Breaking News

ಬೆಳಗಾವಿ: ಜಿಲ್ಲೆಯಾದ್ಯಂತ ಮಾದರಿ ನೀತಿಸಂಹಿತೆ ಜಾರಿ: ನಿತೇಶ್ ಪಾಟೀಲ

ಬೆಳಗಾವಿ: ‘ವಿಧಾನಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಗುರುವಾರದಿಂದಲೇ ಮಾದರಿ ನೀತಿಸಂಹಿತೆ ಜಾರಿಗೆ ಬಂದಿದೆ. ಎಲ್ಲ ರಾಜಕೀಯ ಪಕ್ಷಗಳೂ ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.   ಇಲ್ಲಿ ಗುರುವಾರ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸರ್ಕಾರದ ಹೊಸ ಯೋಜನೆ, ಕಾರ್ಯಕ್ರಮಗಳನ್ನು ಘೋಷಿಸುವಂತಿಲ್ಲ. ಪ್ರಚಾರ ಕೂಡ ಕೋವಿಡ್ ಮಾರ್ಗಸೂಚಿ ಪ್ರಕಾರ ನಡೆಸಬೇಕಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗ …

Read More »

ಜಿ.ಪಂ., ತಾ.ಪಂ. ಕ್ಷೇತ್ರಗಳ ನಿಗದಿಗೆ ನಿರ್ಣಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ‘ಜಿಲ್ಲೆಯ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳ ಸದಸ್ಯರ ಕ್ಷೇತ್ರಗಳ ಸಂಖ್ಯೆಯನ್ನು ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗವು ನಿಗದಿಪಡಿಸಲು ನಿರ್ಣಯಿಸಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.   ‘2011ರ ಜನಗಣತಿಯಂತೆ ಆಯಾ ತಾಲ್ಲೂಕುಗಳ ಗ್ರಾಮೀಣ ಜನಸಂಖ್ಯೆ ಆಧರಿಸಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ ಸದಸ್ಯರ ಕ್ಷೇತ್ರಗಳ ಸಂಖ್ಯೆ ನಿಗದಿಪಡಿಸಲಾಗಿದೆ. ಈ ಪ್ರಕಾರ ಆಯೋಗದಿಂದ ಪ್ರತಿ 40ಸಾವಿರ ಜನಸಂಖ್ಯೆಗೆ ಹಾಗೂ ಅದರ ಭಾಗಕ್ಕೆ ಒಬ್ಬರು ಸದಸ್ಯರಂತೆ ಬೆಳಗಾವಿ ಜಿಲ್ಲೆಯ …

Read More »

‘ಯಾವುದೇ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ನಿಶ್ಚಿತವಾಗಿ ಸಫಲತೆ ಸಿಗುತ್ತದೆ’ ಎಂದ, ನಾಗನೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ

ಬೆಳಗಾವಿ: ‘ಯಾವುದೇ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ನಿಶ್ಚಿತವಾಗಿ ಸಫಲತೆ ಸಿಗುತ್ತದೆ’ ಎಂದು ನಾಗನೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು. ಇಲ್ಲಿನ ಶಿವಬಸವ ನಗರದ ಡಾ.ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಅಂಚೆ ಇಲಾಖೆ ಬೆಳಗಾವಿ ವಿಭಾಗ ಗುರುವಾರ ಏರ್ಪಡಿಸಿದ್ದ ಸಾಧಕರಿಗೆ ಕರ್ಮಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.   ‘ಕಾಯಕವೇ ಕೈಲಾಸವೆಂದು ಶರಣರು ಬಣ್ಣಿಸಿದ್ದಾರೆ. ಆದರೆ, ನಮ್ಮ ಕಾಯಕದಲ್ಲಿ ಯಾವುದೇ ಅಪೇಕ್ಷೆ ಇರಬಾರದು. ಕರ್ಮಯೋಗಿಗಳು ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದ ಅವರು, …

Read More »

ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್‌ 13ಕ್ಕೆ ಚುನಾವಣೆ: ಘಟಾನುಘಟಿಗಳ ಸ್ಪರ್ಧೆ

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ (ಜೂನ್‌ 13) ಚುನಾವಣಾ ಕಣ ಘಟಾನುಘಟಿಗಳ ಸ್ಪರ್ಧೆಯಿಂದಾಗಿ ರಂಗೇರಿದೆ. ಪ್ರತಿಷ್ಠೆ-ಪೈಪೋಟಿಗೆ ವೇದಿಕೆಯೂ ಆಗಿದೆ.    ಅರುಣ ಶಹಾಪುರ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಅರುಣ ಶಹಾಪುರ ಅವರಿಗೆ ಬಿಜೆಪಿ ಮತ್ತೊಮ್ಮೆ ಟಿಕೆಟ್ ನೀಡಿದೆ. ಪ್ರತಿ ಸ್ಪರ್ಧಿಯಾಗಿ ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ ಕಣದಲ್ಲಿದ್ದಾರೆ. ಪದವೀಧರರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಹಣಮಂತ ನಿರಾಣಿ ಅವರಿಗೆ …

