ಬೆಳಗಾವಿ: ‘ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರು ಮೇ 11ರಂದು ಬೆಳಗಾವಿಗೆ ಭೇಟಿ ನೀಡಲಿದ್ದು, ಅಂದು ಚನ್ನಮ್ಮ ವೃತ್ತದಲ್ಲಿ ಸತ್ಕರಿಸಲಾಗುವುದು’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಆರ್.ಹರಿ ತಿಳಿಸಿದರು. ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಪವಾರ್ ಅವರು ನಗರದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ’ ಎಂದರು. ‘ಮುಂಬರುವ ಪ್ರತಿ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 18 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಹಾಕಲಾಗುವುದು. …
Read More »ಮಂಗಳವಾರ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ 2,323 ವಿದ್ಯಾರ್ಥಿಗಳು ಗೈರುಹಾಜರ
ಬೆಳಗಾವಿ: ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ 2,323 ವಿದ್ಯಾರ್ಥಿಗಳು ಗೈರುಹಾಜರಾದರು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಭೌತವಿಜ್ಞಾನ ವಿಷಯ ಪರೀಕ್ಷೆಗೆ 5,764 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 5,612 ವಿದ್ಯಾರ್ಥಿಗಳು ಹಾಜರಾದರು. 152 ವಿದ್ಯಾರ್ಥಿಗಳು ಬರಲಿಲ್ಲ. ಇತಿಹಾಸ ವಿಷಯಕ್ಕೆ ನೋಂದಾಯಿಸಿದ್ದ 12,210 ವಿದ್ಯಾರ್ಥಿಗಳ ಪೈಕಿ 11,308 ವಿದ್ಯಾರ್ಥಿಗಳು ಹಾಜರಾದರು. 902 ವಿದ್ಯಾರ್ಥಿಗಳು ಗೈರುಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಭೌತವಿಜ್ಞಾನ ಪರೀಕ್ಷೆಗೆ ನೋಂದಾಯಿಸಿದ್ದ 6,642 ವಿದ್ಯಾರ್ಥಿಗಳ ಪೈಕಿ 6,462 …
Read More »ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಬೆಳಗಾವಿ-ಹುನಗುಂದ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು’: ರೈತರ ಪ್ರತಿಭಟನೆ
ಬೆಳಗಾವಿ: ‘ಭಾರತಮಾಲಾ ಯೋಜನೆಯಲ್ಲಿ ಕೈಗೊಳ್ಳುತ್ತಿರುವ ಪಣಜಿ-ಹೈದರಾಬಾದ್ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಬೆಳಗಾವಿ-ಹುನಗುಂದ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು’ ಎಂದು ಒತ್ತಾಯಿಸಿ ರೈತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ‘ಈ ಹೆದ್ದಾರಿ ನಿರ್ಮಾಣಕ್ಕಾಗಿ ಸರ್ಕಾರ ಬೆಳಗಾವಿ ತಾಲ್ಲೂಕಿನ ಬಸ್ತವಾಡ, ಕಮಕಾರಟ್ಟಿ, ಶಗನಮಟ್ಟಿ, ತಾರೀಹಾಳ, ಚಂದನಹೊಸೂರ, ಗಣಿಕೊಪ್ಪ, ಮರಿಕಟ್ಟಿ, ಹಣ್ಣಿಕೇರಿ, ಜಕನಾಯ್ಕನಕೊಪ್ಪ, ನಾಗನೂರ ಮತ್ತಿತರ ಗ್ರಾಮಗಳ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಈಗಾಗಲೇ …
