ಬೆಳಗಾವಿ, : ನನ್ನದು ಹಾಗೂ ಸಚಿವ ಕೆ.ಎಸ್.ಈಶ್ವರಪ್ಪನವರದ್ದು ಪ್ರೀತಿ ಮತ್ತು ದ್ವೇಷದ ಸಂಬಂಧ (ಲವ್ ಆಂಡ್ ಹೇಟ್) ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ ಪ್ರಸಂಗ ನಡೆಯಿತು. ಗುರುವಾರ ವಿಧಾನಸಭೆಯಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕದ ಮೇಲಿನ ಚರ್ಚೆಯಲ್ಲಿ ಮಾತನಾಡುತ್ತಿದ್ದ ವೇಳೆ ನನ್ನದು ಈಶ್ವರಪ್ಪನವರ ಸಂಬಂಧ ವಿಶೇಷ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಕಾಗೇರಿ, ನಿಮ್ಮ ಹಾಗೂ ಈಶ್ವರಪ್ಪ ನಡುವಿನ ಸ್ನೇಹದ ಗುಟ್ಟೇನು ಎಂದು ಕಾಲೆಳೆದರು. ಈ ವೇಳೆ …
Read More »ನಾಯಕತ್ವ ಬದಲಾವಣೆ ಹೇಳಿಕೆ ನೀಡಿದ ಸಚಿವರಿಗೆ ಬಿಜೆಪಿ ಬಿಗ್ ಶಾಕ್: ಸಂಕ್ರಾಂತಿಗೆ ಅನೇಕ ಮಂತ್ರಿಗಳಿಗೆ ಗೇಟ್ ಪಾಸ್
ಬೆಂಗಳೂರು: ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸದೇ ವಿನಾಕಾರಣ ನಾಯಕತ್ವದ ಬಗ್ಗೆ ಹರಡುವ ಮೂಲಕ ರಾಜ್ಯ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಸಚಿವರಿಗೆ ಗೇಟ್ ಪಾಸ್ ನೀಡಲು ಬಿಜೆಪಿ ಮುಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಕೆಲವು ಸಚಿವರು ತಮಗೆ ನೀಡಿದ ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದೇ, ಅನಗತ್ಯವಾಗಿ ವದಂತಿ ಹರಡುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಘನತೆಗೆ ಧಕ್ಕೆ …
Read More »ಯಡಿಯೂರಪ್ಪ ಸಿಎಂ ಆಗಿದ್ದಾಗ ಡಿಸೆಂಬರ್‌ಗೆ ಇಳಿಯುತ್ತಾರೆ ಎಂದಿದ್ದೆ, ಈಗ ಬೊಮ್ಮಾಯಿ ಅವರು ಜನವರಿಗೆ ಇಳಿಯುತ್ತಾರೆ: ಸಿ.ಎಂ. ಇಬ್ರಾಹಿಂ
ಬೆಳಗಾವಿ: ಯಡಿಯೂರಪ್ಪ ಸಿಎಂ ಆಗಿದ್ದಾಗ ಡಿಸೆಂಬರ್‌ಗೆ ಇಳಿಯುತ್ತಾರೆ ಎಂದಿದ್ದೆ, ಈಗ ಬೊಮ್ಮಾಯಿ ಅವರು ಜನವರಿಗೆ ಇಳಿಯುತ್ತಾರೆ ಎಂದು ಹೇಳಿದ್ದೇನೆ. ನಮ್ಮ ಭವಿಷ್ಯ ಸುಳ್ಳಾಗುವುದಿಲ್ಲ ಎಂದು ಕಾಂಗ್ರೆಸ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಹೇಳಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ ಮೇಲ್ನೋಟಕ್ಕೆ ಎರಡು ಮೂರು ಹೆಸರು ಕೇಳಿ ಬರುತ್ತಿವೆ. ಬೊಮ್ಮಾಯಿ ಅವರ ಕಾಲು ಚೆನ್ನಾಗಿತ್ತು. ಕೆಲಸ ಮಾಡಿ ಕುಂಟುವಂತಾಗಿದೆ. ಮುಂಬಯಿಗೆ 12 ಜನರನ್ನು ಕರೆದುಕೊಂಡು ಹೋಗಿ ವೀಡಿಯೋ ಮಾಡಿಕೊಂಡು …
Read More »ಕುಟುಂಬ ಸಮೇತ ದುಬೈಗೆ ಯಡಿಯೂರಪ್ಪ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದು, ನಾಳೆ ದುಬೈಗೆ ತೆರಳಲಿದ್ದಾರೆ. ಮೂರು ದಿನಗಳ ಪ್ರವಾಸಕ್ಕೆ ತೆರಳಲಿರುವ ಯಡಿಯೂರಪ್ಪ ದುಬೈ ಕನ್ನಡ ಸಂಘದ ಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಿನ್ನೆ ಬೆಳಗಾವಿಯ ಸುವರ್ಣಸೌಧದಲ್ಲಿ ಯಡಿಯೂರಪ್ಪ RTPCR ಟೆಸ್ಟ್ ಮಾಡಿಸಿದ್ದಾರೆ. ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿರುವ ಅವರು ನಾಳೆ ಕುಟುಂಬ ಸಮೇತರಾಗಿ ದುಬೈಗೆ ಪ್ರಯಾಣ ಬೆಳೆಸಲಿದ್ದಾರೆನ್ನಲಾಗಿದೆ.
