Breaking News

ಧಾರವಾಡ: ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ -ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ‘ಶಿಕ್ಷಕರ ಬೇಡಿಕೆಗಳನ್ನು ಪರಿಹರಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿಶೇಷ ಸಭೆಯನ್ನು ಮುಂದಿನ ಜ. 15ರ ನಂತರ ಕರೆಯಲಾಗುವುದು’ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ನಗರದ ಸಿದ್ಧಾರೂಢ ಮಠದ ಕಲ್ಯಾಣಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.   ‘ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುವುದಕ್ಕಾಗಿ, ನಾನು ಸಚಿವನಾಗಿದ್ದಾಗ ವರ್ಗಾವಣೆ …

Read More »

ನಾನು ಹುಬ್ಬಳಿಗೆ ಹೋದರೆ ಬೊಮ್ಮಾಯಿ ಮನೆಗೆ ಹೋಗಿ ಚಹಾ ಕುಡಿಯದೇ ಮುಂದೆ ಹೋಗಲ್ಲ., ಕಾಣದ ಶಕ್ತಿಗಳು ಮುಖ್ಯಮಂತ್ರಿಗಳಿಂದ ನನ್ನ ದೂರ ಮಾಡುತ್ತಿವೆ:

ಈಶ್ವರಪ್ಪನವರು ಮಾತನಾಡಿದ ನಂತರ ನಾನು ಈ ಬಗ್ಗೆ ಕ್ಲ್ಯಾರಿಫೈ ಮಾಡಿದ್ದೇನೆ. ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ. 2023ರವರೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರು ಒಳ್ಳೆಯ ಕೆಲಸ ಮಾಡ್ತಿದ್ದಾರೆ ಎಂದು ಶಿಗ್ಗಾಂವಿಯಲ್ಲೂ ಹೇಳಿದ್ದೇನೆ. ಒಂದಿಲ್ಲ ಒಂದು ದಿನ ಅವರಿಗೆ ಕೇಂದ್ರದಲ್ಲಿ ಉನ್ನತ ಸ್ಥಾನ ಸಿಗುತ್ತದೆ ಎಂದು ಹೇಳಿದ್ದೇನೆ. 2023ರ ಒಳಗೆ ಇಂಥ ಬೆಳವಣಿಗೆಯಾಗುತ್ತದೆ ಎಂದು ನಾನು ಹೇಳಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆಯಲ್ಲಿ …

Read More »

ರಾಜ್ಯದಲ್ಲಿ ಡಿ.28 ರಿಂದ 10 ದಿನ ನೈಟ್​​ ಕರ್ಫ್ಯೂ ಜಾರಿ

ಬೆಂಗಳೂರು: ಒಮಿಕ್ರಾನ್ ತಡೆಯಲು ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಡಿಸೆಂಬರ್ 28 ರಿಂದ 10 ದಿನಗಳ ಕಾಲ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿಗೊಳಿಸುತ್ತಿರುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಜ್ಞರ ಸಮಿತಿ ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಒಮಿಕ್ರಾನ್ ಯಾವ ರೀತಿಯಲ್ಲಿ ಹರಡಿದೆ ಎಂದು ಬೇರೆ ದೇಶ ಮತ್ತು ರಾಜ್ಯಗಳ ಅಧ್ಯಯನ ಮಾಡಿ, ನಮ್ಮ ರಾಜ್ಯದಲ್ಲಿ …

Read More »

ಗಂಡ ಹೆಂಡತಿ ಜಗಳದಲ್ಲಿ ಮಧ್ಯೆ ಪ್ರವೇಶಿಸಿ ದುಡ್ಡು ಮಾಡಲು ಯತ್ನ: ಇನ್ಸ್​ಪೆಕ್ಟರ್​ ವಿರುದ್ಧ ಎಫ್ಐಆರ್

ಬೆಂಗಳೂರು: ಗಂಡ ಹೆಂಡತಿಯ ಜಗಳದಲ್ಲಿ ಲಾಭ ಪಡೆಯಲು ಯತ್ನಿಸಿದ ಪೊಲೀಸ್ ಇನ್ಸ್​ಪೆಕ್ಟರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಫ್‌ಐಆರ್ ದಾಖಲಿಸಿದೆ. ಕೆ.ಆರ್. ಪುರ ಠಾಣೆಯಲ್ಲಿ ಇನ್ಸ್​ಪೆಕ್ಟರ್ ಆಗಿದ್ದ ಜಯರಾಜ್ ಮತ್ತು ಎಎಸ್ಐ ಶಿವಕುಮಾರ್ ಎಂಬವರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಸಂಜು ರಾಜನ್ ವಿರುದ್ಧ ಆಕೆಯ ಪತ್ನಿ ದೂರು ದಾಖಲಿಸಿದ್ದರು. ಹೀಗಾಗಿ ಬಂಧನಕ್ಕೆ ಒಳಗಾಗಿದ್ದ ಸಂಜು ರಾಜನ್ ಬಳಿಕ ಜಾಮೀನಿನ ಮೇರೆಗೆ ಹೊರಬಂದಿದ್ದ. ನಂತರ ಪ್ರತಿ ಬಾರಿ ಠಾಣೆಗೆ …