Read More »ಖಾಸಬಾಗ್, ವಡಗಾವಿ ಭಾಗದಲ್ಲಿ ಬಾಂಡ್ ಮೇಲೆ ಖರೀದಿಸಿದ ನಿವೇಶನ ಅಥವಾ ಮನೆಗಳಿಗೆ ಹಿಂದಿನಂತೆ ಉತಾರ ನೀಡುವಂತೆ ಆಗ್ರಹಿಸಿ ನೇಕಾರ ಕಾರ್ಮಿಕರ ಒತ್ತಾಯ
ಬೆಳಗಾವಿ: ಇಲ್ಲಿನ ಖಾಸಬಾಗ್, ವಡಗಾವಿ ಭಾಗದಲ್ಲಿ ಬಾಂಡ್ ಮೇಲೆ ಖರೀದಿಸಿದ ನಿವೇಶನ ಅಥವಾ ಮನೆಗಳಿಗೆ ಹಿಂದಿನಂತೆ ಉತಾರ ನೀಡುವಂತೆ ಆಗ್ರಹಿಸಿ ನೇಕಾರ ಕಾರ್ಮಿಕರ ಬಳಗದವರು ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ‘ನಗರದ ಬಹುತೇಕ ಪ್ರದೇಶಗಳಲ್ಲಿ ಬಾಂಡ್ ಮೇಲೆ ಖರೀದಿಸಿದ ನಿವೇಶನಗಳಲ್ಲಿ ಮನೆ ನಿರ್ಮಿಸಲಾಗಿದೆ. ಅವುಗಳಿಗೆ 30-40 ವರ್ಷಗಳಿಂದಲೂ ಪಾಲಿಕೆಯಿಂದ ಕರ ಅಕರಿಸಲಾಗುತ್ತಿದೆ. ಅದಕ್ಕಾಗಿಯೇ ಹಿಂದೆ ಪಾಲಿಕೆಯಿಂದ ಉತಾರ ಕೊಡುವ ವ್ಯವಸ್ಥೆಯೂ ಇತ್ತು. ಈ …
Read More »ಲಕ್ಷ್ಮಿ ಹೆಬ್ಬಾಳಕರ ಸಕ್ಕರೆ ಕಾರ್ಖಾನೆಯದ್ದೂ ಬಾಕಿ ಇದೆ: ಸಚಿವ ಎಸ್.ಟಿ. ಸೋಮಶೇಖರ್
ಬೆಳಗಾವಿ: ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ₹6 ಸಾವಿರ ಕೋಟಿಗೂ ಹೆಚ್ಚು ಬಾಕಿ ಉಳಿಸಿಕೊಂಡಿವೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಶಾಸಕ ರಮೇಶ ಜಾರಕಿಹೊಳಿ ಅವರ ಸೌಭಾಗ್ಯಲಕ್ಷಿ ಸಕ್ಕರೆ ಕಾರ್ಖಾನೆಯಿಂದ ಹಣ ಬಾಕಿ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ಯಾವೆಲ್ಲ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿವೆಯೋ ಅವುಗಳಿಗೆ ಸಂಬಂಧಿಸಿದವರೆಲ್ಲರಿಗೂ ನೋಟಿಸ್ ಜಾರಿಗೊಳಿಸಲಾಗಿದೆ ಎಂದರು. ಸಾಲ ಕೊಟ್ಟಿದ್ದು, ಅದನ್ನು ಮರುಪಾವತಿ ಮಾಡಲು ನೋಟಿಸ್ ಕೊಟ್ಟಿದ್ದಾರೆ. …
Read More »ಹೊಸಕೋಟಿ ಗ್ರಾಮವು ರಸ್ತೆ, ಚರಂಡಿ, ವೈದ್ಯಕೀಯ ಸೌಕರ್ಯ, ಶಿಕ್ಷಣ, ಆರೋಗ್ಯ ಸೇವೆ, ಸಾರಿಗೆ ಮೊದಲಾದ ಮೂಲ ಸೌಲಭ್ಯಗಳಿಂದ ವಂಚಿತ
ನೇಸರಗಿ (ಬೆಳಗಾವಿ ಜಿಲ್ಲೆ): ಸಮೀಪದ ಹೊಸಕೋಟಿ ಗ್ರಾಮವು ರಸ್ತೆ, ಚರಂಡಿ, ವೈದ್ಯಕೀಯ ಸೌಕರ್ಯ, ಶಿಕ್ಷಣ, ಆರೋಗ್ಯ ಸೇವೆ, ಸಾರಿಗೆ ಮೊದಲಾದ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಹಣಬರಹಟ್ಟಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಈ ಗ್ರಾಮ ಬರುತ್ತದೆ. ಪಟ್ಟಣದಿಂದ ದೂರವಿರುವ ಅಲ್ಲಿನ ಜನರಿಗೆ ನಾಗರಿಕ ಸವಲತ್ತುಗಳು ಮರೀಚಿಕೆಯಾಗಿವೆ. ಬೈಲಹೊಂಗಲ ತಾಲ್ಲೂಕು ಕೇಂದ್ರದಿಂದ 25 ಕಿ.ಮೀ., ನೇಸರಗಿ ಹೋಬಳಿ ಕೇಂದ್ರದಿಂದ 7 ಕಿ.ಮೀ. ದೂರದಲ್ಲಿ ಈ ಗ್ರಾಮವಿದೆ. 2,400 ಮತದಾರರು ಸೇರಿದಂತೆ 2,600 ಜನಸಂಖ್ಯೆ ಹೊಂದಿದೆ. ಇಲ್ಲಿಂದ …
