Breaking News

ಡೊಳ್ಳು ಕುಣಿತದವರೊಂದಿಗೆ ಸ್ಪೀಕರ್ ಕಾಗೇರಿ ಗಿಲಿಗಚ್ಚಿ ಹಿಡಿದು ಸ್ಟೆಪ್

ಶಿರಸಿ ತಾಲೂಕಿನ ಬರೂರಿನ ಶ್ರೀ ಲಕ್ಷ್ಮೀ ನರಸಿಂಹ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಡೊಳ್ಳು ಕುಣಿತದ ತಂಡದವರೊಂದಿಗೆ ಹೆಜ್ಜೆ ಹಾಕಿ ಗಿಲಿಗಚ್ಚಿಯನ್ನು ಬಾರಿಸಿದ್ದು, ಎಲ್ಲರ ಗಮನ ಸೆಳೆಯಿತು. ಕಳೆದ 9 ತಿಂಗಳಲ್ಲಿ ನಿರ್ಮಾಣವಾಗಿರುವ ನೂತನ ದೇವಾಲಯದಲ್ಲಿ ಲಕ್ಷ್ಮೀ ನರಸಿಂಹ ದೇವರ ನೂತನ ವಿಗ್ರಹವನ್ನು ವೈದಿಕ ಪ್ರಮುಖರ ನೇತೃತ್ವದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ನೂತನ ವಿಗ್ರಹವನ್ನು ಅಲಂಕರಿಸಿ, ಆರತಿಯೊಂದಿಗೆ …

Read More »

ಇಂದು ರಾತ್ರಿಯಿಂದಲೇ ಅಹೋರಾತ್ರಿ ಧರಣಿ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದಲೇ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾವು ಧರಣಿ ಮುಂದುವರಿಸಿದ್ದೇವೆ. ಈಶ್ವರಪ್ಪರನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದೇವೆ. ಅವರು ನಮ್ಮ ಸಂವಿಧಾನಕ್ಕೆ ಅಗೌರವ ತೋರಿದ್ದಾರೆ. ರಾಜ್ಯಪಾಲರು ಡಿಸ್ಮಿಸ್ ಮಾಡೋಕೆ ಹೇಳಬೇಕಿತ್ತು. ಸಿಎಂ ಕೂಡ ಮಾಡಬೇಕಿತ್ತು. ಇದರ ಅರ್ಥ ಆರ್​ಎಸ್​ಎಸ್ ಮೂಲಕ ಮಾಡಿಸಿದ್ದಾರೆ. ಈಶ್ವರಪ್ಪ ಮೂಲಕ ಹೇಳಿಸಿದ್ದಾರೆ. ರಾಷ್ಟ್ರಧ್ವಜ ನಮ್ಮ …

Read More »

ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಅಲ್ಲ: ಸಿಎಂ

ಬೆಂಗಳೂರು: ‘ರಾಜ್ಯದ ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ. ಈ ವಿಷಯದಲ್ಲಿ ಹೈಕೋರ್ಟ್‌ ಆದೇಶವನ್ನು ಪಾಲನೆ ಮಾಡುತ್ತಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ವಿಧಾನಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಚಾಮರಾಜನಗರದಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು’ ಎಂದು ಒತ್ತಾಯಿಸಿದರು. ಬಸವರಾಜ ಬೊಮ್ಮಾಯಿ ಉತ್ತರಿಸಿ, ‘ಉನ್ನತ ಶಿಕ್ಷಣ …

Read More »

ಭದ್ರಾ ಮೇಲ್ದಂಡೆಗೆ ರಾಷ್ಟ್ರೀಯ ಮಾನ್ಯತೆ: ಬೊಮ್ಮಾಯಿ

ಚಿತ್ರದುರ್ಗ): ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಲು ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಲ್ಲಿನ ತರಳಬಾಳು ಮಠದ ಆವರಣದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆಯ ಅಂತಿಮ ದಿನದಂದು ನಡೆದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸದ್ಧರ್ಮ ಸಿಂಹಾಸನಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   ‘ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ಉನ್ನತ ಸಮಿತಿ ಭದ್ರಾ ಮೇಲ್ದಂಡೆಗೆ ಸಮ್ಮತಿ ನೀಡಿದೆ. ಇದು ರಾಜ್ಯದ ಮೊದಲ …

Read More »

ವಿಧಾನಪರಿಷತ್‌ ಕಲಾಪ: ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಧರಣಿ

ಬೆಂಗಳೂರು: ವಿಧಾನಪರಿಷತ್‌ ಕಲಾಪದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಸದಸ್ಯರು ಸಭಾಪತಿ ಪೀಠದ ಮುಂದೆ ಧರಣಿ ನಡೆಸಿದರು. ‘ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ’ ಎಂಬುದಾಗಿ ಈಶ್ವರಪ್ಪ ನೀಡಿದ ಹೇಳಿಕೆ ವಿರುದ್ಧವಾಗಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದರು.