Read More »

ಫಲ-ಪುಷ್ಪ ಕೃಷಿಯಿಂದ ಲಾಭ: ಪೇರಲ, ಮಾವು, ಕರಿಬೇವು ಬೆಳೆಯುವ ಜ್ಯೋತಿ

ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಜ್ಯೋತಿ ಮಲ್ಲಪ್ಪ ಮಾಳಿ ಎನ್ನುವ ಪ್ರಯೋಗಶೀಲ ರೈತರೊಬ್ಬರು ಮಸಾರಿ ಭೂಮಿಯಲ್ಲಿ ಪೇರಲ ಮತ್ತು ಮಾವು ಜೊತೆ ಮಿಶ್ರ ಬೆಳೆಯಾಗಿ ಹೂವು ಹಾಗೂ ತರಕಾರಿ ಬೆಳೆದು ಆದಾಯ ಕಾಣುತ್ತಿದ್ದಾರೆ. ಸಾಂಪ್ರದಾಯಿಕವಾಗಿ ಕಬ್ಬು ಬೆಳೆಯುತ್ತಿದ್ದ ಅವರು, ಅದರಿಂದ ಹೆಚ್ಚಿನ ಆದಾಯ ಸಿಗದಿದ್ದರಿಂದ ಪರ್ಯಾಯವಾಗಿ ಪೇರಲ ಮತ್ತು ಮಾವು ಬೆಳೆದಿದ್ದಾರೆ. 2 ವರ್ಷಗಳ ಹಿಂದೆ 300 ಪೇರಲ ಮತ್ತು 400 ಮಾವಿನ ಸಸಿಗಳನ್ನು ನೆಟ್ಟಿದ್ದಾರೆ. ನಾಟಿ ಮಾಡಿದ 9ನೇ ತಿಂಗಳಿನಲ್ಲಿಯೇ …

Read More »

ಸಿಂಗಲ್ ಪ್ರೀಮಿಯಂ ಕಟ್ಟಿ 12,000 ರೂ. ಪಿಂಚಣಿ ಪಡೆಯಿರಿ…! ಎಲ್‌ಐಸಿ ಆಫರ್

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಹೂಡಿಕೆದಾರರು ತಮ್ಮ ನಿವೃತ್ತಿಯ ಅವಧಿಯನ್ನು ಸುರಕ್ಷಿತವಾಗಿರಿಸಲು ವಿವಿಧ ಪಾಲಿಸಿಗಳನ್ನು ನೀಡುತ್ತದೆ. ಇದರಲ್ಲಿ ಎಲ್ ಐಸಿ ಸರಳ್ ಪಿಂಚಣಿ ಯೋಜನೆ ವಿಶೇಷವೆನಿಸಿದೆ. ಈ ಯೋಜನೆಯಡಿ ಒಂದು ವರ್ಷದಲ್ಲಿ ಕನಿಷ್ಠ ರೂ 12,000 ಪಿಂಚಣಿ ಪಡೆಯಬಹುದು.   ಒಂದು ದೊಡ್ಡ ಮೊತ್ತದ ಪಾವತಿಯ ಮೇಲೆ ಲಭ್ಯವಿರುವ ಎರಡು ಆಯ್ಕೆಗಳಿಂದ ವಾರ್ಷಿಕ ಪಿಂಚಣಿ ಪ್ರಕಾರವನ್ನು ಆಯ್ಕೆ ಮಾಡಲು ಹೂಡಿಕೆದಾರರಿಗೆ ಈ ಯೋಜನೆ ಅವಕಾಶ ನೀಡುತ್ತದೆ. ಎಲ್‌ಐಸಿ ಸರಳ್ …

Read More »