Read More »

ಪಾಕಿಸ್ತಾನದ ಮುಸ್ಲಿಮರನ್ನೂ ಹಿಂದುಗಳಾಗಿ ಪರಿವರ್ತಿಸುವುದು ನಮ್ಮ ಗುರಿ: ತೇಜಸ್ವಿ ಸೂರ್ಯ

ಉಡುಪಿ, : ಎಲ್ಲ ಮಠ ಮಂದಿರಗಳು ವರ್ಷಕ್ಕೆ ಗುರಿಯನ್ನು ನಿಗದಿ ಪಡಿಸಿ ಬೇರೆ ಧರ್ಮದವರನ್ನು ವಾಪಾಸ್ಸು ಹಿಂದು ಧರ್ಮಕ್ಕೆ ಕರೆತರಬೇಕು. ಕೇವಲ ಭಾರತದಲ್ಲಿರುವ ಮುಸ್ಲಿಮರನ್ನು ಮಾತ್ರವಲ್ಲ ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನು ಕೂಡ ಹಿಂದುಗಳಾಗಿ ಪರಿವರ್ತನೆ ಮಾಡಬೇಕಾಗಿರುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಆರ್ಟಿಕಲ್ 370 ತೆಗೆದು ಹಾಕಿದಂತೆ ಮತ್ತು ರಾಮಮಂದಿರ ನಿರ್ಮಾಣ ಮಾಡಿದಂತೆ ಇದು ಕೂಡ ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. …

Read More »

ಶತಮಾನದ ಬಳಿಕ ಶ್ರೀ ದ್ಯಾಮವ್ವ-ದುರ್ಗವ್ವ ದೇವಸ್ಥಾನದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ

ಧಾರವಾಡ: ಇಲ್ಲಿಯ ಕಸಬಾಗೌಡರ ಓಣಿಯ ಶ್ರೀ ದ್ಯಾಮವ್ವ-ದುರ್ಗವ್ವ ದೇವಸ್ಥಾನದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಶತಮಾನದ ಬಳಿಕ ಶುಕ್ರವಾರ ಜರುಗಿತು. ಈ ಜಾತ್ರೆಯು ಇದಕ್ಕೂ ಮುನ್ನ 1899ರಲ್ಲಿ ನಡೆದಿತ್ತು. ಬಳಿಕ ಹರಿಜಾತ್ರೆ ನಡೆದಿದ್ದು, ಬಿಟ್ಟರೆ ಇದೀಗ ಬರೋಬ್ಬರಿ 122 ವರ್ಷಗಳ ಬಳಿಕ ನೂತನ ರಥೋತ್ಸವ ಸಾವಿರಾರು ಭಕ್ತರ ಹರ್ಷೋದ್ಘಾರದ ಮಧ್ಯೆ ಸಾಗಿತು. ರಥೋತ್ಸವಕ್ಕೆ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಹಿರೇಮಠದ ಗದಿಗಯ್ಯ ಸ್ವಾಮೀಜಿ ಹಾಗೂ ಶಾಸಕ ಅಮೃತ ದೇಸಾಯಿ ಚಾಲನೆ ನೀಡಿದರು.ದೇವಸ್ಥಾನದಿಂದ …

Read More »

