Breaking News

ಹೆಣ್ಣುಮಕ್ಕಳ ಶಿಕ್ಷಣದ ಕುರಿತು ಬಿಜೆಪಿ ನಿಲುವೇನು: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಹಿಂಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಹಾಗೆಯೇ, ಹೆಣ್ಣು ಮಕ್ಕಳ ಶಿಕ್ಷಣದ ವಿಚಾರದಲ್ಲಿ ಬಿಜೆಪಿಯ ನಿಲುವು ಏನು ಎಂಬುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ತಿಳಿಸಬೇಕು ಎಂದು ಕೇಳಿದ್ದಾರೆ. ಸುತ್ತೋಲೆಗೆ ಸಂಬಂಧಿಸಿದಂತೆ #HijabCircular ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ, ‘ರಾಜ್ಯದ …

Read More »

ಅನುಷ್ಠಾನಗೊಂಡ ಕಾಮಗಾರಿ ಪೂರ್ಣದ ನಿರೀಕ್ಷೆ

ಶಿವಮೊಗ್ಗ: ಹಿಂದಿನ ವರ್ಷ 2021-22ನೇ ಸಾಲಿನ ಬಜೆಟ್‌ ಮಂಡಿಸುವಾಗ ಜಿಲ್ಲೆಯವರೇ ಆದ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಲ್ಲಿದ್ದರು. ಸಹಜವಾಗಿಯೇ ಇದ್ದ ನಿರೀಕ್ಷೆಗಳಂತೆ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಂತಹ ನಿರೀಕ್ಷೆಗಳಿಲ್ಲದಿದ್ದರೂ ಬಾಕಿ ಉಳಿದ ಕಾಮಗಾರಿಗಳಿಗೆ ಅನುದಾನ ಘೋಷಿಸಬೇಕಿದೆ. ದಶಕದಿಂದ ನನೆಗುದಿಗೆ ಬಿದ್ದಿದ್ದ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿಗೆ ಬಜೆಟ್‌ ನೀಡುವ ಮೂಲಕ ಮತ್ತಷ್ಟು ಹಣ ನೀಡಿದ್ದರು. ಸೋಗಾನೆ ವಿಮಾನ ನಿಲ್ದಾಣದಲ್ಲಿ ಏರ್‌ಬಸ್‌ …

Read More »

ಸಮಾಜದ ಅಭಿವೃದ್ಧಿಗೆ ಸಂಘಟನೆ ಮುಖ್ಯ

ಆನವಟ್ಟಿ: ಶ್ರಮಿಕ ವರ್ಗವಾದ ಭೋವಿ ಜನಾಂಗ ಹೊಟ್ಟೆಪಾಡಿಗಾಗಿ, ಅಲೆಮಾರಿ ಹಾಗೂ ಅರೆಅಲೆಮಾರಿ ಬದುಕು ಕಟ್ಟಿಕೊಂಡಿದೆ. ಜನಾಂಗದ ಅಭಿವೃದ್ಧಿಗಾಗಿ ಸಂಘಟನೆ ಬಲಗೊಳಿಸುವ ಜೊತೆಗೆ ಶೈಕ್ಷಣಿಕ ಕ್ರಾಂತಿಯಾಗಬೇಕು ಎಂದು ಬಾಗಲಕೋಟೆ-ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು.   ಇಲ್ಲಿಗೆ ಸಮೀಪದ ಹುರುಳಿ ಗ್ರಾಮದಲ್ಲಿ ತಾಲ್ಲೂಕು ಭೋವಿ ಜನಾಂಗದ ಕ್ಷೇಮಾಭಿವೃದ್ಧಿ ಸಂಘವು ಸೋಮವಾರ ಹಮ್ಮಿಕೊಂಡಿದ್ದ ಸಿದ್ಧರಾಮೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಭೋವಿ ಜನಾಂಗದ …

Read More »