Read More »ಊಟಕ್ಕೆಂದು ಹೋದವರು ವಾಪಸ್ ಬಂದದ್ದು ಹೆಣವಾಗಿ. ಅಯ್ಯೋ ವಿಧಿಯೇ ನೀನೇಷ್ಟು ಕ್ರೂರಿ?
ಬನ್ನೇರುಘಟ್ಟದ ಕೆಂಪನಾಯಕನ ಅಕ್ವೇರಲ್ ಗಾರ್ಮೆಂಟ್ಸ್ ಬಳಿ ಬುಧವಾರ ರಾತ್ರಿ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ. ಎಎಂಸಿ ಕಾಲೇಜಿನ ವಿದ್ಯಾರ್ಥಿಗಳಾದ ಕೌಶಿಕ್ ಮತ್ತು ಸುಷ್ಮಾ ಮೃತ ದುರ್ದೈವಿಗಳು. ಬೆಂಗಳೂರಿನ ಸಾರಕ್ಕಿ ನಿವಾಸಿಗಳಾದ ಇವರಿಬ್ಬರೂ ಊಟ ಮಾಡಲೆಂದು ಬುಧವಾರ ರಾತ್ರಿ ಬನ್ನೇರುಘಟಕ್ಕೆ ಬೈಕ್ನಲ್ಲಿ ಹೋಗಿದ್ದರು. ಊಟ ಮುಗಿಸಿ ವಾಪಸ್ ಬರುವ ವೇಳೆ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ …
Read More »ಇಂದು ರಾಜ್ಯಾಧ್ಯಂತ ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ.
ಇಂದು ರಾಜ್ಯಾಧ್ಯಂತ ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಇಂದು ಒಬ್ಬರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಡುವ ಮೂಲಕ, ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ರೂಪಾಂತರಿ ಸೋಂಕಿನ ಪ್ರಕರಣ ವರದಿಯಾಗಿದೆ. ಈ ಮೂಲಕ ಮಲೆನಾಡಿಗೂ ಓಮಿಕ್ರಾನ್ ವೈರಸ್ ಕಾಲಿಟ್ಟಂತೆ ಆಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜ್ಯದಲ್ಲಿ ಇಂದು ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ತಗುಲಿರೋದು ದೃಢಪಟ್ಟಿದೆ. ಅವರಲ್ಲಿ …
Read More »ಬೀದಿಗೆ ಬಂತು ಬಾಳೆ ಬೆಳೆಗಾರರ ಬದುಕು
ಲಕ್ಷ್ಮೇಶ್ವರ: ಪ್ರಸ್ತುತ ಮಾರುಕಟ್ಟೆಯಲ್ಲಿ ಬಾಳೆಹಣ್ಣಿಗೆ ಬೇಡಿಕೆ ಇಲ್ಲದ ಕಾರಣ ಬೆಲೆ ಕುಸಿತವಾಗಿ ಬಾಳೆ ಬೆಳೆದ ರೈತರ ಬದುಕು ಬೀದಿಗೆ ಬಿದ್ದಿದೆ. ಬೆಳೆದ ಹಣ್ಣನ್ನು ತಾವೇ ಮಾರಾಟ ಮಾಡಿ ಬದುಕಿನ ಬಂಡಿ ಸಾಗಿಸುವ ಅನಿವಾರ್ಯತೆ ನಿರ್ಮಾಣವಾಗಿದೆ. ಒಣ ಬೇಸಾಯದಿಂದ ಕೈ ಸುಟ್ಟುಕೊಳ್ಳುತ್ತಿರುವ ರೈತರು ತೋಟಗಾರಿಕೆಯತ್ತ ಚಿತ್ತ ಹರಿಸಿ ಲಾಭದಾಯಕ ಬೆಳೆಗಳನ್ನು ಬೆಳೆದು ಒಂದಿಷ್ಟು ಆರ್ಥಿಕ ಸುಧಾರಣೆಯ ಯೋಜನೆ, ಕನಸುಗಳನ್ನುರೈತರು ಕಾಣುತ್ತಿದ್ದಾರೆ. ತೋಟಗಾರಿಕೆಯಲ್ಲಿ ಬಾಳೆ,ದಾಳಿಂಬೆ, ದ್ರಾಕ್ಷಿ, ಕಬ್ಬು, ಅಡಕೆ, ಮಾವು, ಚಿಕ್ಕು ಸೇರಿಕೆಲ …