ಮದ್ಯಪ್ರಿಯರಿಗೆ ಬಿಗ್ ಶಾಕ್ : ಇಂದಿನಿಂದ 2 ದಿನ ಎಣ್ಣೆ ಸಿಗೋದಿಲ್ಲ

ಬೆಂಗಳೂರು : ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ 44 ಗ್ರಾಮಪಂಚಾಯ್ತಿಗಳು, ಇತರೆ ಕಾರಣದಿಂದ ಬಾಕಿದ್ದ 13 ಗ್ರಾಮಪಂಚಾಯ್ತಿಗಳು ( Grama Panchayath Election ) ಸೇರಿದಂತೆ ಒಟ್ಟು 57 ಗ್ರಾಮ ಪಂಚಾಯ್ತಿಗಳಿಗೆ ಡಿಸೆಂಬರ್ 27 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮುಕ್ತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಹಿನ್ನೆಲೆ ಡಿ.25 ರ ಸಂಜೆ 5 ಗಂಟೆಯಿಂದ ಡಿ.27 ರ ಸಂಜೆ 5 ಗಂಟೆವರೆಗೆ ಮದ್ಯ ಮಾರಾಟ ( Drink Sell ) ನಿಷೇಧಿಸಲಾಗಿದೆ.   ನಿಷೇಧಿತ ಅವಧಿಯಲ್ಲಿ ಮದ್ಯ ಮಾರಾಟ, ಶೇಖರಣೆ, ಮದ್ಯಪಾನ ನಿಷೇಧಿಸಿದ್ದು, ಬಿಯರ್ ಬಾರಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಲು ಸಹ ಆದೇಶಿಸಲಾಗಿದೆ. ಈ ದಿವಸಗಳನ್ನು ಶುಷ್ಕ ದಿನಗಳೆಂದು ಘೋಷಿಸಲಾಗಿದೆ.   ಈ ಆದೇಶ ಗ್ರಾಮ …

Read More »

‘ಕೋವಿಡ್’ ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಸಿಎಂ ‘ಬಸವರಾಜ ಬೊಮ್ಮಾಯಿ’ ಗುಡ್ ನ್ಯೂಸ್

ವಿಜಯಪುರ : ಕೋವಿಡ್ ಸಂಕಷ್ಟದ ಕಾಲದಲ್ಲಿಯೂ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರವನ್ನು ನೀಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಅವರು ವಿಜಯಪುರ ಜಿಲ್ಲೆಯಲ್ಲಿ ಲೋಕೋಪಯೋಗಿ, ಕಂದಾಯ, ವಸತಿ, ಪ್ರವಾಸೋದ್ಯಮ, ಆರೋಗ್ಯ, ನಗರಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ 11 ಇಲಾಖೆಗಳ ಸುಮಾರು 244 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಸಂಕಷ್ಟ ಕಾಲದಲ್ಲಿಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ …

Read More »

ವಾರ ಭವಿಷ್ಯ

  ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1) ಸಂಪನ್ಮೂಲಗಳಿಗಾಗಿ ಸಾಕಷ್ಟು ಹುಡುಕಾಟ ನಡೆಸುವಿರಿ. ಇತರರ ಕೆಲಸಗಳ ಯಶಸ್ಸಿಗಾಗಿ ಸಲಹೆ ನೀಡುವ ಅವಕಾಶ ದೊರೆಯುತ್ತದೆ. ಈ ಹಿಂದೆ ನಿಲ್ಲಿಸಿದ್ದ ವಿದ್ಯಾಭ್ಯಾಸವನ್ನು ಪುನಃ ಆರಂಭಿಸಲು ಸೂಕ್ತ ಆಲೋಚನೆ ಮಾಡುವಿರಿ. ಹಣದ ಒಳಹರಿವು ನಿಮ್ಮ ನಿರೀಕ್ಷೆಯ ಮಟ್ಟಕ್ಕೆ ಇದ್ದೇ ಇರುತ್ತದೆ. ಸದ್ಯದಲ್ಲೇ ಕೌಟುಂಬಿಕ ಸಮಸ್ಯೆಗಳು ಎದುರಾದರೂ ನಂತರ ತಿಳಿಯಾಗುತ್ತವೆ. ಹೊಸ ವ್ಯವಹಾರದಲ್ಲಿ ಭಾಗವಹಿಸಲು ಅವಕಾಶವನ್ನು ಪಡೆಯುವ ಯತ್ನದಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಹಿರಿಯರಿಗೆ ಆರೋಗ್ಯ …

Read More »

ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳಇಂದು ಬೆಳಗ್ಗೆ 9 ಗಂಟೆಗೆ ಮಹತ್ವದ ಸಭೆ

ಹುಬ್ಬಳ್ಳಿ : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ವಾರದಿಂದ ಕೋವಿಡ್ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ತಜ್ಞರ ಜೊತೆಗೆ ಇಂದು ಬೆಳಗ್ಗೆ 9 ಗಂಟೆಗೆ ಮಹತ್ವದ ಸಭೆ ನಡೆಸಲಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರ ಮತ್ತು ಕೇರಳದ ಜೊತೆಗೆ ತಮಿಳುನಾಡು ರಾಜ್ಯದಲ್ಲೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. ಆದ್ದರಿಂದ ರಾಜ್ಯದಲ್ಲಿ ಕಟ್ಟೆಚ್ಚರ …

Read More »