ಹಿಜಾಬ್‌ ವಿವಾದದಿಂದ ರಾಜ್ಯದಲ್ಲಿ ಅಸ್ಥಿರತೆ: ವಿ.ಎಸ್‌.ಉಗ್ರಪ್ಪ

ಶಿವಮೊಗ್ಗ: ಹಿಜಾಬ್‌-ಕೇಸರಿ ಶಾಲು ವಿವಾದದ ಪರಿಣಾಮ ರಾಜ್ಯದಲ್ಲಿ ಅಸ್ಥಿರತೆ, ಅಶಾಂತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್‌ ವಕ್ತಾರ ವಿ.ಎಸ್‌. ಉಗ್ರಪ್ಪ ಪ್ರತಿಪಾದಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ‘ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಭಾಷಣವನ್ನು ರಾಜ್ಯಪಾಲರಿಂದ ಮಾಡಿಸಿದ್ದಾರೆ. ಸರ್ಕಾರಗಳ ಹಿನ್ನೋಟ, ಮುನ್ನೋಟವನ್ನು ಜನರ ಮುಂದೆ ಇಡಬೇಕಿತ್ತು. ಅದು ರಾಜ್ಯಪಾಲರ ಭಾಷಣದಲ್ಲಿ ಅಡಕವಾಗಿರಬೇಕು. ರಾಜ್ಯಪಾಲರ ಭಾಷಣ ಒಂದು ರೀತಿ ‘ಓಲ್ಡ್ ವೈನ್ ಇನ್‌ ನ್ಯೂ ಬಾಟಲ್’ ಎನ್ನುವಂತಿದೆ’ ಎಂದು …

Read More »

ಇದಪ್ಪಾ ಸುದ್ದಿ: ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಸಾಲ ಪಡೆದ ಭೂಪ!

ನವದೆಹಲಿ, ಫೆಬ್ರವರಿ 17: ನೀಲಿ ಸಿನಿಮಾಗಳಲ್ಲೇ ಸಖತ್ ಸದ್ದು ಮಾಡುತ್ತಾ ಬಾಲಿವುಡ್ ಅಂಗಳಕ್ಕೆ ಲಗ್ಗೆಯಿಟ್ಟ ಸ್ಟಾರ್ ನಟಿ ಸನ್ನಿ ಲಿಯೋನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಂಥ ಸ್ಟಾರ್ ನಟಿಯ ಪ್ಯಾನ್ ಕಾರ್ಡ್ ಅನ್ನು ಬಳಸಿಕೊಂಡು ವ್ಯಕ್ತಿಯೊಬ್ಬ ಎರಡು ಸಾವಿರ ರೂಪಾಯಿ ಸಾಲ ಪಡೆದುಕೊಂಡಿದ್ದಾನೆ. ಈ ಕುರಿತು ಸ್ವತಃ ನಟಿ ಸನ್ನಿ ಲಿಯೋನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. “ನನಗೇ ಈ ರೀತಿ ಆಗಿ ಬಿಟ್ಟಿದೆ. ಹುಚ್ಚರು. ಕೆಲವು ಮೂರ್ಖರು …

Read More »

ಹಿಜಾಬ್ ಗಲಾಟೆ ನಡೆದ ಶಾಲೆಯಲ್ಲಿ ಮಕ್ಕಳಿಗೆ ಡಿಸಿ, ಎಸ್ ಪಿಯಿಂದ ಗಣಿತ ಪಾಠ

ಚಿಕ್ಕಮಗಳೂರು :ಚಿಕ್ಕಮಗಳೂರು ತಾಲೂಕಿನ ಇಂದಾವರ ಶಾಲೆಯಲ್ಲಿ ಹಿಜಾಬ್​​ಗಾಗಿ ಗಲಾಟೆ ನಡೆದಿತ್ತು. ಶಾಲೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಭೇಟಿ ನೀಡಿ, ಶಾಲಾ ಮಕ್ಕಳಿಗೆ ಪಾಠ ಮಾಡಿರುವ ಘಟನೆ ನಡೆದಿದೆ. ಶಾಲೆಯ ಎಲ್ಲ ಮಕ್ಕಳಿಗೆ ಡಿಸಿ, ಎಸ್ಪಿ, ಸಿಇಓ ಪಾಠ ಮಾಡಿದ್ದಾರೆ. ಡಿಸಿ-ಎಸ್ಪಿ ಮಕ್ಕಳಿಗೆ ಗಣಿತ ಪಾಠ ಮಾಡಿದರೆ, ಜಿಲ್ಲಾ ಪಂಚಾಯಿತಿಯ ಸಿಇಒ ಸಮಾಜ ವಿಜ್ಞಾನ ಪಾಠ ಮಾಡಿದ್ದಾರೆ. ನಿನ್ನೆ …

Read More »

ಫೆಬ್ರವರಿ 19 ರಂದು ಟ್ವೀಟರ್​ನಲ್ಲಿ ಲೈವ್ ಬರಲಿದ್ದಾರೆ ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು: ಫೆಬ್ರವರಿ 19 ರಂದು ಟ್ವೀಟರ್​ನಲ್ಲಿ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾದ ಕಮಲ್​ ಪಂತ್(kamal pant)​ ಲೈವ್​ ಬರಲಿದ್ದಾರೆ. ಈ ಕುರಿತು ಸ್ವತಃ ಕಮಲ್​ ಪಂತ್​ ಅವರು ಟ್ವೀಟ್​(Tweet) ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ನಾನು ಈ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಟ್ವೀಟರ್​ನಲ್ಲಿ ಲೈವ್(Live) ಬರುತ್ತೇನೆ ಎಂದು #AskCPBlr ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್​ ಮಾಡಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನು, ಅಹವಾಲುಗಳನ್ನು, ಆಲೋಚನೆಗಳು ಮತ್ತು ಸಲಹೆಗಳನ್ನು …