Read More »ನನ್ನ ಹೇಳಿಕೆಗೆ ನೋಟಿಸ್ ಅಲ್ಲ, ಪ್ರಮೊಷನ್ ಸಿಗುತ್ತೆ: ಬಸನಗೌಡ ಪಾಟೀಲ ಯತ್ನಾಳ
ಕಲಬುರಗಿ: ‘₹ 2,500 ಕೋಟಿ ಕೊಟ್ಟರೆ ಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂಬ ಹೇಳಿಕೆ ಬಗ್ಗೆ ನನಗೆ ನೋಟಿಸ್ ಸಿಗಲ್ಲ. ಬದಲಾಗಿ ಪ್ರಮೊಷನ್ ಸಿಗುತ್ತದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ‘ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಶಾಸಕಾಂಗ ಸಭೆಯಲ್ಲಿ ಪ್ರಶ್ನಿಸಿದ್ದೆ. ಆಗ ಕೊಟ್ಟ ನೋಟಿಸ್‌ಗೆ 17 ಪುಟ ಉತ್ತರ ಬರೆದಿದ್ದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ‘ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ …
Read More »ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಏಳು ಸದಸ್ಯರ ಅವಧಿ ಜೂನ್ 14ಕ್ಕೆ ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ. ಬಿಜೆಪಿಯ ಲಕ್ಷ್ಮಣ ಸವದಿ, ಲಹರ್ ಸಿಂಗ್ ಸಿರೋಯಾ, ಕಾಂಗ್ರೆಸ್‌ನ ಆರ್.ಬಿ. ತಿಮ್ಮಾಪೂರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಜೆಡಿಎಸ್‌ನ ಕೆ.ವಿ. ನಾರಾಯಣ ಸ್ವಾಮಿ ಮತ್ತು ಎಚ್.ಎಂ. ರಮೇಶ್ ಗೌಡ …
Read More »ಸರ್ಕಾರದ 40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರ ನಿಸರ್ಗದಿಂದಲೇ ಬಯಲಾಗಿದೆ: ಕಾಂಗ್ರೆಸ್
ಬೆಂಗಳೂರು: ಸರ್ಕಾರದ 40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ದೂಷಣೆಯಿಂದ ತಮ್ಮ ಹಗರಣ ಮುಚ್ಚಿಕೊಳ್ಳಬಹುದು ಎಂದುಕೊಂಡಿದ್ದಾರೆ. ಆದರೆ, ಬಿಜೆಪಿ ಸರ್ಕಾರದ ಶೇ 40 ಪರ್ಸೆಂಟ್ ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ. ವಾಜಪೇಯಿ ಕ್ರೀಡಾಂಗಣದ ಛಾವಣಿ ಕುಸಿದಿದೆ, ತೇಲು ಸೇತುವೆ ತೇಲಿಹೋಗಿದೆ. ಇದು ಶೇ 40 …
Read More »ಅಶ್ವತ್ಥ ನಾರಾಯಣ ಎಂ.ಬಿ ಪಾಟೀಲರನ್ನು ಭೇಟಿಯಾಗಿದ್ದಾರೆ: ಡಿ.ಕೆ ಶಿವಕುಮಾರ್
ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ತಮ್ಮ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ವಿರುದ್ಧ ಧ್ವನಿ ಎತ್ತದಂತೆ ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲರನ್ನು ಭೇಟಿಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಸಚಿವರು ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ. ಈಗ ಬೇರೆ ಸಬೂಬು ಹೇಳಬಹುದು. ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಎಂ.ಬಿ. ಪಾಟೀಲರ …
Read More »
Laxmi News 24×7