Read More »ಅಪ್ರಾಪ್ತರು, ಎಸ್,ಎಸಿ, ಎಸ್.ಟಿ ಸಮುದಾಯದವರ ಮತಾಂತರ ಮಾಡುವುದಕ್ಕೆ ಶಿಕ್ಷೆ ವಿಧಿಸಲಾಗುವುದು.
ಬೆಂಗಳೂರು : ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, ವಿಧೇಯಕದ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ (Minister Araga Gyanendra) ಮಾಹಿತಿ ನೀಡಿದ್ದಾರೆ. ಅಪ್ರಾಪ್ತರು, ಎಸ್,ಎಸಿ, ಎಸ್.ಟಿ ಸಮುದಾಯದವರ ಮತಾಂತರ ಮಾಡುವುದಕ್ಕೆ ಶಿಕ್ಷೆ ವಿಧಿಸಲಾಗುವುದು. ಬಲವಂತದ ಮತಾಂತರ ಮಾಡಿದರೆ ಶಿಕ್ಷೆ ಜೊತೆಗೆ ದಂಡ, ಬಲವಂತದ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ. ಸಾಮೂಹಿಕವಾಗಿ ಮತಾಂತರ ಮಾಡಿದರೆ …
Read More »ವಿರೋಧ-ಗದ್ದಲದ ಮಧ್ಯೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಪಾಸ್
ಬೆಳಗಾವಿ: ವಿಧಾನಮಂಡಲ ಅಧಿವೇಶ (Belagavi Session) ಶುರುವಾದಗಿನಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿಧಾನಸಭೆಯಲ್ಲಿ (Karnataka Assembly) ಪಾಸ್ ಮಾಡಿಕೊಳ್ಳುವಲ್ಲಿ ಬಹುಮತ ಹೊಂದಿರುವ ಬಿಜೆಪಿ ಸರ್ಕಾರ (BJP Government) ಸಫಲವಾಗಿದೆ. ವಿರೋಧ ಪಕ್ಷಗಳ ತೀವ್ರ ವಿರೋಧ, ಗದ್ದಲದ ಮಧ್ಯೆಯೂ ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು. ವಿಧೇಯಕದ ಮೇಲಿನ ಚರ್ಚೆ ವೇಳೆ ಕಾಂಗ್ರೆಸ್ ನಾಯಕರು ಹಾಗೂ ಸರ್ಕಾರದ ಮಧ್ಯೆ ತೀವ್ರ ವಾಕ್ಸಮರ ನಡೆಯಿತು. ಕಾಂಗ್ರೆಸ್ …
Read More »ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು.
ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ಬುಧವಾರ ಸಾಯಂಕಾಲ ಬಿಮ್ಸ ಆವರಣದಲ್ಲಿ ಜಿನೊಮ್ ಸಿಕ್ವೆನ್ಸಿಂಗ್ ಲ್ಯಾಬ್, ನವಿಕೃತ ಅಡುಗೆ ಕೋಣೆ, ನವಿಕೃತ ವಿಶೇಷ ಕೊಠಡಿಗಳು, ಹೊಸ ವೈದ್ಯಕೀಯ ತುರ್ತು ನಿಗಾ ಘಟಕಗಳನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಉದ್ಘಾಟಿಸಿದರು. ಈ ವೇಳೆ ಜಲಸಂಪನ್ಮೂಲ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಉತ್ತರ …
Read More »