾಜಿಯಾ (28) ಮೃತ ಯುವತಿ. ಯಂತ್ರವನ್ನು ಸ್ವಿಚ್ ಆಫ್ ಮಾಡುವಾಗ ಯಂತ್ರದ ಬೆಲ್ಟ್ಗೆ ತಾನು ಧರಿಸಿದ್ದ ವೇಲ್ ಸಿಲುಕಿ ಯಂತ್ರದ ಮೇಲೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ತೀವ್ರವಾದ ಪೆಟ್ಟಾಗಿದೆ. ಆಸ್ಪತ್ರೆಗೆ ಸಾಗಿಸುವ …
Read More »ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ವಿರುದ್ಧ ಅಮೋಘ ಜಯ,ಚೆನ್ನೈಗೆ ಸತತ 3ನೇ ಸೋಲು
ಮುಂಬೈ: ಲಿಯಾಮ್ ಲಿವಿಂಗ್ಸ್ಟೋನ್ ಆಕರ್ಷಕ ಆಲ್ರೌಂಡ್ ಪ್ರದರ್ಶನದ ಫಲವಾಗಿ ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ವಿರುದ್ಧ ಅಮೋಘ ಜಯ ದಾಖಲಿಸಿತು. ಇಲ್ಲಿನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಐಪಿಎಲ್ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ರವೀಂದ್ರ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗು ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ತಂಡ ಚೆನ್ನೈಗೆ 54 ರನ್ಗಳ ಸೋಲುಣಿಸಿತು.
Read More »ಇ-ಶ್ರಮ್ ಕಾರ್ಡ್ ಹೊಂದಿದ ಕಾರ್ಮಿಕರಿಗೆ ಗುಡ್ ನ್ಯೂಸ್: ಸಿಗಲಿದೆ ಹಲವು ಸೌಲಭ್ಯ
ನವದೆಹಲಿ: ಅಸಂಘಟಿತ ವರ್ಗದ ಜನರಿಗೆ ಇ-ಶ್ರಮ್ ಕಾರ್ಡ್ ಮೂಲಕ ಸರ್ಕಾರ ಸಾಕಷ್ಟು ಸಹಾಯ ಮಾಡುತ್ತಿದೆ, ಇ-ಶ್ರಮ್ ಕಾರ್ಡ್ ಯೋಜನೆಗೆ ಸಂಬಂಧಿಸಿದ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು ಸರ್ಕಾರ ಮತ್ತೊಮ್ಮೆ ಕಳುಹಿಸಲಿದೆ. ಕಂತಿನ ಹೊರತಾಗಿ ಫಲಾನುಭವಿಗಳು ಹಲವು ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಈ ಯೋಜನೆಯ ಪ್ರಕಾರ, ಅನೇಕ ಪ್ರಯೋಜನಗಳನ್ನು ಜನರಿಗೆ ನೀಡಲಾಗುತ್ತಿದೆ. ಕೆಲ ಯೋಜನೆಗಳಲ್ಲಿ ಉದ್ಯೋಗ, ವಿಮೆಯಂತಹ ಸೌಲಭ್ಯಗಳನ್ನು ನೀಡಿದರೆ ಮತ್ತೊಂದೆಡೆ ಕೆಲವು ಯೋಜನೆಗಳಲ್ಲಿ ಜನರಿಗೆ ಆರ್ಥಿಕ ನೆರವು ನೀಡಲಾಗುತ್ತದೆ. …
Read More »ಬಳ್ಳಾರಿಯ ಗುಡ್ಡವೊಂದರಲ್ಲಿ ಪತ್ತೆಯಾಗಿದ್ದ ತಲೆಬುರುಡೆಯ ನಿಗೂಢ ಪ್ರಕರಣ ಭೇದಿಸಿದ ಪೊಲೀಸರು!