Read More »

7 ನೇ ವೇತನ ಆಯೋಗ ಬಜೆಟ್ ಅಧಿವೇಶನಕ್ಕೂ ಮೊದಲು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ :c.m

ಬೆಂಗಳೂರು: ‘ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7 ನೇ ವೇತನ ಆಯೋಗ ರಚಿಸುವ ಕುರಿತು ಬಜೆಟ್ ಅಧಿವೇಶನಕ್ಕೂ ಮೊದಲು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತಿಳಿಸಿದರು.   ವಿಧಾನ ಪರಿಷತ್ ನಲ್ಲಿ ಜೆಡಿಎಸ್ ನ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ‘ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ತಾರತಮ್ಯ ಇದೆ’ ಎಂದರು. ತಿಪ್ಪೇಸ್ವಾಮಿ …

Read More »

ಸ್ಮಾರ್ಟ್ ಕಾರ್ಡ್ ಆರ್ಮ್ಸ್ ಲೈಸೆನ್ಸ್ ಪರಿಚಯಿಸಿದ ದೆಹಲಿ ಪೊಲೀಸರು

ನವದೆಹಲಿ: ರಾಷ್ಟ್ರ ರಾಜಧಾನಿಯ ನಾಗರಿಕರಿಗೆ ಟೆಕ್ನೋ ಫ್ರೆಂಡ್ಲಿ ಡಿಜಿಟಲ್ ಸೇವೆಗಳನ್ನು ಒದಗಿಸುವ ಸಲುವಾಗಿ ದೆಹಲಿ ಪೊಲೀಸರು ಸ್ಮಾರ್ಟ್ ಕಾರ್ಡ್ ಆರ್ಮ್ಸ್ ಲೈಸೆನ್ಸ್ ಅನ್ನು ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲೇ ಸ್ಮಾರ್ಟ್ ಕಾರ್ಡ್ ಆರ್ಮ್ಸ್ ಲೈಸೆನ್ಸ್ ಅನ್ನು ಪರಿಚಯಿಸಿದ ಮೊದಲ ಪೊಲೀಸ್ ಪಡೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಬುಧವಾರ ದೆಹಲಿ ಪೊಲೀಸರ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮಾರ್ಟ್ ಕಾರ್ಡ್ ಹಾಗೂ ಶಾಸ್ತ್ರ ಅಪ್ಲಿಕೇಶನ್ ಅನ್ನು ಔಪಚಾರಿಕವಾಗಿ …

Read More »

ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ಜಯರಾಜ್ ಸಿಂಗ್ ಪರ್ಮಾರ್

ಗಾಂಧೀನಗರ: ಗುಜರಾತ್ ಕಾಂಗ್ರೆಸ್ ಮಾಜಿ ಮುಖ್ಯ ವಕ್ತಾರ ಜಯರಾಜ್ ಸಿಂಗ್ ಪರ್ಮಾರ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ. ಈ ಕುರಿತಂತೆ ಫೇಸ್‍ಬುಕ್‍ನಲ್ಲಿ ಪರ್ಮಾರ್ ಅವರು ಕಾಂಗ್ರೆಸ್‍ನ ಹಿರಿಯ ನಾಯಕರ ನಿರ್ಲಕ್ಷಕ್ಕೆ ಬೇಸತ್ತಿದ್ದು, ಪಕ್ಷದಲ್ಲಿ ಕೆಲವರಿಗೆ ಮಾತ್ರ ಜವಾಬ್ದಾರಿಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಮೂರು ವರ್ಷಗಳಿಂದಲೂ ಪಕ್ಷದಲ್ಲಿದ್ದರೂ ಯಾವುದೇ ಸ್ಥಾನವನ್ನು ನೀಡಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಯರಾಜ್ ಸಿಂಗ್ ಪರ್ಮಾರ್ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು …

Read More »

ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಆರು ಯುವಕರು,ಬೆಳಗಾವಿಯಲ್ಲಿ ಹಿಜಬ್ ಹೈಡ್ರಾಮಾ

ಬೆಳಗಾವಿ: ನಗರದ ವಿಜಯ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಬ್‍ಗೆ ಅವಕಾಶ ನೀಡುವಂತೆ ವಿದ್ಯಾರ್ಥಿನಿಯರು ಪಟ್ಟುಹಿಡಿದು ಪ್ರತಿಭಟನೆಗೆ ಮುಂದಾದಾಗ ಅಲ್ಲಾಹು ಅಕ್ಬರ್ ಅಂತಾ ಘೋಷಣೆ ಕೂಗಿದ ಆರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ವಿಜಯ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜಿನಲ್ಲಿದ್ದು ಆ ಪೈಕಿ 50ರಷ್ಟು ವಿದ್ಯಾರ್ಥಿನಿಯರು ಮುಸ್ಲಿಂ ಸಮಾಜದವರಿದ್ದಾರೆ. ಅದರಲ್ಲಿ ಇಂದು 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಬ್‍ಗೆ …

Read More »

ಕಾಡಿನಿಂದ ನಾಡಿಗೆ ಬಂದ ಚಿರತೆ ಮರಿ

ಥಾಣೆ( ಮಹಾರಾಷ್ಟ್ರ): ಕಾಡಿನಿಂದ ನಾಡಿಗೆ ಬಂದ ಚಿರತೆ ಮರಿಯೊಂದು ನೀರು ಕುಡಿಯಲು ಹೋಗಿ ಪ್ಲಾಸ್ಟಿಕ್​ ನೀರಿನ ಕೊಡದಲ್ಲಿ ತೆಲೆ ಸಿಕ್ಕಿಸಿಕೊಂಡು ಪರದಾಡಿದ ಘಟನೆ ಬದ್ಲಾಪುರ – ಕರ್ಜಾತ್ ರಸ್ತೆಯ ಗೋರೆಗಾಂವ್ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಚಿರತೆ ಮರಿ ಹೀಗೆ ತಲೆಯನ್ನು ಸಿಕ್ಕಿಸಿಕೊಂಡು ಒದ್ದಾಡುವ ಪರಿಯನ್ನ ನೋಡಿದ ಗ್ರಾಮಸ್ಥರು, ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಚಿರತೆಯನ್ನ ಹಿಡಿದು ಪ್ಲಾಸ್ಟಿಕ್​ ಕೊಡವನ್ನು ಕತ್ತರಿಸಿ ತೆಗೆದಿದ್ದಾರೆ. ನಂತರ ಚಿರತೆ …

Read More »