ಗಾಳಿಗೆ ನೆಲಕ್ಕುರುಳಿದ ಕೆಂಗೇರಿ ಬಳಿಯ ಜನಪ್ರಿಯ ದೊಡ್ಡಾಲದ ಮರ

ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಮತ್ತು ಗಾಳಿ ಬೀಸುತ್ತಿದ್ದು, ನಗರದ ಜನಪ್ರಿಯ ಸಸ್ಯಶಾಸ್ತ್ರೀಯ ಅದ್ಭುತ – ಕೆಂಗೇರಿ ಬಳಿಯ ಮೈಸೂರು ರಸ್ತೆಯ ಕೇತೋಹಳ್ಳಿಯಲ್ಲಿರುವ ದೊಡ್ಡ ಆಲದ ಮರವು ನೆಲಸಮವಾಗಿದೆ. ಮೂರು ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಮರದ ಒಂದು ಭಾಗ ಭಾನುವಾರ ಸಂಜೆ ಜೋರಾದ ಗಾಳಿಗೆ ಬುಡಮೇಲಾಗಿದ್ದು, ಬುಧವಾರದಂದು ಮತ್ತೊಂದು ಪ್ರಮುಖ ಭಾಗ ವಾಲಿಕೊಂಡಿರುವುದು ಕಂಡು ಬಂದಿದ್ದು, ಎಚ್ಚರಿಕೆ ಗಂಟೆ ಬಾರಿಸಿದೆ. ಇದು ಟೆಕ್ …

Read More »

‘ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ”: ಡಿಕೆಶಿ ವಿರುದ್ಧ ರಾಜ್ಯ ಬಿಜೆಪಿ ಅಪಹಾಸ್ಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಮಾಜಿ ಸಂಸದೆ ರಮ್ಯಾ ತಿರುಗಿಬಿದ್ದಿರುವ ಸಂಬಂಧ ರಾಜ್ಯ ಬಿಜೆಪಿ ಟೀಕಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನೀವು ನಿಜಕ್ಕೂ ಕೆಪಿಸಿಸಿ ಅಧ್ಯಕ್ಷರೇ? ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲ ಈಗ ಬಂದು ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ? ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ ಮೀರ್‌ ಸಾದಿಕ್‌ ತಂತ್ರವಿದೆಯೇ? ಎಂದು …

Read More »

ತುಮಕೂರು ಮೂಲದ ಯುವತಿಯರ ಸಲಿಂಗ ಮದುವೆ

ತುಮಕೂರು, ಮೇ 12: ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯರಿಬ್ಬರು ತಾವು ಪರಸ್ಪರ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಿರ್ಧರಿಸಿದ್ದೇವೆ ಇದಕ್ಕೆ ಅವಕಾಶ ಮಾಡಿಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. ತುಮಕೂರು ಮೂಲದ ಯುವತಿಯರ ಸಲಿಂಗ ಮದುವೆ ಎಲ್ಲರ ಗಮನ ಸೆಳೆದಿದೆ. ಮದುವೆ ಮಾಡಿಕೊಳ್ಳಲು ಮನೆ ಬಿಟ್ಟು ಹೊರಬಂದವರು ಈಗ ಪೊಲೀಸರ ನೆರವು ಕೋರಿದ್ದಾರೆ. ಈ ಇಬ್ಬರು ಯುವತಿಯರು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಇಬ್ಬರೂ ತುಮಕೂರಿನಲ್ಲೇ ವಾಸಿಸುತ್ತಿದ್ದರು. ಕೆಲದಿನಗಳ …

Read More »

ಪಿಎಸ್‌ಐ ನೇಮಕಾತಿ ಅಕ್ರಮ’ದ ‘ಮೊದಲನೇ ಕಿಂಗ್ ಪಿನ್ ಡಿವೈಎಸ್ಪಿ ಶಾಂತಕುಮಾರ್’ ಅರೆಸ್ಟ್

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಪೊಲೀಸ್ ನೇಮಕಾತಿ ವಿಭಾಗಕ್ಕೂ ಲಗ್ಗೆ ಇಟ್ಟಿದ್ದಂತ ಸಿಐಡಿ ಅಧಿಕಾರಿಗಳು, ನಾಲ್ವರು ಅಧಿಕಾರಿಗಳ ಸಹಿತ ಇಬ್ಬರು ಬ್ರೋಕರ್ ಸೇರಿ ಆರು ಮಂದಿಯನ್ನು ಬಂಧಿಸಿದ್ದರು. ಈಗ ಮುಂದುವರೆದು ನೇಮಕಾತಿ ವಿಭಾಗದಲ್ಲಿನ ಡಿವೈಎಸ್ಪಿಯನ್ನು ಬಂಧಿಸಿದ್ದಾರೆ.   ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವಂತ ಸಿಐಡಿ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳು, ಅಭ್ಯರ್ಥಿಗಳು ಸಹಿತ ಹಲವು ಕಿಂಗ್ ಪಿನ್ ಗಳನ್ನು ಬಂಧಿಸಿದ್ದಾರೆ. ಇಂದು …

Read More »