ಬಳ್ಳಾರಿ: ಮಾರ್ಚ್ 19 ರಂದು ಕಂಪ್ಲಿ ತಾಲೂಕಿನ ವಿಠ್ಠಲಾಪುರದ ಗುಡ್ಡದಲ್ಲಿ ಪತ್ತೆಯಾಗಿದ್ದ ಅನಾಮಧೇಯ ವ್ಯಕ್ತಿಯ ತಲೆಬುರುಡೆ ಪ್ರಕರಣವನ್ನು ಬಳ್ಳಾರಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಲೆ ಬುರುಡೆ, ಶರ್ಟ್ ಆಧಾರದ ಮೇಲೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮಾರ್ಚ್ 19 ರಂದು ಕಂಪ್ಲಿ ತಾಲೂಕಿನ ವಿಠ್ಠಲಾಪುರದ ಗುಡ್ಡದಲ್ಲಿ ಕೊಲೆ ನಡೆದಿತ್ತು. ಜೇರ್ವಗಿ ತಾಲೂಕಿನ ಬಳ್ಳಂಡುಗಿ ತಾಲೂಕಿನ ಅಮರೇಶ ಕೊಲೆಯಾಗಿದ್ದ ವ್ಯಕ್ತಿ. ಅಮರೇಶ ಕೊಪ್ಪಳ ಜಿಲ್ಲೆ ಗಂಗಾವತಿ ಪಟ್ಟಣದ ಇಂದಿರಾ ಪ್ಲಾಂಟ್ನಲ್ಲಿ ಹಮಾಲಿ ಕೆಲಸ …
Read More »ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದ ಜೊತೆಗೆ ಇನ್ಮುಂದೆ ಎಲ್ ಪಿ ಜಿ ಸಿಲಿಂಡರ್, ಪಿಂಚಣಿ ಸೌಲಭ್ಯ
ಬೆಂಗಳೂರು : ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದ ಜೊತೆಗೆ ಇನ್ಮುಂದೆ ಎಲ್ ಪಿ ಜಿ ಸಿಲಿಂಡರ್, ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯಗಳು ದೊರೆಯಲಿವೆ. ಕೇಂದ್ರ ಮತ್ತು ಸರ್ಕಾರದ ಅನೇಕ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದ್ದು, ನ್ಯಾಯಬೆಲೆ ಅಂಗಡಿಗಳು ಇನ್ಮುಂದೆ ಸಾಮಾನ್ಯ ಸೇವಾ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ. ಈ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ, ಗೋಧಿ ಜೊತೆಗೆ ಎಲ್ ಪಿಜಿ …
Read More »ರಾಜ್ಯ & ಕೇಂದ್ರ ರಾಜಕೀಯದಲ್ಲಿ ಬದಲಾವಣೆ ಇಲ್ಲ: ಭವಿಷ್ಯ ನುಡಿದ ಗೊಂಬೆಗಳು!
ಧಾರವಾಡ: ಈ ವರ್ಷ ರಾಜ್ಯ ಮತ್ತು ಕೇಂದ್ರ ರಾಜಕೀಯದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಮಣ್ಣಿನ ಗೊಂಬೆಗಳು ಭವಿಷ್ಯ(Doll Prediction) ನುಡಿದಿವೆ. ಧಾರವಾಡ ಜಿಲ್ಲೆಯ ಹನುಮನಕೊಪ್ಪ ಗ್ರಾಮದ ಗೊಂಬೆಗಳು ಪ್ರತಿವರ್ಷ ಯುಗಾದಿ ಹಬ್ಬದಂದು ಭವಿಷ್ಯ ನುಡಿಯುತ್ತವೆ. ಅದೇ ರೀತಿ ಈಗ ರಾಜಕೀಯ ಭವಿಷ್ಯವನ್ನು ತಿಳಿಸಿವೆ. ಹನುಮನಕೊಪ್ಪ(Hanumanakoppa)ದ ಮಣ್ಣಿನ ಗೊಂಬೆಗಳು ರಾಜಕೀಯ ಭವಿಷ್ಯವನ್ನು ನಿಖರವಾಗಿ ಹೇಳುತ್ತವೆ. ಪ್ರತಿ ಯುಗಾದಿಗೆ ಇಲ್ಲಿ ಗೊಂಬೆ ಭವಿಷ್ಯ ನಡೆಯುತ್ತದೆ. ಕಳೆದ ವರ್ಷ ಬೊಂಬೆಗಳು ಸಿಎಂ ಬದಲಾವಣೆ ಮುನ್ಸೂಚಣೆ ನೀಡಿದ್ದವು. …
Read More »ಮುಸ್ಲಿಂ ಮಾಂಸ ಮಾರಾಟಗಾರನ ಮೇಲೆ ಹಲ್ಲೆ: 5 ಬಜರಂಗದಳ ಕಾರ್ಯಕರ್ತರ ಬಂಧನ,
ಬೆಂಗಳೂರು: ಹಲಾಲ್ ಕಟ್ ಮಾಂಸ ಮಾರಾಟ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ದಾಳಿ ನಡೆಸಿದ ಐದು ಮಂದಿ ಬಜರಂಗದಳ ಕಾರ್ಯಕರ್ತರನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿದೆ. ಈ ಮಧ್ಯೆ ಇಂದು ಯುಗಾದಿ ಹೊಸತೊಡಕಿನ ದಿನ ರಾಜ್ಯಾದ್ಯಂತ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಹಲಾಲ್ ಕಟ್ ಮಾಂಸ ನಿಷೇಧಿಸಿ ಅಭಿಯಾನ ತೀವ್ರವಾಗಿದೆ. ರಾಜ್ಯದ ಜನತೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದೆ ಶಾಂತಿಯಿಂದ ಸಂತೋಷವಾಗಿ ಯುಗಾದಿ ಹೊಸತೊಡಕನ್ನು ಆಚರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
Read More »
Laxmi News 24×7