Read More »

ಅನೂಪ್ ಭಂಡಾರಿ ಜತೆ ಮತ್ತೊಂದು ಚಿತ್ರ : ಸರ್ಪೈಸ್ ಕೊಟ್ಟ ಸುದೀಪ್

ಶುಕ್ರವಾರ ಬೆಳ್ಳಂಬೆಳಗ್ಗೆ ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ ಕಿಚ್ಚ ಸುದೀಪ್. ವಿಕ್ರಾಂತ್ ರೋಣ ಸಿನಿಮಾದ ತ್ರಿಡಿ ವರ್ಷನ್ ನೋಡಿ ಮೆಚ್ಚಿಕೊಂಡಿದ್ದಲ್ಲದೇ, ಈ ಮೂಲಕ ಇಡೀ ಚಿತ್ರತಂಡಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.ವಿಕ್ರಾಂತ್ ರೋಣ ತ್ರಿಡಿ ಅದ್ಭುತವಾಗಿ ಮೂಡಿ ಬಂದಿದೆ. ಈ ಸಿನಿಮಾದ ಬಿಡುಗಡೆಯ ದಿನಾಂಕಕ್ಕಾಗಿ ನಾನು ಕಾಯುತ್ತಿದ್ದೇನೆ. ಜತೆಗೆ ನಿರ್ದೇಶಕ ಅನೂಪ್ ಭಂಡಾರಿ ಅವರ ಜತೆಗಿನ ಮತ್ತೊಂದು ಸಿನಿಮಾ ಕುರಿತಾದ ಮಾಹಿತಿ ಹಂಚಿಕೊಳ್ಳಲು ಕಾತುರನಾಗಿದ್ದೇನೆ” ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ.  ಅನೂಪ್ ಭಂಡಾರಿ …

Read More »

ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದರೂ ಒದ್ದು ಒಳಗೆ ಹಾಕಿ ಸರ್ಕಾರ ಎಷ್ಟು ದಿನ ಇವರನ್ನು ಸಂಬಾಳಿಸಬೇಕು. ಗಲಾಟೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.ಹಿಜಬ್ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಪ್ರಕರಣ ಈಗಾಗಲೇ ಕೋರ್ಟ್‍ನಲ್ಲಿದೆ. ಕೋರ್ಟ್‍ನಲ್ಲಿರುವಾಗಲೇ ದುರದ್ದೇಶದಿಂದ ಗಲಾಟೆ ಮಾಡಲಾಗುತ್ತಿದೆ. ಮಧ್ಯಂತರದ ಆದೇಶ ಎಲ್ಲಿ ಪಾಲನೆ ಆಗುತ್ತಿಲ್ಲವೋ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ, ನ್ಯಾಯಾಲಯ ಹಿಜಬ್ ಪರ ಅಥವಾ ವಿರುದ್ಧವಾದರೂ …

Read More »

ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು : ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ!

ಬೆಂಗಳೂರು : ಸಚಿವ ಕೆ ಎಸ್‌ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ವಿಧಾನ ಪರಿಷತ್​​ನಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಶುಕ್ರವಾರದ ಕಲಾಪ ಬಲಿಯಾಯಿತು. ಕಾಂಗ್ರೆಸ್, ಬಿಜೆಪಿ ಸದಸ್ಯರ ವಾಗ್ವಾದ, ಆರೋಪ-ಪ್ರತ್ಯಾರೋಪಗಳ ಘೋಷಣೆ ಮೊಳಗಿ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಯಿತು. ಬೆಳಗಿನ ಕಲಾಪ ಆರಂಭಗೊಳ್ಳುತ್ತಿದ್ದಂತೆ ಈಶ್ವರಪ್ಪ ವಿಷಯದ ಗದ್ದಲ ಆರಂಭಗೊಂಡಿದ್ದರಿಂದ ಕಲಾಪವನ್ನು 10 ನಿಮಿಷ ಮುಂದೂಡಲಾಯಿತು. ಮುಂದೂಡಿಕೆಯಾಗಿದ್ದ ಕಲಾಪ ಪುನಾರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ …

Read More »